AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ಇಂದು ಉದ್ವೇಗದಲ್ಲಿ ಏನನ್ನಾದರೂ ಅನಾಹಿತ ಮಾಡಿಕೊಂಡೀರಿ, ಎಚ್ಚರ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nitya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ಇಂದು ಉದ್ವೇಗದಲ್ಲಿ ಏನನ್ನಾದರೂ ಅನಾಹಿತ ಮಾಡಿಕೊಂಡೀರಿ, ಎಚ್ಚರ
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on: May 13, 2023 | 6:31 AM

Share

ಶುಭೋದಯ ಓದುಗರೇ, ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಕೃತ್ತಿಕಾ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಶನಿಮ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಬ್ರಹ್ಮ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:18 ರಿಂದ 10:53ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:04 ರಿಂದ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:07 ರಿಂದ 07:42ರ ವರೆಗೆ.

ಧನು: ಇಂದು ಧಾರ್ಮಿಕ ಆಚಾರವಂತರಿಗೆ ಆಚರಣೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾಗಲಿದೆ. ಉನ್ನತ ಹುದ್ದೆಯಲ್ಲಿರುವ ಉದ್ಯೋಗಸ್ಥರಿಗೆ ಹಿರಿಯ ಅಧಿಕಾರಿ ವರ್ಗದಿಂದ ಆಪಾದನೆಗಳು ಬರಬಹುದು. ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಉತ್ತಮ ಅವಕಾಶ ಸಿಗಲಿದೆ. ಪತ್ನಿಯಿಂದ ಮನೆಯಲ್ಲಿ ಕಿರಿಕಿರಿಯಾದೀತು. ಆಪ್ತ ಮಿತ್ರರ ಭೇಟಿಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಇದ್ದರೂ ಉತ್ಸಾಹದಿಂದ ಹೆಚ್ಚಿನ ಕೆಲಸವನ್ನು ಮಾಡಬೇಡಿ. ಬಂಧುವರ್ಗವು ನಿಮ್ಮನ್ನು ಸೇರಸಿಕೊಳ್ಳದೇ ಇದ್ದೀತು. ಯಾರಮೇಲಸದರೂ ಅನುಮಾನವಿದ್ದರೆ ಕಾದು ನೋಡಿ.

ಮಕರ: ಕೃಷಿಕರಿಗೆ ಉತ್ತಮ ಧನಾಗಮನದಿಂದ ನೆಮ್ಮದಿ ಎನಿಸಿಬಹುದು. ಪುಣ್ಯ ಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಮನಶ್ಚಾಂಚಲ್ಯವಿದ್ದರೆ ಧ್ಯಾನವನ್ನು ಮಾಡಬೇಕಾದೀತು.‌ ಎಂದೋ ಕೂಡಿಟ್ಟ ಹಣವು ಇಂದು ಉಪಯೋಗಕ್ಕೆ ಬಂದೀತು. ಯಾವ ಲಾಭವೂ ಇಲ್ಲದ ಕೆಲಸವನ್ನು ಮಾಡಲು ಹೋಗುವುದು ಬೇಡ. ಫಲ ದೊರೆಯುವ ತನಕ ನಿಮ್ಮ ಪ್ರಯತ್ನವು ಸಾಗಲಿ. ಆರೋಗ್ಯವು ಹದ ತಪ್ಪಬಹುದು. ನಿರ್ಲಕ್ಷ್ಯ ಮಾಡದೇ ಇರುವುದು ಉತ್ತಮ. ಸಜ್ಜನರ ವಿಚಾರದಲ್ಲಿ ನೀವು ಅನಾದರ ತೋರಿಸಬಹುದು. ಆಧಾರವಿಲ್ಲದೇ ಮಾತನಾಡಿ ಅವಮಾನಿತರಾಗಬಹುದು. ಇಂದಿನ ಕೆಲಸವನ್ನು ಇಂದೇ ಮುಗಿಸಿಕೊಳ್ಳಿ.

ಕುಂಭ: ಇಂದು ನಾನಾ ಕಡೆಗಳಿಂದ ಅಧಿಕ ಖರ್ಚುಗಳು ಹುಡುಕಿಕೊಂಡು ಬರಬಹುದು, ಜಾಗರೂಕರಾಗಿರಿ. ನಿತ್ಯಕರ್ಮವನ್ನು ಮಾಡಲು ಆಲಸ್ಯವು ಬರಬಹುದು. ತಂದೆಯ ವಿಚಾರದಲ್ಲಿ ನಿಮಗೆ ಬೇಸರವಾದೀತು. ಹೆಚ್ಚು ಮಾತುಕತೆಗಳು ತಂದೆಯ ಜೊತೆ ಆಡಬಹುದು. ನಿಮ್ಮವರೆಂದುಕೊಂಡವರು ಇಂದು ನಿಮ್ಮವರಾಗಿದ್ದರೆ ಎಂದುಕೊಳ್ಳುವುದು ಕಷ್ಟ. ಕೇಳಿ ಬಂದವರಿಗೆ ಇರುವುದನ್ನು ಕೊಟ್ಟು ಸಂತೋಷಪಡಿಸಿ. ಅಪರಿಚಿತರನ್ನು ನಂಬಿ ಮೋಸಹೋಗಬೇಕಾದೀತು. ಉದ್ವೇಗದಲ್ಲಿ ಏನನ್ನಾದರೂ ಅನಾಹಿತ ಮಾಡಿಕೊಂಡೀರಿ, ಎಚ್ಚರ.

ಮೀನ: ವಾಹನ ಖರೀದಿ, ಗೃಹ ನಿರ್ಮಾಣ, ಭೂಮಿ ಖರೀದಿ ಮುಂತಾದವುಗಳನ್ನು ಏಕಕಾಲಕ್ಕೆ‌ ಮಾಡುವ ನಿರ್ಧಾರವನ್ನು ಮಾಡಬಹುದು. ಇನ್ನೊಬ್ಬರಿಗೆ ಅಪಮಾನವಾಗುವಂತೆ ಇಂದಿನ‌ ನಿಮ್ಮ ಮಾತು ಇರಬಹುದು. ಮರದ ವೃತ್ತಿಯನ್ನು ಮಾಡುವವರಗೆ ಲಾಭ ಕಡಿಮೆ ಇದ್ದೀತು. ನಿಮ್ಮ ಭಾವನೆಗಳಿಗೆ ಬೆಲೆ ಕೊಡದೇ ಇರುವುದರಿಂದ ನಿಮಗೆ ನೋವಾಗುವುದು. ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಗೊಂದಲವನ್ನು ಇಟ್ಟುಕೊಂಡಿದ್ದೀರಿ. ವಿದೇಶಪ್ರಯಾಣಕ್ಕೆ ನಿಮಗೆ ಇಂದು ಸೂಚನೆ ಸಿಗಬಹುದು. ನಿರೀಕ್ಷಿಸಿದ ಗೌರವವು ಕಡಿಮೆಯಾದಂತೆ ಅನ್ನಿಸಬಹುದು.

-ಲೋಹಿತಶರ್ಮಾ ಇಡುವಾಣಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ