AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರ ದಾಂಪತ್ಯದಲ್ಲಿ ಪರಸ್ಪರ ತಪ್ಪುಗ್ರಹಿಕೆ ಹೊಂದುವ ಸಾಧ್ಯತೆ ಇದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರ ದಾಂಪತ್ಯದಲ್ಲಿ ಪರಸ್ಪರ ತಪ್ಪುಗ್ರಹಿಕೆ ಹೊಂದುವ ಸಾಧ್ಯತೆ ಇದೆ
ಇಂದಿನ ರಾಶಿ ಭವಿಷ್ಯImage Credit source: istock
Rakesh Nayak Manchi
|

Updated on: May 16, 2023 | 6:31 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 16 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ವಿಷ್ಕಂಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ರಿಂದ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 51 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:04ರ ವರೆಗೆ.

ಧನುಸ್ಸು: ಸಹೋದರರ ಸಹಾಯದಿಂದ ನಿಮ್ಮ ವೃತ್ತಿಪರ ಯಶಸ್ಸಿಗೆ ಕಾರಣವಾಗುವುದು. ಯಾವುದೇ ವ್ಯವಹಾರ-ಸಂಬಂಧಿತ ವ್ಯವಹಾರಗಳನ್ನು ಮುಗಿಸುವಾಗ, ತಪ್ಪುಗಳು ಆಗದಂತೆ ತಾಳ್ಮೆಯಿಂದಿರಿ. ವ್ಯಾಪಾರದ ಉದ್ದೇಶಗಳಿಗಾಗಿ ವಿದೇಶ ಪ್ರವಾಸವು ಈ ದಿನ ಅನುಕೂಲಕರ. ನಿಮ್ಮ ಸಂಗಾತಿಯ ಜೊತೆ ಭಿನ್ನಾಭಿಪ್ರಾಯ, ಕೋಪ, ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗಬಹುದು. ನಿಮ್ಮ ಪಾಲುದಾರಿಕೆಯಲ್ಲಿ ನಿಮ್ಮ ಗಮನ ಅಗತ್ಯವಾಗಿ ಬೇಕು. ಇಲ್ಲವಾದರೆ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕಠಿಣ ವ್ಯಾಯಾಮವನ್ನು ಮಾಡುವ ಮುಂಚೆ ದೇಹದ ಸಾಮರ್ಥ್ಯವನ್ನು ತಿಳಿಯಲು ವೈದ್ಯರನ್ನು ಸಂಪರ್ಕಿಸಿ. ನಿಮ್ಮ ವೃತ್ತಿ, ಹಣಕಾಸು ಮತ್ತು ಸಂಬಂಧಕ್ಕೆ ಬಂದಾಗ ವಿಷಯಗಳನ್ನು ಹೆಚ್ಚು ಯೋಚಿಸಬೇಡಿ.

ಮಕರ: ನಿಮ್ಮ ಪ್ರಣಯ ಜೀವನವು ಉತ್ತಮವಾಗಿ ಬದಲಾಗಬಹುದು. ನಿಮ್ಮ ಪ್ರಣಯವು ಸಂಗಾತಿಯ ಜೊತೆ ಅಭಿವ್ಯಕ್ತವಾಗುವ ಸಾಧ್ಯತೆ ಇದೆ. ಹೊಸ ಆರ್ಥಿಕ ಅವಕಾಶಗಳು ನಿಮಗೆ ತೆರದುಕೊಳ್ಳಬಹುದು. ನಿಮ್ಮ ಸಾಮರ್ಥ್ಯಗಳನ್ನು ಸುಧಾರಿಸಲು ಇದು ಒಂದು ಅವಕಾಶವಾಗಿರುತ್ತದೆ. ಯಾರಾದರೂ ನಿಮಗೆ ಒಳ್ಳೆಯ ಹೊಸ ಮಾರ್ಗದರ್ಶನವನ್ನು ನೀಡಬಹುದು. ನಿಮ್ಮ ಕೌಶಲ್ಯದಿಂದಾಗಿ ನೀವು ಇಂದಿನ ದೊಡ್ಡ ಸಭೆಯನ್ನು ಉತ್ತಮವಾಗಿ ನಿರ್ವಹಿಸಬಹುದು. ಇದರಿಂದ ಪ್ರಶಂಸೆ ಸಿಗಬಹುದು.

ಕುಂಭ: ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಸಂಗಾತಿಯನ್ನು ಕಂಡುಕೊಂಡಂತೆ ಕಾಣಿಸಬಹುದು. ದಾಂಪತ್ಯದಲ್ಲಿ ಪರಸ್ಪರ ತಪ್ಪುಗ್ರಹಿಕೆಗಳನ್ನು ಹೊಂದಿರುವ ಸಾಧ್ಯತೆ ಇದೆ. ನವವಿವಾಹಿತರು ಸಂತಸದ ಸುದ್ದಿಯನ್ನು ಕೊಡುವರು. ನೀವಿಂದು ಅಂತರಾಷ್ಟ್ರೀಯ ಪ್ರಯಾಣವನ್ನು ಮಾಡುವ ಬಗ್ಗೆ ಆಲೋಚಿಸುವಿರಿ. ನೀವು ಕೆಲಸದಲ್ಲಿ ಬದಲಾವಣೆಗಳನ್ನು ಗಮನಿಸಿ. ಇದು ನಿಮಗೆ ಅನುಕೂಲಕರ ಪರಿಣಾಮಗಳನ್ನು ಉಂಟುಮಾಡಬಹುದು.

ಮೀನ: ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ಈ ದಿನ ನೀವು ಹೊಸ ಒಪ್ಪಂದಕ್ಕೆ ಸಹಿ ಹಾಕಿದರೆ ದೀರ್ಘಾವಧಿಯ, ದೀರ್ಘಾವಧಿಯ ಅನಂತರ ಲಾಭವನ್ನು ಪಡೆಯುವಿರಿ. ಅತಿಯಾದ ಆಸೆಯಿಂದ ನೀವು ವ್ಯಾಪಾರದಲ್ಲಿ ಅಪಾಯವನ್ನು ತಂದುಕೊಳ್ಳುವಿರಿ. ಆರ್ಥಿಕವಾಗಿ ಮುಂಜಾಗ್ರತಾಕ್ರಮಗಳ ಬಗ್ಗೆ ಆಲೋಚಿಸಿ.‌ ಮಕ್ಕಳು ಸ್ವತಂತ್ರವಾಗಿ ದುಡಿಯಲು ಉಪಯೋಗವಾಗುವಂತೆ ಮಾಡುವಿರಿ. ಎಲ್ಲ ಸಂದರ್ಭದಲ್ಲಿ ಒಂದೇ ರೀತಿಯ ಭಾವನೆ ಬೇಡ.

-ಲೋಹಿತಶರ್ಮಾ ಇಡುವಾಣಿ

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು