Rashi Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರಿಗೆ ವೈವಾಹಿಕ ಜೀವನದಲ್ಲಿ ಮನಸ್ತಾಪ ಇರಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರಿಗೆ ವೈವಾಹಿಕ ಜೀವನದಲ್ಲಿ ಮನಸ್ತಾಪ ಇರಲಿದೆ
ಪ್ರಾತಿನಿಧಿಕ ಚಿತ್ರImage Credit source: indiatv.in
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 20, 2023 | 6:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 20  ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶೋಭನ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:05 ರಿಂದ 05:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:41ರ ವರೆಗೆ.

ಧನುಸ್ಸು: ದೂರಪ್ರಯಾಣದಲ್ಲಿ ಸ್ನೇಹಿತರ ಮನೆಯಲ್ಲಿ ವಾಸ ಮಾಡಬೇಕಾಗಬಹುದು. ನಿಮ್ಮ ಗೌಪ್ಯ ವಿಷಯವನ್ನು ತಿಳಿದುಕೊಳ್ಳುವ ಕುತೂಹಲವಿರಬಹುದು. ಅದಕ್ಕಾಗಿ ಕೆಲವು ಮಾತುಗಳನ್ನು ಆಡಬಹುದು. ದೂರದ ಊರಿಗೆ ಪ್ರಯಾಣವು ಅನಿರೀಕ್ಷಿತವಾಗುವ ಸಾಧ್ಯತೆ ಇದೆ. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಹಿರಿಯರ ಮಾತಿನಿಂದ ನಿಮ್ಮ ಸಂವೇದನಾ ಕೇಂದ್ರವು ತೆರೆದುಕೊಳ್ಳಬಹುದು. ಸಹೋದರರ ನಡುವೆ ಸಂಘರ್ಷವಾಗುವ ಸಾಧ್ಯತೆ ಇದೆ. ದಾಂಪತ್ಯದ ಕಲಹವು ಮನೆಯಲ್ಲಿ ಆತಂಕವನ್ನು ಉಂಟುಮಾಡೀತು.

ಮಕರ: ನಿಮ್ಮ ಮಕ್ಕಳು ನಿಮ್ಮನ್ನು ಸಂತೋಷವಾಗಿ ಇಡುವರು. ಅನಿವಾರ್ಯವಾಗಿ ಖರ್ಚು ಮಾಡಬೇಕಾದ ಸಂದರ್ಭ ಬಂದಾಗ ಸ್ನೇಹಿತರ ಸಹಾಯವನ್ನು ಕೇಳುವಿರಿ. ನಿಮ್ಮ ವೈವಾಹಿಕ ಬದುಕಿನಲ್ಲಿ ಪರಸ್ಪರ ಪ್ರೀತಿಯ ಅಭಾವದಿಂದ ಇಬ್ಬರ ನಡುವೆ ಅಸಮಾಧಾನವಾಗಬಹುದು.‌ ಇಬ್ಬರ ಮನಸ್ಸೂ ಹಗುರಾಗಲು ಇಷ್ಟವಾದುದನ್ನು ಮಾಡುವುದು ಒಳ್ಳೆಯದು. ನಿಮ್ಮದೇ ಕೆಲಸದದಲ್ಲಿ ನೀವು ಬಹಳ ಚುರುಕಿನಿಂದ ವ್ಯವಹಾರವನ್ನು ಮಾಡುವಿರಿ. ಬದಲಾವಣೆಗಳನ್ನು ಕಾತರದಿಂದ ಕಾಯುವಿರಿ. ಯೋಗ್ಯತೆಯ ಅನುಸಾರವಾಗಿ ನೀವು ಜವಾಬ್ದಾರಿಗಳನ್ನು ಹಂಚಲಿದ್ದೀರಿ. ಬರಬೇಕಾದ ಹಣವು ಬರುದಿಲ್ಲವೆಂಬ ನಂಬಿಕೆ ಬರಬಹುದು.

ಕುಂಭ: ವೈವಾಹಿಕ ಜೀವನದಲ್ಲಿ ಮನಸ್ತಾಪ ಇರಲಿದೆ. ತಿಳಿವಳಿಕೆಯ ಕೊರತೆಯಿಂದ ವ್ಯವಹಾರದಲ್ಲಿ ನಷ್ಟವಾದೀತು. ಧಾರ್ಮಿಕವಾಗಿ ಶ್ರದ್ಧೆ, ಭಕ್ತಿಗಳು ಕಡಿಮೆ ಆದೀತು. ಈ ದಿನ ನೀವು ಸಕಾರಾತ್ಮಕವಾಗಿ ಚಿಂತನೆಯನ್ನು ಮಾಡುವಿರಿ. ಆಸ್ತಿಯನ್ನು ಖರೀದಿಸಲಿದ್ದೀರಿ. ಪಾಲುದಾರಿಕೆಯಲ್ಲಿ ನಿಮ್ಮ ಸಹಭಾಗಿತ್ವ ಕಡಿಮೆ ಆಗಬಹುದು. ನಿಮ್ಮ ಬಂಧುಗಳು ನಿಮ್ಮ ಯೋಜನೆಗಳನ್ನು ಇಷ್ಟ ಪಡುವರು. ಅವರು ನಿಮ್ಮ ಜೊತೆ ಸಲುಗೆಯಿಂದ ಮಾತನಾಡಲು ಇಚ್ಛಿಸುವಿರಿ. ಪ್ರೇಮಪಾಶವು ನಿಮಗೆ ಹಿತಕರವಾದ ಅನುಭವವನ್ನು ನೀಡೀತು. ಅವಶ್ಯಕ ವಸ್ತುಗಳು ಕಣ್ಮರೆಯಾದಾವು.

ಮೀನ: ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯನ್ನು ಕಂಡು ಖುಷಿಯಾಗುವುದು. ಸ್ತ್ರೀಯರಿಂದ ಧನಸಹಾಯವು ಆಗಲಿದೆ. ಇಂದು ನಿಮಗೆ ಸಾಕಷ್ಟು ಸಮಯವಿರಲಿದ್ದು ಸದುಪಯೋಗ ಮಾಡಿಕೊಳ್ಳಬೇಕಿದೆ. ಸಂಗಾತಿಯ ನಡೆವಳಿಕೆಯನ್ನು ಪ್ರಶಂಸಿಸುವರು. ನಿಮ್ಮವರು ನಿಮಗೆ ಕೆಲವು ಕಿವಿಮಾತನ್ನು ಹೇಳಬಹುದು. ವ್ಯಾಪಾರದಲ್ಲಿ ಸ್ವಲ್ಪ ನಷ್ಟವಾಗಲಿದೆ. ನಿಮ್ಮ ಮಕ್ಕಳ ಬಗ್ಗೆ ಅತಿಯಾದ ಚಿಂತೆನೆ ಬೇಡ. ಕೆಟ್ಟ ಅಭ್ಯಾಸವನ್ನು ಬಿಡಲು ಪ್ರಯತ್ನಿಸುವಿರಿ. ಅಕಾರಣವಾಗಿ ಮನಸ್ಸು ಬಹಳ ಚಂಚಲವಾಗಬಹುದು. ಏಕಾಗ್ರತೆಗೆ ಕೆಲವು ಅಭ್ಯಾಸವನ್ನು ಮಾಡಿಕೊಳ್ಳಿ.

-ಲೋಹಿತಶರ್ಮಾ ಇಡುವಾಣಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್