Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 6:15 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 25 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04 ರಿಂದ 07:40ರ ವರೆಗೆ, ಗುಳಿಕ ಕಾಲ 09:17 ರಿಂದ 10:53ರ ವರೆಗೆ.

ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಸ್ನೇಹಿತರ ಸಹಾಯದಿಂದ ಹೊಸ ಉದ್ಯಮವನ್ನು ಆರಂಭಿಸುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಉನ್ನತ ಸ್ಥಾನ ಸಿಗಲು ಅವಕಾಶಗಳಿದ್ದರೂ ಕಾಲಕ್ಕಾಗಿ ಕಾಯಬೇಕಾಗಿದೆ. ವ್ಯಕ್ತಿಗತ ದೋಷಗಳನ್ನು ಮರೆತು ಮುನ್ನಡೆಯಿರಿ. ಸಮೂಹವನ್ನು ಮುನ್ನಡೆಸುವ ನಾಯಕರಾಗುವಿರಿ. ನಿಮ್ಮ ಸುಕೃತವು ಕಾಪಾಡಲಿದೆ. ನಿಮ್ಮ ದೃಷ್ಟಿಯನ್ನು ಶುದ್ಧ ಮಾಡಿಕೊಳ್ಳುವುದು ಉತ್ತಮ. ಸಾಮಾಜಿಕ ಚಟುವಟಿಕೆಗಳು ನಿಮಗೆ ಯಶಸ್ಸನ್ನು ತಂದು ಕೊಡುವುದು. ದೀರ್ಘಕಾಲದ ಹೂಡಿಕೆಗೆ ನಿಮ್ಮ ಗಟ್ಟಿಯಾದ ನಿಲುವಿರಲಿ.

ಮಕರ: ಇಂದು ನಿಮ್ಮ ಉತ್ಸಾಹವನ್ನು ಅಧಿಕಗೊಳಿಸುವ ಘಟನೆಗಳು ಇರಬಹುದು. ನಿಮ್ಮ ವಾಹನವನ್ನು ಮಾರಾಡ ಮಾಡಲಿದ್ದೀರಿ. ಹಣವು ಸಿಗದೇ ಅದೆರ ಬಗ್ಗೆ ಮೋಹವು ಕಡಿಮೆಯಾಗುವುದು. ಪ್ರೇಮಿಗಳು ದೂರಾಗುವ ಸಂಭವವಿದೆ. ನಿವೃತ್ತರಿಗೆ ಸಮಯವನ್ನು ಕಳೆಯಲು ಬಹಳ ಕಷ್ಟವಾದೀತು. ನಿಮ್ಮ ಫಲಿತಾಂಶವು ನಿನಗೆ ಖುಷಿಕೊಡುವುದು. ಭಿನ್ನಾಭಿಪ್ರಾಯಗಳು ಸಹಜವಿದ್ದರೂ ಅದನ್ನು ಉಳಿಸಿಕೊಳ್ಳುವುದು ಬೇಡ. ನಿಮ್ಮ ಸಮಯವನ್ನು ಯಾರಾದರೂ ಬಳಸಿಕೊಳ್ಳಬಹುದು. ಹತ್ತಿರದ ವ್ಯಕ್ತಿಗಳಿಗೆ ನಿಮ್ಮ ಮೇಲೆ ಅಗೌರವವೂ ಬರಬಹುದು.

ಕುಂಭ: ಮಾನಸಿಕವಾಗಿ ಆಗುವ ನೋವನ್ನು ಶಮನ ಮಾಡಿಕೊಳ್ಳಲು ದೂರಪ್ರಯಾಣ ಮಾಡಬಹುದು. ನಿಮಗೆ ಪರಿಶ್ರಮದ ಕೆಲಸವು ಸಿಕ್ಕಿ ಅದರಲ್ಲಿ ಹೆಚ್ಚು ಆನಂದ ಪಡುವಿರಿ. ಶ್ರಮ ಹೆಚ್ಚಿದ್ದರೂ ಸಂಪತ್ತೂ ತಕ್ಕಮಟ್ಟಿಗೆ ಬರಬಹುದು. ತಂದೆ ಮಕ್ಕಳ ನಡುವೆ ಭಿನ್ನಾಭಿಪ್ರಾಯಗಳು ಬರುವ ಸಾಧ್ಯತೆ ಇದೆ. ಅದನ್ನು ಕುಳಿತು ಬಗೆ ಹರಿಸಿಕೊಳ್ಳುವುದು ಉತ್ತಮ. ಸುಮ್ಮನೇ ವಾಗ್ವಾದಗಳು ಬೇಡ. ಹೊಂದಣಿಕೆಯಿಂದ‌ ಇತ್ಯರ್ಥ ಮಾಡಿಕೊಳ್ಳಿ. ವಿದ್ಯಾರ್ಥಿಗಳು ಅಭ್ಯಾಸಕ್ಕಾಗಿ ದೂರದ ಊರಿಗೆ ಹೋಗಬೇಕಾಗಬಹುದು. ಮನೆಯಲ್ಲಿ ಅಸಮ್ಮತಿ ಇದ್ದರೂ ನಿಮ್ಮ ಹಠವೇ ಮೇಲಾಗುವುದು.

ಮೀನ: ಆರ್ಥಿಕತೆಗೆ ಸಂಬಂಧಿಸಿದಂತೆ ಮನಸ್ತಾಪಗಳು ಬರಬಹುದು. ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಮಾಡಬೇಕು ಎಂದುಕೊಂಡ ಕೆಲಸಗಳು ಆರಂಭವಾಗದೇ ಇರಬಹುದು. ವೈವಾಹಿಕ ಜೀವನಕ್ಕೆ ಕಾಲಿಡಲು ಆತುರ ಬೇಡ. ನಿಮಗೆ ಇಷ್ಟವಾದ ಕೆಲಸವನ್ನು ಇಂದು ಮಾಡುವಿರಿ. ನಿಮಗೆ ಎಲ್ಲ ವಿಚಾರದಲ್ಲಿಯೂ ಹಿಂಜರಿಕೆ ಉಂಟಾಗಲಿದೆ. ದೈವಜ್ಞರ ಸಲಹೆ ಪಡೆದು ಸೂಕ್ತ ಪರಿಹಾರವನ್ನು ಕಂಡುಕೊಳ್ಳಿ. ಮನಸ್ಸಿನಲ್ಲಿ ಏಕಾಗ್ರತೆಯ ಕೊರತೆ ಕಾಣಲಿದೆ. ಸದಾ ಚಿಂತನೆಯನ್ನು ಮಾಡುವುದು ಬಿಟ್ಟು ಮನಸ್ಸನ್ನು ಖಾಲಿ ಮಾಡಿಕೊಳ್ಳಲು ಪ್ರಯತ್ನಿಸಿ.

ಲೋಹಿತಶರ್ಮಾ – 8762924271 (what’s app only)

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ