AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 28, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 28 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶೂಲ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ 05:17 ರಿಂದ 6:58ರ ವರೆಗೆ, ಯಮಘಂಡ ಕಾಲ 12:30 ರಿಂದ 02:06ರ ವರೆಗೆ, ಗುಳಿಕ ಕಾಲ 03:43 ರಿಂದ 05:19ರ ವರೆಗೆ.

ಧನಸ್ಸು: ಹೊಸ ಉದ್ಯೋಗವನ್ನು ಹುಡುಕುವ ಭರದಲ್ಲಿ ಮೋಸಕ್ಕೆ ಸಿಲುಕಿಕೊಳ್ಳಬಹುದು. ಅತಿಯಾದ ಆಸೆಯಿಂದ ನಿಮ್ಮ ಸಂಪತ್ತನ್ನು ಕಳೆದುಕೊಳ್ಳಬಹುದು. ಕುಟುಂಬವು ನಿಮ್ಮನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಇರುವುದು ನಿಮಗೆ ಬೇಸರ ತರಿಸುವುದು. ಆಸ್ತಿಯಲ್ಲಿ ಪಾಲನ್ನು ಪಡೆಯಲು ಸ್ನೇಹಿತರು ಕುಮ್ಮಕ್ಕು ಕೊಟ್ಟಾರು. ಇಂದಿನ‌ ಸಮಾರಂಭದಲ್ಲಿ ಪರಿಚಿತರ ಭೇಟಿಯು ಸಮಾಧಾನವನ್ನು ನೀಡುವುದು. ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಸ್ವಲ್ಪ ಉತ್ಸಾಹವನ್ನು ತೋರಿಸುವರು. ಅದು ಹಾಗೆಯೇ ಇರುವಂತೆ ಪೋಷಕರು ನೋಡಿಕೊಳ್ಳಬೇಕು.

ಮಕರ: ಉದ್ಯಮಿಗಳಾಗಿರುವ ನಿಮಗೆ ಉದ್ಯಮದಲ್ಲಿ ಉಂಟಾದ ಸಣ್ಣ ಬದಲಾವಣೆಯಿಂದ ಕೆಲವು ಕೆಲಸಗಾರರು ಬಿಟ್ಟು ಹೋಗಬಹುದು.‌ ಇಷ್ಟು ದಿನದ ಮಿತ್ರತ್ವವು ನಿಮಗೆ ಸಾಕೆನಿಸಬಹುದು. ವರ್ತನೆಗಳು ನಿಮಗೆ ಮಾನಸಿಕ ಅಸಮತೋಲನವನ್ನು ಉಂಟುಮಾಡೀತು. ನಿಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು ಗೊಂದಲ ಬೇಡ. ಒಪ್ಪಿಕೊಂಡ ಮಾತ್ರಕ್ಕೆ ಸೋಲು ಎಂದುಕೊಳ್ಳುವುದು ಬೇಡ. ದಾಂಪತ್ಯದಲ್ಲಿ ಅಹಂಕಾರದಿಂದ ಸಂಬಂಧಗಳ‌ ನಡುವೆ ಬಿರುಕುಬರಬಹುದು. ಹಣಕಾಸಿನ‌ ವಿಚಾರವನ್ನು ಸಹೋದರರ ಜೊತೆ ಕುಳಿತು‌ ಮಾತನಾಡಿ.

ಕುಂಭ: ಕುಟುಂಬದ ಸದಸ್ಯರ ಜೊತೆ ಕುಳಿತು ಅನೌಪಚಾರಿಕ ಮಾತುಗಳನ್ನು ಆಡಿ ಸಂಬಂಧವನ್ನು ಹೊಸತು ಮಾಡುವಿರಿ. ಹಣದ ಬಗ್ಗೆ ಬಹಳ ಚಿಂತಾಕ್ರಾಂತರಾಗಿದ್ದು ಅದನ್ನು ಸ್ನೇಹಿತರು ಮನಗಂಡು ಸಹಾಯ ಮಾಡುವರು. ನಿಮ್ಮ ತಂದೆಯ ಮಾತು ನಿಮಗೆ ಅಸಹ್ಯವಾದರೂ ಅದನ್ನು ತಮಾಷೆಯಾಗಿ ತೆಗೆದುಕೊಂಡು ಸುಮ್ಮನಾಗುವಿರಿ. ಆತುರದ ನಿರ್ಧಾರವನ್ನು ತೆಗೆದುಕೊಳ್ಳುವುದು ಬೇಡ. ಅನಂತರ ಪಶ್ಚಾತ್ತಾಪ ಪಡಬೇಕಾದೀತು. ಸಂಗಾತಿಯ ಜೊತೆಗಿನ ವ್ಯವಹಾರವು ನಿಮಗೆ ಎಂದಿಗಿಂತ ಹಿತ ಎನಿಸಬಹುದು.

ಮೀನ: ಇಂದು ನಿಮ್ಮ ಕೆಲಸದ ಮೇಲೆ ಪೂರ್ಣವಾಗಿ ಗಮನಹರಿಸಿ. ಅನ್ಯರ ಚಿಂತೆ ನಿಮಗೆ ಬೇಡ. ಬಾಕಿ ಇರುವ ಕೆಲಸದ ಬಗ್ಗೆ ಹೆಚ್ಚು ಗಮನವಿರಲಿ. ದಿನವನ್ನು ಮುಂದೆ ಹಾಕುವುದು ಬೇಡ. ಇಂದು ನಿಮ್ಮ ಕಡೆಯಿಂದ ದೊಡ್ಡ ತಪ್ಪು ಆಗದಂತೆ ನೋಡಿಕೊಳ್ಳಿ. ನಿಮ್ಮ ಸಂಗಾತಿಯನ್ನು ಹೊಸ ರೀತಿಯಲ್ಲಿ ಪ್ರೀತಿಸಲು ಇಷ್ಟಪಡುವಿರಿ. ಹಣವು ನಿಮಗೆ ಸರಿಯಾದ ಸಮಯಕ್ಕೆ ಸಿಗದೇ ಗಲಿಬಿಲಿಗೊಳ್ಳುವಿರಿ. ಗಂಭೀರವಾದ ಚಿಂತನೆಗೆ ಮನಸ್ಸು ತೊಡಗಿಕೊಳ್ಳದೇ ಬೇರೆ ವಿಚಾರದ ಬಗ್ಗೆಯೇ ಹೆಚ್ಚು ಆಲೋಚಿಸೀತು.

-ಲೋಹಿತಶರ್ಮಾ – 8762924271 (what’s app only)

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?