Horoscope : ದಿನ ಭವಿಷ್ಯ |ಮೇಷ ರಾಶಿಯವರಿಗೆ ಗುರಿಸಾಧನೆಗೆ ಇದು ಸೂಕ್ತ ಸಮಯ

ಫೆಬ್ರವರಿ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

  • TV9 Web Team
  • Published On - 6:16 AM, 22 Feb 2021
Horoscope : ದಿನ ಭವಿಷ್ಯ |ಮೇಷ ರಾಶಿಯವರಿಗೆ ಗುರಿಸಾಧನೆಗೆ ಇದು ಸೂಕ್ತ ಸಮಯ
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ದಶಮಿ ತಿಥಿ, ಸೋಮವಾರ, ಫೆಬ್ರವರಿ 22, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8.06 ರಿಂದ ಬೆಳಿಗ್ಗೆ 9.33. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.39. ಸೂರ್ಯಾಸ್ತ: ಸಂಜೆ 6.20.

ತಾ.22-02-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 8

ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ. ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 1

ಮಿಥುನ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 7

ಕರ್ಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 4

ಸಿಂಹ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 1

ಕನ್ಯಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 9

ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6

ಧನು: ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 4

ಮಕರ: ವ್ಯರ್ಥ ಚಿಂತೆ, ತಪ್ಪು ಕಲ್ಪನೆ, ನಿಷ್ಟೂರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 6

ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 7

ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937