Horoscope: ಹಿತಶತ್ರುಗಳು ನಿಮಗೆ ಯಶಸ್ಸು ಬಾರದಂತೆ ನೋಡಿಕೊಳ್ಳುವರು
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜುಲೈ.03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜುಲೈ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:46 ರಿಂದ ಬೆಳಿಗ್ಗೆ09:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:00 ರಿಂದ 12:37ರ ವರೆಗೆ.
ಸಿಂಹ ರಾಶಿ : ಇಂದು ಅಸರಂಭಿಸಿದ ಕಾರ್ಯವನ್ನು ಮುಗಿಸುವ ಮನೋಭಾವದಲ್ಲಿ ಇರುವಿರಿ. ಆದರೆ ದೇಹದ ಆಲಸ್ಯ, ಮನಸ್ಸಿನಲ್ಲಿ ಇರುವ ಜಾಡ್ಯದಿಂದ ಯಾವ ಕಾರ್ಯಗಳೂ ಆಗದು. ಏಕಮುಖವಾದ ನಿರ್ಧಾರವನ್ನು ತೆಗದುಕೊಂಡು ನೀವು ಒಬ್ಬೊಟಿಯಾಗಬೇಕಾದೀತು. ಎಲ್ಲರ ಜೊತೆ ಚರ್ಚಿಸಿ ಅವರನ್ನು ತೆಗೆದುಕೊಂಡು ಹೋಗಿ. ಸಿಟ್ಟಿನಿಂದ ಏನನ್ನೂ ಸಾಧಿಸಲಾಗದು ಎಂಬ ಸತ್ಯವು ತಿಳಿಯಬಹುದು. ಕೋಪದಲ್ಲಿ ಮೂಗು ಕತ್ತರಿಸಿದರೆ ಮರಳಿ ಬರುವುದೆ? ಗಣ್ಯರು ನಿಮ್ಮನ್ನು ಭೇಟಿಯಾದಾರು. ನೀವು ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅವರಿಂದ ಸಹಾವಾಗಬಹುದು. ಇಂದು ನೀವು ಗೌರವವನ್ನು ಕೇಳಿ ಪಡೆದುಕೊಳ್ಳಲಿದ್ದೀರಿ. ನಿಮ್ಮವರು ಇದನ್ನು ಅಪಹಾಸ್ಯ ಮಾಡುವರು. ಪ್ರಯಾಣದಿಂದ ಆಯಾಸವಾಗಲಿದೆ. ಮಕ್ಕಳಿಲ್ಲದೇ ಬೇಸರವಾಗಲಿದೆ. ಏಕಾಂಗಿಯಾಗಿ ಇರುವುದು ಕಷ್ಟವಾಗುವುದು. ಪಿತ್ತರೋಗಕ್ಕೆ ವೈದ್ಯರ ಸಲಹೆಯನ್ನು ಕೇಳಿ.
ಕನ್ಯಾ ರಾಶಿ : ಇಂದು ನಿಮ್ಮ ಕಾರ್ಯಕ್ಷೇತ್ರವನ್ನು ಉತ್ತಮ ಮಾಡಿಕೊಳ್ಳುವುದು ಹೊಣೆಗಾರಿಕೆ ಆಗುವುದು. ನಿಮ್ಮ ಯೋಗ್ಯತೆಗೆ ಉನ್ನತಸ್ಥಾನದ ಪ್ರಸ್ತಾಪವೂ ಆಗಬಹುದು. ನಿಮ್ಮ ಜೀವನದಲ್ಲಿ ಪ್ರಮುಖರು ಯಾರೆಂಬ ಸರಿಯಾದ ಚಿತ್ರಣವು ನಿಮಗೆ ಸಿಗಲಿದೆ. ಇಂದು ನಿಮ್ಮ ಲೆಕ್ಕಾಚಾರಗಳು ಬುಡಮೇಲಾದೀತು. ಪ್ರಯಾಣ ಮಾಡುವ ಸಂದರ್ಭ ಬರಬಹುದು. ಯಾರದ್ದಾದರೂ ವಿಚಾರಕ್ಕೆ ಮೂಗು ತೂರಿಸಬೇಡಿ. ಜನ್ಮಾಂತರದ ಪುಣ್ಯವು ನಿಮ್ಮನ್ನು ಕಾಪಾಡಲಿದೆ. ಬಂಗಾರದ ಖರೀದಿಯನ್ನು ಮಾಡಲಿದ್ದೀರಿ. ದಾಂಪತ್ಯದಲ್ಲಿ ಮೌನವೇ ಹೆಚ್ಚಿರುವುದು. ಹಣ ಉಳಿತಾಯದ ಬಗ್ಗೆ ಸಂಗಾತಿಯು ಗಮನಸುವರು. ತಲೆನೋವು ಕಾಡೀತು ಇಂದು. ವಿದ್ಯಾರ್ಥಿಗಳು ಒಂದು ಹಂತದ ಓದನ್ನು ಮುಗಿಸಿ ಉದ್ಯೋಗಕ್ಕೆ ತೆರಳುವ ಆಲೋಚನೆ ಮಾಡುವರು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿಂದಿಸಬಹುದು. ಮನಸ್ಸಿನಲ್ಲಿ ಸಾವಧಾನತೆ ಇರದು.
ತುಲಾ ರಾಶಿ : ಇಂದು ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಅತಿಯಾದ ಭಯವು ಕಾಡಬಹುದು. ನಿಮ್ಮಿಂದ ನಿಮ್ಮ ತಂದೆ, ತಾಯಿಯರು ಬೇಸರಪಟ್ಟುಕೊಳ್ಳುವರು. ವಿವಾಹಯೋಗವನ್ನು ನಿರ್ಲಕ್ಷಿಸುವುದು ಬೇಡ. ಮಕ್ಕಳು ನಿಮಗೆ ಖುಷಿಯನ್ನು ತಂದುಕೊಟ್ಟಾರು. ಬಂಧುಗಳ ವಿಯೋಗವಾಗಬಹುದು. ಸಾಲದ ಚಿಂತೆ ಬಹಳ ಕಾಡಲಿದೆ. ವಿವಾಹಕ್ಕೆ ಸಂಬಂಧಿಸಿದಂತೆ ಗೊಂದಲಗಳು ಉಂಡಾಗಬಹುದು. ಸ್ವಂತ ವಾಹನವನ್ನು ಚಲಾಯಿಸುವಾಗ ಅನ್ಯ ಯೋಚನೆಯಲ್ಲಿ ಮಗ್ನರಾಗಿ ಅಪಘಾತವಾಗಬಹುದು. ಶ್ರಮ ವಹಿಸಿ ಕೆಲಸ ಮಾಡುವವರಿಗೆ ಹೆಚ್ಚಿನ ಜವಾಬ್ದಾರಿಗಳು ಸಿಗಬಹುದು. ಹೆಚ್ಚಿನ ಹೂಡಿಕೆಯಲ್ಲಿ ನಿಮಗೆ ಮನಸ್ಸಾಗುವುದು. ವಿದ್ಯಾರ್ಥಿಗಳು ಬಹಳ ಸೋಮಸರಿಗಳಾಗುವರು. ಸಂಗಾತಿಯ ಜೊತೆ ನಿಮಗಾದ ಸುಖ ಹಾಗೂ ದುಃಖವನ್ನು ಹಂಚಿಕೊಳ್ಳುವಿರಿ. ಅಮೂಲ್ಯವಾದ ವಸ್ತುಗಳು ಪಡೆದುಕೊಳ್ಳುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ.
ವೃಶ್ಚಿಕ ರಾಶಿ : ಇಂದು ನಿಮ್ಮ ಮನಸ್ಸನ್ನು ಕಲಕಲೆಂದು ಕೆಲವರು ತಯಾರಿ ಮಾಡಬಹುದು. ನಿಮ್ಮ ಪ್ರಮಾಣಿಕ ಪ್ರಯತ್ನವನ್ನು ವಂಚನೆ ಇಲ್ಲದೇ ಮಾಡಿ. ಆರ್ಥಿಕವಾಗಿ ಇಂದು ಸಬಲರಾಗುವಿರಿ. ಕೆಲಸದಲ್ಲಿ ವಿಘ್ನವು ಬರುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗುವ ನಿಮ್ಮಕನಸು ನನಸಾಗಬಹುದು. ಹಿತಶತ್ರುಗಳು ನಿಮಗೆ ಯಶಸ್ಸು ಬಾರದಂತೆ ನೋಡಿಕೊಳ್ಳುವರು. ಸತ್ಯವನ್ನು ಮುಚ್ಚಿಡುವ ಪ್ರಯತ್ನವು ನಿಮ್ಮಿಂದ ನಡೆಯಲಿದೆ. ಅದು ಕುಟುಂಬಕ್ಕೆ ಗೊತ್ತಾಗಲಿದೆ. ಸಲಹೆಯನ್ನು ಕೇಳಿದರಷ್ಟೇ ನೀಡುವುದು ಉತ್ತಮ. ನೇರ ಮಾತುಗಳಿಂದ ನಿಮ್ಮವರಿಗೆ ಬೇಸರವಾಗಬಹುದು. ಅತಿಯಾದ ಮಾತೂ ಕೇಳುಗರಿಗೆ ಕಿರಿಕಿರಿ ತರಿಸುವುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಸ್ಪಷ್ಟತೆ ಇಲ್ಲದೇ ಮಾಡಬೇಡಿ. ಮೋಸ ಹೋಗುವಿರಿ. ಸ್ವಲ್ಪ ವಿಳಂಬ ಮಾಡಿ. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಯಾರನ್ನೋ ಹಿಮ್ಮೆಟ್ಟುವ ಇಚ್ಛೆಯಿಂದ ಕೆಲಸ ಮಾಡುವಿರಿ.