Astrology: ಇಂದು ಏನನ್ನಾದರೂ ಹೇಳಿ ಅಪಮಾನಕ್ಕೆ ಸಿಲುಕಬಹುದು-ಎಚ್ಚರ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Astrology: ಇಂದು ಏನನ್ನಾದರೂ ಹೇಳಿ ಅಪಮಾನಕ್ಕೆ ಸಿಲುಕಬಹುದು-ಎಚ್ಚರ
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 27, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜೂನ್. 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:13 ರಿಂದ 15:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 6:08 ರಿಂದ ಬೆಳಿಗ್ಗೆ 7:45ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 9:22 ರಿಂದ 10:59ರ ವರೆಗೆ.

ಸಿಂಹ ರಾಶಿ :ಇಂದು ಉದ್ಯೋಗದಲ್ಲಿ ನಿಮಗೆ ಬದಲಾವಣೆ ಬೇಕು ಎಂದು ಎನಿಸುವುದು. ಅಪರಿಚಿತ ದೂರವಾಣಿಯ ಕರೆಯಿಂದ ನಿಮಗೆ ಲಾಭವಾಗುವುದು. ವಿದೇಶದ ವ್ಯಾಪಾರದ ಕುರಿತು ಚರ್ಚಿಸುವಿರಿ. ನಿಮ್ಮ ಭೂಮಿಯು ಸರ್ಕಾರದ ಪಾಲಾಗಬಹುದು. ಅಧಿಕಾರಿಗಳು ನಿಮ್ಮ ಆದಾಯವನ್ನು, ವೃತ್ತಿಯನ್ನು ವಿಚಾರಿಸಯಾರು. ಸರಿಯಾದ ಮಾಹಿತಿ ನೀಡಿ. ಇನ್ನೊಬ್ಬರ ಬಗ್ಗೆ ನಿಮ್ಮ ಭಾವನೆಯನ್ನು ಬದಲಿಸಿಕೊಳ್ಳುವುದು ಉತ್ತಮ. ನಿಮಗೆ ಸಂಬಂಧವಿಲ್ಲದ ಕಾರ್ಯವನ್ನೇ ಮಾಡಬೇಕಾಗುವುದು. ಬೆಳಗಿನಿಂದ ಕೆಲಸ ಮಾಡುತ್ತಿದ್ದರೂ ಇನ್ನೂ ಮುಗಿದಿಲ್ಲ ಆತಂಕ ಇರಲಿದೆ. ಏಕಾಂತವನ್ನು ಇಂದು ಬಹಳ‌ ಇಷ್ಟಪಡುವಿರಿ.‌ ಉದ್ಯೋಗದಿಂದ ಬಂದವರೇ ಉದ್ಯಾನವನಕ್ಕೆ ಹೋಗಿ ಧ್ಯಾನಸ್ಥರಾಗುವಿರಿ. ಹಳೆಯ ಸ್ನೇಹಿತರು ಅಕಸ್ಮಾತ್ ಸಿಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಲೆಕ್ಕಪತ್ರದ ವ್ಯವಹಾರದಲ್ಲಿ ಕಲಹವಾಗವುದು. ಯಾರನ್ನೂ ನಿಂದಿಸುವ ಮನೋಭಾವ ಬೇಡ.

ಕನ್ಯಾ ರಾಶಿ :ಇಂದು ನೀವು ದಾಂಪತ್ಯದಲ್ಲಿ ಕಲಹ ಸಹಜವೆಂದು ಸುಮ್ಮನಿರಬೇಡಿ. ಬೇಕಾದ ಪರಿಹಾರವೂ ಅಗತ್ಯ. ಹಿರಿಯರಿಂದ ಅವಮಾನವಾಗುವ ಸಾಧ್ಯತೆ ಇದೆ. ಆಪ್ತರ ಜೊತೆ ಹಣದ ವಿಚಾರವಾಗಿ ಕಲಹವಾಗಲಿದೆ. ಬಂಗಾರವನ್ನು ಪತ್ನಿಗೋಸ್ಕರ ಖರೀದಿಸುವಿರಿ. ಮೋಸಗಾರರು ನಿಮ್ಮ ಜೊತೆಗೇ ಇರುವರು, ಗುರುತಿಸಿಕೊಳ್ಳಿ. ಉದ್ಯೋಗದ ಸ್ಥಳದಲ್ಲಿ ಸಹೋದ್ಯೋಗಿಗಳು ಸಹಾಯ ಮಾಡುವರು. ಎಲ್ಲವನ್ನು ದೈವದಿಂದ ಮಾಡಲಾಗದು. ನಿಮ್ಮ ಪ್ರಯತ್ನವೂ ಬೇಕು. ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಉಂಟಾಗಬಹುದು. ನಿಮ್ಮ ತಪ್ಪಿಗೆ ಮತ್ಯಾರನ್ನೋ ತೋರಿಸುವಿರಿ. ಆರೋಗ್ಯವು ಹದ ತಪ್ಪಬಹುದು. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು. ಆಸ್ತಿಯ ಬಗ್ಗೆ ಬಿಸಿ ಮಾತು ಕೇಳುವುದು.

ತುಲಾ ರಾಶಿ :ಆಳವನ್ನು ಅರಿಯದೇ ನೀರಿಗೆ ಇಳಿದರೆ ಏನಾಗಬಹುದು? ಎಲ್ಲವೂ ಹಾಗೆಯೇ. ಬಂಧುಗಳ ಮನೆಗೆ ಹೋಗಿ ಬರಲಿದ್ದೀರಿ. ಧನಸಂಗ್ರಹದ ವಿಚಾರ ನಿಮ್ಮ ದಾರಿಯು ಸರಿಯಾಗಿದೆ ಎಂದು ನಿಮ್ಮವರಿಗೆ ಅನ್ನಿಸಬಹುದು. ಕಷ್ಟದಿಂದ ಸಂಪಾದಿಸಿದ ಹಣದ ಸ್ವಲ್ಪ ಭಾಗವು ಖರ್ಚಾಗಲಿದೆ. ಹಣವೊಂದೇ ಮುಖ್ಯ ಎನ್ನುವ ನಿರ್ಧಾರಕ್ಕೆ ಬರುವುದು ಸರಿಯಲ್ಲ. ಯಾರಾದರೂ ಕಾನೂನು ಬಾಹಿರ ಕಾರ್ಯಕ್ಕೆ ಪ್ರಲೋಭನೆ ಕೊಡಬಹುದು. ಮಾತಿನ ಬಗ್ಗೆ ಆದಷ್ಟು ಗಮನವಿರಲಿ. ಏನನ್ನಾದರೂ ಹೇಳಿ ಅಪಮಾನಕ್ಕೆ ಸಿಲುಕಬಹುದು. ಮನೆಯಲ್ಲಿಯೇ ಕುಳಿತು ಬೇಸರವಾದೀತು. ಪ್ರತಿಕಾರ ಬುದ್ಧಿಯನ್ನು ಬಿಡುವುದು ಉತ್ತಮ.‌ ನಿಮ್ಮ ಕೆಲಸದ ಕಡೆ ಗಮನ ಹೆಚ್ಚಿರಲಿ. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸಿ ಮುನ್ನಡೆಯಿರಿ. ನಿಮಗೆ ಏನಾದರೂ ಉಪಯೋಗವಿದ್ದರೆ ಮಾತ್ರ ಇಂದು ಬರುವ ಕಾರ್ಯವನ್ನು ಮಾಡಿ.

ವೃಶ್ಚಿಕ ರಾಶಿ :ಇಂದು ನೀವು ಮುಂದೆ ಮಾಡಬೇಕಾದ ಕೆಲವು ಕಾರ್ಯಗಳ ನಿರ್ಧಾರವನ್ನು ಮಾಡುವಿರಿ. ದೂರ ಪ್ರಯಾಣವು ನಿಮಗೆ ಕಷ್ಟವಾಗಬಹುದು. ತಪ್ಪುಗಳು ನಿಮ್ಮ ಸ್ವಭಾವವನ್ನು ತೋರಿಸುವುದು. ನೀವಿಂದು ಕೋಪವನ್ನು ನಿಯಂತ್ರಣಕ್ಕೆ ತರುವುದು ಬಹಳ ಮುಖ್ಯ.‌ಅಜಾಗರೂಕರಾಗಿರಬೇಡಿ. ಯಾಂತ್ರಿಕತೆಯಿಂದ ನಿಮಗೆ ಬಿಡುಗಡೆ ಬೇಕು ಎನಿಸಬಹುದು. ನಿಮ್ಮನ್ನು ಹತ್ತಾರು ಕಣ್ಣುಗಳು ಗಮನಿಸುತ್ತಿರುತ್ತವೆ. ಸಂಪಾದನೆಗೆ ದಾರಿಗಳು ಅನೇಕವಿದ್ದರೂ ನೀವು ಉತ್ತಮವಾದ ಒಂದನ್ನು ಆರಿಸಿಕೊಂಡು ಮುಂದುವರಿಯಿರಿ. ಒಳ್ಳೆಯದರಲ್ಲಿಯೂ ಕೆಟ್ಟದ್ದನ್ನು ಹುಡುಕುತ್ತ ಇರಬೇಡಿ. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ವೇಗದಲ್ಲಿ ಸಿಗುವ ಯಶಸ್ಸೇ ನಿಮಗೆ ತೊಂದರೆ ಕೊಡುವುದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ನಟರಿಗೆ ಅವಕಾಶವು ಸಿಗಲಿದೆ. ಎಲ್ಲ ಘಟನೆಗಳನ್ನೂ ಒಂದೇ ರೀತಿಯಲ್ಲಿ ನೋಡುವುದು ಸರಿಯಾಗದು.

ತಾಜಾ ಸುದ್ದಿ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ