ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ 29ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಐಂದ್ರ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ 12:30ರಿಂದ 14:07ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:41 ರಿಂದ ಬೆಳಿಗ್ಗೆ 09:17ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:54 ರಿಂದ ಮಧ್ಯಾಹ್ನ12:30ರ ವರೆಗೆ.
ಸಿಂಹ ರಾಶಿ :ಇಂದು ನಿಮ್ಮ ಮಾತಿನಿಂದ ಕುಟುಂಬದಲ್ಲಿ ಆತಂಕವು ಸೃಷ್ಟಿಯಾಗಬಹುದು. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಲು ಇಷ್ಟಪಡುವುದಿಲ್ಲ. ಅನಿರೀಕ್ಷಿತ ಜವಾಬ್ದಾರಿಗಳು ಸಿಕ್ಕಿ ಸ್ವಲ್ಪ ಒತ್ತಡವೆನಿಸಬಹುದು. ಮನೆಯ ವ್ಯವಹಾರದಲ್ಲಿ ಭಾಗವಹಿಸಲು ಇಷ್ಟವಾಗದು. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಹೊಂದಾಣಿಕೆಯನ್ನು ಬಹಳ ಸೂಕ್ಷ್ಮವಾಗಿ ಮಾಡಿಕೊಳ್ಳಬೇಕಾಗಬಹುದು. ಗೌರವವನ್ನು ಪಡೆಯುತ್ತೀರಿ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ. ಕಛೇರಿಯಲ್ಲಿ ಕಾರ್ಯಗಳು ಒತ್ತಡದಿಂದ ಇದ್ದು ಕೆಲವು ತಪ್ಪು ಆಗಬಹುದು. ಅಧಿಕಾರಿಗಳಿಂದ ನಿಮಗೆ ಭಯವು ಇರುವುದು.
ಕನ್ಯಾ ರಾಶಿ :ಇಂದು ನಿಮ್ಮ ಕಛೇರಿಯ ಕೆಲಸದಲ್ಲಿ ಅವಸರದ ನಿರ್ಧಾರವನ್ನು ತೆಗದುಕೊಳ್ಬೇಡಿ. ನಿಮ್ಮ ಮೇಲಧಿಕಾರಿಗಳ ಜೊತೆ ಚರ್ಚಿಸಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಡುವುದು ಒಳ್ಳೆಯದಲ್ಲ. ಅನೇಕ ಗೊಂದಲಗಳು ನಿಮ್ಮ ಜೀವನದಲ್ಲಿ ಬರುವುದು. ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಮನೆಯನ್ನು ಬದಲಿಸುವ ಯೋಚನೆ ಮಾಡಬಹುದು ಇಂದು. ಇಂದು, ನೀವು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ನೀವು ಲಾಭವನ್ನು ಪಡೆಯುತ್ತೀರಿ ಮತ್ತು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಯಾರನ್ನೂ ಅಪ್ರಯೋಜಕರಂತೆ ನೋಡುವುದು ಬೇಡ. ಆಪ್ತರು ನಿಮಗೆ ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ.
ತುಲಾ ರಾಶಿ :ವ್ಯವಸ್ಥೆಯ ಮುಖ್ಯಸ್ಥರಾಗಿ ಮುನ್ನಡೆಸುವುದು ಕಷ್ಟವಾಗುವುದು. ಆಯಾಸದಿಂದ ಯಾವ ಉತ್ಸಾಹವೂ ನಿಮ್ಮಲ್ಲಿ ಇರದು. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ವಾಹನವು ನಾಷ್ಟವಾಗುವ ಸಾಧ್ಯತೆಯಿದೆ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ನಿಮ್ಮ ಮನಸ್ಸಿನ ವಿಕಾರವನ್ನು ತೋರಿಸುವುದು ಬೇಡ. ಪ್ರತಿಯೊಂದು ವಿಷಯದಲ್ಲೂ ನಿಮ್ಮ ಪೋಷಕರಿಂದ ನೀವು ಸಂತೋಷ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇಂದು ನೀವು ಕೆಲವು ಅನಗತ್ಯ ಖರ್ಚುಗಳನ್ನು ಸಹ ಅನುಭವಿಸಬಹುದು. ದುಂದುವೆಚ್ಚ ಮಾಡುವ ಸಾಧ್ಯತೆಯೂ ಇದೆ. ಆಪ್ತರು ನಿಮಗೆ ಪ್ರೀತಿಯಿಂದ ಆತಿಥ್ಯವನ್ನು ಕೊಡಿಸುವರು. ನಿಮ್ಮ ಅಸಂಬದ್ಧ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ.
ವೃಶ್ಚಿಕ ರಾಶಿ :ಯಾರದೋ ಹಣವು ಅನಿರೀಕ್ಷಿತವಾಗಿ ಕೈ ಸೇರುವುದು. ನಿಮ್ಮ ಬಹುದಿನದ ಸಮಸ್ಯೆಯು ಬಗೆಹರಿಯಲಿದೆ. ಅನುಭವಿಗಳ ಜೊತೆಗಿನ ಒಡನಾಟದದಿಂದ ಉದ್ಯಮವು ಹೆಚ್ಚಾಗುವುದು. ಉತ್ತಮ ವಿಚಾರಗಳ ಕಡೆ ಗಮನವಿರಲಿ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ಇನ್ನೊಬ್ಬರ ಸಂಪತ್ತನ್ನು ಅಪಹರಿಸಿದ ಅಪವಾದ ಬರುವುದು. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬಹುದು. ಮಧುರವಾದ ಮಾತುಗಳಿಂದ ತುಂಡಾಗುವ ಸಂಬಂಧವನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಚೆನ್ನಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ವಿದ್ಯಾಭ್ಯಾಸದ ಕಾರಣಕ್ಕೆ ಮನೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಸಾಲ ಕೊಟ್ಟ ಹಣವು ನಿಮಗೆ ಮರಳಿಬರುವುದು.