
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ :ದಶಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸೌಭಾಗ್ಯ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:41 ರಿಂದ ಸಂಜೆ 05:12ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:39 ರಿಂದ 11:10ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:40 ರಿಂದ 02:11 ರ ವರೆಗೆ.
ಮೇಷ ರಾಶಿ: ನೀವು ಇಂದು ಉಳಿಸಿಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದು ಹೆಚ್ಚಿರುವುದು. ಅನವಶ್ಯಕ ಮಾತುಗಳಿಂದ ಇತರರಿಗೆ ಬೇಸರವಾದೀತು. ನಿಮಗಿರುವ ಕುತೂಹಲವನ್ನು ಯಾರಾದರೂ ತಣಿಸಿಯಾರು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಣ್ಣ ಅಡಚಣೆಯಾದೀತು. ವಿದ್ಯಾರ್ಥಿಗಳು ಪರೀಕ್ಷೆಯ ಭಯವನ್ನು ಕಳೆದುಕೊಳ್ಳುವುದು ಉತ್ತಮ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ದೊಡ್ಡ ಸ್ವರದಲ್ಲಿ ಮಾತನಾಡುವುದು ನಿಮಗೆ ಇಷ್ಟವಾಗದು. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು. ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಇಂದಿನ ಕೆಲಸಕ್ಕೆ ಬೇಕಾದ ಉತ್ಸಾಹವನ್ನು ತಂದುಕೊಳ್ಳಿ.
ವೃಷಭ ರಾಶಿ: ನೀವು ಯಾವ ಸಂದರ್ಭದಲ್ಲಿಯೂ ವಿವೇಕ ಶೂನ್ಯವಾಗಿ ವರ್ತಿಸುವುದು ಬೇಡ. ಹಿರಿಯರ ಮೇಲೆ ಗೌರವವು ಕಡಿಮೆ ಆದೀತು. ಕೃಷಿಯು ನಿಮಗೆ ಮಾಡಬೇಕೆನಿಸಬಹುದು. ಇಂದಿನ ಕಾರ್ಯದ ಹೊರೆಯನ್ನು ಹೊತ್ತು ಓಡಾಡುವಿರಿ. ಇತರರನ್ನು ಹೋಲಿಸಿಕೊಂಡು ನಿಮ್ಮನ್ನು ನೀವು ಸಮಾಧಾನ ಮಾಡಿಕೊಳ್ಳುವಿರಿ. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು ಸ್ಥಿರಾಸ್ತಿಯನ್ನು ಮಾರಾಟ ಮಾಡಲೂ ನಿಮಗೆ ಕಷ್ಟವಾದೀತು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ಸಂಗಾತಿಯನ್ನು ನೀವು ಎಷ್ಟೇ ಒಪ್ಪಿಸಿದರೂ ಅದರಿಂದ ಪ್ರಯೋಜನವಾಗದು. ವೃತ್ತಿಯ ಏಕತಾನತೆಯಿಂದ ಹೊರಬರಲು ಬಯಸುವಿರಿ. ಆಪ್ತರು ಕಾರಣಾಂತರಗಳಿಂದ ದೂರಾಗಬಹುದು. ಸಕಾರಾತ್ಮಕ ಆಲೋಚನೆಯನ್ನು ನೀವು ಹೆಚ್ಚು ಮಾಡಿಕೊಳ್ಳುವಿರಿ. ಸರ್ಕಾರದ ಕಡೆಯಿಂದ ಒತ್ತಡ ಬರಬಹುದು.
ಮಿಥುನ ರಾಶಿ: ಇಂದು ನೀವು ಎಷ್ಟೊಂದು ಜೋಪಾನ ಮಾಡಿದರೂ ಎಲ್ಲಿಲಾದರೂ ಪೆಟ್ಟು ಬೀಳಬಹುದು. ಆತ್ಮವಿಶ್ವಾಸವಿದ್ದರೂ ಮುನ್ನುಗ್ಗುವ ಹಾದಿಯಲ್ಲಿ ಪೂರ್ಣ ನಂಬಿಕೆ ಇರದು. ಇಂದು ಬಂಧುಗಳು ನಿಮ್ಮನ್ನು ಭೇಟಿಯಾಗಲು ಬರಬಹುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳಬೇಕಾದೀತು. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ನೆರವಾಗುವಿಕೆ ಇರಲಿದ್ದು, ಸಂತೋಷವಾಗಲಿದೆ. ಮಕ್ಕಳ ಕುರಿತು ನಿಮಗೆ ಅಭಿಮಾನ ಹೆಚ್ಚಾಗುವುದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ನಿಮ್ಮ ಮನಸ್ಸಿನ ಮೇಲೆ ಆಕ್ರಮಣಗಳು ಆಗಬಹುದು. ಇಂದು ಒತ್ತಡವಿಲ್ಲದೇ ಕಾರ್ಯವನ್ನು ಮುಗಿಸುವಿರಿ. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಳ್ಳುವುದು ಮುಖ್ಯವಾಗುವುದು. ನಿಮ್ಮ ಸಾಮಾಜಿಕ ಕಾರ್ಯಕ್ಕೆ ಬೆಂಬಲವನ್ನು ಅಪೇಕ್ಷಿಸುವಿರಿ. ಅತಿಯಾದ ಸೌಂದರ್ಯ ಪ್ರಜ್ಞೆಯಿಂದ ಸಮಯವು ಹಾಳಾಗುವುದು.
ಕಟಕ ರಾಶಿ: ಇಂದು ನಿಮಗೆ ಸ್ತ್ರೀಯರಿಂದ ಅಪವಾದ ಬರಬಹುದು. ಹಿರಿಯರ ಜೊತೆ ಸೌಜನ್ಯದಿಂದ ನಡೆದುಕೊಳ್ಳಬೇಕು. ದುಂದುವೆಚ್ಚಕ್ಕೆ ಯಾರಾದರೂ ತಿಳಿಹೇಳಿಯಾರು. ಇಂದು ನೀವು ಯಾರಿಂದಲಾದರೂ ಸಹಾಯವನ್ನು ಪಡೆಯುವಿರಿ. ಕಾರ್ಯಸ್ಥಳದ ಬದಲಾವಣೆ ಇರಲಿದೆ. ಅಧಿಕಾರವು ಸುಮಶಯ್ಯೆಯಾಗಿರದು. ಕೆಲವು ವಿಚಾರಕ್ಕೆ ಬುದ್ಧಿಯು ಸೂಚಿಸದೇ ಇರಬಹುದು. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ವ್ಯವಹಾರವು ಪ್ರಾಮಾಣಿಕವಾಗಿ ಇರಲಿ. ಕುಟುಂಬವರ ಜೊತೆ ಸಮಯವನ್ನು ಕಳೆಯುವುದು ಆಗದು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನೀವು ಆರ್ಥಿಕತೆಯನ್ನು ಸರಿಯಾಗಿ ನಿರ್ವಹಿಸಿದ್ದನ್ನು ತೋರಿಸಬೇಕಾಗುವುದು.