ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಹಸ್ತಾ, ಯೋಗ : ಧ್ರುವ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:41 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:36 ರಿಂದ 11:07ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:38 ರಿಂದ 02:09.
ಮೇಷ ರಾಶಿ: ಇಂದು ಪ್ರೀತಿಯಿಂದ ದುಃಖವು ಸಂಭವಿಸಬಹುದು. ಸಣ್ಣ ವಿಷಯಕ್ಕೆ ಸಂಗಾತಿ ಜೊತೆ ಭಿನ್ನಾಭಿಪ್ರಾಯ ಬೇಡ. ನಿಮ್ಮ ದೇಹ ಹೆಚ್ಚು ವಿಶ್ರಾಂತಿಯನ್ನು ಬಯಸಬಹುದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ಖರೀದಿಸುವ ಎಲ್ಲದಕ್ಕೂ ಹೆಚ್ಚುವರಿ ಹಣವನ್ನು ಕೊಡಬೇಕಾದೀತು. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ನಿಮಗೆ ಬೇಕಾದವರನ್ನು ಭೇಟಿಯಾಗಲು ಸಂತೋಷಪಡುವಿರಿ. ವಾಹನದ ಅವಶ್ಯಕತೆ ಬೇಕು ಎನಿಸಬಹುದು.
ವೃಷಭ ರಾಶಿ: ಸಂಗಾತಿಯು ನೋವಿಗೆ ಸ್ಪಂದಿಸದೇ ಇರುವುದು ಬೇಸರವಾಗುವುದು. ವಾಹನಾಪಘಾತದ ಭಯವಿರುವುದು. ಇಷ್ಟವಾದ ವಸ್ತುವನ್ನು ಬಿಟ್ಟುಕೊಡಲು ಮನಸ್ಸಾಗದು. ದ್ವೇಷವನ್ನು ಸಾಧಿಸಲು ನಿಮಗೆ ಇಂದು ಸರಿಯಾದ ಕಾರಣ ಸಿಗಬಹುದು. ಮಾತಿನಿಂದ ಯಾರಾದರೂ ನಿಮ್ಮನ್ನು ಕಟ್ಟಿಹಾಕಬಹುದು. ಅನುಭವವು ಸುಳ್ಳಾದಂತೆ ಕಾಣಿಸುವುದು. ಕೃತಜ್ಞತೆಯನ್ನು ಬೆಳೆಸಿಕೊಳ್ಳುವುದು ನಿಮ್ಮ ವ್ಯಕ್ತಿತ್ವವನ್ನು ಬದಲಿಸಬಹುದು. ಪ್ರೇಮದಲ್ಲಿ ಹಿನ್ನಡೆಯಾಗಲಿದೆ. ತಾಳ್ಮೆಯಿಂದ ಮುಖ್ಯ ಆಯುಧವಾಗಿರಲಿ. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು. ಉನ್ನತ ಅಭ್ಯಾಸದಿಂದ ಹಿಂದೇಟುಹಾಕುವ ಸ್ಥಿತಿ ಬರಬಹುದು. ನಿಮ್ಮ ಬಗ್ಗೆ ನಿಮಗೇ ಅಭಿಮಾನ ಇರುವುದು.
ಮಿಥುನ ರಾಶಿ: ಸ್ತ್ರೀಯರಿಗೆ ಆರ್ಥಿಕತೆ ಬಗ್ಗೆ ಗಾಂಭೀರ್ಯ ಬರಬಹುದು. ಕಛೇರಿಯಲ್ಲಿ ನೀವು ಇಂದು ವಿಳಂಬ ನೀತಿಯನ್ನು ಅನುಸರಿಸುವಿರಿ. ಶುಭಸೂಚನೆಯನ್ನು ಗುರುತಿಸಿಕೊಳ್ಳಲು ಇಂದು ಸೋಲುವಿರಿ. ನಿಮಗೆ ತಿಳಿದ ವಿಚಾರದ ಬಗ್ಗೆ ಹುಡುಕಾಟ ನಡೆಸುವಿರಿ. ವಿದ್ಯಾರ್ಥಿಗಳು ಸಂಶೋಧನೆಯತ್ತ ಗಮನವನ್ನು ಕೊಡುವರು. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ಆನಾರೋಗ್ಯ ಸರಿಯಾದ ಹಂಚಿಕೊಂಡು ಕೆಲಸವನ್ನು ಮಾಡುವುದು ಸೂಕ್ತ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಮನೆಗೆ ಬೇಕಾದ ವಸ್ತುಗಳನ್ನು ಹೆಚ್ಚು ವ್ಯಯ ಮಾಡಿ ಖರೀದಿಸುವಿರಿ.
ಕಟಕ ರಾಶಿ: ನ್ಯಾಯದ ವಿಷಯದಲ್ಲಿ ನೀವು ಹೆಚ್ಚು ಹೋರಾಟ ಮಾಡಬೇಕಾಗುವುದು. ಅಧಿಕಾರ ಪಡೆಯಲು ಓಡಾಟ ಮಾಡುವಿರಿ. ಕುಟುಂಬದ ಸುಖವನ್ನು ಕಾಯ್ದಿಟ್ಟುಕೊಳ್ಳಲು ಕೆಲವು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು. ನಿಮ್ಮನ್ನು ಯಾವುದೋ ಕಾರಣಕ್ಕೆ ಹೊಗಳಬಹುದು. ಉದ್ವೇಗದಲ್ಲಿ ನೀವು ಏನನ್ನಾದರೂ ಹೇಳಬಹುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಭವಿಷ್ಯದ ಬಗ್ಗೆ ಪತಿಯಾದ ಚಿಂತನೆ ಇರಲಿದೆ. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಆಲಸ್ಯದಿಂದ ನಿಮ್ಮ ಅನೇಕ ಕಾರ್ಯಗಳು ಹಿಂದುಳಿಯಬಹುದು. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು.