Horoscope: ದಿನಭವಿಷ್ಯ: ಈ ರಾಶಿಯವರು ಇಂದು ನೀರಿನ ವಿಚಾರದಲ್ಲಿ ಜಾಗರೂಕತೆಯಿಂದಿರಬೇಕು

| Updated By: ಕಿರಣ್ ಹನುಮಂತ್​ ಮಾದಾರ್

Updated on: May 04, 2024 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 04 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಈ ರಾಶಿಯವರು ಇಂದು ನೀರಿನ ವಿಚಾರದಲ್ಲಿ ಜಾಗರೂಕತೆಯಿಂದಿರಬೇಕು
ದಿನ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಐಂದ್ರ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:20 ರಿಂದ 10:55ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:04 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:10 ರಿಂದ 07:45ರ ವರೆಗೆ

ಧನು ರಾಶಿ :ಇಂದು ನಿಮಗೆ ಅನಿರೀಕ್ಷಿತವಾಗಿ ಎದುರಾದ ಪರಿಸ್ಥಿತಿಯನ್ನು ನಿಭಾಯಿಸುವ ಕಲೆಯನ್ನು ಕಲಿತುಕೊಳ್ಳಿ. ಹೊಸ ಅಭ್ಯಾಸವನ್ನು ಕಲಿಯಲು ಪ್ರಯತ್ನಪಡುವಿರಿ. ಅಲಂಕಾರಿಕ ವಸ್ತುಗಳನ್ನು ಖರೀದಿಸುವ ಆಸಕ್ತಿಯನ್ನು ಹೊಂದಿದ್ದೀರಿ. ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಉದ್ಯೋಗವನ್ನು ಬಿಡುವ ಮನಸ್ಸು ಮಾಡುವಿರಿ. ಯಾರಾದರೂ ಆಸೆ ತೋರಿಸಿ ನಿಮ್ಮ ಬಳಿಯಿಂದ ಹಣ ಪಡೆಯುವರು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ಬಂಧುಗಳು ನಿಮ್ಮ ಬಗ್ಗೆ ಕರುಣೆ ಬರಬಹುದು. ಕೃಷಿಯನ್ನು ಇಷ್ಟಪಟ್ಟು ಮಾಡಲಿದ್ದೀರಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ನೀರಿನ ವಿಚಾರದಲ್ಲಿ ಜಾಗರೂಕತೆ ಬೇಕು. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರಯತ್ನವು ನಡೆಯುವುದು. ಸಂಗಾತಿಯ ಬೆಂಬಲವು ನಿಮ್ಮ‌‌ ಕಾರ್ಯಗಳಿಗೆ ಸಿಗಲಿದೆ.

ಮಕರ ರಾಶಿ :ಪುಣ್ಯ ಸ್ಥಳಗಳಿಗೆ ಕುಟುಂಬದ ಜೊತೆ ಹೋಗುವಿರಿ. ಅತಿಯಾದ ಹಿಂಸೆಯನ್ನು ಅನುಭವಿಸಬೇಕಾದ ಸ್ಥಿತಿಯು ಬರಬಹುದು. ಹೊಸ ಕಾರ್ಯವನ್ನು ಮಾಡಲು ಯೋಜನೆಯನ್ನು ರೂಪಿಸಲಿದ್ದೀರಿ. ಆಹಾರದ ಅಭಾವವು ನಿಮಗೆ ಆಗಲಿದೆ. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಯಾರಾದರೂ ಚುಚ್ಚಿ ಮಾತನಾಡಬಹುದು. ಕಛೇರಿಯ ಕೆಲಸದಲ್ಲಿ ನಿಮ್ಮ ಮಧ್ಯೆ ಯಾರದೋ ಮಧ್ಯ ಪ್ರವೇಶದಿಂದ ಕೋಪಗೊಳ್ಳುವಿರಿ. ಅಲ್ಪ ಆದಾಯದಲ್ಲಿ ತೃಪ್ತಿ ಹೊಂದಬೇಕಾದೀತು. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು. ಶಿಕ್ಷಕರು ವೇತನವನ್ನು ಹೆಚ್ಚಿಸಿಕೊಳ್ಳುವರು. ಕೆಲವನ್ನು ನೀವು ಅನಗತ್ಯವಾಗಿ ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳ ಉತ್ಸಾಹವನ್ನು ಕುಗ್ಗಸುವುದು ಬೇಡ.

ಕುಂಭ ರಾಶಿ :ದುರಭ್ಯಾಸದಿಂದ ಸಮಯ ನಷ್ಟವಾಗುವುದು. ನಿಮಗೆ ಇಂದು ಕೆಲವು ಜವಾಬ್ದಾರಿಗಳು ಬರಬಹುದು. ಎಲ್ಲವನ್ನೂ ಶಕ್ತಿಮೀರಿ ಪ್ರಯತ್ನಿಸುವಿರಿ. ಅತಿಯಾದ ನಿದ್ರೆಯಯನ್ನು ಮಾಡುವ ಮನಸ್ಸು ಮಾಡುವಿರಿ. ಆಲಸ್ಯವು ಒಳ್ಳೆಯದಲ್ಲ‌. ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ವ್ಯಾಪಾರದಲ್ಲಿ ಸ್ವಲ್ಪ ಲಾಭವನ್ನು ಕಾಣಬಹುದು. ಆರೋಗ್ಯದ ಬಗ್ಗೆ ಎಚ್ಚರವಹಿಸಿ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಕರವಿದ್ದರೂ ಅದನ್ನು ಬಳಸಿಕೊಳ್ಳುವ ಜಾಣತನವೂ ಅಗತ್ಯವಿದೆ. ವ್ಯಾವಹಾರಿಕ ಹಿನ್ನಡೆ ಆಗಲಿದೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯವಾಗದು. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು.

ಮೀನ ರಾಶಿ :ಇಂದು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳಾಗುವಹದು. ಇತರರು ನಿಮ್ಮ ಕುರಿತು ಬೇಡದ ಮಾತುಗಳನ್ನು ಆಡಬಹುದು. ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ಸ್ನೇಹಿತರು ನಿಮಗೆ ಸಹಾಯ ಮಾಡಲಿದ್ದಾರೆ. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಹೂಡಕೆಯಲ್ಲಿ ನಷ್ಟವಾಗುವುದು. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಆಪ್ತಸಮಾಲೋಚನೆ ನಡೆಯಲಿದೆ. ಉದ್ಯೋಗದಲ್ಲಿ ಮೇಲ್ಮಟ್ಟಕ್ಕೆ ಹೋಗಲಿದ್ದೀರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ಕೆಲವು ಸಂಗತಿಗಳನ್ನು ನಿರೀಕ್ಷಿಸದೇ ಬರಬಹುದು. ನಿಮ್ಮನ್ನು ಕೆಲವರು ಅನಾದರ ಮಾಡಿದಂತೆ ಕಾಣಿಸೀತು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ವ್ಯವಹಾರದಲ್ಲಿ ಹೆಚ್ಚಿನ ಲಾಭವು ಬರಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)