Horoscope: ಈ ರಾಶಿಯವರಿಗೆ ಏನಾದರೂ ಅವಘಡಗಳು ಸಂಭವಿಸಬಹುದು-ಎಚ್ಚರ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಫೆಬ್ರವರಿ​​​​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಏನಾದರೂ ಅವಘಡಗಳು ಸಂಭವಿಸಬಹುದು-ಎಚ್ಚರ
ದಿನಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 29, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:51 ರಿಂದ 08:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:48 ರಿಂದ 11:17ರ ವರೆಗೆ.

ಧನು ರಾಶಿ : ನಿಮ್ಮ ಮನಸ್ಸಿನ ಸೌಂದರ್ಯವೇ ಇಂದು ಮುಖದಲ್ಲಿ ಪ್ರಕಟವಾಗುವುದು. ನಿಮ್ಮ ಸ್ನೇಹಿತರೊಬ್ಬರು ಇಂದು ಹಣವನ್ನು ಕೇಳಬಹುದು. ಗುಂಪಿನಲ್ಲಿದ್ದಾಗ ನೀವೇನು ಹೇಳುತ್ತೀರೆಂದು ಎಚ್ಚರ ವಹಿಸಿ. ನಿಮ್ಮ ಟೀಕೆಗಳಿಗೆ ತೀವ್ರರೂಪವನ್ನು ಪಡೆಯಬಹುದು. ನಿಮ್ಮನ್ನು ದೀರ್ಘಕಾಲ ಹಿಡಿದಿಟ್ಟಿರುವ ಒಂದು ಏಕಾಂಗಿತನ ದೂರವಾಗುವುದು. ನೀವು ಸಂಗಾಯಿಂದ ಕೆಲವು ಅಸಮಾಧಾನವನ್ನು ಪಡೆಯುವಿರಿ. ಉದ್ಯೋಗಕ್ಕೆ ಸೇರಲು ಬಹಳ ಶ್ರಮಪಡಬೇಕಾದೀತು. ವಿದ್ಯಾಭ್ಯಾಸಕ್ಕೆ ಅತಿಯಾದ ಹಣಕಾಸಿನ ಖರ್ಚು ಬರಲಿದ್ದು, ನಿಮಗೆ ಕಷ್ಟವಾಗುವುದು. ಅಸೂಯೆಯಿಂದಾಗಿ ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ. ಇಂದು ಖುಷಿಯಿಂದ ಹಣವನ್ನು ಖರ್ಚು ಮಾಡುವಿರಿ.

ಮಕರ ರಾಶಿ : ಇಂದು ನೀವು ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಲು ನಿಮ್ಮ ಸಮಯವನ್ನು ಕೊಡುವಿರಿ. ಇಂದು ನೀವು ಯಾರಿಗೂ ಸಾಲ ನೀಡಬೇಡಿ. ಕೊಡುವುದು ಅಗತ್ಯವಾಗಿದ್ದರೆ ದಾಖಲೆಯನ್ನು ಇಟ್ಟುಕೊಡಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ನಿರ್ಲಕ್ಷಿತವಾಗಬಹುದು. ಪ್ರಣಯದಿಂದ ನಿಮ್ಮ ಹೃದಯವು ಅರಳುವುದು. ಯಾವುದೇ ಧಾರ್ಮಿಕ ಸ್ಥಳದಲ್ಲಿ ನಿಮ್ಮ ಸಮಯವನ್ನು ಕಳೆಯಬಹುದು. ಇಂದು ನಿಮಗೆ ರಾಜಕೀಯ ವ್ಯಕ್ತಿಗಳ ಭೇಟಿಯಾಗುವುದು. ನಿಮ್ಮ ಸಾರ್ವಜನಿಕ ಸಂಪರ್ಕದ ವ್ಯಾಪ್ತಿಯೂ ವಿಶಾಲವಾಗುವುದು. ಮಾರುಕಟ್ಟೆಗೆ ಸಂಬಂಧಿತ ಕಾರ್ಯಗಳನ್ನು ಮಾಡಲು ಸರಿಯಾದ ಸಮಯ. ಹೊಸಬರನ್ನು ಸಾಮಾಜಿಕ ತಾಣದಲ್ಲಿ ಪರಿಚಯ ಮಾಡಿಕೊಳ್ಳುವಿರಿ. ತಂದೆಯ ಮಾತನ್ನು ಉಳಿಸಿಕೊಳ್ಳಲು ನಿಮ್ಮ ಶ್ರಮವು ಬಳಕೆಯಾಗುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು. ಸ್ವಂತ ಶ್ರಮದಿಂದ ಗಳಿಸಿದ್ದು ನಿಮಗೆ ಆಪ್ತವೆನಿಸಲಿದೆ.

ಕುಂಭ ರಾಶಿ : ನಿಮ್ಮಲ್ಲಿ ಇಂದು ಚುರುಕುತನವಿರುವುದು. ನಿಮ್ಮ ಆರೋಗ್ಯವು ಇಂದು ನಿಮಗೆ ಸಹಕಾರಿಯಾಗಲಿದೆ. ಹಣವನ್ನು ಉಳಿಸುವ ನಿಮ್ಮ ಬಯಕೆ ಇಂದು ಪೂರ್ಣಗೊಳ್ಳಬಹುದು. ಧಾರ್ಮಿಕ ಸ್ಥಳಕ್ಕೆ ಭೇಟಿ ನಿಮ್ಮ ಮನಸ್ಸಿಗೆ ಶಾಂತಿಯನ್ನು ಕೊಡಬಹುದು. ನಿಮ್ಮ ಪ್ರೇಮ ಸಂಗಾತಿ ನಿಮಗೆ ಅಪರೂಪದದ್ದನ್ನು ಕೊಡಬಹುದು. ಮಹಿಳಾ ಸದಸ್ಯರು ನಿಮ್ಮ ಕ್ಷೇತ್ರದಲ್ಲಿನ ಯಶಸ್ಸಿನಲ್ಲಿ ದೊಡ್ಡ ಪಾತ್ರ ವಹಿಸುತ್ತಾರೆ.‌ ನೀವು ಇಂದು ಜನರೊಡನೆ ಬೆರೆಯಲು ಬಿಡುವಿನ ವೇಳೆಯನ್ನು ಹೊಂದಿದ್ದೀರಿ. ಏನಾದರೂ ಅವಘಡಗಳು ಸಂಭವಿಸಬಹುದು. ವೈವಾಹಿಕ ಸಂಬಂಧಗಳಲ್ಲಿ ಮಾಧುರ್ಯವು ಇರಲಿದೆ. ಮಕ್ಕಳ‌ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ. ನಿಮ್ಮ ಒರಟಾದ ಮಾತು ನೌಕರರು ಸಿಟ್ಟಾಗುವಂತೆ ಮಾಡುವುದು.

ಮೀನ ರಾಶಿ : ಇಂದು ನಿಮ್ಮ ಹಳೆಯ ಸ್ನೇಹಿತನು ಇಂದು ವ್ಯಾಪಾರದಲ್ಲಿ ಲಾಭ ಗಳಿಸಲು ನಿಮಗೆ ಸಲಹೆ ನೀಡಬಹುದು. ನೀವು ಭರವಸೆಯಿಡಬಹುದಾದ ಯಾರಾದರೂ ನಿಮ್ಮನ್ನು ನಿರಾಸೆಗೊಳಿಸುತ್ತಾರೆ. ನಿಮ್ಮ ಕನಸುಗಳು ಹಾಗೂ ವಾಸ್ತವವು ಪ್ರೀತಿಯ ಭಾವಪರವಶತೆಯಲ್ಲಿ ಇಂದು ಸೇರಿಹೋಗುತ್ತವೆ. ಕೆಲಸದಲ್ಲಿ ಜನರ ಮುಂದಾಳತ್ವ ವಹಿಸಿ ನಿಮ್ಮ ಪ್ರಾಮಾಣಿಕತೆ ಪ್ರಗತಿ ಹೊಂದಲು ನಿಮಗೆ ಸಹಾಯ ಮಾಡುತ್ತದೆ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ. ನಿಮ್ಮ ಮದುವೆ ಈ ದಿನ ಒಂದು ತಿರುವನ್ನು ತೆಗೆದುಕೊಳ್ಳುತ್ತದೆ. ವೃತ್ತಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ ಕಛೇರಿಯಲ್ಲಿ ಹೆಚ್ಚಿನ ಕೆಲಸದ ಕಾರಣ ಹೆಚ್ಚುವರಿ ಸಮಯವನ್ನು ನೀಡಬೇಕಾಗಬಹುದು. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವನ್ನು ನೀಡುತ್ತಾನೆ. ನಿಮ್ಮ ಮೇಲೆ‌ ಹಿತಶತ್ರುಗಳು‌ ಬೇಕಂತಲೇ ಆರೋಪವನ್ನು ಮಾಡಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ