Nitya Bhavishya 3 February: ಈ ರಾಶಿಯವರು ಮಕ್ಕಳಿಗೆ ಮನೆಯ ಜವಾಬ್ದಾರಿ ಕೊಟ್ಟು ನಿಶ್ಚಿಂತರಾಗಿರಲು ಇಷ್ಟಪಡುವಿರಿ

ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ (ಫೆಬ್ರವರಿ 03) ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.

Nitya Bhavishya 3 February: ಈ ರಾಶಿಯವರು ಮಕ್ಕಳಿಗೆ ಮನೆಯ ಜವಾಬ್ದಾರಿ ಕೊಟ್ಟು ನಿಶ್ಚಿಂತರಾಗಿರಲು ಇಷ್ಟಪಡುವಿರಿ
ಪ್ರಾತಿನಿಧಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 03, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ನವಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 31 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:02 ರಿಂದ 08:28ರ ವರೆಗೆ.

ಮೇಷ ರಾಶಿ: ಇಂದು ದೈಹಿಕ ಶಕ್ತಿ ಕಡಿಮೆಯಾಗಬಹುದು. ಸ್ವಲ್ಪ ಆಲಸ್ಯವೂ ಉಂಟಾಗಬಹುದು. ನಿಮ್ಮ ಮನಸ್ಸನ್ನು ಒಂದು ಕಡೆ ಕೇಂದ್ರೀಕರಿಸಲು ಆಗದು. ನಿಮ್ಮ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ.

ವೃಷಭ ರಾಶಿ: ನಿಮಗೆ ಹೊಸ ಅವಕಾಶಗಳು ಉದ್ಭವಿಸಲಿದ್ದು, ನೀವು ಅವುಗಳನ್ನು ವೇಗವಾಗಿ ವಶಪಡಿಸಿಕೊಳ್ಳಿ. ಆ ವೇಗವನ್ನು ಮುಂದುವರಿಸಲು ಫಲದ ಅಪೇಕ್ಷೆಯೂ ಇರಲಿದೆ. ನೀವು ಖರ್ಚು ಮಾಡುವುದಕ್ಕಿಂತ ಹೆಚ್ಚಿನದನ್ನು ಉಳಿಸುವುದು ಮತ್ತು ನೀವು ಹೂಡಿಕೆ ಮಾಡಿದರೆ ಸುರಕ್ಷತೆ ಬಗ್ಗೆ ಲಕ್ಷ್ಯವಿರಲಿ. ಸ್ವಲ್ಪ ನಿದ್ದೆ ಮಾಡಿ ಮತ್ತು ವಿಶ್ರಾಂತಿ ಪಡೆಯಿರಿ. ನೀವು ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಸ್ವತಃ ಉದ್ಯೋಗವನ್ನು ಮಾಡುವ ಆಲೋಚನೆಯು ಬರಬಹುದು. ಅಪರಿಚಿತರ ಜೊತೆ ಸಲುಗೆಯಿಂದ ಇರುವಿರಿ. ಉತ್ತಮ‌ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗುವುದು. ಸಂಗಾತಿಯ ಜೊತೆ ವಾಗ್ವಾದ ಮಾಡುವಿರಿ. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಸಾಲದು.

ಮಿಥುನ ರಾಶಿ: ನಿಮ್ಮ ವಿಶೇಷ ವ್ಯಕ್ತಿ ಇಂದು ನಿಮ್ಮ ಜೀವನಕ್ಕೆ ಉತ್ಸಾಹವನ್ನು ತರುತ್ತಾರೆ. ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಉತ್ತಮ ಸಮಯವನ್ನು ಕಳೆಯಿರಿ. ಒಬ್ಬಂಟಿಯಾಗಿದ್ದರೆ, ನಿಮ್ಮ ಕಣ್ಣುಗಳನ್ನು ತೆರೆದು ಸುತ್ತಲ ಜಗತ್ತನ್ನು ನೋಡಿ. ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ನೀವು ಮಾಡಿದ ಕಠಿಣ ಪರಿಶ್ರಮ ಅಂತಿಮವಾಗಿ ಫಲ ನೀಡುತ್ತದೆ. ನಿಮ್ಮ ಹಣದ ಮೇಲೆ ನಿಗಾ ಇರಿಸಿ, ಯಾವುದೇ ಅಪಾಯಗಳನ್ನು ತೆಗೆದುಕೊಳ್ಳದಂತೆ ದೂರವಿರಿ. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ತಮ್ಮ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಿಯಾರು. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು. ಮನಸ್ಸಿನಲ್ಲಿ‌ ಯಾವುದಾದರೂ ಭೀತಿಯು ಕಾಡಬಹುದು.

ಕರ್ಕ ರಾಶಿ: ಇಂದು ಆರೋಗ್ಯಕರ ಅಭ್ಯಾಸಗಳ ಮೇಲೆ ನಿಮ್ಮ ಶಕ್ತಿಯನ್ನು ಕೇಂದ್ರೀಕರಿಸಿ. ಒತ್ತಡದ ಮಟ್ಟವನ್ನು ಕಡಿಮೆ ಮಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಅವಕಾಶಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಏಕೆಂದರೆ ನಿಮ್ಮ ಕನಸುಗಳನ್ನು ನನಸಾಗಿಸಲು ಒಂದು ಮಾರ್ಗವನ್ನು ಹೊಂದಿರುತ್ತೀರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ‌ ತಿಳಿದುಕೊಳ್ಳದೇ ಹೋಗಬಹುದು. ನಿಮಗೆ ಕೆಲವು ವಿಚಾರದಲ್ಲಿ ಕಾನೂನಿನ ತೊಂದರೆ ಕಾಡಬಹುದು. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು. ಇಂದಿನ ಕಾರ್ಯವನ್ನು ಸರಿಯಾಗಿ ಯೋಜಿಸಿಕೊಂಡು.‌

ಸಿಂಹ ರಾಶಿ: ನಿಮ್ಮ ಸಂಬಂಧಗಳಲ್ಲಿ ನೀವು ಇಂದು ಸವಾಲಿನ ದಿನವನ್ನು ಎದುರಿಸಬೇಕಾಗಬಹುದು. ತಪ್ಪುಗ್ರಹಿಕೆಗಳು ಮತ್ತು ಭಿನ್ನಾಭಿಪ್ರಾಯಗಳ ಸಂದರ್ಭದಲ್ಲಿ, ತಪ್ಪುಗಳನ್ನು ಒಪ್ಪಿಕೊಳ್ಳಿ. ಮುಕ್ತವಾಗಿ ಸಂವಹನ ಮಾಡಿ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಮಯ ತೆಗೆದುಕೊಳ್ಳಿ. ಇಂದು ಕೆಲವು ಹೆಜ್ಜೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ಪ್ರಯೋಜನವಾಗಲಿದೆ. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಾರ್ಯದಲ್ಲಿ ಸಕ್ರಿಯರಾಗಿ. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ‌ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ.

ಕನ್ಯಾ ರಾಶಿ: ನಿಮ್ಮ ವೃತ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಲಾಭದ ಲಕ್ಷಣವಿರುವುದು. ನಿಮ್ಮನ್ನು ನೀವು ಧನಾತ್ಮಕವಾಗಿ ಪ್ರಸ್ತುತಪಡಿಸುವತ್ತ ಗಮನಹರಿಸಿ. ಅಂತಸ್ಸಾಕ್ಷಿಯನ್ನು ಬಿಟ್ಟು ನೀವು ದೂರಾಗಬಹುದು. ಇಂದು ಹೆಚ್ಚಿದ ಭಾವನಾತ್ಮಕ ಅರಿವಿನ ಮೂಲಕ ನೀವು ನಿಮ್ಮವರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವಿರಿ. ನೀವು ಹೊಂದಿರುವ ಅಪಾರ ಶಕ್ತಿ ಮತ್ತು ಧೈರ್ಯವು ಎಂತಹ ಸಂದರ್ಭದಲ್ಲಿಯೂ ಹಿಡಿದು ನಿಲ್ಲಿಸುವುದು.ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು. ಕೆಲವು ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು.

ತುಲಾ ರಾಶಿ: ಇಂದು ವಿದ್ಯಾರ್ಥಿಗಳು ಪ್ರೀತಿಯಲ್ಲಿ ನಿರತರಾಗಿರುತ್ತಾರೆ. ಇದು ಅವರ ಬಹಳಷ್ಟು ಸಮಯವನ್ನು ವ್ಯರ್ಥ ಮಾಡಬಹುದು. ಸಂಗಾತಿಯ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ದೀರ್ಘಕಾಲದ ನಿಮ್ಮ ಸಂಬಂಧಕ್ಕೆ ವಿರಾಮ‌ವು ಸಿಗಬಹುದು. ಇಂದು ನಿಮ್ಮ ಪ್ರೀತಿಯನ್ನು ಇತರರಿಗೆ ವ್ಯಕ್ತಪಡಿಸಲು ಸುಲಭವಾದ ಮಾರ್ಗ ಸಿಗಲಿದೆ. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಭೂಮಿಯ ವ್ಯವಹಾರವು ಸಾಕೆನಿಸಬಹುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ. ನಿಮಗೆ ಇನ್ನೊಬ್ಬರ ಬಗ್ಗೆಯೇ ಅಧಿಕ ಆಲೋಚನೆ ಇರುವುದು.

ವೃಶ್ಚಿಕ ರಾಶಿ: ಇಂದು ಬಗೆಹರಿಯದ ಸಮಸ್ಯೆಗಳ ಬಗ್ಗೆ ನಿಮ್ಮ ಕುಟುಂಬದ ಜೊತೆಗೆ ಮಾತನಾಡಲು ನೀವು ಬಯಸಬಹುದು. ನೀವು ಚೆನ್ನಾಗಿ ಯೋಚಿಸಿದ ಯಾವುದಾದರೂ ವಿಧಾನವನ್ನು ಬಳಸುತ್ತೀರೆಂದು ಖಚಿತಪಡಿಸಿಕೊಳ್ಳಿ. ಇಂದು ನೀವು ನಿಮ್ಮ ಸಂಬಂಧಿಕರೊಂದಿಗೆ ಸಮಯ ಕಳೆಯಬಹುದು. ಕುಟುಂಬಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ಸುದ್ದಿಗಳನ್ನು ಪಡೆಯುತ್ತೀರಿ. ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬೇಡ.‌ ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು. ಆಹಾರ ಅಭಾವವಾಗಬಹುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡೀತು.

ಧನು ರಾಶಿ: ಇಂದು ನೀವು ದೈಹಿಕ ಪ್ರಯೋಜನಗಳಿಗಾಗಿ, ಮಾನಸಿಕ ಶಕ್ತಿಗಾಗಿ, ಧ್ಯಾನ ಮತ್ತು ಯೋಗವನ್ನು ಪ್ರಾರಂಭಿಸಬೇಕಾಗಬಹುದು. ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷ ಇರುವುದು. ಸಂಗಾತಿಯ ಪ್ರೀತಿಯನ್ನು ಪಡೆಯುವಿರಿ. ನೀವು ಪ್ರವಾಸಕ್ಕೆ ಹೋಗುವ ದಿನ ಇದು. ನಿಮ್ಮ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ನೀವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಚಂಚಲ ಮನಃಸ್ಥಿತಿಯು ನಿಮ್ಮ ಕಛೇರಿಯ ಕಾರ್ಯವನ್ನು ಮಾಡಲು ಬಿಡದು. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು. ವಿಳಂಬವಾಗಿ ನಡೆಯುವ ವಿವಾಹಕ್ಕೂ ಸಂತೋಷವಿರಲಿದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು.

ಮಕರ ರಾಶಿ: ಇಂದು ಮೋಜು ಮಾಡಲು ಹೊರಡುವವರಿಗೆ ಮುನ್ನೆಚ್ಚರಿಕೆ ಇರಲಿ. ಯಾರಿಂದಲಾದರೂ ಹಣವನ್ನು ಎರವಲು ಪಡೆದ ಜನರಿಗೆ ಯಾವುದೇ ಪರಿಸ್ಥಿತಿಯಲ್ಲಿ ಸಾಲವನ್ನು ಮರುಪಾವತಿಸಬೇಕಾಗಬಹುದು. ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ಇಂದು ನಿಮ್ಮ ಪ್ರೀತಿಪಾತ್ರರು ನಿಮ್ಮ ಮಾತನ್ನು ಕೇಳಲು ಬಯಸುವುದಿಲ್ಲ. ಉದ್ಯೋಗಸ್ಥ ಸ್ಥಳೀಯರು ಇಂದು ಕೆಲಸದ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಕುಲವೃತ್ತಿಯನ್ನು ಮುನ್ನಡೆಸುವುದು ಸೂಕ್ತ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.‌ ವೈದ್ಯರಿಗೆ ಉತ್ತಮ ಅವಕಾಶವು ಸಿಗಬಹುದು. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ.

ಕುಂಭ ರಾಶಿ: ಇಂದು ನಿಮ್ಮವರಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುವಿರಿ. ನೀವು ಯಾರೊಂದಿಗೆ ಅರ್ಥಪೂರ್ಣ ಸಂಬಂಧವನ್ನು ಹೊಂದಲು ಬಯಸುತ್ತೀರಿ ಎಂಬ ವಿಚಾರದಲದಲಿ ಸ್ಪಷ್ಟತೆ ಇರಲಿ. ಇಂದು ಹೊಸ ಸಂಪರ್ಕಗಳನ್ನು ಬೆಳೆಸಿಕೊಳ್ಳಲು ಉತ್ತಮ ಸಮಯ. ವೃತ್ತಿಜೀವನದ ಕೌಶಲ್ಯಗಳನ್ನು ಹೆಚ್ಚಿಸಲು ಸಮಯವನ್ನು ಬಳಸಿಕೊಳ್ಳುವಿರಿ. ಹೂಡಿಕೆ ಮಾಡಲು ಹೊಸ ಮಾರ್ಗಗಳನ್ನು ತೆರೆಯಬಹುದು. ತಾಯಿಯ ಕಡೆಯಿಂದ ಧನದ ನಿರೀಕ್ಷೆಯಲ್ಲಿ ಇರುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ‌ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುವರು. ಪ್ರಯಾಣದಲ್ಲಿ ನೀವು ಬರುವ ತೊಂದರೆಯನ್ನು ದೂರಮಾಡಿಕೊಳ್ಳುವಿರಿ.

ಮೀನ ರಾಶಿ: ಇಂದು ವೃತ್ತಿಪರರಾಗಿರಿ ನಿಮ್ಮ ವಹಿವಾಟು ಉತ್ತಮವಾಗಿದೆ ನೋಡಿಕೊಳ್ಳಿ. ನೀವು ಅಪಾಯಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಆರ್ಥಿಕತೆಯ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಬೇಕಾಗಬಹುದು. ಇಂದು ಬದಲಾವಣೆಯ ದಿನವಾಗಿದ್ದರೂ, ಆಶ್ಚರ್ಯವು ಕಾಣಿಸಿಕೊಳ್ಳಬಹುದು. ನಿಮ್ಮನ್ನು ಯಾರಾದರೂ ಆರ್ಥಿಕ ತೊಂದರೆಗೆ ಸಿಲುಕಿಸಬಹುದು. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ನಿಮ್ಮ ಸಹಾಯಕ್ಕೆ ಯಾರೂ ಬರದಿರುವುದು ಬೇಸರವಾಗುವುದು. ಸ್ಥಿರಾಸ್ತಿಯ ಉಳಿವಿಗೆ ಹೋರಾಟವನ್ನೇ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಸಂದೇಹ ಬರಬಹುದು.

ಲೋಹಿತ ಹೆಬ್ಬಾರ್-8762924271 (what’s app only)

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ