Horoscope 26 Feb: ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ, ಸಂಗಾತಿ ಜೊತೆ ಭಿನ್ನಮತ ಬರಬಹುದು

| Updated By: ಗಂಗಾಧರ​ ಬ. ಸಾಬೋಜಿ

Updated on: Feb 26, 2024 | 12:02 AM

Nitya Bhavishya: 2024 ಫೆಬ್ರವರಿ 26ರ ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ. ಯಾವ ರಾಶಿಯವರು ಇಂದು ಜಾಗೃಕರಾಗಿರಬೇಕು ಎಂದು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 26 Feb: ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ, ಸಂಗಾತಿ ಜೊತೆ ಭಿನ್ನಮತ ಬರಬಹುದು
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಧೃತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 52 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:21 ರಿಂದ 09:49ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:17 ರಿಂದ 12:46ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ.

ಮೇಷ ರಾಶಿ: ನಿಮ್ಮ ಆಸೆಯನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಉದ್ಯೋಗದಲ್ಲಿ ಬಲವಂತವಾಗಿ ಮನಸ್ಸನ್ನು ನಿಲ್ಲಿಸಬೇಕಾದೀತು. ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಈಗ ನಿಮಗೆ ಇಂದ್ರಜಾಲದಂತೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಹುದು. ಕಿವಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಅನಿರೀಕ್ಷಿತವಾಗಿ ಬಂಧುಗಳ ಆಗಮನವಾಗುವುದು. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಣ್ಣ ವಿಚಾರಕ್ಕೆ ಸುಮ್ಮನೇ ಗದ್ದಲ ಮಾಡಿಕೊಳ್ಳುವಿರಿ. ಯಾವುದೋ ಗಹನವಾದ ಆಲೋಚನೆಯಲ್ಲಿ ನೀವು ಮುಳುಗಿರುವಿರಿ.

ವೃಷಭ ರಾಶಿ: ಇಂದು ನೀವು ಅನಿರೀಕ್ಷಿತವಾಗಿ ಸಂತೋಷಗೊಳ್ಳುವಿರಿ. ಸಂಗಾತಿಯ ಬೆಂಬಲವನ್ನು ಕೇಳದೇ ನಿಮ್ಮಷ್ಟಕ್ಕೇ ನೀವು ಕೆಲವು ತೀರ್ಮಾನವನ್ನು ಸಂಸಾರದ ವಿಚಾರದಲ್ಲಿ ತೆಗೆದುಕೊಳ್ಳುವಿರಿ. ಉದ್ಯಮಿಗಳ ಕೆಲಸದಲ್ಲಿ ಅಡೆತಡೆಗಳು ಬರಬಹುದು. ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಬಹಳ ದಿನಗಳಿಂದ ಅಡಗಿದ್ದ ದುಃಖವು ಇಂದು ಪ್ರಕಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ.

ಮಿಥುನ ರಾಶಿ: ಅತಿಯಾದ ಮುಂಜಾಗರೂಕತೆಯಿಂದ ವರ್ತಮಾನವನ್ನು ಬಿಡುವಿರಿ. ವಾಹನ ಖರೀದಿಸುವ ಆಸೆ ಅತಿಯಾಗಿರುವುದು. ಇನ್ನೊಬ್ಬರ ಇಂಗಿತವನ್ನು ಅರಿಯಲು ನೀವು ಸಮರ್ಥರು. ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ಇಷ್ಟ ಮಿತ್ರರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಆಹಾರದ ಸೇವೆಯನ್ನು ನೀವು ಮಿತವಾಗಿ ಮಾಡಬೇಕಾದೀತು.

ಕರ್ಕ ರಾಶಿ: ಇಂದಿನ‌ ನಿಮ್ಮ ಕೆಲಸವು ಹೆಚ್ಚು ಶ್ರಮವನ್ನು ಕೇಳುವುದು. ಮನ್ನಣೆಗೋಸ್ಕರ ಯಾರನ್ನೋ ದೂಷಿಸುವ ಪ್ರಯತ್ನ ಮಾಡುವಿರಿ. ಅತಿರೇಕದ ಮಾತುಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತದೆ. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮಗೆ ಸಿಗದ ಅಧಿಕಾರದ ಬಗ್ಗೆ ನಿಮಗೆ ಸ್ವಲ್ಪ ಅಸಮಾಧನಾವಿರುವುದು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು.

ಸಿಂಹ ರಾಶಿ: ಇಂದಿನ ನಿಮ್ಮ ಘಟನೆಗಳು ನಿಮ್ಮ ಆಲೋಚನೆಯ ದಿಕ್ಕನ್ನು ಬದಲಿಸಬಹುದು. ಯಾರದೋ ಬಳಿ ಕೈ ಚಾಚುತ್ತಾ ಇರುವುದು ನಿಮಗೇ ಸರಿ ಕಾಣಿಸದು. ನಿಮ್ಮವರ ಜೊತೆ ಅಂತರವನ್ನು ಕಾಯ್ದುಕೊಳ್ಳಿ. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನು ಮಾಡುವಿರಿ. ನೀರಿನಿಂದ ಭಯವು ಉಂಟಾಗುವುದು. ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಕೆಲವು ವಿಚಾರಗಳಿಗೆ ಮತ್ತೆ ಮತ್ತೆ ಹೇಳಿಕೊಳ್ಳಬೇಕಾದೀತು. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ನಿಮಗಾಗದವರ ಮಾತು ನಿಮ್ಮ ಮೇಲೆ ಬೇರೆ ರೀತಿಯ ಪರಿಣಾಮವನ್ನು ಉಂಟುಮಾಡುವುದು.

ಕನ್ಯಾ ರಾಶಿ: ನಿಮಗೆ ಇಂದು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಚಾತುರ್ಯವನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ನಿಮ್ಮಿಂದ ಆಗುವಷ್ಟನ್ನು ಮಾತ್ರ ಮಾಡಿ. ಒತ್ತಡದ ನಡುವೆಯೂ ತಾಳ್ಮೆಯನ್ನು ನೀವು ಕಂಡುಕೊಳ್ಳುವಿರಿ. ಕಾಣಾಂತರಗಳಿಂದ ನಿಲ್ಲಿಸಿದ್ದ ಕಾರ್ಯವನ್ನು ಪುನಃ ಪ್ರಾರಂಭಿಸುವಿರಿ. ಹಳೆಯ ವಾಹನವನ್ನು ಪಡೆದುಕೊಳ್ಳುವಿರಿ. ಹಿರಿಯರಿಗೆ ಎದುರು ಮಾತನಾಡಿ ಅನಂತರ ಪಶ್ಚಾತ್ತಾಪಪಡುವಿರಿ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಯಾರನ್ನಾದರೂ ದೂಷಿಸಿ ಅವರ ವಿರೋಧವನ್ನು ಕಟ್ಟಿಕೊಳ್ಳುವಿರಿ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಮಾನಸಿಕ ತೊಳಲಾಟವನ್ನು ಪ್ರಯತ್ನಪೂರ್ವಕವಾಗಿ ಕಡಿಮೆ ಮಾಡಿಕೊಳ್ಳಿ.

ತುಲಾ ರಾಶಿ: ನಿಮ್ಮ ಯೋಗ್ಯವಾದ ಕಾರ್ಯಗಳು ನಿಮಗೆ ಉಪಕಾರಕ್ಕೆ ಬರಲಿವೆ. ಕೆಲವನ್ನು ನೀವು ಅನಗತ್ಯವಾಗಿ ಪಡೆದುಕೊಂಡು ಸಂಕಟಪಡುವಿರಿ. ನಿಮ್ಮವರ ಪ್ರೀತಿಯನ್ನು ನೀವು ಗಳಿಸುವಿರಿ. ನಿಮ್ಮ ಇಂದಿನ ನಡೆ ಸಂಗಾತಿಗೆ ಅರ್ಥವಾಗದೇ ಇದ್ದೀತು. ಉನ್ನತ ಅಧಿಕಾರಿಗಳ ಜೊತೆ ಹೆಚ್ಚು ವ್ಯವಹಾರವನ್ನು ಮಾಡಬೇಕಾಗಿರುವ ಕಾರಣ ಅವರ ಜೊತೆ ಓಡಾಡುವಿರಿ. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಎಲ್ಲವನ್ನೂ ಒಮ್ಮೆಲೇ ಪಡೆಯಬೇಕು ಎಂಬ ಮನೋಭಾವವು ಸದ್ಯಕ್ಕೆ ಬೇಡ. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ.

ವೃಶ್ಚಿಕ ರಾಶಿ: ನೀವು ಪ್ರವಾಸದಿಂದಾಗಿ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಸೌಂದರ್ಯದ ಬಗ್ಗೆ ನಿಮಗೆ ಅತಿಯಾದ ಮೋಹವು ಬರಬಹುದು. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ನಿರೀಕ್ಷಿತ ಫಲವು ಲಭಿಸದು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ತಂದೆ – ತಾಯಿಯರ ವಿಚಾರದಲ್ಲಿ ನಿಮಗೆ ಅತೀವ ಅಕ್ಕರೆ ಇರುವುದು.

ಧನು ರಾಶಿ: ನೀವು ಇಂದು ಸಕಾರಾತ್ಮಕವಾಗಿ ಇರಬೇಕಾಗುವುದು. ಇದರಿಂದ ನಿಮ್ಮ ಆರೋಗ್ಯದ ಮೇಲೂ ಉತ್ತಮ ಪರಿಣಾಮ ಇರುವುದು‌. ಯಾರಿಂದಲೂ ಧನಸಹಾಯವನ್ನು ಪಡೆಯಬಾರದು ಎಂಬ ಸಂಕಲ್ಪ ನಿಮ್ಮದಾಗಿರುವುದು. ಪ್ರಾಮಾಣಿಕತೆಯಿಂದ ನೀವು ಗೆಲ್ಲುವಿರಿ. ಉತ್ತಮ ಕೆಲಸವನ್ನು ಅಜ್ಞಾನದಿಂದ ನಷ್ಟ ಮಾಡಿಕೊಳ್ಳುವಿರಿ. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಸಾಮಾಜಿಕವಾದ ಗೌರವವನ್ನು ನೀವು ಅನಾಯಾಸವಾಗಿ ಪಡೆದುಕೊಳ್ಳುವಿರಿ. ಯೋಗ್ಯವಾದ ಕೆಲಸದ ಕಡೆ ಗಮನವಿರಲಿ.

ಮಕರ ರಾಶಿ: ನಿಮ್ಮ ಸಂಗಾತಿಯ ಬಗ್ಗೆ ಪೂರ್ವಾಗ್ರಹ ಬೇಡ. ಉತ್ಸಾಹದಿಂದ ಏನನ್ನಾದರೂ ಮಾಡಿಕೊಳ್ಳುವಿರಿ. ನಿಮ್ಮನ್ನು ನೀವು ತೆರೆದುಕೊಳ್ಳುವ ಅವಶ್ಯಕತೆ ಇರಲಿದೆ. ನಿಮ್ಮ ಹಠದ ಸ್ವಭಾವವು ಇತರರಿಗೆ ನೋವನ್ನು ಕೊಡಬಹುದು. ಸಹೋದ್ಯೋಗಿಗಳ ಜೊತೆ ನಿಮ್ಮ ಮಾತು ಅಸಹವಾಗಿರುವುದು. ವಿವಾದದಲ್ಲಿರುವ ಆಸ್ತಿಯಿಂದ ಮಾರಾಟವು ನಿಧಾನವಾಗುವುದು. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶದಲ್ಲಿ ಪ್ರೀತಿಯಿರಲಿ. ಕೊರಗುತ್ತ ಇರುವುದು ಬೇಡ. ನಿಮ್ಮ ಆಡಂಬರದ ಜೀವನವು ಇತರರಿಗೆ ಅಸೂಯೆ ತರಬಹುದು.

ಕುಂಭ ರಾಶಿ: ನಿಮ್ಮ ಭೂಮಿಯ ವಿವಾದವು ದೊಡ್ಡದಾಗಬಹುದು. ನಿಮಗೆ ಬೇಕಾದುದನ್ನು ಹಠ ಮಾಡಿ ಪಡೆದುಕೊಳ್ಳುವಿರಿ. ನಿಮ್ಮನ್ನು ಪ್ರೀತಿಸುವವರಿಗೆ ಸಮಯವನ್ನು ಕೊಡಿ. ಹಣವನ್ನು ಅನ್ಯ ಕಾರ್ಯಕ್ಕೆ ಬಳಸುವಿರಿ. ಕಲಾವಿದರು ಅವಕಾಶದಿಂದ ವಂಚಿತರಾಗಬೇಕಾಗುವುದು. ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಸುಖದ ಸಾಧನವನ್ನು ನೀವು ಕೈ ಬಿಡುವಿರಿ.

ಮೀನ ರಾಶಿ: ಇಂದು ನೀವು ಜೀವನದ ಎಲ್ಲ ಕ್ಷಣಗಳನ್ನು ಸಂತೋಷದಿಂದ ಅನುಭವಿಸುವಿರಿ. ಬರಬೇಕಿದ್ದ ಹಣಗಳು ಇಂದು ನಿಮ್ಮ ಕೈ ಸೇರುವುದರಿಂದ ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ. ಇಂದು ಕೆಲಸದಲ್ಲಿ ಉತ್ಸಾಹವು ಹೆಚ್ಚಿರುವುದು. ಕಾರ್ಯದಲ್ಲಿ ಸಂಪೂರ್ಣ ಜಾಗರೂಕರಾದಾಗ ಮಾತ್ರ ಅವಕಾಶಗಳು ನಿಮ್ಮದಾಗುತ್ತವೆ. ಕಛೇರಿ ಕೆಲಸದಿಂದ ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯಾಗಬಹುದು.‌ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಬಂಧುಗಳ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಇಂದು ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು.

ಲೋಹಿತ ಹೆಬ್ಬಾರ್ – 8762924271 (what’s app only)