AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 14 November : ಇಂದು ಈ ರಾಶಿಯವರು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗುವುದು…

ನವೆಂಬರ್ 14, 2026 ರ ನಿತ್ಯ ಭವಿಷ್ಯದ ಪ್ರಕಾರ, ಕೆಲವು ರಾಶಿಗಳಿಗೆ ಇಂದು ಸವಾಲುಗಳು ಎದುರಾಗಲಿವೆ. ಅಮೂಲ್ಯ ಸಂಪತ್ತು ಪ್ರಾಪ್ತಿ, ಪ್ರೇಮದಲ್ಲಿ ಮನಸ್ತಾಪ, ವೃತ್ತಿಜೀವನದಲ್ಲಿ ಬದಲಾವಣೆ, ಆರ್ಥಿಕ ಸ್ಥಿತಿ ಸುಧಾರಣೆ ಸೇರಿದಂತೆ ವಿವಿಧ ರಾಶಿಗಳಿಗೆ ವಿಭಿನ್ನ ಫಲಗಳಿವೆ. ನಿಮ್ಮ ದೈನಂದಿನ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳಲು, ರಾಶಿಫಲವನ್ನು ಸಂಪೂರ್ಣವಾಗಿ ಓದಿ. ಇದು ನಿಮ್ಮ ದಿನವನ್ನು ಉತ್ತಮವಾಗಿ ಯೋಜಿಸಲು ಸಹಾಯಕ.

Horoscope Today 14 November : ಇಂದು ಈ ರಾಶಿಯವರು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗುವುದು...
ನಿತ್ಯ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Nov 14, 2026 | 3:06 AM

Share

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಶನಿವಾರದಂದು ಅಮೂಲ್ಯ ಸಂಪತ್ತಿನ‌ ಪ್ರಾಪ್ತಿ, ಅನಿರೀಕ್ಷಿತ ಬಂಧ, ಪ್ರೇಮದಲ್ಲಿ ಮನಸ್ತಾಪ, ಭವಿಷ್ಯದ ನಿರ್ಲಕ್ಷ್ಯ, ಪ್ರಯಾಣದಲ್ಲಿ ಸೋಲು, ಇವೆಲ್ಲ ಇಂದಿನ ಭವಿಷ್ಯ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ವಿಶಾಖಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸುಕರ್ಮ, ಕರಣ : ಬವ, ಸೂರ್ಯೋದಯ – 06 – 18 am, ಸೂರ್ಯಾಸ್ತ – 05 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:11 – 10:38 ಯಮಗಂಡ ಕಾಲ 13:30 – 14:56, ಗುಳಿಕ ಕಾಲ 06:19 – 07:45

ಮೇಷ ರಾಶಿ : ಕಛೇರಿಯಲ್ಲಿ ಹೆಚ್ಚಿನ ಕಾರ್ಯವನ್ನು ಮಾಡಲು ಇರಬೇಕಾದೀತು. ವೃತ್ತಿ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸುವಿರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಇಂದು ನೀವು ನಿಮ್ಮ ಜೀವನ ಸಂಗಾತಿಗಾಗಿ ಕೆಲವು ವಿಶೇಷ ಯೋಜನೆಗಳನ್ನು ಮಾಡಬಹುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ‌ ಮನೋಗತವನ್ನು ಅರಿತುಕೊಳ್ಳುವಿರಿ.

ವೃಷಭ ರಾಶಿ : ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ, ಆದರೆ ಖರ್ಚುಗಳನ್ನು ನಿಯಂತ್ರಿಸುವುದು ಮುಖ್ಯವಾಗಿದೆ. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಶ್ರೇಷ್ಠವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ನಿಮ್ಮ ವೃತ್ತಿಜೀವನದ ಗುರಿಗಳ ಮೇಲೆ ಕೇಂದ್ರೀಕರಿಸಿ. ನಿಮ್ಮವರ ಮಾತು ನಿಮಗೆ ಅಸಮಾಧಾನವನ್ನು ಉಂಟುಮಾಡುವುದು. ನೇರ ನುಡಿಗಳು ನಿಮಗೆ ಮುಜುಗರವನ್ನು ಉಂಟುಮಾಡಬಹುದು.

ಮಿಥುನ ರಾಶಿ : ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಕೊಳ್ಳುವುದು ಜಂಭವೆನಿಸುವುದು. ಅತಿ ಲೋಭದಿಂದ ಧನಾರ್ಜನೆಯನ್ನು ಮಾಡುವಿರಿ. ಕೆಲಸದ ಸ್ಥಳದಲ್ಲಿ ನೀವು ನಿಮ್ಮ ಯೋಜನೆಗಳು ಮತ್ತು ಗುರಿಗಳ ಮೇಲೆ ಕೇಂದ್ರೀಕರಿಸಬೇಕಾಗುತ್ತದೆ. ಇಂದು ನೀವು ಹೊಸ ಕೆಲಸಗಳನ್ನು ಪ್ರಾರಂಭಿಸಬಹುದು. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಇರುವಿರಿ.

ಕರ್ಕಾಟಕ ರಾಶಿ : ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಅನಗತ್ಯ ವಾದಗಳಿಂದ ದೂರವಿರಬೇಕು. ವಿರೋಧಿಗಳು ಇಂದು ಸಕ್ರಿಯರಾಗಿರುತ್ತಾರೆ. ಕಚೇರಿಯಲ್ಲಿ ಸ್ಪರ್ಧೆಯ ವಾತಾವರಣವಿರುತ್ತದೆ. ನಿಮ್ಮ ಪ್ರೀತಿಪಾತ್ರರ ಜೊತೆ ನೀವು ಕೆಲವು ಸ್ಮರಣೀಯ ಕ್ಷಣಗಳನ್ನು ಕಳೆಯಬಹುದು. ನೀವು ಇಂದು ಯಾರ ಜೊತೆಯೂ ಬೆರೆಯಲು ಇಷ್ಟಪಡುವುದಿಲ್ಲ. ನಿಮ್ಮ ತಪ್ಪನ್ನು ಯಾರಿಂದಲೂ ಕೇಳಲು ಇಚ್ಛಿಸುವುದಿಲ್ಲ.

ಸಿಂಹ ರಾಶಿ : ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಮಾತುಗಳು ಬರಬಹುದು. ತುಂಬಾ ಬಿಡುವಿಲ್ಲದ ಸಮಯ ಇರುತ್ತದೆ. ಯಾರನ್ನೂ ಅವಲಂಬಿಸದೇ ನಿಲ್ಲಬೇಕು ಎನ್ನುವ ಹಠವು ಇರುವುದು. ಪ್ರಶಂಸೆಯು ಇಲ್ಲದೇ ಕೆಲಸದಲ್ಲಿ ನಿಮ್ಮ ಆಸಕ್ತಿಯು ಕಡಿಮೆ‌ ಆಗಬಹುದು. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವು ಇರಲಿದೆ.

ಕನ್ಯಾ ರಾಶಿ : ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ಹೊಸ ಹೂಡಿಕೆ ಅವಕಾಶಗಳ ಮೇಲೆ ನಿಗಾ ಇರಿಸಿ. ಮನೆ ಖರೀದಿಸಲು ಅಥವಾ ಮಾರಾಟ ಮಾಡಲು ಯೋಜನೆಯನ್ನು ಮಾಡಬಹುದು. ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ.‌ ಮಕ್ಕಳ ಜೀವನದ ಚಿಂತೆ ಕಾಡುವುದು. ತಂಡವಾಗಿ ಕೆಲಸ ಮಾಡುವ ಮೂಲಕ ನೀವು ಕಾರ್ಯದಲ್ಲಿ ಸ್ಥಳದಲ್ಲಿ ಯಶಸ್ಸನ್ನು ಸಾಧಿಸುವಿರಿ.

ತುಲಾ ರಾಶಿ : ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ಕೌಟುಂಬಿಕ ಕೆಲಸ ಮತ್ತು ಖರ್ಚು ಹೆಚ್ಚಾಗುವ ಪರಿಸ್ಥಿತಿ ಉಂಟಾಗಬಹುದು. ಜೀವನೋಪಾಯಕ್ಕೆ ಸಣ್ಣ ವೃತ್ತಿಯ ಅವಲಂಬನೆ. ತಂದೆಯ ಮೇಲೆ‌ ನಿಮ್ಮ‌ ಗೌರವವು ಅಧಿಕಾಗಿದ್ದು ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಹಿತಶತ್ರುಗಳನ್ನು ಸರಿಯಾಗಿ ಬಳಸಿಕೊಳ್ಳುವುದು ನಿಮಗೆ ಗೊತ್ತಾಗದು.

ವೃಶ್ಚಿಕ ರಾಶಿ : ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಟ್ಟಾರು. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ದೂರ ಪ್ರಯಾಣದ ಖರ್ಚು ಹೆಚ್ಚಾಗಬಹುದು. ಪ್ರೇಮ ಸಂಬಂಧಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಹಣವನ್ನು ವೃಥಾ ಖಾಲಿ ಮಾಡುವುದು ಬೇಡ.

ಧನು ರಾಶಿ : ಯೋಗಾಭ್ಯಾಸದಿಂದ ನಿಮಗೆ ಆಯಾಸವಾಗಲಿದೆ. ಕೊಟ್ಟ ಹಣವನ್ನು ನೀವು ಪುನಃ ಕೇಳುವಿರಿ. ಹೋರಾಟದ ಅನಂತರ ಉದ್ಯೋಗದಲ್ಲಿ ಬಡ್ತಿ ಮತ್ತು ಬದಲಾವಣೆ ಬರಬಹುದು. ಕೋಪದ ಕಾರಣ, ಸಂಗಾತಿಯೊಂದಿಗೆ ದೂರವಾಗುವ ಪರಿಸ್ಥಿತಿ ಉದ್ಭವಿಸಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ಕೆಲವರನ್ನು ಅನುಕರಣೆ ಮಾಡುವ ಪ್ರಯತ್ನವನ್ನು ಆರಂಭ.

ಮಕರ ರಾಶಿ : ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವ್ಯವಹರಿಸುವುದು ಉತ್ತಮ. ಬೌದ್ಧಿಕ ಸಾಮರ್ಥ್ಯವನ್ನು ಅರ್ಥಪೂರ್ಣವಾಗಿ ಬಳಸಲು ಸಾಧ್ಯವಾಗುತ್ತದೆ. ಅಧ್ಯಯನ ಮತ್ತು ಬೋಧನೆಯಲ್ಲಿ ಸಾಮಾನ್ಯ ಅಡಚಣೆಯ ಪರಿಸ್ಥಿತಿ ಉದ್ಭವಿಸಬಹುದು. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥಯವಾಗುವುದು.

ಕುಂಭ ರಾಶಿ : ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ಕೆಲವು ಸಂದರ್ಭಗಳು ನಿಮ್ಮ ಚಿತ್ರಣವನ್ನು ಬಲಪಡಿಸುತ್ತವೆ. ಸಹೋದರಿಯರು ಮತ್ತು ಸ್ನೇಹಿತರ ಮೇಲೆ ಖರ್ಚು ಹೆಚ್ಚಾಗಬಹುದು. ನಿಮ್ಮ ಖರ್ಚುಗಳನ್ನು ನೀವೇ ಖುದ್ದಾಗಿ ನಿಯಂತ್ರಿಸಬೇಕಾಗುತ್ತದೆ. ಕಾರ್ಯದ ಅನಿವಾರ್ಯತೆಯು ಎದ್ದು ಕಾಣಿಸುವುದು.

ಮೀನ ರಾಶಿ : ಕಳೆದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ‌ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಅಶಕ್ತರಿಗೆ ನಿಮ್ಮ ಕೈಲಾದ ಸಹಕಾರವನ್ನು ಮಾಡುವಿರಿ. ನೂತನ ಸಂಬಂಧವನ್ನು ಬೆಳೆಸಿಕೊಳ್ಳಲು ಉತ್ಸುಕರಾಗುವಿರಿ. ಅರ್ಥಿಕ ಕ್ರಮವನ್ನು ಸರಿಯಾಗಿ ಇಟ್ಟುಕೊಳ್ಳುವಿರಿ.

-ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಬಿಗ್ ಬಾಸ್ ಕನ್ನಡ: ಸ್ವಾಭಿಮಾನ ಬಿಟ್ಟು ನಾನು ಆಟ ಆಡಲ್ಲ; ಶಪಥ ಮಾಡಿದ ಗಾನವಿ
ಬಿಗ್ ಬಾಸ್ ಕನ್ನಡ: ಸ್ವಾಭಿಮಾನ ಬಿಟ್ಟು ನಾನು ಆಟ ಆಡಲ್ಲ; ಶಪಥ ಮಾಡಿದ ಗಾನವಿ
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅನುಮತಿ ಕೋರಿದ ಸಿಎಂ ಡಿಕೆಶಿ
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅನುಮತಿ ಕೋರಿದ ಸಿಎಂ ಡಿಕೆಶಿ
ವಿಶ್ವದ ಮೊದಲ 'ಟಿಲ್ಟೆಡ್ ಎಲ್‌ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ 'ಟಿಲ್ಟೆಡ್ ಎಲ್‌ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್​​ಡಿ ಕುಮಾರಸ್ವಾಮಿ
ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್​​ಡಿ ಕುಮಾರಸ್ವಾಮಿ
ಡಿಕೆ ಶಿವಕುಮಾರ್ ಕೈ ಹಿಡಿದು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಮೋದಿ
ಡಿಕೆ ಶಿವಕುಮಾರ್ ಕೈ ಹಿಡಿದು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಮೋದಿ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್