
ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಶನಿವಾರದಂದು ಅಮೂಲ್ಯ ಸಂಪತ್ತಿನ ಪ್ರಾಪ್ತಿ, ಅನಿರೀಕ್ಷಿತ ಬಂಧ, ಪ್ರೇಮದಲ್ಲಿ ಮನಸ್ತಾಪ, ಭವಿಷ್ಯದ ನಿರ್ಲಕ್ಷ್ಯ, ಪ್ರಯಾಣದಲ್ಲಿ ಸೋಲು, ಇವೆಲ್ಲ ಇಂದಿನ ಭವಿಷ್ಯ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ವಿಶಾಖಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸುಕರ್ಮ, ಕರಣ : ಬವ, ಸೂರ್ಯೋದಯ – 06 – 18 am, ಸೂರ್ಯಾಸ್ತ – 05 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:11 – 10:38 ಯಮಗಂಡ ಕಾಲ 13:30 – 14:56, ಗುಳಿಕ ಕಾಲ 06:19 – 07:45
ಮೇಷ ರಾಶಿ :
ಕಛೇರಿಯಲ್ಲಿ ಹೆಚ್ಚಿನ ಕಾರ್ಯವನ್ನು ಮಾಡಲು ಇರಬೇಕಾದೀತು. ವೃತ್ತಿ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸುವಿರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಇಂದು ನೀವು ನಿಮ್ಮ ಜೀವನ ಸಂಗಾತಿಗಾಗಿ ಕೆಲವು ವಿಶೇಷ ಯೋಜನೆಗಳನ್ನು ಮಾಡಬಹುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ.
ವೃಷಭ ರಾಶಿ :
ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ, ಆದರೆ ಖರ್ಚುಗಳನ್ನು ನಿಯಂತ್ರಿಸುವುದು ಮುಖ್ಯವಾಗಿದೆ. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಶ್ರೇಷ್ಠವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ನಿಮ್ಮ ವೃತ್ತಿಜೀವನದ ಗುರಿಗಳ ಮೇಲೆ ಕೇಂದ್ರೀಕರಿಸಿ. ನಿಮ್ಮವರ ಮಾತು ನಿಮಗೆ ಅಸಮಾಧಾನವನ್ನು ಉಂಟುಮಾಡುವುದು. ನೇರ ನುಡಿಗಳು ನಿಮಗೆ ಮುಜುಗರವನ್ನು ಉಂಟುಮಾಡಬಹುದು.
ಮಿಥುನ ರಾಶಿ :
ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಕೊಳ್ಳುವುದು ಜಂಭವೆನಿಸುವುದು. ಅತಿ ಲೋಭದಿಂದ ಧನಾರ್ಜನೆಯನ್ನು ಮಾಡುವಿರಿ. ಕೆಲಸದ ಸ್ಥಳದಲ್ಲಿ ನೀವು ನಿಮ್ಮ ಯೋಜನೆಗಳು ಮತ್ತು ಗುರಿಗಳ ಮೇಲೆ ಕೇಂದ್ರೀಕರಿಸಬೇಕಾಗುತ್ತದೆ. ಇಂದು ನೀವು ಹೊಸ ಕೆಲಸಗಳನ್ನು ಪ್ರಾರಂಭಿಸಬಹುದು. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಇರುವಿರಿ.
ಕರ್ಕಾಟಕ ರಾಶಿ :
ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಅನಗತ್ಯ ವಾದಗಳಿಂದ ದೂರವಿರಬೇಕು. ವಿರೋಧಿಗಳು ಇಂದು ಸಕ್ರಿಯರಾಗಿರುತ್ತಾರೆ. ಕಚೇರಿಯಲ್ಲಿ ಸ್ಪರ್ಧೆಯ ವಾತಾವರಣವಿರುತ್ತದೆ. ನಿಮ್ಮ ಪ್ರೀತಿಪಾತ್ರರ ಜೊತೆ ನೀವು ಕೆಲವು ಸ್ಮರಣೀಯ ಕ್ಷಣಗಳನ್ನು ಕಳೆಯಬಹುದು. ನೀವು ಇಂದು ಯಾರ ಜೊತೆಯೂ ಬೆರೆಯಲು ಇಷ್ಟಪಡುವುದಿಲ್ಲ. ನಿಮ್ಮ ತಪ್ಪನ್ನು ಯಾರಿಂದಲೂ ಕೇಳಲು ಇಚ್ಛಿಸುವುದಿಲ್ಲ.
ಸಿಂಹ ರಾಶಿ :
ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಮಾತುಗಳು ಬರಬಹುದು. ತುಂಬಾ ಬಿಡುವಿಲ್ಲದ ಸಮಯ ಇರುತ್ತದೆ. ಯಾರನ್ನೂ ಅವಲಂಬಿಸದೇ ನಿಲ್ಲಬೇಕು ಎನ್ನುವ ಹಠವು ಇರುವುದು. ಪ್ರಶಂಸೆಯು ಇಲ್ಲದೇ ಕೆಲಸದಲ್ಲಿ ನಿಮ್ಮ ಆಸಕ್ತಿಯು ಕಡಿಮೆ ಆಗಬಹುದು. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವು ಇರಲಿದೆ.
ಕನ್ಯಾ ರಾಶಿ :
ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ಹೊಸ ಹೂಡಿಕೆ ಅವಕಾಶಗಳ ಮೇಲೆ ನಿಗಾ ಇರಿಸಿ. ಮನೆ ಖರೀದಿಸಲು ಅಥವಾ ಮಾರಾಟ ಮಾಡಲು ಯೋಜನೆಯನ್ನು ಮಾಡಬಹುದು. ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ. ಮಕ್ಕಳ ಜೀವನದ ಚಿಂತೆ ಕಾಡುವುದು. ತಂಡವಾಗಿ ಕೆಲಸ ಮಾಡುವ ಮೂಲಕ ನೀವು ಕಾರ್ಯದಲ್ಲಿ ಸ್ಥಳದಲ್ಲಿ ಯಶಸ್ಸನ್ನು ಸಾಧಿಸುವಿರಿ.
ತುಲಾ ರಾಶಿ :
ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ಕೌಟುಂಬಿಕ ಕೆಲಸ ಮತ್ತು ಖರ್ಚು ಹೆಚ್ಚಾಗುವ ಪರಿಸ್ಥಿತಿ ಉಂಟಾಗಬಹುದು. ಜೀವನೋಪಾಯಕ್ಕೆ ಸಣ್ಣ ವೃತ್ತಿಯ ಅವಲಂಬನೆ. ತಂದೆಯ ಮೇಲೆ ನಿಮ್ಮ ಗೌರವವು ಅಧಿಕಾಗಿದ್ದು ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಹಿತಶತ್ರುಗಳನ್ನು ಸರಿಯಾಗಿ ಬಳಸಿಕೊಳ್ಳುವುದು ನಿಮಗೆ ಗೊತ್ತಾಗದು.
ವೃಶ್ಚಿಕ ರಾಶಿ :
ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಟ್ಟಾರು. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ದೂರ ಪ್ರಯಾಣದ ಖರ್ಚು ಹೆಚ್ಚಾಗಬಹುದು. ಪ್ರೇಮ ಸಂಬಂಧಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಹಣವನ್ನು ವೃಥಾ ಖಾಲಿ ಮಾಡುವುದು ಬೇಡ.
ಧನು ರಾಶಿ :
ಯೋಗಾಭ್ಯಾಸದಿಂದ ನಿಮಗೆ ಆಯಾಸವಾಗಲಿದೆ. ಕೊಟ್ಟ ಹಣವನ್ನು ನೀವು ಪುನಃ ಕೇಳುವಿರಿ. ಹೋರಾಟದ ಅನಂತರ ಉದ್ಯೋಗದಲ್ಲಿ ಬಡ್ತಿ ಮತ್ತು ಬದಲಾವಣೆ ಬರಬಹುದು. ಕೋಪದ ಕಾರಣ, ಸಂಗಾತಿಯೊಂದಿಗೆ ದೂರವಾಗುವ ಪರಿಸ್ಥಿತಿ ಉದ್ಭವಿಸಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ಕೆಲವರನ್ನು ಅನುಕರಣೆ ಮಾಡುವ ಪ್ರಯತ್ನವನ್ನು ಆರಂಭ.
ಮಕರ ರಾಶಿ :
ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವ್ಯವಹರಿಸುವುದು ಉತ್ತಮ. ಬೌದ್ಧಿಕ ಸಾಮರ್ಥ್ಯವನ್ನು ಅರ್ಥಪೂರ್ಣವಾಗಿ ಬಳಸಲು ಸಾಧ್ಯವಾಗುತ್ತದೆ. ಅಧ್ಯಯನ ಮತ್ತು ಬೋಧನೆಯಲ್ಲಿ ಸಾಮಾನ್ಯ ಅಡಚಣೆಯ ಪರಿಸ್ಥಿತಿ ಉದ್ಭವಿಸಬಹುದು. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥಯವಾಗುವುದು.
ಕುಂಭ ರಾಶಿ :
ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ಕೆಲವು ಸಂದರ್ಭಗಳು ನಿಮ್ಮ ಚಿತ್ರಣವನ್ನು ಬಲಪಡಿಸುತ್ತವೆ. ಸಹೋದರಿಯರು ಮತ್ತು ಸ್ನೇಹಿತರ ಮೇಲೆ ಖರ್ಚು ಹೆಚ್ಚಾಗಬಹುದು. ನಿಮ್ಮ ಖರ್ಚುಗಳನ್ನು ನೀವೇ ಖುದ್ದಾಗಿ ನಿಯಂತ್ರಿಸಬೇಕಾಗುತ್ತದೆ. ಕಾರ್ಯದ ಅನಿವಾರ್ಯತೆಯು ಎದ್ದು ಕಾಣಿಸುವುದು.
ಮೀನ ರಾಶಿ :
ಕಳೆದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಅಶಕ್ತರಿಗೆ ನಿಮ್ಮ ಕೈಲಾದ ಸಹಕಾರವನ್ನು ಮಾಡುವಿರಿ. ನೂತನ ಸಂಬಂಧವನ್ನು ಬೆಳೆಸಿಕೊಳ್ಳಲು ಉತ್ಸುಕರಾಗುವಿರಿ. ಅರ್ಥಿಕ ಕ್ರಮವನ್ನು ಸರಿಯಾಗಿ ಇಟ್ಟುಕೊಳ್ಳುವಿರಿ.
-ಲೋಹಿತ್ ಹೆಬ್ಬಾರ್ – 8762924271 (what’s app only)