AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಆಪ್ತರ ಅಗಲಿಕೆಯ ನೋವು ಸಹಿಸಲಾರರು

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಕಾರ್ತಿಕ ಮಾಸದ ಶುಕ್ಲ ಪಕ್ಷದ ಪ್ರತಿಪತ್ ತಿಥಿಯ ಮಂಗಳವಾರದಂದು ವಿದ್ಯಾವಂತಿಕೆ, ಕಲಾವಂತಿಕೆ, ಸ್ತ್ರೀ ಮೋಹ, ಸ್ವಂತ ವಾಹನ ಖರೀದಿ, ವೃತ್ತಿ ಜೀವನದಲ್ಲಿ ಅತೃಪ್ತಿ, ತಿರಸ್ಕಾರ, ಹೆಚ್ಚಿನ ತಿರುಗಾಟ, ಧಾರ್ಮಿಕ ಆಚರಣೆ ಇವೆಲ್ಲ ಇಂದಿನ ವಿಶೇಷ.

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಆಪ್ತರ ಅಗಲಿಕೆಯ ನೋವು ಸಹಿಸಲಾರರು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on:Nov 10, 2026 | 1:06 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ಸ್ವಾತಿ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ವಿಶಾಖಾ, ಯೋಗ : ಆಯುಷ್ಮಾನ್, ಕರಣ : ಕಿಂಸ್ತುಘ್ನ ಸೂರ್ಯೋದಯ – 06 – 17 am, ಸೂರ್ಯಾಸ್ತ – 05 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:57 – 16:23, ಯಮಗಂಡ ಕಾಲ 09:10 – 10:37, ಗುಳಿಕ ಕಾಲ 12:03 – 13:30.

ಮೇಷ ರಾಶಿ: ಕಾರ್ಯಸಾಧನೆಗೆ ಹೆಚ್ಚಿನ ತಿರುಗಾಟವು ಬರಬಹುದು. ‌ಹಿತಶತ್ರಗಳು ನಿಮ್ಮನ್ನು ಸಿಕ್ಕಿಹಾಕಿಸಬಹುದು. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ಕರ್ತವ್ಯಗಳನ್ನು ಮರೆಯುವ ಸಾಧ್ಯತೆ ಇದೆ. ಸರ್ಕಾರದ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ. ಸಂಗಾತಿಯನ್ನು ಪ್ರೀತಿಯಿಂದ ಗೆಲ್ಲಬೇಕಾದೀತು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ.

ವೃಷಭ ರಾಶಿ: ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು. ಕಳೆದುದ್ದು ಸಣ್ಣ ವಸ್ತುವೇ ಆದರೂ ಬಹಳ ಬೇಸರಗೊಳ್ಳುವಿರಿ. ಮನೆಯ ಕೆಲಸದಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಬೆಳವಣಿಗೆ ಸಾಮಾನ್ಯದ್ದಾಗಿರುತ್ತದೆ. ಸಂಗಾತಿಯ ಜೊತೆ ಸಣ್ಣ ವಾಗ್ವಾದವು ನಡೆಯಬಹುದು. ಸ್ವಂತಿಕೆಯನ್ನು ಬಿಟ್ಟು ಬೇಡುವುದು ಬೇಡ. ಸಹವಾಸದಿಂದ ನಿಮ್ಮ ಸ್ವಭಾವವು ಗೊತ್ತಾಗದೇ ಬದಲಾಗುವುದು.

ಮಿಥುನ ರಾಶಿ: ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ನಿಮ್ಮ ಜವಾಬ್ದಾರಿಯು ತಾನಾಗಿಯೇ ತಪ್ಪಬಹುದು. ಬಂಗಾರದ ಮೇಲೆ‌ ಹೂಡಿಕೆ ಮಾಡುವಿರಿ. ತಾಯಿಯ ಕಡೆಯಿಂದ ನಿಮಗೆ ಬೇಕಾದ ಸಹಾಯವನ್ನು ನಿರೀಕ್ಷಿಸಬಹುದು. ನಿಮ್ಮ ಮಾತಿಗೆ ಯಾರೂ ಬೆಲೆ ಕೊಡದೇ ಇರುವುದು ಬೇಸರವಾದೀತು. ಇಂದು ಯಾವ ಕಾರ್ಯಕ್ಕೂ ನಿಮಗೆ ಶ್ರದ್ಧೆಯು ಇಲ್ಲವಾಗುವುದು.

ಕರ್ಕಾಟಕ ರಾಶಿ: ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಸಿದ್ಧತೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗಬಹುದು. ಬಂಧುಗಳ ವಿಯೋಗವೂ ಆಗಬಹುದು. ಒಪ್ಪಂದಕ್ಕೆ ಮೊದಲು ಸರಿಯಾದ ತೀರ್ಮಾನ, ವಿಚಾರಣೆ ಮಾಡಿಕೊಳ್ಳಿ. ಆಮದು ವ್ಯವಹಾರವು ಇತರ ಅಸೂಯೆಗೆ ಕಾರಣವಾಗಲಿದೆ. ಮುಸುಕಿನ ಗುದ್ದಾಟದಿಂದ ಮೈಕೈ ನೋವಾಗಬಹುದು ಅಷ್ಟೇ. ಲೋಭದಿಂದ‌ ಇರುವ ಸಂಪತ್ತನ್ನೂ ಕಳೆದುಕೊಳ್ಳಬೇಕಾಗಬಹುದು. ನಿಮ್ಮ ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ.

ಸಿಂಹ ರಾಶಿ: ವಿವಿಧ ಮೂಲಗಳಿಂದ ನಿಮಗೆ ಆದಾಯವು ಬರಲಿದ್ದು ಹೂಡಿಯ ಕಡೆ ನಿಮ್ಮ ಗಮನ ಇರುವುದು. ಪ್ರಭಾವಿಗಳ ಸಹಕಾರದಿಂದ ಉತ್ತಮ ಉದ್ಯೋಗ ಲಭಿಸುವುದು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ನಿಮ್ಮ ಹೂಡಿಕೆಯನ್ನು ಜಗಜ್ಜಾಹಿರ ಮಾಡಿಕೊಳ್ಳುವ ಸನ್ನಿವೇಶ ಬರಲಿದೆ. ನಿಮ್ಮ ಭಾವನೆಗಳನ್ನು ಇನ್ನೊಬ್ಬರ ಬಳಿ ಹೇಳುಕೊಳ್ಳುವಿರಿ. ಯಾವುದನ್ನೇ ಆದರೂ ಚಿಂತಿಸಿ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯನ್ನು ಕಾರಣಾಂತರಗಳಿಂದ ನಿಲ್ಲಿಸುವಿರಿ.

ಕನ್ಯಾ ರಾಶಿ: ದಾಂಪತ್ಯದಲ್ಲಿ ಅಪರೂಪಕ್ಕೆ ಸುಖವನ್ನು ಕಾಣುವಿರಿ. ತಂದೆ ತಾಯಿಯರ ಸೇವೆಯನ್ನು ಮಾಡುವಿರಿ. ಮನೆಯ ಕೆಲಸವು ಆಗಿಲ್ಲವೆಂದು ಕೋಪವು ಇರಲಿದ್ದು ಅದನ್ನು ಪ್ರಕಟಿಸುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಹೇಳಿಕೆಯನ್ನು ಸಹಿಸಲಾರಿರಿ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು. ಮಕ್ಕಳ ವಿವಾಹದಿಂದ ಚಿಂತೆ ದೂರವಾಗುವುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು.

ತುಲಾ ರಾಶಿ: ಸಂಗಾತಿಯ ಜೊತೆಗಿನ ಬಾಂಧವ್ಯವನ್ನು ಗಟ್ಟಿ ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಒತ್ತಡದಲ್ಲಿ ಇದ್ದ ಕಾರಣ ಇಂದು ಎಲ್ಲವನ್ನೂ ಮರೆಯು ದಿನದ ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ನೀವು ನಿರಂತರ ಕಾರ್ಯವನ್ನು ಬದಲಿಸುತ್ತಿರುವುದು ನಿಮ್ಮ ಅಭ್ಯಾಸವಾಗುವುದು. ದಾನದಿಂದ ಪುಣ್ಯವನ್ನು ಗಳಿಸುವಿರಿ. ಭೇಟಿಯನ್ನು ಮಾಡಲು ಕಾದು ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ. ತಾಳ್ಮೆಯಿಂದ ವರ್ತಿಸಲು ನಿಮ್ಮವರಿಂದ ಸಲಹೆ ಸಿಗುವುದು.

ವೃಶ್ಚಿಕ ರಾಶಿ: ಸಿಗುವ ಪ್ರೀತಿ ಹಂಚಿಕೆಯಾಗಿ ನಿಮಗೆ ಕಷ್ಟವಾಗುವುದು. ಆರ್ಥಿಕ ವಿಚಾರದಲ್ಲಿ ಸಲ್ಲದ ಅಪವಾದಗಳು ಬರಬಹುದು. ಆಪ್ತರನ್ನು ಅನಿರೀಕ್ಷಿತವಾಗಿ ಕಳೆದುಕೊಳ್ಳಬೇಕಾಗಬಹುದು. ಸಣ್ಣ ಪುಟ್ಟ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ವ್ಯವಹಾರಕ್ಕೆ ಇಂದು ದೂರಪ್ರಯಾಣ ಮಾಡುವಿರಿ. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ಇಂದು ತಿಳಿಯುವುದು.

ಧನು ರಾಶಿ: ನೀವು ಲಾಭವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕೆಲಸ ಮಾಡಿದರೆ ನಿಮಗೆ ತೃಪ್ತಿ ಸಿಗದು. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಹಠದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಎಲ್ಲವನ್ನೂ ನಕಾರಾತ್ಮಕವಾಗಿಯೇ ನೋಡುವಿರಿ. ಸಂಗಾತಿಯ ಪ್ರೀತಿಯು ಕಡಿಮೆ ಆದೀತು. ಸ್ವಂತ ಕೆಲಸಕ್ಕೆ ಸಮಯವು ಸಿಗದೇ ಎಲ್ಲವನ್ನೂ ಉಳಿಸಿಕೊಳ್ಳುವಿರಿ.

ಮಕರ ರಾಶಿ: ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಮೃದುತ್ವವನ್ನು ಕೆಲವು ಸಂದರ್ಭಗಳಲ್ಲಿ ಕಳೆದುಕೊಳ್ಳಬೇಕಾಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಆತ್ಮವಂಚನೆಯೇ ನಿಮ್ಮನ್ನು ಬಹಳ ಕಾಡುವುದು. ಇಂದೂ ಕೂಡ ಮನೆಯಿಂದ ಕಛೇರಿಯ ಕೆಲಸವನ್ನು ಮಾಡುವಿರಿ. ಎಲ್ಲವೂ ಇದ್ದರೂ ಅದನ್ನು ಬಳಸುವ ಕಲೆಯೂ ಗೊತ್ತಿರಬೇಕಾಗುವುದು.

ಕುಂಭ ರಾಶಿ: ಯಾರನ್ನೂ ನೀವು ಒಮ್ಮೆಲೆ ನಂಬುವುದು ಕಷ್ಟವಾದರೂ ಇಂದು ನಂಬಿಕೆ ಅನಿವಾರ್ಯ ಆದೀತು. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ಪ್ರಣಯದಲ್ಲಿ ಇಂದು ಅತಿಯಾದ ಆಸಕ್ತಿಯು ಇರುವುದು. ಕುಟುಂಬವು ನಿಮ್ಮ ವಿವಾಹದ ಸಂತೋಷದಲ್ಲಿ ಇರಲಿದೆ. ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ.

ಮೀನ ರಾಶಿ: ಮನಸ್ಸಿನಲ್ಲಿ ಪ್ರೀತಿಗೆ ಸಂಬಂಧಿಸಿದಂತೆ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಆಪ್ತರ ಜೊತೆಗಿದ್ದು ವ್ಯವಹಾರದ ಚಾತುರ್ಯವನ್ನು ನೀವು ಇಂದು ಅರಿತುಕೊಳ್ಳುವಿರಿ.

ಲೋಹಿತ್ ಹೆಬ್ಬಾರ್ – 8762924271 (what’s app only)

Published On - 1:05 am, Tue, 10 November 26

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?