ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಕೊನೆಯ ಕ್ಷಣದಲ್ಲಿ ಸೋಲು ಕಂಡು ನಿರಾಸೆ ಅನುಭವಿಸುವರು
ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಆಶ್ವಯುಜ ಮಾಸದ ಕೃಷ್ಣ ಪಕ್ಷದ ಚತುರ್ದಶೀ, ಅಮಾವಾಸ್ಯಾ ತಿಥಿಯ ಸೋಮವಾರದಂದು ಸ್ವಾವಲಂಬನೆಗೆ ಆಸಕ್ತಿ, ಕೃಷಿ ಕಾರ್ಯದಿಂದ ಆಯಾಸ, ಆರೋಗ್ಯದಲ್ಲಿ ಏರಿಳಿತ, ಅನ್ವೇಷಣೆ, ಅನ್ಯರ ವಾಹನ ಬಳಕೆ, ಮನೆಯ ದುರಸ್ತಿ ಅನಿವಾರ್ಯ ಇವೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಆಶ್ವಯುಜ, ಸೌರ ಮಾಸ : ತುಲಾ, ಮಹಾನಕ್ಷತ್ರ : ಸ್ವಾತಿ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ / ಅಮಾವಾಸ್ಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಪ್ರೀತಿ, ಕರಣ : ಚತುಷ್ಪಾತ್ ಸೂರ್ಯೋದಯ – 06 – 16 am, ಸೂರ್ಯಾಸ್ತ – 05 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:44 – 09:10, ಯಮಗಂಡ ಕಾಲ 10:37 – 12:03, ಗುಳಿಕ ಕಾಲ 13:30 – 14:57.
ಮೇಷ ರಾಶಿ: ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ಇಂದು ನಿಮ್ಮ ಬಂಧುಗಳ ಮನೆಯಲ್ಲಿ ಉಳಿಯುವುದು ಅನಿವಾರ್ಯ. ವಿನಾಕಾರಣ ಪತ್ನಿಯನ್ನು ದ್ವೇಷಿಸುವಿರಿ. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ.
ವೃಷಭ ರಾಶಿ: ಗೌಪ್ಯವಾಗಿ ನಿಮ್ಮ ಅಂತರಂಗವನ್ನು ತಿಳಿದುಕೊಳ್ಳಲು ಶತ್ರುಗಳು ಪ್ರಯತ್ನಿಸಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ವ್ಯವಹಾರದಲ್ಲಿನ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಮನೆಯ ವಾತಾವರಣವು ಆಹ್ಲಾದಕರವಾಗಿರುತ್ತದೆ. ವ್ಯವಹಾರದಲ್ಲಿ ನಿಮಗೆ ಹೆಚ್ಚು ಪ್ರಯೋಜನವನ್ನು ನೀಡುವವರನ್ನು ಭೇಟಿಯಾಗುವಿರಿ. ನಿಮಗೆ ಕೊಡುವ ತರಬೇತಿಯಿಂದ ನೀವು ಕೆಲಸ ಮಾಡುವ ಸಂಸ್ಥೆಗೆ ಸಹಾಯವಾಗಲಿದೆ. ಇಂದು ಶಿಸ್ತಿಗೆ ಹೆಚ್ಚಿನ ಗಮನವನ್ನು ಕೊಡುವಿರಿ.
ಮಿಥುನ ರಾಶಿ: ನ್ಯಾಯಾಲಯದ ವಿಚಾರದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಅಗತ್ಯವಿದೆ. ಉದ್ಯೋಗಕ್ಕಾಗಿಯೂ ಕಷ್ಟಪಡಬೇಕಾಗಬಹುದು. ಸಂಗಾತಿಯಿಂದ ಗೌರವವನ್ನು ಅಪೇಕ್ಷಿಸುವಿರಿ. ಇನ್ನೊಬ್ಬರ ಆಡಿದ ಮಾತು ಸತ್ಯವಾಗುವುದು ಎಂಬ ನಂಬಿಕೆ ಬರಬಹುದು. ಸಮಯವನ್ನು ಸದುಪಯೋಗ ಮಾಡಿಕೊಳ್ಳಲು ಯೋಜನೆಯನ್ನು ರೂಪಿಸಿಕೊಳ್ಳುವಿರಿ.
ಕರ್ಕಾಟಕ ರಾಶಿ: ಸ್ಥಿರಾಸ್ತಿಯನ್ನು ವ್ಯವಹಾರ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ವೆಚ್ಚಗಳ ಹೆಚ್ಚಳವು ನಿಮಗೆ ಉಳಿತಾಯವನ್ನು ಮಾಡಲು ಕಷ್ಟಕರವಾಗಿಸುತ್ತದೆ. ಸ್ನೇಹಿತರು ಮತ್ತು ಸಂಬಂಧಿಕರು ನಿಮಗೆ ಸಹಾಯ ಮಾಡುತ್ತಾರೆ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ ಇರುವುದು. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಶಕ್ತಿಮೀರಿದ ಕಾರ್ಯದಿಂದ ನಿಮಗೆ ದೇಹಪೀಡೆ. ಸಮಯಸ್ಫೂರ್ತಿಯಿಂದ ಇಂದಿನ ಅನಾಹುತವನ್ನು ತಪ್ಪಿಸಿಕೊಳ್ಳಬಹುದು.
ಸಿಂಹ ರಾಶಿ: ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯೊಂದಿಗೆ ಸಮಾಲೋಚಿಸಿ ಕೆಲಸ ಮಾಡಿದರೆ ಲಾಭವನ್ನು ಪಡೆಯುತ್ತೀರಿ. ನೀವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ತಪ್ಪನ್ನು ಬೇರೆಯವರು ಎತ್ತಿ ಹೇಳುವುದು ನಿಮಗೆ ಸಿಟ್ಟು ಬರಬಹುದು. ಯಾರನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ.
ಕನ್ಯಾ ರಾಶಿ: ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗಬಹುದು. ದುಡುಕಿ ಆಡಿದ ಮಾತಿನಿಂದ ಸತ್ಯವು ಹೊರಬರಬಹುದು. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಸ್ಪರ್ಧಾಮನೋಭಾವವು ನಿಮಗೆ ಇಷ್ಟವಾಗದು. ನಿಮ್ಮ ಕಾರ್ಯಗಳು ಸೂಚನೆಯ ಅನುಸಾರವಾಗಿ ನಡೆಯಲಿ. ಯಾವುದನ್ನಾದರೂ ಆಯ್ಕೆ ಮಾಡುವಾಗ ನಿಮ್ಮನೇ ನೀವು ಕೇಳಿಕೊಳ್ಳುವುದು ಉತ್ತಮ.
ತುಲಾ ರಾಶಿ: ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ಸಮಯವನ್ನು ಆನಂದಿಸಲು ಸಾಧ್ಯವಾಗುತ್ತದೆ. ಮಾತನಾಡುವಾಗ ಮತ್ತು ಹಣಕಾಸಿನ ವ್ಯವಹಾರ ಮಾಡುವಾಗ ಎಚ್ಚರಿಕೆ ಅಗತ್ಯ. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಪದೋನ್ನತಿಯ ವಿಚಾರದಲ್ಲಿ ನಿಮಗೆ ಸ್ಪಷ್ಟ ಮಾಹಿತಿ ಸಿಗದು. ನಿಮ್ಮ ಸಕಾರಾತ್ಮಕ ಭಾವನೆಗಳಿಗೆ ಪೆಟ್ಟುಬೀಳುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಕುಟುಂಬದ ನಿರೀಕ್ಷೆಗಳನ್ನು ಪೂರೈಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಉದ್ಯಮಿಗಳು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಸಂಗಾತಿಯ ಮಾತುಗಳಿಂದ ನೀವು ಸಿಟ್ಟಾಗಬಹುದು. ಇಂದು ನಿಮ್ಮನ್ನು ಅಪರಿಚಿತರು ಭೇಟಿ ಮಾಡಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು.
ಧನು ರಾಶಿ: ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ದೇಹದ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳದೇ ಗೌಪ್ಯವಾಗಿ ಇಟ್ಟಕೊಳ್ಳುವಿರಿ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮ್ಮ ಕಾರ್ಯವನ್ನು ಕೊನೆಯಲ್ಲಿ ಬದಲಿಸುವುದು ನಿಮಗೆ ಸಿಟ್ಟು ತಂದೀತು. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ನ್ಯಾಯಸಮ್ಮತವಾದ ನಿಮ್ಮ ನಿಲುವು ಅನ್ಯರ ಕಾರಣದಿಂದ ಬದಲು.
ಮಕರ ರಾಶಿ: ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಉದ್ಯೋಗಸ್ಥರಿಗೆ ಕೆಲಸದ ಕ್ಷೇತ್ರದಲ್ಲಿ ಉತ್ತಮ ಅವಕಾಶ ಪಡೆಯುವಿರಿ. ನಿಮ್ಮ ಖ್ಯಾತಿ ಹೆಚ್ಚಾಗಬಹುಸು. ಹೆಚ್ಚು ಹಣವನ್ನು ಕೊಂಡೊಯ್ಯುವಾಗ ಜಾಗರೂಕರಾಗಿರಿ. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ನಿಮ್ಮ ಬಗ್ಗೆ ಸಕಾರಾತ್ಮಕ ಮಾತುಗಳು ಕೇಳಿಬರಬಹುದು. ನಿಮಗೆ ಅನುಕೂಲವಾಗುವ ಕಡೆ ಒಲವು. ನಿಮ್ಮ ಇಂದಿನ ಅಸಹಾಯಕ ಸ್ಥಿತಿಯನ್ನು ಯಾರಲ್ಲಿಯೂ ಹೇಳಬೇಡಿ.
ಕುಂಭ ರಾಶಿ: ಆಸ್ತಿ ಸಂಬಂಧಿತ ಕೆಲಸವನ್ನು ಪೂರ್ಣಗೊಳಿಸಲು ಇದು ಸರಿಯಾದ ಸಮಯ. ಸಾಹಸಕ್ಕೆ ಕೈಹಾಕುವುದು ಬೇಡ. ನೆಮ್ಮದಿಯನ್ನು ನೀವು ಹಾಳುಮಾಡಿಕೊಳ್ಳುವಿರಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗುವಿರಿ. ಯೋಜಿತ ಕಾರ್ಯಗಳೆಲ್ಲ ಪೂರ್ಣಗೊಳ್ಳಲಿವೆ. ನಿಮ್ಮ ನಿರ್ಲಕ್ಷ್ಯವು ದುಬಾರಿಯಾಗಬಹುದು. ಸ್ನೇಹಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸ್ತ್ರೀಯರು ವಿಶೇಷವಾಗಿ ಸಮಾಜದ ಪ್ರಮುಖ ಸ್ಥಾನವನ್ನು ಅಲಂಕರಿಸುವರು.
ಮೀನ ರಾಶಿ: ನಿಮ್ಮ ಕೆಲಸವು ನಿರೀಕ್ಷೆಗಿಂತ ಹೆಚ್ಚಿನ ಲಾಭವನ್ನು ನೀಡುತ್ತದೆ. ಕೃಷಿಯಲ್ಲಿ ಇಂದು ನಷ್ಟ. ಮಾನಿಸಕವಾಗಿ ಕುಗ್ಗುವ ಸಾಧ್ಯತೆ ಇದೆ. ದುರಾಸೆ ಪಡದೆ ಬಂದಿದ್ದನ್ನು ಸ್ವೀಕರಿಸಿ ದೊಡ್ಡವರಾಗುವಿರಿ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ಸಹಾಯವನ್ನು ಯಾವುದೇ ಮುಲಾಜಿಲ್ಲದೇ ಕೇಳುವಿರಿ. ನಿಮ್ಮಿಂದಾಗದ ಕಾರ್ಯವನ್ನು ಅನ್ಯರಿಂದ ಮಾಡಿಸುವಿರಿ.
ಲೋಹಿತ್ ಹೆಬ್ಬಾರ್ 8762924271 (what’s app only)
Published On - 1:05 am, Mon, 9 November 26




