
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಆಶ್ವಯುಜ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಹಸ್ತಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಸ್ವಾತಿ, ಯೋಗ : ವಿಷ್ಕಂಭ, ಕರಣ : ಕೌಲವ, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 01 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:39 – 09:08, ಯಮಗಂಡ ಕಾಲ 10:37 – 12:06, ಗುಳಿಕ ಕಾಲ 13:35 – 15:04
ಶರನ್ನವರಾತ್ರದ ಎರಡನೇ ದಿನ. ಜಗನ್ಮಾತೆಯ ಈ ಸುದಿನ ಎಲ್ಲರಿಗೂ ಶುಭವಾಗಲಿ. ಬ್ರಹ್ಮಚಾರಿಣಿಯಾಗಿ ಬಂದು ಸಕಲರ ಸಂಕಟವನ್ನೂ ಸಂಹರಿಸಿ, ಕ್ಷೇಮವನ್ನು ನೀಡಲಿ.
ಮೇಷ ರಾಶಿ: ಕಾನೂನಿನ ವಿಚಾರದಲ್ಲಿ ನಿಮಗೆ ಸಕಾರಾತ್ಮಕ ಬೆಳವಣಿಗೆಯು ಇರಲಿದೆ. ಮಕ್ಕಳ ಜೊತೆ ವಾಗ್ವಾದ ಮಾಡುವ ಸಂದರ್ಭವು ಬರಬಹುದು. ಪ್ರಾರಬ್ಧಕರ್ಮಗಳನ್ನು ಅನುಭವಿಸಿ ತೀರುವುದೇ ದಾರಿ. ಭವಿಷ್ಯದ ಬಗ್ಗೆ ಹತ್ತಾರು ಕನಸುಗಳು ಇರಲಿವೆ. ವಿದ್ಯಾರ್ಥಿಗಳು ಅಧ್ಯಯನಕ್ಕೆ ತೊಡಗುವುದು ಕಷ್ಟವಾದೀತು. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಹಲವಾರು ವರ್ಷದ ಕನಸಿಗೆ ಗರಿಬಂದಂತೆ ಆಗಬಹುದು.
ವೃಷಭ ರಾಶಿ: ವಿದ್ಯಾಭ್ಯಾಸವನ್ನು ಮುಂದುವರಿಸುವುದು ಕಷ್ಟವಾಗಬಹುದು. ನಿಮ್ಮ ಉದಾರ ಮತ್ತು ಬೆಂಬಲದ ಸ್ವಭಾವದಿಂದ, ಜನರು ನಿಮ್ಮ ಬಳಿ ಬಂದು ನಿಮ್ಮ ಕೆಲಸದಲ್ಲಿ ನೆರವಾಗುತ್ತಾರೆ. ನಿಮ್ಮ ತೊಂದರೆಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ಅಪರಿಚಿತರ ಜೊತೆ ಅಂತರದಿಂದ ಮಾತನಾಡಿ. ಕಲಿತ ವಿದ್ಯೆಯನ್ನು ಎಲ್ಲಿಯಾದರೂ ಬಳಸುವುದು ಸೂಕ್ತ. ನಿಮ್ಮದಾದ ವಾಹನವಿಲ್ಲದೇ ನೀವು ಬೇಸರಿಸುವಿರಿ. ದೂರದ ಊರಿಗೆ ಪ್ರವಾಸ ಹೋಗುವ ಇಚ್ಛೆ ಇದ್ದರೂ ಅದು ಆಗದು.
ಮಿಥುನ ರಾಶಿ: ನಿಮ್ಮ ಸಾಮರ್ಥ್ಯಗಳಿಂದ ಪ್ರತಿಯೊಬ್ಬರನ್ನೂ ಅಚ್ಚರಿಗೊಳಿಸುವಿರಿ. ನಿಮ್ಮ ಆದಾಯದ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವುದು ಬೇಡ. ಇದರಿಂದ ನಿಮ್ಮ ಆದಾಯಕ್ಕೆ ತೊಂದರೆ ಆಗುವ ಸಾಧ್ಯತೆ ಇದೆ. ನಿಮ್ಮ ತಮಾಷೆಗೂ ಒಂದು ಮಿತಿ ಇರಲಿ. ಉದ್ಯೋಗದ ಆರಂಭದ ದಿನಗಳು ನಿಮಗೆ ಕಷ್ಟ ಎಂದು ಅನ್ನಿಸಬಹುದು. ನಿಮ್ಮನ್ನು ಭೂಮಿಯ ಖರೀದಿಗೆ ಒತ್ತಾಯಿಸಬಹುದು. ಉದ್ಯಮದಲ್ಲಿ ಕ್ರಿಯಾಶೀಲತೆಯನ್ನು ಬಯಸುವಿರಿ.
ಕರ್ಕಾಟಕ ರಾಶಿ: ನಿಮಗೆ ಇದಮಿತ್ಥಂ ಎಂದು ಸರಿಯಾದ ನಿರ್ಧಾರವನ್ನು ತೆಗದುಕೊಳ್ಳಲು ನಿಮಗೆ ಆಗದು. ಒಂದು ಕಾರ್ಯಕ್ಕೆ ಹತ್ತಾರು ಆಲೋಚನೆಗಳು ಒಟ್ಟಿಗೇ ಬರುವ ಕಾರಣ ಹೀಗಾಗುವುದು. ದೈವಲೀಲೆಯ ಬಗ್ಗೆ ನಿಮಗೆ ನಂಬಿಕೆ ಹೆಚ್ಚಿರುವುದು. ಪರರಿಗೆ ಸಂತೋಷವನ್ನು ಕೊಡುವುದು ಪೂಜೆಯಷ್ಟೇ ಫಲ. ಹಠದ ಸ್ವಭಾವವನ್ನು ಮಕ್ಕಳೂ ಮುಂದುವರಿಸಬಹುದು. ನಿಮ್ಮ ಮೌನವು ಏನನ್ನೋ ಹೇಳುವುದು. ಸಮಾರಂಭಗಳಲ್ಲಿ ಬಂಧುಗಳು ನಿಮ್ಮನ್ನು ಭೇಟಿಯಾಗುವರು.
ಸಿಂಹ ರಾಶಿ: ಪರಿಮಳವಿರುವ ಹೂವನ್ನೂ ಯಾರೂ ಪರಿಚಯಿಸಬೇಕಿಲ್ಲ. ನೀವು ಪುರಸ್ಕಾರಗಳ ಕುರಿತು ಆಲೋಚನೆ ಮಾಡದೇ ಸತತವಾಗಿ ಕಠಿಣ ಪರಿಶ್ರಮಪಡುವಿರಿ. ಸಾಮಾಜಿಕ ಕಾರ್ಯದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲು ಪ್ರಯತ್ನಿಸುವಿರಿ. ಒಂದೇ ಶ್ರಮಕ್ಕೆ ಎರಡು ಫಲವನ್ನು ನೀವು ಪಡೆಯಲು ಬಯಸುವಿರಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಮಾತು ಸಂತೋಷವನ್ನು ಇಮ್ಮಡಿಗೊಳಿಸಬಹುದು.
ಕನ್ಯಾ ರಾಶಿ: ನಿಮ್ಮ ಸುತ್ತಲಿನ ಎಲ್ಲರೂ ನಿಮ್ಮ ಆಲೋಚನೆಗಳಿಗೆ ಪ್ರಶಂಸಿಸುವರು. ಯಾರನ್ನೂ ಪೂರ್ತಿಯಾಗಿ ತಿಳಿಯದೇ ಒಳಗೆ ತೆಗೆದುಕೊಳ್ಳುವುದು ಬೇಡ. ಅಪರಿಚಿತರು ಕೊಟ್ಟ ವಸ್ತುಗಳಿಂದ ನಿಮಗೆ ತೊಂದರೆ ಸಂಭವಿಸಬಹುದು. ಯಾರನ್ನೋ ಮೆಚ್ಚಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಒಂದಿಲ್ಲೊಂದು ಅವಕಾಶಗಳು ನಿಮ್ಮ ಪಾಲಿಗೆ ಸಿಗಲಿದೆ. ಮುಂದಾಳುತ್ವವನ್ನು ವಹಿಸಬೇಕಾಗಬಹುದು. ಯಾವ ವಿವರಗಳನ್ನೂ ಕೊಡಬೇಡಿ.
ತುಲಾ ರಾಶಿ: ಪರಸ್ಪರರ ಕಾರ್ಯವನ್ನು ಕಛೇರಿಯಲ್ಲಿ ಮಾಡಿ ಮುಗಿಸುವಿರಿ. ವಿಶ್ವಾಸ ನಿಮಗೆ ಸುಲಭವಾಗಿ ಗೊತ್ತಿಲ್ಲದ ದಾರಿಗಳಲ್ಲಿ ಸಂಚರಿಸಲು ನೆರವಾಗುತ್ತದೆ. ಭೂಮಿಯ ವ್ಯವಹಾರಸ್ಥರು ನಷ್ಟವನ್ನು ಅನುಭವಿಸಬೇಕಾದೀತು. ದುಸ್ಸಾಧ್ಯ ಎನಿಸಿದ್ದನ್ನು ಬಿಟ್ಟುಬಿಡಿವುದು ಒಳ್ಳೆಯದು. ಸಂಗಾತಿಯನ್ನು ನೀವು ಭೇಟಿಯಾಗಲು ಹೋಗುವಿರಿ. ಅವರ ಮೇಲೆ ಪೋಷಕ ಕಣ್ಣು ಇರಬೇಕಾದೀತು.
ವೃಶ್ಚಿಕ ರಾಶಿ: ನೀವು ಇಂದು ಯಾವುದೇ ಅವಕಾಶವನ್ನೂ ಬಿಡಬೇಡಿ. ಇಂದು ನಿಮ್ಮ ಆರ್ಥಿಕತೆಯ ಮಟ್ಟವು ಗೊತ್ತಾಗಲಿದೆ. ಬರುವ ಹಣವನ್ನು ನಿಮ್ಮ ಭವಿಷ್ಯದ ಸಂಪತ್ತಾಗಿ ಕೂಡಿ ಇಡುವಿರಿ. ಸಂಘ, ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಉತ್ತಮ ಅಭಿವೃದ್ಧಿಯನ್ನು ಪಡೆಯುವರು. ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳುವಿರಿ. ತಂದೆಯ ಮಾತು ನಿಮಗೆ ಸರಿ ಕಾಣಿಸದೇ ಇರುವುದು. ಕೃಷಿ ಚಟುವಟಿಕೆಯಲ್ಲಿ ಹಿನ್ನಡೆಯಾಗಲಿದೆ.
ಧನು ರಾಶಿ: ಇಂದು ನೀವು ಸಮಯವನ್ನು ಕಳೆಯಲು ಬೇರೆ ಬೇರೆ ದಾರಿಗಳನ್ನು ಹುಡುಕುವಿರಿ. ಒಂಟಿಯಾಗಿ ಇರುವುದು ನಿಮಗೆ ಕಷ್ಟವೆನಿಸುವುದು. ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವುದು ಹೆಚ್ಚು ಒಳ್ಳೆಯದು. ಹೊಸತನ್ನು ಕಲಿಯಬೇಕು ಎನ್ನುವ ಆಸೆಯು ಬೇಡವೆನಿಸಬಹುದು. ಅನಿರೀಕ್ಷಿತವಾಗಿ ಆರೋಗ್ಯದಲ್ಲಿ ವ್ಯತ್ಯಾಸವು ಆಗಿದ್ದು ನೀವು ಇದರಿಂದ ವಿಚಲಿತಗೊಳ್ಳುವಿರಿ. ನಿಮಗೆ ಸಿಕ್ಕ ಸಂಪತ್ತನ್ನು ಸದುಪಯೋಗ ಮಾಡುವತ್ತ ಗಮನವಿರಲಿ.
ಮಕರ ರಾಶಿ: ಮಕ್ಕಳ ವಿಚಾರದಲ್ಲಿ ನಿಮ್ಮ ಧೋರಣೆಯು ಬದಲಾಗುವುದು. ಮನೆಯಲ್ಲಿ ಯಾರ ಮೇಲೂ ಪಕ್ಷಪಾತ ಮಾಡುವುದು ಬೇಡ. ಕೆಲಸಕ್ಕಾಗಿ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸುವಿರಿ. ನಿಮ್ಮ ಅನನುಕೂಲದ ಸ್ಥಿತಿಗೆ ದೈವವು ಯಾರದೋ ಮೂಲಕ ಸಹಾಯವನ್ನು ಮಾಡಿಸುವುದು. ಯಾರನ್ನೂ ಒತ್ತಾಯಿಸದೇ ಕೆಲಸವನ್ನು ಮಾಡಿಸಿಕೊಳ್ಳಿ.
ಕುಂಭ ರಾಶಿ: ನೀವು ನೆಪವೊಡ್ಡಿ ಯಾವುದೇ ಕಾರ್ಯದಲ್ಲಿ ತೊಡಗಲಾರಿರಿ. ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರೂ ಅದು ಕೃತಕದಂತೆ ಅನ್ನಿಸಬಹುದು. ಒಂದೇ ವಿಷಯವು ಅನೇಕ ಬಾರಿ ಕೇಳಿ ಹಿಂಸೆಯಾಗುವುದು. ಶೀತಲ ಸಂಘರ್ಷವು ಸ್ಫೋಟವಾಗಬಹುದು. ನಿಮ್ಮ ಸತ್ಯವನ್ನು ನಿಮ್ಮವರು ನಂಬುವುದು ಕಷ್ಟವಾದೀತು. ಆರೋಗ್ಯದಲ್ಲಿ ಆಗುವ ಸಣ್ಣ ಸಣ್ಣ ವ್ಯತ್ಯಾಸವು ನಿಮಗೆ ಕಿರಿಕಿರಿ ಆಗಬಹುದು. ಕಾರ್ಯಕ್ಷೇತ್ರದಲ್ಲಿ, ನೀವು ಬಯಸಿದ ಕೆಲಸವನ್ನು ಮಾಡುವಿರಿ.
ಮೀನ ರಾಶಿ: ಇಂದು ನೀವು ಅನಗತ್ಯ ಸನ್ನಿವೇಶಗಳಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸಗಳನ್ನು ಒಪ್ಪಿಕೊಳ್ಳಿ. ಕಾರ್ಯದ ಸ್ಥಳವನ್ನು ಬದಲಾಯಿಸುವ ಸಾಧ್ಯತೆ ಇದೆ. ಮೂರನೇ ವ್ಯಕ್ತಿಗಳ ಮೂಲ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅನಪೇಕ್ಷಿತ ವಿಚಾರಗಳನ್ನು ಚರ್ಚಿಸುವುದು ನಿಮಗೆ ಇಷ್ಟವಾಗದು. ಅನಿವಾರ್ಯ ಕಾರಣದಿಂದ ಆಸ್ಪತ್ರೆಗೆ ಅಲೆದಾಡಬೇಕಾಗುವುದು.
ಲೋಹಿತ್ ಹೆಬ್ಬಾರ್ – 8762924271 (what’s app only)