Horoscope 10 December: ದಿನಭವಿಷ್ಯ, ನಿಮ್ಮ ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ-ಎಚ್ಚರ

ರಾಶಿ ಭವಿಷ್ಯ: ಇಂದಿನ (2023 ಡಿಸೆಂಬರ್​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope 10 December: ದಿನಭವಿಷ್ಯ, ನಿಮ್ಮ ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ-ಎಚ್ಚರ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 10, 2023 | 12:00 AM

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 10) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣಮ, ವಾರ: ಭಾನು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:38 ರಿಂದ 06:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:25 ರಿಂದ 01:50ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:14 ರಿಂದ 04:38ರ ವರೆಗೆ.

ಮೇಷ ರಾಶಿ : ನಿಮ್ಮ ನಿಯಮಿತ ವ್ಯವಹಾರವು ನಿಮ್ಮನ್ನು ಬಂಧಿಸಿಡುವುದು. ಅಕಸ್ಮಾತ್ ಆದ ಘಟನೆಗೆ ನಿಮಗೆ ಪ್ರತಿಕ್ರಿಯೆ ಕೊಡುವುದು ಅಸಾದ್ಯವಾಗಬಹುದು. ಮನಸ್ತಾಪದ ನಡೆವೆಯೂ ನೀವು ಕಾರ್ಯವನ್ನು ಬಹಳ ನಿಷ್ಠೆಯಿಂದ ಮಾಡುವಿರಿ. ಪ್ರಾಪಂಚಿಕ ಸುಖದ ಮೇಲೆ ಆಸಕ್ತಿಯು ಕಡಿಮೆ ಆದೀತು. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದೆ. ದ್ವೇಷಿಸುವವರನ್ನು ಇಷ್ಟಪಡುವಿರಿ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಮಾತನ್ನು ಕೇಳಿಲ್ಲ ಎಂದ ಮಾತ್ರಕ್ಕೆ ನಿಷ್ಠುರವಾಗಿ ಸಂಬಂಧವನ್ನು ಹಾಳುಮಾಡಿಕೊಳ್ಳುವುದು ಬೇಡ. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಿಯುಂಟುಮಾಡುವುದು. ಯಾರದೋ ಒತ್ತಡದಿಂದ ದಿನಚರಿಯನ್ನು ವ್ಯತ್ಯಾಸ ಮಾಡಿಕೊಳ್ಳಬೇಕಾಗುವುದು. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದು ಮನಸ್ಸಿಗೆ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಯಾವ ಸಂದರ್ಭವನ್ನೂ ಎದುರಿಸುವ ಮಾನಸಿಕತೆ ಇರಲಿದೆ. ಆಗಬೇಕಾಗಿರುವ ಕಾರ್ಯವನ್ನು ಮೊದಲು ನಿರ್ಧರಿಸಿಕೊಳ್ಳಿ.

ವೃಷಭ ರಾಶಿ : ನಿಮ್ಮ ಪಕ್ಷಪಾತ ಧೋರಣೆಯು ಇತರರಿಗೆ ಇಷ್ಟವಾಗದೇ ಹೋದೀತು. ಗೊತ್ತಿಲ್ಲದ ಕೆಲಸವನ್ನು ಮಾಡಿ ಕೈಸುಟ್ಟುಕೊಳ್ಳುವಿರಿ. ಯಾರಾದರೂ ನಿಮಗೆ ಮಾದರಿಯಾದಾರು. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ನಿಮ್ಮ ಗುರಿಗೆ ಹಾದಿಯು ಸ್ಪಷ್ಟವಾಗಿ ಇರದೇ ಹೋಗಬಹುದು. ಇಂದು ನೀವು ಮಾಡಲು ಹೊರಟ ಕಾರ್ಯವು ನಿರ್ವಿಘ್ನವಾಗಿ ಮುಗಿಯುವುದು. ನಿಮ್ಮ ಜಾಣ್ಮೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡಿ. ನಾನಾ ಕಾರಣಗಳಿಂದ ನಿಮ್ಮ ವ್ಯವಹಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದು. ಆತ್ಮೀಯರಿಂದ ನೀವು ಕೆಲವು ಸಲಹೆಯನ್ನು ಪಡೆಯುವಿರಿ. ಸಂಸಾರದ ಖರ್ಚನ್ನು ಸರಿದೂಗಿಸಿಕೊಳ್ಳಲು ಆಗದು. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದೇ ಹೋದೀತು.

ಮಿಥುನ ರಾಶಿ : ಪ್ರತಿಭೆಯನ್ನು ವ್ಯಕ್ತಪಡಿಸಲು ವೇದಿಕೆಯು ನಿಮಗೆ ಸಿಗಲಿದೆ. ವಿವಾಹಕ್ಕೆ ಬರುವ ಉತ್ತಮ ಸಂಬಂಧಗಳನ್ನು ನಿರಾಕರಿಸಲು ಮನಸ್ಸು ಮಾಡುವಿರಿ. ಸ್ನೇಹಿತರು ನಿಮ್ಮಿಂದ ಅಲ್ಪ ಧನಸಹಾಯವನ್ನು ನಿರೀಕ್ಷಿಸುವರು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಜಾಣತನದಿಂದ ಮಾಡಿಸಿಕೊಳ್ಳುವಿರಿ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನೀವು ಪ್ರಭಾವೀ ವ್ಯಕ್ತಿಗಳಂತೆ ತೋರುವಿರಿ. ಹೊಸ ಪಾಲುದಾರಿಕೆಗೆ ಪ್ರವೇಶಿಸಬಹುದು ನಿಮ್ಮ ಲಾಭವನ್ನು ಹೆಚ್ಚಿಸುವುದು. ನೀವು ಕೆಲಸಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದ್ದರೆ, ಪ್ರಯತ್ನ ಮುಂದುವರಿಯಲಿ. ಹಣದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಆಪ್ತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದದ ಕಾರಣ ಸಂತೋಷದ ಕ್ಷಣವನ್ನು ನಷ್ಟ ಮಾಡಿಕೊಳ್ಳುವಿರಿ.

ಕರ್ಕ ರಾಶಿ : ನಿಮ್ಮ ವಿಶ್ವಾಸಕ್ಕೆ ತೊಂದರೆಯಾಗಬಹುದು. ಸಂಗಾತಿಯ ಜೊತೆ ಸರಿ ತಪ್ಪುಗಳ ವಿವೇಚನೆಗೆ ಹೋಗುವುದು ಬೇಡ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ತಾಯಿಯ ಅನಾರೋಗ್ಯದಿಂದ ನಿಮಗೆ ಚಿಂತೆ ಕಾಡಬಹುದು. ಇನ್ನೊಬ್ಬರ ವಸ್ತುಗಳನ್ನು ಬಳಸಿಕೊಳ್ಳುವಿರಿ. ಕಲಾವಿದರು ಹೆಚ್ಚಿನ ಶ್ರಮದಿಂದ ಆದಾಯವನ್ನು ಗಳಿಸುವರು. ನಿಮ್ಮದಾದ ಗೌಪ್ಯ ಸಂಗತಿಗಳನ್ನು ಇತರರು ತಿಳಿದುಕೊಂಡಾರು. ಸಾಮಾಜಿಕ ವಲಯಗಳಲ್ಲಿ ಸ್ಥಾನಮಾನವು ಲಭ್ಯವಾಗುವುದು. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. ವಿವಾಹ ಸಂಬಂಧದಿಂದ ಕಿರಿಕಿರಿ ಆಗಬಹುದು. ಕಛೇರಿಯಲ್ಲಿ ಕೆಲಸವು ಮಂದಗತಿಯಲ್ಲಿ ಇರುವುದು.

ಸಿಂಹ ರಾಶಿ : ಕೆಲವು ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಲು ಸಾಧ್ಯವಾಗದೇ ಹೋಗಬಹುದು. ಮರೆತು ಅಥವಾ ಸಮಸ್ಯೆಯ ಜೊತೆಯೇ ಇರಬೇಕಾದೀತು. ನಿಮ್ಮ ಬಹುದಿನದ ವಿದೇಶ ಪ್ರಯಾಣದ ಕನಸು ಇಂದು ನನಸಾಗುವುದು. ನೇರ ಮಾತಿನಿಂದ ನಿಮ್ಮವರು ದೂರಾಗಬಹುದು. ಅನಿವಾರ್ಯವಾದ ಪ್ರಯಾಣವನ್ನು ಮಾಡುವುದು ಸೂಕ್ತ. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ಪ್ರೇಮಿಗಳಿಗೆ ಇಂದು ಶುಭವಾಗಿಲ್ಲ. ಸಂಗಾತಿಯ ಮಾತುಗಳು ನಿಮಗೆ ಬಲವನ್ನು ಕೊಡಬಹುದು. ಹುದ್ದೆಯಿಂದ ಕೆಳಗೆ ಹಾಕಲು ನೋಡಬಹದು. ಎಲ್ಲರ ಜೊತೆ ವಿನಾಕಾರಣ ಸಿಟ್ಟಾಗುವಿರಿ. ಮನೋಭಿಲಾಷೆಯನ್ನು ಸರಿಯಾದ ಜರ್ನರ ಜೊತೆ ಹೊರಹಾಕಿ.

ಕನ್ಯಾ ರಾಶಿ : ಇಂದು ಕುಟುಂಬ ಜೊತೆ ಕಾಲ ಕಳೆಯುವ ಅವಕಾಶವನ್ನು ಕಳೆದುಕೊಳ್ಳುವಿರಿ. ಮನಶ್ಚಾಂಚಲ್ಯಕ್ಕೆ ಸೂಕ್ತ ಕ್ರಮವನ್ನು ಇತರರಿಂದ ಪಡೆಯುವಿರಿ. ನಿರುದ್ಯೋಗಿಗಳಿಗೆ ಎಲ್ಲರಿಂದ ಮಾನಸಿಕ ಹಿಂಸೆ ಆಗಬಹುದು. ಏನಾದರೂ ಮಾಡಬೇಕು ಎಂಬ ಇಚ್ಛೆಯು ಅಧಿಕವಾಗುವುದು. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಎಲ್ಲ ಕಾರ್ಯಗಳಿಗೂ ಉತ್ಸಾಹ ಭಂಗವಾಗುವುದು. ಚೆನ್ನಾಗಿ ಯೋಚಿಸಿದ ಮಾಡಿದ ಕಾರ್ಯವು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುವುದು. ಯಾರ ಬಗ್ಗೆಯೂ ತಾರತಮ್ಯ ಭಾವವನ್ನು ತೋರಿಸುವುದು ಬೇಡ. ಆಸ್ತಿ ವ್ಯವಹಾರಗಳಿಂದ ನಿಮಗೆ ಲಾಭವು ಇರುವುದು. ಇತರರ ತಪ್ಪಿಗೆ ನಿಮ್ಮನ್ನು ಗುರಿಮಾಡುವರು. ಉದ್ಯೋಗಸ್ಥರು ಪ್ರಗತಿಯನ್ನು ಕಾಣುವರು. ಆರ್ಥಿಕ ವಿಚಾರದಲ್ಲಿ ಸಖ್ಯವು ಏರ್ಪಡುವುದು. ಕಛೇರಿಯ ಕೆಲಸಗಳು ಸಾಕೆನಿಸಬಹುದು. ಮಕ್ಕಳ ಜೊತೆ ಪ್ರೀತಿಯಿಂದ ಇರುವುದು ಒಳ್ಳೆಯದೇ.

ತುಲಾ ರಾಶಿ : ನಿಮ್ಮ ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಜೊತೆಗಾರರು ನಿಮ್ಮನ್ನು ನಗಣ್ಯ ಮಾಡಬಹುದು. ಎಲ್ಲರದ್ದೂ ಒಂದಾದರೆ ನಿಮ್ಮದೇ ಒಂದು ದಾರಿಯಾಗಲಿದೆ. ಉನ್ನತ ಸ್ಥಾನ ಪ್ರಾಪ್ತಿಯ ಸುದ್ದಿಯು ನಿಮಗೆ ಗೊತ್ತಾಗಲಿದೆ. ಬಿಟ್ಟು ಬಿಟ್ಟು ಬರುವ ಅನಾರೋಗ್ಯದಿಂದ ನಿಮಗೆ ಮಾನಸಿಕ ಹಿಂಸೆ ಆಗುವುದು. ಸಂಶೋಧನೆಗೆ ಮಾರ್ಗದರ್ಶನ ಸಿಗಲಿದೆ. ಪ್ರೀತಿಯಲ್ಲಿ ತೊಡಗಿರುವವವರು ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವಿರಿ. ಬೇಸರಕ್ಕೆ ಕಾರಣವನ್ನು ಹುಡುಕುತ್ತ ಇರುವುದಕ್ಕಿಂತ ಬೇರೆಯ ಕಾರ್ಯದಲ್ಲಿ ಮಗ್ನರಾಗಿ. ಬಹಳ ದಿನಗಳಿಂದ ನಿರೀಕ್ಷಿಸಿದ್ದ ಮಕ್ಕಳ ಪ್ರಗತಿಯು ಇಂದು ಸಫಲತೆಯನ್ನು ಕಾಣುವುದು. ನಿಮ್ಮ ನಂಬಿಕೆಗೆ ಆಪ್ತರಿಂದ ಘಾಸಿಯಾಗಬಹುದು. ನಿಮ್ಮ ವ್ಯಾವಹಾರಿಕ ಓಡಾಟವು ವ್ಯರ್ಥವಾದೀತು. ಸಾಲ ಮಾಡಲು ಇಷ್ಟವಿಲ್ಲದಿದ್ದರೂ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ : ನಿಮ್ಮ ಸಾಮರ್ಥ್ಯವು ಇತರರಿಗೆ ತೋರ್ಪಡಿಸುವಂತೆ ಮಾಡುವಿರಿ. ನಿಮಗೆ ಇಷ್ಟವಾಗದ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ಮಹಿಳೆಯರು ತಮ್ಮ ಕಾರ್ಯದಲ್ಲಿ ದಕ್ಷತೆಯನ್ನು ತೋರುವರು. ಶ್ರಮ ವಹಿಸಿ ಮಾಡಿದ ಕಾರ್ಯಕ್ಕೆ ಉತ್ತಮ ಫಲವು ಸಿಗಲಿದೆ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಕುಟುಂಬದ ಸದಸ್ಯರ ಜೊತೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವಿರಿ. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲಾರರು. ಅವರಿಂದ ಏನಾದರೂ ತೊಂದರೆ ಆದೀತು. ಅಪಾಯದ ಮುನ್ಸೂಚನೆ ಸಿಕ್ಕಾಗ ಅದನ್ನು ಉಪಾಯದಿಂದ ಸರಿಮಾಡಿಕೊಳ್ಳಲು ಪ್ರಯತ್ನಿಸಿ. ಕೆಲಸವನ್ನು ಮಾಡಿಸಿಕೊಳ್ಳಲು ನೀವು ಹೆಚ್ಚು ಸಮಯವನ್ನು ನೀಡುವಿರಿ. ಸ್ತ್ರೀಯರ ಸಹಕಾರ ಪಡೆದು ನೀವು ಕಛೇರಿಯ ಕೆಲಸವನ್ನು ಬೇಗ ಮಾಡುವಿರಿ.

ಧನು ರಾಶಿ : ಆರ್ಥಿಕತೆಯ ದೌರ್ಬಲ್ಯವು ನಿಮ್ಮ ಎಲ್ಲ ಬಲವನ್ನು ಕುಗ್ಗಿಸುವುದು. ಶುಭಸೂಚನೆಯನ್ನು ಅಲಕ್ಷಿಸಿ ಆಪತ್ತನ್ನು ತಂದುಕೊಳ್ಳುವಿರಿ. ನಿಮ್ಮ ರಹಸ್ಯದ ವಿಚಾರವನ್ನು ಇತರರು ತಿಳಿಯಲು ಬಯಸಬಹುದು. ಸಾಮಾಜಿಕ ವಲಯದಲ್ಲಿ ನಿಮ್ಮ ಹೆಸರು ಕೇಳಿ ಬರಬಹುದು. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಚರಾಸ್ತಿಯ ವ್ಯವಹಾರವನ್ನು ನೀವು ಜಾಣ್ಮೆಯಿಂದ ಮಾಡುವಿರಿ. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಪೂರ್ವ ತಯಾರಿ ಇಲ್ಲದೇ ಯಾವ ಕಾರ್ಯವನ್ನೂ ಮಾಡುವುದು ಸರಿಯಾಗದು. ಉದ್ಯಮವನ್ನು ಬೆಳೆಸುವ ಚಿಂತನೆ ಮಾಡುವಿರಿ. ಪ್ರಭಾವೀ ವ್ಯಕ್ತಿಗಳ ನಡೆಯನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಸಮಸ್ಯೆಗಳನ್ನು ನೀವು ಹಂಚಿಕೊಳ್ಳಲು ಹಿಂದೆ ಹೆಜ್ಜೆ ಹಾಕುವಿರಿ. ನಾಯಕತ್ವದ ಗುಣವನ್ನು ನೀವು ಗೊತ್ತಿಲ್ಲದಂತೆ ಬೆಳೆಸಿಕೊಳ್ಳುವಿರಿ. ನಿಮ್ಮ ಜೀವನದ ದಿನಚರಿಯನ್ನು ಬದಲಾಯಿಸಿಕೊಳ್ಳುವಿರಿ.

ಮಕರ ರಾಶಿ : ಪೂರ್ವನಿರ್ಧಾರಿತ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ಮಾಡುವಿರಿ. ನಿಮ್ಮ ಕ್ರಿಯಾತ್ಮಕತೆಯನ್ನು ಇತರರಿಗೂ ತೋರಿಸುವಿರಿ. ಸಾಮಾಜಿಕ ಕಾರ್ಯವು ನಿಮಗೆ ಖ್ಯಾತಿಯನ್ನು ತರಲಿದೆ. ಹಣದ ಹೂಡಿಕೆಗೆ ನಿಮಗೆ ಆಸಕ್ತಿಯು ಹೆಚ್ಚಿರಲಿದೆ. ಕುಟುಂಬದ ಮನಸ್ತಾಪವನ್ನು ಶಾಂತ ರೀತಿಯಿಂದ ಬಗೆಹರಿಸುವಿರಿ. ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಗುವುದು. ಇಂದು, ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು. ಅನಾರೋಗ್ಯದಿಂದ ಇಂದಿನ ಕಾರ್ಯಕ್ಕೆ ತಡೆಯುಂಟಾದೀತು. ನಿಮ್ಮ ಶತ್ರುಗಳಿಂದ ಸೃಷ್ಟಿಯಾಗುವ ಕೆಲವು ಸಣ್ಣ ಸಮಸ್ಯೆಯನ್ನು ನಗಣ್ಯ ಮಾಡುವುದು ಬೇಡ. ಅಧಿಕಾರಿಗಳ ಜೊತೆ ವ್ಯವಹರಿಸುವಾಗ ನೀವು ಜಾಗರೂಕರಾಗಿರಿ.

ಕುಂಭ ರಾಶಿ : ನಿಮ್ಮ ಹೊಸ ಬಯಕೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವಿರಿ. ಅದು ಅಪಹಾಸ್ಯವಾಗಬಹುದು. ಮನೆಯ ಕಾರ್ಯದಲ್ಲಿ ನೀವು ತನ್ಮಯತೆಯಿಂದ ಇರುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ಆರ್ಥಿಕತೆಯ ಕಾರಣದಿಂದ ಕುಟುಂಬದಲ್ಲಿ ಕೆಲವು ಮಾತುಗಳು ಬರಬಹುದು. ಮಾತಿನ ಮೇಲೆ ನಿಯಂತ್ರಣವಿಟ್ಟುಕೊಂಡು ಮಾತನಾಡಿ. ಉದ್ವೇಗಗೊಳ್ಳುವ ಅವಕಾಶವಿದ್ದರೂ ಸಂಯಮದಿಂದ ವರ್ತಿಸುವುದು ಸೂಕ್ತ. ಬಾಕಿ ಸಾಲದ ಮೊತ್ತವನ್ನು ತುಂಬಲು ಸ್ನೇಹಿಯರ ಸಹಾಯವನ್ನು ಕೇಳುವಿರಿ. ಸಹೋದರಿಯ ಜೊತೆ ಸಲುಗೆಯಿಂದ ಇರುವಿರಿ. ಸಕಾರಾತ್ಮಕ ಆಲೋಚನೆಯು ನಿಮಗೆ ನೆಮ್ಮದಿ ಕೊಡುವುದು. ಇನ್ನೊಬ್ಬರ ವಿಚಾರಕ್ಕೆ ನೀವು ಮೂಗು ತೂರಿಸುವುದು ಬೇಡ. ತಾಯಿಯಿಂದ ಬೈಗುಳ ಸಿಕ್ಕೀತು.

ಮೀನ ರಾಶಿ : ನಿಮ್ಮ ಶ್ರಮವನ್ನು ಕಂಡು ಎಂತಹವರಿಗೂ ಕನಿಕರ ಬಂದೀತು. ಇತರರಿಂದ ಸಿಗುವ ಪ್ರೀತಿಯು ನಿಮಗೆ ಉತ್ತೇಜನವನ್ನು ನೀಡುವುದು. ಮಾಡಬೇಕು ಎಂದುಕೊಂಡ ಕೆಲಸವು ನಿಮಗೆ ಸಮಾಧಾನ ತರದು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ಮಂಗಲ ಕಾರ್ಯವನ್ನು ಮಾಡಲು ನಿಮಗೆ ಮನಸ್ಸು ಇರುವುದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ಅತಿಯಾದ ವ್ಯಾಯಾಮದಿಂದ ದೇಹಕ್ಕೆ ತೊಂದರೆಯನ್ನು ತಂದುಕೊಳ್ಳುವಿರಿ. ಬಂಧುಗಳ ಒಡನಾಟದಿಂದ ನೋವನ್ನು ಕಳೆಯುವಿರಿ. ಯಾವುದೇ ಆತುರದ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರದಲ್ಲಿ ಇಂದು ಜಾಗರೂಕತೆ ಬೇಕು. ವಿವಾಹಕ್ಕೆ ಸಂಬಂಧಿಸಿದಂತೆ ಕುತೂಹಲವು ಇರಲಿದೆ. ನಿಮ್ಮ ಮಾತೇ ನಿಮಗೆ ಹಿಂದಿರುಗಿ ಬರಬಹುದು. ಹಳೆಯ ವಸ್ತುಗಳನ್ನು ಮಾರಾಟ ಮಾಡಬೇಕಾಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?