Horoscope: ರಾಶಿಭವಿಷ್ಯ, ಇಂದು ಈ ರಾಶಿಯವರ ಭಾವನೆಗೆ ಪೆಟ್ಟು ಬೀಳುವ ಸಾಧ್ಯತೆ ಇದೆ

ಈ ದಿನ ಯಾರಿಗೆ ಸೂಕ್ತ? ಧಾರ್ಮಿಕ ಕಾರ್ಯಕ್ರಮ ನಡೆಸಬಹುದೇ? ವೃತ್ತಿಯಲ್ಲಿ ಬದಲಾವಣೆಗಳು ಇವೆಯೇ ಎಂಬಿತ್ಯಾದಿ ಮಾಹಿತಿಗಳು ದಿನಭವಿಷ್ಯದಲ್ಲಿ ತಿಳಿದುಕೊಳ್ಳಬಹುದು. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 10) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ರಾಶಿಭವಿಷ್ಯ, ಇಂದು ಈ ರಾಶಿಯವರ ಭಾವನೆಗೆ ಪೆಟ್ಟು ಬೀಳುವ ಸಾಧ್ಯತೆ ಇದೆ
ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Dec 10, 2023 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 10) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣಮ, ವಾರ: ಭಾನು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 09:36 ರಿಂದ 11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:49 ರಿಂದ 03:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 06:47 ರಿಂದ 08:12ರ ವರೆಗೆ, ರಾಹು ಕಾಲ ಮಧ್ಯಾಹ್ನ 04:38 ರಿಂದ 06:03ರ ವರೆಗೆ.

ಸಿಂಹ ರಾಶಿ : ಕೆಲವು ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಲು ಸಾಧ್ಯವಾಗದೇ ಹೋಗಬಹುದು. ಮರೆತು ಅಥವಾ ಸಮಸ್ಯೆಯ ಜೊತೆಯೇ ಇರಬೇಕಾದೀತು. ನಿಮ್ಮ ಬಹುದಿನದ ವಿದೇಶ ಪ್ರಯಾಣದ ಕನಸು ಇಂದು ನನಸಾಗುವುದು. ನೇರ ಮಾತಿನಿಂದ ನಿಮ್ಮವರು ದೂರಾಗಬಹುದು. ಅನಿವಾರ್ಯವಾದ ಪ್ರಯಾಣವನ್ನು ಮಾಡುವುದು ಸೂಕ್ತ. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ಪ್ರೇಮಿಗಳಿಗೆ ಇಂದು ಶುಭವಾಗಿಲ್ಲ. ಸಂಗಾತಿಯ ಮಾತುಗಳು ನಿಮಗೆ ಬಲವನ್ನು ಕೊಡಬಹುದು. ಹುದ್ದೆಯಿಂದ ಕೆಳಗೆ ಹಾಕಲು ನೋಡಬಹದು. ಎಲ್ಲರ ಜೊತೆ ವಿನಾಕಾರಣ ಸಿಟ್ಟಾಗುವಿರಿ. ಮನೋಭಿಲಾಷೆಯನ್ನು ಸರಿಯಾದ ಜರ್ನರ ಜೊತೆ ಹೊರಹಾಕಿ.

ಕನ್ಯಾ ರಾಶಿ : ಇಂದು ಕುಟುಂಬ ಜೊತೆ ಕಾಲ ಕಳೆಯುವ ಅವಕಾಶವನ್ನು ಕಳೆದುಕೊಳ್ಳುವಿರಿ. ಮನಶ್ಚಾಂಚಲ್ಯಕ್ಕೆ ಸೂಕ್ತ ಕ್ರಮವನ್ನು ಇತರರಿಂದ ಪಡೆಯುವಿರಿ. ನಿರುದ್ಯೋಗಿಗಳಿಗೆ ಎಲ್ಲರಿಂದ ಮಾನಸಿಕ ಹಿಂಸೆ ಆಗಬಹುದು. ಏನಾದರೂ ಮಾಡಬೇಕು ಎಂಬ ಇಚ್ಛೆಯು ಅಧಿಕವಾಗುವುದು. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಎಲ್ಲ ಕಾರ್ಯಗಳಿಗೂ ಉತ್ಸಾಹ ಭಂಗವಾಗುವುದು. ಚೆನ್ನಾಗಿ ಯೋಚಿಸಿದ ಮಾಡಿದ ಕಾರ್ಯವು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುವುದು. ಯಾರ ಬಗ್ಗೆಯೂ ತಾರತಮ್ಯ ಭಾವವನ್ನು ತೋರಿಸುವುದು ಬೇಡ. ಆಸ್ತಿ ವ್ಯವಹಾರಗಳಿಂದ ನಿಮಗೆ ಲಾಭವು ಇರುವುದು. ಇತರರ ತಪ್ಪಿಗೆ ನಿಮ್ಮನ್ನು ಗುರಿಮಾಡುವರು. ಉದ್ಯೋಗಸ್ಥರು ಪ್ರಗತಿಯನ್ನು ಕಾಣುವರು. ಆರ್ಥಿಕ ವಿಚಾರದಲ್ಲಿ ಸಖ್ಯವು ಏರ್ಪಡುವುದು. ಕಛೇರಿಯ ಕೆಲಸಗಳು ಸಾಕೆನಿಸಬಹುದು. ಮಕ್ಕಳ ಜೊತೆ ಪ್ರೀತಿಯಿಂದ ಇರುವುದು ಒಳ್ಳೆಯದೇ.

ತುಲಾ ರಾಶಿ : ನಿಮ್ಮ ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಜೊತೆಗಾರರು ನಿಮ್ಮನ್ನು ನಗಣ್ಯ ಮಾಡಬಹುದು. ಎಲ್ಲರದ್ದೂ ಒಂದಾದರೆ ನಿಮ್ಮದೇ ಒಂದು ದಾರಿಯಾಗಲಿದೆ. ಉನ್ನತ ಸ್ಥಾನ ಪ್ರಾಪ್ತಿಯ ಸುದ್ದಿಯು ನಿಮಗೆ ಗೊತ್ತಾಗಲಿದೆ. ಬಿಟ್ಟು ಬಿಟ್ಟು ಬರುವ ಅನಾರೋಗ್ಯದಿಂದ ನಿಮಗೆ ಮಾನಸಿಕ ಹಿಂಸೆ ಆಗುವುದು. ಸಂಶೋಧನೆಗೆ ಮಾರ್ಗದರ್ಶನ ಸಿಗಲಿದೆ. ಪ್ರೀತಿಯಲ್ಲಿ ತೊಡಗಿರುವವವರು ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವಿರಿ. ಬೇಸರಕ್ಕೆ ಕಾರಣವನ್ನು ಹುಡುಕುತ್ತ ಇರುವುದಕ್ಕಿಂತ ಬೇರೆಯ ಕಾರ್ಯದಲ್ಲಿ ಮಗ್ನರಾಗಿ. ಬಹಳ ದಿನಗಳಿಂದ ನಿರೀಕ್ಷಿಸಿದ್ದ ಮಕ್ಕಳ ಪ್ರಗತಿಯು ಇಂದು ಸಫಲತೆಯನ್ನು ಕಾಣುವುದು. ನಿಮ್ಮ ನಂಬಿಕೆಗೆ ಆಪ್ತರಿಂದ ಘಾಸಿಯಾಗಬಹುದು. ನಿಮ್ಮ ವ್ಯಾವಹಾರಿಕ ಓಡಾಟವು ವ್ಯರ್ಥವಾದೀತು. ಸಾಲ ಮಾಡಲು ಇಷ್ಟವಿಲ್ಲದಿದ್ದರೂ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ : ನಿಮ್ಮ ಸಾಮರ್ಥ್ಯವು ಇತರರಿಗೆ ತೋರ್ಪಡಿಸುವಂತೆ ಮಾಡುವಿರಿ. ನಿಮಗೆ ಇಷ್ಟವಾಗದ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ಮಹಿಳೆಯರು ತಮ್ಮ ಕಾರ್ಯದಲ್ಲಿ ದಕ್ಷತೆಯನ್ನು ತೋರುವರು. ಶ್ರಮ ವಹಿಸಿ ಮಾಡಿದ ಕಾರ್ಯಕ್ಕೆ ಉತ್ತಮ ಫಲವು ಸಿಗಲಿದೆ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಕುಟುಂಬದ ಸದಸ್ಯರ ಜೊತೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವಿರಿ. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲಾರರು. ಅವರಿಂದ ಏನಾದರೂ ತೊಂದರೆ ಆದೀತು. ಅಪಾಯದ ಮುನ್ಸೂಚನೆ ಸಿಕ್ಕಾಗ ಅದನ್ನು ಉಪಾಯದಿಂದ ಸರಿಮಾಡಿಕೊಳ್ಳಲು ಪ್ರಯತ್ನಿಸಿ. ಕೆಲಸವನ್ನು ಮಾಡಿಸಿಕೊಳ್ಳಲು ನೀವು ಹೆಚ್ಚು ಸಮಯವನ್ನು ನೀಡುವಿರಿ. ಸ್ತ್ರೀಯರ ಸಹಕಾರ ಪಡೆದು ನೀವು ಕಛೇರಿಯ ಕೆಲಸವನ್ನು ಬೇಗ ಮಾಡುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್