AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಆಸಕ್ತಿಯಿಂದ‌ ಮಾಡುತ್ತಿರುವ ಕೆಲಸಕ್ಕೆ ವಿಘ್ನವು ಬರುವುದು

ವಿವಾಹವಾಗಲು ಇಚ್ಛಿಸುತ್ತಿರುವವರಿಗೆ ಈ ದಿನ ಸೂಕ್ತವೇ? ಧಾರ್ಮಿಕ ಕಾರ್ಯಕ್ರಮ ನಡೆಸಬಹುದೇ? ವೃತ್ತಿಯಲ್ಲಿ ಬದಲಾವಣೆಗಳು ಇವೆಯೇ ಎಂಬಿತ್ಯಾದಿ ಮಾಹಿತಿಗಳು ದಿನಭವಿಷ್ಯದಲ್ಲಿ ತಿಳಿದುಕೊಳ್ಳಬಹುದು. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 5) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಆಸಕ್ತಿಯಿಂದ‌ ಮಾಡುತ್ತಿರುವ ಕೆಲಸಕ್ಕೆ ವಿಘ್ನವು ಬರುವುದು
ಇಂದಿನ ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Dec 05, 2023 | 12:30 AM

ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 5) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ವಿಷ್ಕಂಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 44 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:37 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:34 ರಿಂದ 10:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:23 ರಿಂದ 01:48ರ ವರೆಗೆ.

ಸಿಂಹ ರಾಶಿ: ನಿಮ್ಮ ವಸ್ತುವೇ ಆದರೂ ಅದನ್ನು ಯೋಗ್ಯ ರೀತಿಯಲ್ಲಿ ಬಳಸಿ. ಮಿತಿ ಮೀರಿದ ಅನಾರೋಗ್ಯದಿಂದ ನಿಮಗೆ ಕಷ್ಟವಾಗಲು ಶುರುವಾದೀತು. ವೈದ್ಯ ವೃತ್ತಿಯಲ್ಲಿ ಒತ್ತಡವು ಅಧಿಕವಾಗಿ ಇರುವುದು. ನಿಮ್ಮನ್ನು ಅನಾದರ ಮಾಡಿದಂತೆ ಅತ್ತ ಕಡೆ ಹೋಗುವುದಿಲ್ಲ. ಸುಮ್ಮನೇ ಮೊಂಡು ವಾದಕ್ಕೆ ಇಳಿಯುವುದು ಬೇಡ. ಕಲಾವಿದರು ಹೆಚ್ಚಿನ ಅವಕಾಶಕ್ಕೆ ಪ್ರಯತ್ನ ಮಾಡುವರು. ಹೊಸ ಮನೆಯ ಖರೀದಿಯ ಯೋಚನೆ ಮಾಡುವಿರಿ. ಸಹೋದ್ಯೋಗಿಗಳ ಜೊತೆ ನಿಮ್ಮ ವರ್ತನೆಯು ದಿನದಂತೆ ಇರುವುದಿಲ್ಲ. ನಿಮ್ಮದಾದ ಕಾರ್ಯದಲ್ಲಿ ನೀವು ಮಗ್ನರಾಗುವುದು ಉತ್ತಮ. ಯಾರ ಬಗ್ಗೆಯೂ ಸುಮ್ಮನೇ ಮಾತನಾಡುವುದು ಬೇಡ. ವಿವಾಹ ಜೀವನಕ್ಕೆ ಒಗ್ಗಿಕೊಳ್ಳುವಿರಿ. ಹೊಸ ವಸ್ತುವಿನ ಬಳಕೆಯಿಂದ ನಿಮಗೆ ಸಂತೋಷವು ಸಿಗುವುದು. ನಿಮಗೆ ಹೂಡಿಕೆಯ ಬಗ್ಗೆ ಹೇಳಿ ಆಪ್ತರು ನಿಮ್ಮ ತಲೆಯನ್ನು ಕೆಡಿಸಬಹುದು.

ಕನ್ಯಾ ರಾಶಿ: ಆಸಕ್ತಿಯಿಂದ‌ ಮಾಡುತ್ತಿರುವ ಕೆಲಸಕ್ಕೆ ಮಧ್ಯದಲ್ಲಿ ವಿಘ್ನವು ಬರುವುದು. ಸರಳತೆಯನ್ನು ನೀವು ರೂಢಿಸಿಕೊಳ್ಳುವುದು ಉತ್ತಮ. ವಿವಾಹದ ವಿಚಾರಕ್ಕೆ ಮನೆಯಲ್ಲಿ ಶಾಂತಿಯು ಹಾಳಾಗಲಿದೆ. ಎಲ್ಲ ಚರಾಸ್ತಿಯನ್ನೂ ನೀವೇ ಪಡೆಯುವ ಹುನ್ನಾರ ನಡೆಸಬಹುದು. ಧಾರ್ಮಿಕ ಆಚರಣೆಯನ್ನು ವಿವೇಚನಾರಹಿತವಾಗಿ ಮಾಡುವಿರಿ. ಕಪಟಿಯ ಪಟ್ಟವೂ ನಿಮಗೆ ಸಿಗಬಹುದು. ನಿಮ್ಮ ಆದಾಯವನ್ನು ಎಲ್ಲಿಯಾದರೂ ಹೇಳಿಕೊಳ್ಳುವಿರಿ. ಕಛೇರಿಯಲ್ಲಿ ಆದ ತಪ್ಪಿನಿಂದ ಮೇಲಧಿಕಾರಿಗಳು ಎಚ್ಚರಿಕೆ ಕೊಡುವರು. ಸರ್ಕಾರಿ ಕಾರ್ಯವು ವಿಳಂಬವಾಗಬಹುದು. ‌ಒರಟು ಸ್ವಭಾವವನ್ನು ನೀವು ಕಡಿಮೆ ಮಾಡಿಕೊಳ್ಳಿ. ಬೇಡವೆಂದು ಬಿಟ್ಟರೂ ಕೆಲಸವು ಮಾತ್ರ ನಿಮ್ಮನ್ನು ಬಿಡದು. ತಾಯಿಯ ಪ್ರೀತಿಯು ನಿಮಗೆ ಉತ್ಸಾಹವನ್ನು ಕೊಡುವುದು.

ತುಲಾ ರಾಶಿ: ಆಗಬೇಕಾದ ಕಾರ್ಯಕ್ಕೆ ಜನರ ವಿಶ್ವಾಸವನ್ನು ಪಡೆಯುವಿರಿ. ನಿಮ್ಮ‌ ಮಾತು ವಿಶ್ವಾಸಕ್ಕೆ ಯೋಗ್ಯವಾದಂತೆ ಕಾಣಿಸುವುದು. ಭೂಮಿಯ ಖರೀದಿಯಲ್ಲಿ ಗೊಂದಲವು ಹೆಚ್ಚಿರಬಹುದು. ನಿಮ್ಮ ಭಾವನೆಗಳನ್ನು ನೀವೇ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುವಿರಿ. ಹಳೆಯ ನೋವುಗಳು ಮತ್ತೆ ಕಾಣಿಸಿಕೊಳ್ಳುವುದು. ಸ್ನೇಹಿತರು ನಿಮ್ಮ ಪ್ರೇಮಪ್ರಾರ್ಥನೆಯನ್ನು ಸ್ವೀಕರಿಸುವರು. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವ ಇಚ್ಛೆ ಇರುವುದು. ವೃತ್ತಿಯಲ್ಲಿ ಇಂದು ಆಡಿದ ಮಾತು ನಿಮ್ಮನ್ನು ವಿಚಲಿತಗೊಳಿಸಬಹುದು. ಇಂದಿನ ನಿಮ್ಮ ಕಾರ್ಯದಿಂದ ಮೆಚ್ಚುಗೆ ಸಿಗುವುದು. ಸಾಕಷ್ಟು ಕಿರಿಕಿರಿ ಇದ್ದರೂ ಅದನ್ನು ಲೆಕ್ಕಿಸದೇ ನಿಮ್ಮ ಕರ್ತವ್ಯದಲ್ಲಿ ನೀವು ನಿರತರಾಗುವಿರಿ. ಪ್ರಭಾವೀ ವ್ಯಕ್ತಿಗಳ ಸಹಕಾರದಿಂದ ನಿಮಗೆ ಜೀವನದ ಉತ್ತಮ‌ ಮಾರ್ಗವು ಕಾಣಿಸುವುದು. ಇಂದು ಯಾರನ್ನೂ ನೋಯಿಸಲು ಮನಸ್ಸಾಗದು. ಅಭದ್ರತೆಯು ಕಾಣಿಸಿಕೊಳ್ಳಬಹುದು.

ವೃಶ್ಚಿಕ ರಾಶಿ: ಕೋಪವನ್ನು ನಿಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಕಷ್ಟವಾದೀತು. ವಿವಾಹದ ದೋಷಗಳನ್ನು ದೈವಜ್ಞರಿಂದ ಪರಿಹರಿಸಿಕೊಳ್ಳಿ. ಉದ್ಯಮದಲ್ಲಿ ನೀವು ದಂಡವನ್ನು ತುಂಬಬೇಕಾದ ಸ್ಥಿತಿಯು ಬರಬಹುದು. ಇಂದು ವಿವಾಹದ ಮಾತುಕತೆಯನ್ನು ಮನೆಯಲ್ಲಿ ಆಡುವಿರಿ. ನಿಮ್ಮ ಪ್ರೇಮದ ವಿಚಾರವನ್ನು ತಾಯಿಯ ಬಳಿ ಹೇಳಿಕೊಳ್ಳುವಿರಿ. ನಿಮಗೆ ಇಂದು ಸಮಯವು ವ್ಯರ್ಥವಾದಂತೆ ತೋರುವುದು. ಧನದ ಹರಿವಿನಿಂದ ಅಹಂಕಾರವೂ ಬಂದೀತು. ಆಸ್ತಿಯನ್ನು ಮಾರಾಟ ಮಾಡಿ ಸಾಲವನ್ನು ತೀರಿಸಬೇಕಾಗಬಹುದು. ಫಲಾಪೇಕ್ಷೆ ಇಲ್ಲದೇ ಕಾರ್ಯದಲ್ಲಿ ತೊಡಗುವಿರಿ. ಹಿಂದೆ ಮುಂದೆ ಆಲೋಚಿಸದೇ ಧೈರ್ಯವನ್ನು ಮಾಡುವುದು ಬೇಡ. ಪ್ರಯಾಣದ ವಿಚಾರದಲ್ಲಿ ಇಂದು ಮನೆಯವರ ಮಾತಿನಂತೆ ನಡೆದುಕೊಳ್ಳಿ. ನಿಮ್ಮದಲ್ಲದ ವಿಷಯವೂ ನಿಮ್ಮನ್ನು ಕಾಡಬಹುದು. ನಿಮ್ಮ ಜೊತೆ ವೃತ್ತಿಯನ್ನು ನಿರ್ವಹಿಸುವವರು ನಿಮ್ಮ ಮಾತನ್ನು ಸಹಿಸಲಾರರು. ಸಂಗಾತಿಯು ದೂರ ಪ್ರಯಾಣ ಹೋಗಲು ಆಹ್ವಾನಿಸಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ