ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 07) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.
ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದಶಮಿ, ನಿತ್ಯನಕ್ಷತ್ರ: ಹಸ್ತಾ, ಯೋಗ: ಆಯುಷ್ಮಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:48 ರಿಂದ 03:13 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:46 ರಿಂದ 08:11ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:35 ರಿಂದ 10:59ರ ವರೆಗೆ.
ಸಿಂಹ ರಾಶಿ : ಬಂಧುಗಳು ನಿಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಆಡಬಹುದು. ಕೆಲವನ್ನು ನೀವು ಮರೆತು ನಡೆಯುವುದು ಒಳ್ಳೆಯದು. ವೃತ್ತಿಯಲ್ಲಿ ನಿಮಗೆ ಆಕಸ್ಮಿಕ ಪ್ರಶಂಸೆಯಿಂದ ಅಚ್ಚರಿಗೊಳ್ಳುವಿರಿ. ನಿಮ್ಮ ಗೌರವಕ್ಕೆ ಧಕ್ಕೆ ಬರುವ ಮಾತನ್ನು ನೀವು ಸಹಿಸಲಾರಿರಿ. ವಾಮಮಾರ್ಗದಿಂದ ಹಣವನ್ನು ಸಂಪಾದಿಸುವ ಮನಸ್ಸು ಇರಲಿದೆ. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು. ಮನೆಯಲ್ಲಿ ಅಶಾಂತಿಯ ವಾತಾವರಣವು ಸರಿಮಾಡಿಕೊಳ್ಳಿ. ಹಣಕಾಸಿನ ವ್ಯವಹಾರದಲ್ಲಿ ನೀವು ದಾಖಲೆಯನ್ನು ಇಟ್ಟುಕೊಳ್ಳಿ. ಬೇಗ ಸಿಟ್ಟು ಮಾಡಿಕೊಂಡರೂ ಕ್ಷಣ ಕಾಲದಲ್ಲಿ ಸರಿಯಾಗುವುದು. ತಾಯಿಯು ನಿಮಗೆ ಹಿತವಚನವನ್ನು ಹೇಳುವರು. ಆತ್ಮವಿಶ್ವಾಸದ ಕೊರತೆಯನ್ನು ಸ್ನೇಹಿತರು ತುಂಬುವರು. ಸಂಶೋಧಕರು ಒತ್ತಡದಲ್ಲಿ ಕಾರ್ಯವನ್ನು ಕಾರ್ಯವನ್ನು ಮಾಡುವರು.
ಕನ್ಯಾ ರಾಶಿ : ಅಪರಿಚಿತ ಸಂಪರ್ಕವು ಇಂದಾಗಲಿದೆ. ಯಾರನ್ನೋ ದೂಷಿಸಿ ನೀವು ದೊಡ್ಡವರಾಗುವುದು ಬೇಡ. ಮೌನ ವಹಿಸಿ, ಎಲ್ಲರೂ ಸಿಟ್ಟಾಗುವಂತೆ ಮಾಡುವಿರಿ. ಹಿರಿಯರು ನಿಮ್ಮ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ಸಾಲ ಕೊಟ್ಟವರ ಎದುರು ತಲೆ ಮೆರೆಸಿಕೊಂಡು ಓಡಾಡುವಿರಿ. ರಾಜಕೀಯವಾಗಿ ಹಿನ್ನಡೆಯಾಗಬಹುದು. ನಿಮ್ಮದಾದ ದ್ವೀಪದಲ್ಲಿ ನೀವಿರುವಿರಿ. ಹೊಸ ತಂತ್ರವನ್ನು ನೀವು ರೂಪಿಸಿಕೊಳ್ಳಬೇಕಾದೀತು. ಸಿಟ್ಟಾಗುವ ಸಂದರ್ಭದಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳಿ. ಹಳೆಯ ನೋವುಗಳು ನಿಮ್ಮನ್ನು ಕಾಡುವುಸು. ಶುಭ ಸುದ್ದಿಯ ನಿರೀಕ್ಷೆಯು ಇಂದು ಕೇವಲ ನಿರೀಕ್ಷೆಯಾಗಿಯೇ ಇರುವುದು. ಆನಾರೋಗ್ಯವನ್ನು ನಿರ್ಲಕ್ಷಿಸುವಿರಿ. ಮನಃಸ್ಥಿತಿಯು ಸರಿ ಇಲ್ಲದ ಕಾರಣ ಯಾವ ಕೆಲಸವನ್ನೂ ಖುಷಿಯಿಂದ ಮಾಡುವುದಿಲ್ಲ.
ತುಲಾ ರಾಶಿ : ದೇವರ ದರ್ಶನಕ್ಕೆ ಕುಟುಂಬದ ಜೊತೆ ಹೋಗುವ ಯೋಚನೆ ಮಾಡುವಿರಿ. ಹಿರಿಯರ ಬಗ್ಗೆ ಪ್ರೀತಿ ಬರುವುದು. ಅಧಿಕಾರ ತಪ್ಪುವ ಸಾಧ್ಯತೆ ಇದೆ. ಉದ್ಯೋಗವನ್ನು ಬಿಟ್ಟು ಭೂಮಿಯ ವ್ಯವಹಾರದಲ್ಲಿ ತೊಡಗಿಕೊಳ್ಳುವಿರಿ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ನಕಾರಾತ್ಮಕ ಚಿಂತನೆಯನ್ನು ಹೆಚ್ಚಿಸಲು ನಿಮ್ಮ ಸುತ್ತ ಅಂತಹ ವಾತಾವರಣವು ಇರುವುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ. ಮಕ್ಕಳಿಗಾಗಿ ಮಾಡಿದ ಖರ್ಚು ನಿಮಗೆ ಸಾರ್ಥಕ ಎನಿಸಬಹುದು. ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದು. ಮಹಿಳೆಯರು ಸಮಾರಂಭಗಳಿಗೆ ಮನೆಗೆ ಹೋಗುವ ಸಾಧ್ಯತೆ ಇದೆ. ಆತಂಕವನ್ನು ನೀವು ಸುಲಭವಾಗಿ ಎದುರಿಸುವಿರಿ.
ವೃಶ್ಚಿಕ ರಾಶಿ : ಧನಸಂಪಾದನೆಗೆಂದು ಹೋಗಿ ಧನನಷ್ಟವನ್ನು ಮಾಡಿಕೊಳ್ಳುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಮಕ್ಕಳಿಂದ ನಿಮಗೆ ಕೀರ್ತಿಯು ಪ್ರಾಪ್ತವಾಗುವುದು. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಅಧಿಕಾರವು ಸಿಗಬಹುದು. ಪರಿಚಿತರ ವಿವಾಹಕ್ಕೆ ಓಡಾಟ ಮಾಡಿ ಸಫಲರಾಗುವಿರಿ. ಹಲವಾರು ಅನುಭವವನ್ನು ಪಡೆದುಕೊಂಡೂ ಮತ್ತೆ ಅದೇ ತಪ್ಪನ್ನು ಮಾಡುವಿರಿ. ಇಂದು ಬಹು ದಿನಗಳ ಚಿಂತಿತ ಕಾರ್ಯವು ಫಲ ಕೊಡದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ ಹಣವನ್ನು ವ್ಯಯ ಮಾಡುವಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ. ಆಪ್ತರ ಬಗೆಗಿನ ಊಹೆಯು ವ್ಯತ್ಯಾಸವಾದೀತು. ವಾಹನವನ್ನು ಸರಿ ಮಾಡಿಸಲು ಹಣವು ಖರ್ಚಾಗಲಿದೆ. ಇಂದು ಸಂಗಾತಿಯ ಪ್ರೀತಿಯನ್ನು ನೀವು ಹೆಚ್ಚು ಅನುಭವಿಸುವಿರಿ. ನಿಮ್ಮ ಕಂಡು ಅಸೂಯೆ ಪಡುವವರಿಗೆ ಇನ್ನಷ್ಟು ತುಪ್ಪ ಸುರಿಯುವಿರಿ.