AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮ್ಮ ಅಪ್ರಬುದ್ಧವಾದ ಮಾತಿನಿಂದ ಸ್ನೇಹಿತರು ದೂರವಾಗುವರು

ವಿವಾಹವಾಗಲು ಇಚ್ಛಿಸುತ್ತಿರುವವರಿಗೆ ಈ ದಿನ ಸೂಕ್ತವೇ? ಧಾರ್ಮಿಕ ಕಾರ್ಯಕ್ರಮ ನಡೆಸಬಹುದೇ? ವೃತ್ತಿಯಲ್ಲಿ ಬದಲಾವಣೆಗಳು ಇವೆಯೇ ಎಂಬಿತ್ಯಾದಿ ಮಾಹಿತಿಗಳು ದಿನಭವಿಷ್ಯದಲ್ಲಿ ತಿಳಿದುಕೊಳ್ಳಬಹುದು. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 08) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ನಿಮ್ಮ ಅಪ್ರಬುದ್ಧವಾದ ಮಾತಿನಿಂದ ಸ್ನೇಹಿತರು ದೂರವಾಗುವರು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 08, 2023 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 08) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಸೌಭಾಗ್ಯ​, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 46 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:59 ರಿಂದ 12:24 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:13 ರಿಂದ ಸಂಜೆ 04:38ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:11 ರಿಂದ 09:36ರ ವರೆಗೆ.

ಸಿಂಹ ರಾಶಿ : ವಿಶ್ವಾಸಘಾತದಿಂದ ನೀವು ಮೌನವಹಿಸುವಿರಿ. ವಿದೇಶದಲ್ಲಿ ಇರುವವರು ಗೊಂದಲದಲ್ಲಿ ಇರಬಹುದು‌. ವ್ಯವಹಾರಗಳ ವಿಷಯದಲ್ಲಿ ನಿಮ್ಮನ್ನು ಅದೃಷ್ಟವಂತರನ್ನಾಗಿ ಮಾಡುತ್ತದೆ. ನೀವು ಜನಪ್ರಿಯತೆಯನ್ನು ಗಳಿಸುವಿರಿ. ಪ್ರೇಮಿಗಳಿಗೆ ಈ ಸಮಯವು ಶುಭವಲ್ಲ. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಾಣಿಸುವುದು.‌ ನಿಮ್ಮನ್ನು ಸ್ಥಾನದಿಂದ‌ ಕೆಳಗೆ ಹಾಕಲು ನೋಡಬಹುದು. ಸಿಟ್ಟಿಗೆ ಕಾರಣವಿಲ್ಲದಿದ್ದರೂ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮಗೆ ನಾನಾ ರೀತಿಯ ಸೌಲಭ್ಯಗಳು ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನವನ್ನು ಅನ್ಯರು ಆಕ್ರಮಿಸಿಕೊಳ್ಳಬಹುದು. ಚೋರಭೀತಿಯು ನಿಮಗೆ ಆತಂಕಪಡುವಿರಿ. ಭೂಮಿಯ ವ್ಯವಹಾರದಿಂದ ಸಂಬಂಧಗಳು ಹಾಳಾಗುವುದು.

ಕನ್ಯಾ ರಾಶಿ : ನಿಮ್ಮ ಅಪ್ರಬುದ್ಧವಾದ ಮಾತಿನಿಂದ ಸ್ನೇಹಿತರು ದೂರವಾಗುವರು. ಮಹಿಳೆಯರ ಮೇಲೆ‌ ಅಪವಾದ ಬರುವ ಸಾಧ್ಯತೆ ಇದೆ. ಇಂದು ನೀವು ಏನೇ ಮಾಡಿದರೂ ಉತ್ಸಾಹದಿಂದ ಮಾಡುವಿರಿ. ಶ್ರದ್ಧೆಯೂ ನಿಮ್ಮಲ್ಲಿ ಅತಿಮುಖ್ಯವಾಗಿ ಕಾಣಿಸಿಕೊಳ್ಳುವುದು. ಚೆನ್ನಾಗಿ ಯೋಚಿಸಿದ ನಿರ್ಧಾರಗಳು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಆಸ್ತಿ ವ್ಯವಹಾರಗಳು ನಿಮಗೆ ಲಾಭವನ್ನು ನೀಡುವುದು. ಉದ್ವೇಗಕ್ಕೆ ಸಿಕ್ಕಿ ನಿಮ್ಮ ವರ್ತನೆಯು ಎಲ್ಲರೆದು ಹಾಸ್ಯಕ್ಕೆ ಒಳಗಾದೀತು. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ. ದೈವದ ಬಗ್ಗೆ ಭಕ್ತಿಯ ಕೊರತೆ ಇರಲಿದೆ.

ತುಲಾ ರಾಶಿ : ಆಪ್ತರು ನಿಮಗೆ ಸಹಾಯಕ್ಕೆ ಬಾರದೇ ಇರಬಹುದು. ಅನ್ಯರ ಸಮಸ್ಯೆಗಳನ್ನು ಸುಲಭವಾಗಿ ಪರಿಹಾರ ಮಾಡುವಿರಿ. ವಿವಾಹದ ಚಿಂತೆಯು ದೂರಗುವುದು. ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಭವಿಷ್ಯಕ್ಕಾಗಿ ತಮ್ಮ ಮಾರ್ಗವನ್ನು ಪರಿಶೀಲಿಸಿಕೊಳ್ಳಿ. ಪ್ರೇಮ ವ್ಯವಹಾರಗಳಲ್ಲಿ ತೊಡಗಿರುವ ಜನರು ತಮ್ಮ ಸಂಗಾತಿಯ ಭಾವನೆಗಳನ್ನು ಬೆಂಬಲಿಸುವರು. ಸಾಲದಿಂದ ನಿಮ್ಮ ಅಗತ್ಯತೆಯನ್ನು ಪೂರೈಸಿಕೊಳ್ಳುವಿರಿ. ಉದ್ಯೋಗಾಕಾಂಕ್ಷಿಗಳು ಯಶಸ್ವಿಯಾಗಲು ಹೆಚ್ಚುವರಿ ಪ್ರಯತ್ನಗಳನ್ನು ಮಾಡಬೇಕು. ಮಕ್ಕಳ ಪ್ರಗತಿಯನ್ನು ನೀವು ನಿರೀಕ್ಷಿಸಿದ್ದು ಇಂದು ಸಾಫಲ್ಯವಾಗುವುದು. ಅತಿಯಾದ ವಿಶ್ವಾಸದಿಂದ ವಂಚನೆಯಾಗಲಿದೆ. ವ್ಯಾಯಾಮದ ಮೂಲಕ ನಿಮ್ಮ ದುರ್ಬಲ ದೇಹವನ್ನು ಗಟ್ಟಿ ಮಾಡಿಕೊಳ್ಳುವಿರಿ. ಅದೃಷ್ಟವನ್ನು ನಂಬಿ ನಿಮ್ಮ ಪ್ರಯತ್ನವು ಇಲ್ಲದೆಯೂ ಇರಬಹುದು. ಹೋಲಿಕೆ ಮಾಡಿಕೊಂಡು ಸಂಕಟಪಡುವಿರಿ.

ವೃಶ್ಚಿಕ ರಾಶಿ : ನಿಮಗೆ ಆಗಬೇಕಾದ ಕೆಲಸಕ್ಕೆ ಅಧಿಕಾರಿಗಳ‌ ಜೊತೆ ಮಾತನಾಡಿ.‌ ಆರೋಗ್ಯಕ್ಕಾಗಿ ಸೇವಿಸದ ಔಷಧವು ದುಷ್ಪರಿಣಾವನ್ನು ಉಂಟುಮಾಡೀತು. ನಿಮ್ಮ ಬಯಕೆಯು ಪೂರ್ಣವಾಗುವ ಸಾಧ್ಯತೆ ಹೆಚ್ಚು. ಅಪರಿಚಿತ ವರ್ತನೆಯು ನಿಮಗೆ ಗೊತ್ತಿಲ್ಲದೇ ಕಷ್ಟವಾದೀತು. ಇಂದು ನೀವು ಹಠಮಾರಿಯಂತೆ ತೋರುವಿರಿ. ನೀವು ಕಷ್ಟಕರ ಸಂದರ್ಭಗಳಲ್ಲಿ ಸ್ವಲ್ಪ ತಾಳ್ಮೆಯಿಂದ ವರ್ತಿಸಿ. ಆದಷ್ಟು ವಾದಗಳಿಂದ ದೂರವಿರಿ. ನಿಮ್ಮ ಕುಟುಂಬದ ಸದಸ್ಯರು ತೀರ್ಥಯಾತ್ರೆಗೆ ಹೋಗಬಹುದು. ಕೆಲಸಗಳನ್ನು ಮರೆತುಕೊಳ್ಳುವಿರಿ. ನೀವು ಜೀವನ ಸಂಗಾತಿಯ ಬೆಂಬಲದಿಂದ ಖುಷಿಪಡುವಿರಿ. ಆರ್ಥಿಕ ದೃಷ್ಟಿಯಿಂದ ಈ ದಿನವು ಉತ್ತಮವಲ್ಲ. ನಿಮಗೆ ಸ್ನೇಹಿತರಿಂದ ಧನಸಹಾಯವಾಗುವುದು. ಪ್ರಯಾಣಕ್ಕೆ ಇಂದು ಅನುಕೂಲವಲ್ಲ. ಕೆಲಸಗಳನ್ನು ಮಾಡಿಕೊಡಲು ನಿಮಗೆ ಹಣವನ್ನು ನೀಡುವರು. ಕಲಾವಿದರು ಹೆಚ್ಚಿನ ಆದಾಯವನ್ನು ಮಾಡಿಕೊಳ್ಳುವರು. ಸ್ಪರ್ಧೆಯಲ್ಲಿ ನಿಮ್ಮದೇ ಮೇಲುಗೈ ಆಗಲಿದೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು