ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 09) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣಮ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:36 ರಿಂದ 11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:49 ರಿಂದ 03:14ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:47 ರಿಂದ 08:12ರ ವರೆಗೆ.
ಸಿಂಹ ರಾಶಿ : ನಿಮ್ಮ ತಪ್ಪಿನಿಂದ ಆದಾಯದ ಮಾರ್ಗವು ತಪ್ಪಿಹೋಗುವುದು. ಯಾರ ಮಾತನ್ನೂ ಅನಾದರ ಮಾಡುವುದು ಬೇಡ. ನಿಮ್ಮ ಯೋಚನೆಯ ಕ್ರಮವನ್ನು ಬದಲಿಸಿಕೊಳ್ಳಲು ಸೂಕ್ತ. ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು. ನೇರ ನಡೆಗೆ ನೀವು ಪ್ರಸಿದ್ಧರಾಗಿರುವಿರಿ. ಸಾಲದಿಂದ ಮುಕ್ತರಾಗಲು ನಿಮಗೆ ಅನುಕೂಲವಾಗುವುದು. ತಾಯಿಯ ವಾತ್ಸಲ್ಯವು ಸಿಗುವುದು. ಅಸೂಯೆಯಿಂದ ನಿಮ್ಮ ಇತರ ಕೆಲಸಗಳನ್ನು ಹಾಳುಮಾಡಿಕೊಳ್ಳುವಿರಿ. ಬರುವ ಹಣವನ್ನು ನೀವು ತದೇಕ ಚಿತ್ತದಿಂದ ನಿರೀಕ್ಷಿಸಬಹುದು. ಸ್ನೇಹಿತರ ಸಹಾಯದಿಂದ ನಿಮಗೆ ಬಲವು ಬರುವುದು. ನಿಮ್ಮವರನ್ನು ಒಬ್ಬೊಬ್ಬರನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ದೂರದ ಬಂಧುಗಳಿಂದ ಸಹಾಯವು ಸಿಗಬಹುದು. ದಾಂಪತ್ಯದಲ್ಲಿ ಮಧುರ ಕ್ಷಣಗಳಿಂದ ಖುಷಿಯಾಗಲಿದೆ. ಎಲ್ಲವನ್ನೂ ತಿಳಿದುಕೊಂಡರೂ ಹಿಂದೆ ಸರಿಯುವಿರಿ.
ಕನ್ಯಾ ರಾಶಿ : ನಿಮ್ಮ ಇಂದಿನ ಮಾನಸಿಕ ಸ್ಥಿತಿಯನ್ನು ಹೇಳಿಕೊಳ್ಳಲಾಗದೇ ಕಷ್ಟಪಡುವಿರಿ. ಸ್ತ್ರೀಯರು ಒತ್ತಡವನ್ನು ಇನ್ನೊಬ್ಬರಿಗೆ ಹಾಕಿ ನಿಶ್ಚಿಂತರಾಗುವಿರಿ. ಕಷ್ಟಗಳ ನಿವಾರಣೆಗೆ ದೈವಕ್ಕೆ ಶರಣಾಗುವುದು ಉತ್ತಮ. ನಿಮ್ಮ ಸಮಾಜಮುಖೀ ಕಾರ್ಯಗಳಿಗೆ ಕುಟುಂಬದ ಬೆಂಬಲವು ಸಿಗುವುದು. ಬಂಧುಗಳಿಂದ ನಿಮಗೆ ಇಂದು ಆಲಸ್ಯದ ಪಟ್ಟವು ಸಿಗಬಹುದು. ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡಬಹುದು. ಸಂಗಾತಿಯನ್ನು ದೂರ ಮಾಡಿಕೊಂಡು ಮನೆಯಲ್ಲಿ ಕಷ್ಟವಾದೀತು. ನಿಮ್ಮ ಗುರಿಯಾಗಿಸಿಕೊಂಡು ಸಹೋದ್ಯೋಗಿಗಳು ಕೆಲಸವನ್ನು ಮಾಡುವರು. ಕೈಗೆ ಸಿಕ್ಕ ಭೂಮಿಯು ತಪ್ಪಿ ಹೋಗಬಹುದು. ನಿಮ್ಮ ಮಾತನಾಡುವ ಸ್ವಭಾವವು ಇತರರಿಗೆ ಕಿರಿಕಿರಿ ಉಂಟಾದೀತು. ಮಾತು ಸರಳವಾಗಿಬಿರಲಿ. ಉನ್ನತ ವ್ಯಾಸಂಗಕ್ಕಾಗಿ ನೀವು ಸ್ನೇಹಿತನ ಜೊತೆ ತೆರಳುವಿರಿ. ಸ್ಥಾನಚ್ಯುತಿಯ ಭಯವು ಇರುವುದು. ಮನೆಯ ಪರಿಸ್ಥಿತಿಯನ್ನು ನೆನೆದು ಸಂಕಟವಾಗುವುದು.
ತುಲಾ ರಾಶಿ : ಸಹೋದರರ ನಡುವೆ ಬರುವ ಭಿನ್ನಾಭಿಪ್ರಾಯವನ್ನು ನೀವು ಮುಂದುವರಿಸದೇ ಅಲ್ಲಿಯೇ ನಿಲ್ಲಿಸಿ. ವ್ಯಾಪಾರದಲ್ಲಿ ಸ್ತ್ರೀಯರ ಸಹಾಯದಿಂದ ಲಾಭವನ್ನು ಪಡೆಯುವಿರಿ. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಸಣ್ಣ ವಿಚಾರಗಳಿಗೂ ಕೋಪ ಮಾಡಿಕೊಳ್ಳುವಿರಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಅಧಿಕಾರಿಗಳು ಹೆಚ್ಚು ಒತ್ತಡದಿಂದ ಇರುವರು. ವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾತುಗಳು ನಿಖರವಾಗಿ ಇರಲಿ. ಖರ್ಚಿನ ನಿಯಂತ್ರಣವನ್ನು ಮಾಡುವುದು ಕಷ್ಟವಾದೀತು. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ನಿಯಮಗಳನ್ನು ಹಾಕಿಕೊಳ್ಳುವುದು ಉತ್ತಮ. ಸಹೋದ್ಯೋಗಿಗಳ ಜೊತೆ ಸಲುಗೆಯಿಂದ ಇರುವಿರಿ. ನಿಮ್ಮ ಕಾರ್ಯಗಳೇ ನಿಮಗೆ ಆಶ್ಚರ್ಯವನ್ನು ಉಂಟುಮಾಡೀತು. ಅಧಿಕಲಾಭಕ್ಕಾಗಿ ಏನನ್ನಾದರೂ ಮಾಡಲು ಹೋಗುವುದು ಬೇಡ.
ವೃಶ್ಚಿಕ ರಾಶಿ : ಅಪರಿಚಿತ ಪ್ರದೇಶಕ್ಕೆ ಉದ್ಯೋಗದ ಕಾರಣಕ್ಕೆ ಹೋಗುವಿರಿ. ಆಸ್ತಿಯ ಕುರಿತು ದೂರುಗಳು ಬರಬಹುದು. ಅಧಿಕ ಹೂಡಿಕೆಯನ್ನು ಅನಿವಾರ್ಯವಾಗಿ ಮಾಡಬೇಕಾದೀತು. ಉದ್ಯಮದ ಬೆಳವಣಿಗೆಗೆ ಉತ್ತಮ ಅವಕಾಶವನ್ನು ಕಾಯುತ್ತಿರುವಿರಿ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಏನೂ ಲಾಭವಿಲ್ಲದೇ ಪ್ರಯಾಣವು ನಿಮಗೆ ಬೇಸರ ಎನಿಸುವುದು. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು. ನಿಮ್ಮ ಪಾಲಿನದ್ದಷ್ಟನ್ನು ಜೋಪಾನವಾಗಿ ಇರಿಸಿಕೊಳ್ಳಿ. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನೌಕರರು ಒಪ್ಪುವುದಿಲ್ಲ. ಪ್ರಯಾಣದ ಆಯಾಸವನ್ನು ಪರಿಹರಿಸಿಕೊಳ್ಖುವುದು ನಿಮಗೆ ಕಷ್ಟವಾದೀತು. ವಿವಾಹದ ಒಪ್ಪಂದವು ಮುರಿದು ಹೋಗುವ ಸಾಧ್ಯತೆ ಇದೆ.