Rashi Bhavishya, 13 Feb: ದಿನಭವಿಷ್ಯ; ಮಾತು ಕಡಿಮೆ ಇದ್ದಷ್ಟು ಒಳ್ಳೆಯದು, ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು
ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ (ಫೆಬ್ರವರಿ 13) ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ರೇವತೀ, ಯೋಗ : ಸಿದ್ಧ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 58 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 36 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:41 ರಿಂದ 05:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:53 ರಿಂದ 11:20ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:47 ರಿಂದ 02:14ರ ವರೆಗೆ.
ಮೇಷ ರಾಶಿ: ಯಾವುದಾದರೂ ದುರ್ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಮಾಡದೇ ಉಳಿದ ಕೆಲಸ ಕಾರ್ಯಗಳತ್ತ ಗಮನಹರಿಸಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಮನೆಯ ಧಾರ್ಮಿಕ ಕಾರ್ಯಗಳನ್ನು ಕಡಿಮೆ ಖರ್ಚಿನಲ್ಲಿ ಮಾಡಬೇಕು ಎಂದುಕೊಂಡರೂ ಅದು ಅಸಾಧ್ಯ ಎನಿಸಬಹುದು. ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ಹಿತಶತ್ರುಗಳನ್ನು ಅರಿಯುವಲ್ಲಿ ನಿಮಗೆ ಸೋಲಾಗುವುದು. ದೌರ್ಬಲ್ಯವನ್ನು ಹೇಳಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ. ವಿಳಂಬವಾಗಿ ಬರುತ್ತದೆ ಎಂದುಕೊಂಡ ನಿಮ್ಮ ಹಣವು ಬೇಗ ಬರಬಹುದು. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು.
ವೃಷಭ ರಾಶಿ: ಇಂದು ನಿಮಗೆ ಹಣಕಾಸಿನ ಹರಿವು ಹೆಚ್ಚಾಗುವುದರ ಜೊತೆಗೆ ಆತಂಕವೂ ಇರುವುದು. ಕೊಟ್ಟ ಸಾಲ ಮರಳಿಬರುವ ಆಸೆಯನ್ನು ಬಿಡುವಿರಿ. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಮೋಸ ಹೋಗುವ ಸಾಧ್ಯತೆ ಇರುತ್ತದೆ. ಜಾಗರೂಕರಾಗಿರಿ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ನೀವು ಗಣ್ಯರೊಂದಿಗೆ ಇಂದಿನ ಒಡನಾಡವಿರಲಿದೆ. ವಿವಾಹಕ್ಕೆ ಸಂಬಂಧಿಸಿದ ಕಟು ಮಾತುಗಳು ಕೇಳಿಬರಬಹುದು. ನಕಾರಾತ್ಮಕ ವಿಚಾರಗಳ ನಡೆಯೂ ನೀವು ಬಲವಾಗಿದ್ದರೆ ಅದು ವಿದ್ಯೆಯ ಕಾರಣದಿಂದ. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಬಂಧುವನ್ನೇ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ನಿಮಗೆ ನಂಬಿಕೆ ಕಡಮೆ ಆಗುವುದು. ಸಂಬಂಧದಲ್ಲಿ ಹಣಕಾಸಿನ ವ್ಯವಹಾರವನ್ನು ಇಟ್ಟುಕೊಳ್ಳಬೇಡಿ. ಯಾರಾದರೂ ಧನಸಹಾಯವನ್ನು ನಿಮ್ಮ ಬಳಿ ಕೇಳಬಹುದು.
ಮಿಥುನ ರಾಶಿ: ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಹೋಗಿ ಮುಗ್ಗರಿಸುವಿರಿ. ಸಹೋದರರಿಂದ ನಿಮಗೆ ಯೋಗ್ಯ ಸಲಹೆಯು ಸಿಗಬಹುದು. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಉತ್ತಮವಾದ ಯೋಜನೆಗಳನ್ನು ರೂಪಿಸಿ. ಪ್ರೇಮ ಅಂಕುರಿಸುವ ಸಾಧ್ಯತೆ ಇದೆ. ನೀರೆರೆದರೆ ಫಲಿಸಲೂ ಬಹುದು. ನಿಮ್ಮ ಸಂಗಾತಿಯು ನಿಮಗೆ ಅನುಕೂಲವನ್ನು ಕಲ್ಪಿಸುವವಳೇ ಆಗಿದ್ದಾಳೆ. ಅಭಿವೃದ್ಧಿಗೆ ಅವಕಾಶವಿದ್ದರೂ ನಿಮಗೆ ಹಿನ್ನಡೆಯಂತೆ ಎಲ್ಲವೂ ಭಾಸವಾಗುವುದು. ಶ್ರಮಕ್ಕೆ ತಕ್ಕ ಫಲವು ಲಭಿಸಿಲ್ಲ ಎಂದು ನಿಮ್ಮ ಮನಸ್ಸಿಗೆ ಗಾಢವಾಗಿ ತಿಳಿಯುವುದು. ಅತಿಯಾಗಿ ಯಾವುದನ್ನು ಮಾಡಲು ಹೋಗುವುದು ಬೇಡ. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ. ನಿಮ್ಮ ತಮಾಷೆಯು ಇಷ್ಟವಾಗದೇ ಇರಬಹುದು. ಸಂಗಾತಿಯ ಮನೋಭಾವವು ನಿಮಗೆ ಇಂದು ಸರಿ ಹೊಂದದು. ಸಮಯಕ್ಕೆ ಯಾವುದನ್ನೂ ಸರಿಯಗಿ ಮಾಡಲಾಗದು.
ಕಟಕ ರಾಶಿ: ಇಂದು ನಿಮಗೆ ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಸಮಯವನ್ನು ತೆಗದುಕೊಳ್ಳುವಿರಿ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ. ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ಕಳ್ಳತನದ ಆರೋಪವನ್ನು ಎದುರಿಸಬೇಕಾಗಬಹುದು. ನಿಮ್ಮ ನಿರುದ್ಯೋಗವು ಚಿಂತೆಯಾಗಿ ನಿಮ್ಮ ಬಗ್ಗೆಯೇ ನಿಮಗೆ ನಕಾರಾತ್ಮಕ ಭಾವ ಮೂಡುವುದು. ಯಾವುದೋ ಆಲೋಚನೆಯಲ್ಲಿ ಮುಳುಗಿರುವಿರಿ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಸರಳವಾದ ಕೆಲಸವನ್ನು ಮನಶ್ಚಾಂಚಲ್ಯದಿಂದ ಸಂಕೀರ್ಣ ಮಾಡಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು. ನಿಮ್ಮ ಹಾಸ್ಯಪ್ರಜ್ಞೆ ಕೆಲವರಿಗೆ ಇಷ್ಟವಾಗದು. ದೇಹವು ಅಧಿಕ ಶ್ರಮದಿಂದ ಆಯಾಸಗೊಳ್ಳುವುದು.
ಸಿಂಹ ರಾಶಿ: ನಿಮಗೆ ಇಂದು ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಅದು ನಿಮಗೆ ಮುಳ್ಳಾಗಬಹುದು. ಎಲ್ಲದಕ್ಕೂ ಅತಿಯಾದ ತೊಂದರೆ ಇರುವಂತೆ ಅನ್ನಿಸಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ನಿಮ್ಮ ಅಂತರಂಗವನ್ನು ವ್ಯಕ್ತಪಡಿಸಲು ನಿಮಗೆ ಸೂಕ್ತ ಸಮಯವು ಲಭ್ಯವಾಗದೇ ಇರಬಹುದು. ಕಲಾವಿದರು ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳುವರು. ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಇಂದು ತುರ್ತಾಗಿ ಬೇಕಾಗಿರುವ ಹಣವನ್ನು ಹೊಂದಿಸಲು ನಿಮಗೆ ಕಷ್ಟವಾಗುವುದು.
ಕನ್ಯಾ ರಾಶಿ: ನೀವೇ ಇಂದು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸಬಹುದು. ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ಅದನ್ನು ಮಾಡಿ. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ. ಮನಸ್ಸಿನಿಂದ ನೀವು ಕೆಲವು ವಿಚಾರವನ್ನು ತೆಗೆದುಹಾಕುವುದು ಉತ್ತಮ. ಅಪನಂಬಿಕೆಯಿಂದ ನಿಮಗೆ ತೊಂದರೆ ಆಗಬಹುದು. ವಸತಿ ಸ್ಥಾನವನ್ನು ಬದಲಿಸಬೇಕಾದೀತು.
ತುಲಾ ರಾಶಿ: ಇಂದು ಏನಾದರೂ ಅಪ್ರಯೋಜನ ಎಂದನಿಸಿದ್ದನ್ನು ಮಾಡುವ ಮೊದಲು ಅದರ ಪರಿಣಾಮದ ಬಗ್ಗೆಯೂ ಆಲೋಚಿಸಿ. ಹಿರಿಯರ ಸಲಹೆಯನ್ನು ಪಡೆಯುವುದು ನಿಮಗೆ ಅಪಮಾನದಂತೆ ಕಂಡೀತು. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳ ಅಧ್ಯಯನ ಮಾಡಬೇಕು. ಉಗುರಿನಿಂದ ಆಗುವ ಕಾರ್ಯಕ್ಕೆ ಕೊಡಲಿ ಏಟು ತರುವುದು ಉಚಿತವಲ್ಲ. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ. ನಿಮಗಮ ಸ್ಥಿರಾಸ್ತಿಯ ಮಾರಾಟದಲ್ಲಿ ಏಕಮುಖವಾದ ಅಭಿಪ್ರಾಯ ಬೇಡ.
ವೃಶ್ಚಿಕ ರಾಶಿ: ಇಂದು ನಿಮ್ಮ ಆಪ್ತರಿಗೆ ಸ್ನೇಹಿರಿಗೆ ಧನದ ಸಹಕಾರವನ್ನು ನೀಡಬೇಕಾಗಿಬರಬಹುದು. ಸಂಗಾತಿಯ, ಪ್ರೇಯಸಿ ಜೊತೆಯಲ್ಲಿ ಸುತ್ತಾಟ ಅಧಿಕವಾಗಿರುವುದು. ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ಬರುವ ಸಮಸ್ಯೆಯನ್ನು ಗಂಭೀರವಾಗಿ ಸ್ವೀಕರಿಸುವುದು ಬೇಡ. ಹಿಂದೆ ಕೊಟ್ಟ ಸಾಲವು ಮರಳಿ ಬರುವ ನಿರೀಕ್ಷೆಯಲ್ಲಿ ಇರುವಿರಿ. ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಕ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಮಕ್ಕಳ ವರ್ತನೆಯು ಹಿಡಸದೇ ಇರುವುದು. ಸಾಮಾಜಿಕ ಕಾರ್ಯದಲ್ಲಿ ಆದ ನೋವನ್ನು ಮರೆಯುವಿರಿ.
ಧನು ರಾಶಿ: ನಿಮಗೆ ಇಂದು ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರವು ಗಟ್ಟಿತನ ಕೊಡಲಿದೆ. ಸಾಲವನ್ನು ಮರುಪಾವತಿ ಮಾಡದೇ ಇರುವ ನಿಮ್ಮ ಸಂಬಂಧಿಕರಿಗೆ ಇಂದು ಸಾಲ ಕೊಡಬಾರದು. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಪ್ರತಿಕೂಲ ವಾತಾವರಣವನ್ನು ನಿಭಾಯಿಸುವ ಕಲೆಯನ್ನು ಗೊತ್ತುಮಾಡಿಕೊಳ್ಳುವಿರಿ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಕೂಡಿಡಬೇಕಾಗುವುದು. ಸಾಲ ಕೊಟ್ಟವರು ನಿಮ್ಮನ್ನು ಇಂದು ಏನೂ ಕೇಳುವುದಿಲ್ಲ. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ಕಛೇರಿಯಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ನಿಮ್ಮ ಉತ್ಸಾಹದ ಕೆಲಸವು ಇನ್ನೊಬ್ಬರಿಗೆ ಮಾದರಿಯಾದೀತು. ನಿಮ್ಮ ನಿರ್ಲಕ್ಷ್ಯದ ಸ್ವಭಾವದಿಂದ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುವಿರಿ.
ಮಕರ ರಾಶಿ: ಇಂದುನೀವು ದೈಹಿಕ ಸೌಕರ್ಯವನ್ನು ಇಷ್ಟಪಡುವಿರಿ. ಎಲ್ಲ ಕಡೆಗಳಲ್ಲಿ ನೀವು ಆತ್ಮರಕ್ಷಣೆಯನ್ನು ಮಾಡಿಕೊಳ್ಳುವಿರಿ. ದಿನವನ್ನು ಜಾಗರೂಕತೆಯಿಂದ ಆಯೋಜಿಸಿ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಪ್ರಯಾಣದ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನೀವು ಕೆಲವು ವ್ಯವಹಾರ ಅಥವಾ ಒಪ್ಪಂದದೊಂದಿಗೆ ಸಂಪರ್ಕ ಹೊಂದಿದ್ದರೆ, ಅದೃಷ್ಟವು ನಿಮ್ಮೊಂದಿಗೆ ಇರುತ್ತದೆ. ನಿಮ್ಮ ಬಗ್ಗೆ ಕುಟುಂಬದಲ್ಲಿ ಒಳ್ಳೆಯ ಅಭಿಪ್ರಾಯವು ಇರುವುದು. ವೈವಾಹಿಕ ಜೀವನದಲ್ಲಿ ಏರಿಳಿತವು ಆರಂಭವಾಗಬಹದು. ಸಾಲ ಕೊಟ್ಟವರು ನಿಮ್ಮನ್ನು ಶತ್ರುಗಳಂತೆ ಕಾಣುವರು. ನಿಮ್ಮ ಕಾರ್ಯವನ್ನು ಕೆಲವು ಸಹೋದ್ಯೋಗಿಗಳು ಟೀಕಿಸಬಹುದು. ಧಾರ್ಮಿಕ ಸ್ಥಳಗಳ ಭೇಟಿಯು ನಿಮಗೆ ಸಾಕಷ್ಟು ನೆಮ್ಮದಿನ್ನು ಕೊಡುವುದು. ನಿಮ್ಮ ವ್ಯವಹಾರದಲ್ಲಿ ಯಾರ ಹಸ್ತಕ್ಷೇಪವೂ ಇಷ್ಟವಾಗದು.
ಕುಂಭ ರಾಶಿ: ಇಂದು ನಿಮ್ಮ ಎಲ್ಲ ಕೆಲಸವನ್ನು ಬಿಟ್ಟು ಸಂಗಾತಿಯ ಜೊತೆ ಸಮಯವನ್ನು ಕಳೆಯಲು ಬಯಸುವಿರಿ. ಹಳೆಯ ರೋಗ ನಿಮ್ಮನ್ನು ಕಾಡಲಿದ್ದು, ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು.ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಜೀವನದ ತೊಂದರೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಲು ಬಯಸುವಿರಿ. ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತವೆ. ಹಳೆಯ ಮನೆಯ ದುರಸ್ತಿಗೆ ಹಣವನ್ನು ಖರ್ಚು ಮಾಡುವಿರಿ. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ಯಾರಾದರೂ ನಿಮ್ಮ ಭವಿಷ್ಯದ ಬಗ್ಗೆ ಹೇಳಿ ಅವಮಾನಿಸಬಹುದು. ಕೆಲಸದಲ್ಲಿ ಮತ್ತೆ ಮತ್ತೆ ತೊಂದರೆ ಎದುರಾದರೆ ಅದನ್ನು ಕೈ ಬಿಡುವುದು ಸೂಕ್ತ.
ಮೀನ ರಾಶಿ: ಇಂದು ಬಂಧುಗಳ ಆಗಮನವಾದ ಕಾರಣ ಕುಟುಂಬ ಜೊತೆ ಹೆಚ್ವು ಕಾಲ ಕಳೆಯಿರಿ. ನೀವು ಕೆಲಸದಲ್ಲಿ ಇಂದು ಒಂದು ಒಳ್ಳೆಯ ಸುದ್ದಿ ಪಡೆಯಬಹುದು. ಮಾನಸಿಕವಾಗಿ ಸ್ವಲ್ಪ ಮಟ್ಟಿನ ಕಿರಿಕಿರಿಯನ್ನು ಅನುಭವಿಸುವಿರಿ. ಒಂಟಿತನವನ್ನು ಇಷ್ಟಪಡುತ್ತೀರಿ. ಗುರುವಿನ ದರ್ಶನವನ್ನು ಪಡೆಯಿರಿ. ಒಳ್ಳೆಯ ಸಮಾಚರ ನಿಮ್ಮನ್ನು ಸೇರಬಹುದು. ನಂಬಿಕೆಯೇ ಸ್ವಭಾವವಾಗಿರುವ ನಿಮ್ಮನ್ನು ಅದು ಕೈ ಬಿಡದು. ಇಂದು ನೀವಾಡುವ ಮಾತಿನ ಮೇಲೆ ನಿಮ್ಮ ಕಾರ್ಯಗಳು ನಿಂತಿರುವುದು. ಓಡಾಟಕ್ಕೆ ನಿಮಗೆ ವಾಹನದ ಅನುಕೂಲತೆಯೂ ಆಗುವುದು. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭವನ್ನು ಕಾಣುವಿರಿ. ಪ್ರೇಮವು ನಿಮಗೆ ನಿಮ್ಮನ್ನು ಉತ್ಸಾಹದಿಂದ ಇಡುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ. ನೀವು ಹಣಕಾಸನ್ನು ಉಳಿಸಲು ನಾನಾಪ್ರಕಾರವಾಗಿ ಯೋಚಿಸುವಿರಿ. ಸರಳವಾಗಿರಲು ನಿಮಗೆ ಸಾಧ್ಯವಾಗುವುದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:00 am, Tue, 13 February 24