Horoscope 02 Mar: ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 02, 2024 | 12:01 AM

Nitya Bhavishya: 2024 ಮಾರ್ಚ್​ 02ರ ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ. ಯಾವ ರಾಶಿಯವರು ಇಂದು ಜಾಗೃಕರಾಗಿರಬೇಕು ಎಂದು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 02 Mar: ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು
ದಿನ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:47 ರಿಂದ 11:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:50 ರಿಂದ 08:19ರ ವರೆಗೆ.

ಮೇಷ ರಾಶಿ : ಇಂದು ಆರೋಗ್ಯದ ವಿಚಾರಕ್ಕೆ ಹಣವನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಬಗ್ಗೆ ನಕಾರಾತ್ಮಕ ಮನೋಭಾವವು ದೂರಾಗುವುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಎಲ್ಲ ಸಂದರ್ಭವೂ ನಿಮಗೆ ಹಿತವಾಗಿರುತ್ತದೆ ಎಂಬ ಮಾನಸಿಕ‌ಸ್ಥಿತಿ ಬದಲಾಗುವುದು.

ವೃಷಭ ರಾಶಿ : ಇಂದು ನೀವು ಎಲ್ಲ ಕಾರ್ಯಗಳನ್ನು ಶಿಸ್ತುಬದ್ಧವಾಗಿ ಮಾಡಲು ಪ್ರಯತ್ನಿಸುವಿರಿ. ಹಣಕಾಸಿನ ವ್ಯವಹಾರವು ಪೂರ್ಣಪ್ರಮಾಣದಲ್ಲಿ ನಿಮ್ಮದಾಗದು. ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇರುವುದು. ಮನೋರಂಜನೆಗೆ ಭಾಗವಹಿಸುವುದು ಇಷ್ಟವಾಗುವುದು. ಉನ್ನತ ವಿದ್ಯಾಭ್ಯಾಸದ ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನಿಸುವಿರಿ.

ಮಿಥುನ ರಾಶಿ : ಇಂದು ನಿಮ್ಮ ಆತ್ಮವಿಶ್ವಾಸವೇ ಎಲ್ಲದಕ್ಕೂ ಪೂರಕವಾಗಿ ಇರುವುದಾಗಿದೆ. ಎಲ್ಲದಕ್ಕೂ ಯಶಸ್ಸು ಸಿಗಬೇಕು ಎಂಬ ಮನೋಭಾವವು ಬದಲಾದರೆ ಒಳ್ಳೆಯದು. ಉದ್ಯಮದ ವಿಸ್ತಾರದ ಕುರಿತು ನಿಮ್ಮ ಆಲೋಚನೆ ವಿಭಿನ್ನವಾಗಿ ಇರುವುದು. ಹಿತಶತ್ರುಗಳು ನಿಮ್ಮ ಅವನತಿಯನ್ನು ನಿರೀಕ್ಷಿಸಬಹುದು. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಭವಿಷ್ಯವನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ಮುಂದುವರಿಯಿರಿ. ವಾಹನ ಚಾಲನೆಯಿಂದ ನಿಮಗೆ ಸಂತೋಷವಾಗಲಿದೆ.

ಕಟಕ ರಾಶಿ : ಇಂದಿನ‌ ನಿಮ್ಮ ಸಂತೋಷಕ್ಕೆ ಬೇರೆ ಬೇರೆ ಕಾರಣಗಳು ಇರುವುದು.‌ ಮನೆಯವರನ್ನು ದೂಷಿಸುವುದು ನಿಮಗೆ ಸ್ವಭಾವದಂತೆ ಆಗಬಹುದು. ದೂರಾಲೋಚನೆಯು ಕ್ರಮಬದ್ಧವಾಗಿ ಇರಲಿ. ದಾಂಪತ್ಯದ ಕಲಹವು ಬೇರೆ ದಾರಿಯಲ್ಲಿ ನಡೆಯುವುದು. ಪ್ರೇಮಿಗಳು ಎಲ್ಲಿಯಾದರೂ ಭೇಟಿಯಾಗಲು ಯೋಚಿಸುವರು. ಯಾರ ಜೊತೆ ಸ್ಪರ್ಧಿಸಲೂ ನೀವು ತಯಾರಿರುವಿರಿ. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಕಾನೂನಾತ್ಮಕ ವಿಚಾರವು ನಿಮಗೆ ಅರ್ಥವಾಗದೇಹೋಗಬಹುದು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗಬಹುದು.

ಸಿಂಹ ರಾಶಿ : ನಿಮಗೆ ಇಂದು ಯಾವುದೇ ಅನ್ಯ ಆಲೋಚನೆಗೆ ಅವಕಾಶವಿಲ್ಲದೇ ಇರಬಹುದು. ಒಂದೊಂದೇ ಕೆಲಸಗಳು ನಿಮಗೆ ಹೊರೆಯಾಗುತ್ತಾ ಹೋಗಬಹುದು. ಬೇರೆಯವರ‌ ಮಾತು ನಿಮಗೆ ಮನಸ್ಸಿಗೆ ನಾಟದೇ ನಿಮ್ಮದೇ ಆದ ವರ್ತನೆಯನ್ನು ಮುಂದುವರಿಸುವಿರಿ. ಉನ್ನತ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳಿಗೆ ರಾಜಕೀಯದತ್ತ ಒಲವು ಉಂಟಾದೀತು.
ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ಬಂಧುಗಳ‌ ವಿಚಾರದಲ್ಲಿ ಇರುವ ಪೂರ್ವಾಗ್ರಹವು ದೂರಾಗುವುದು.

ಕನ್ಯಾ ರಾಶಿ : ನೀವು ಎಲ್ಲವನ್ನೂ ದಾನ ಮಾಡುವ ಮನಃಸ್ಥಿತಿಯನ್ನು ಹಿಂದಿರುವಿರಿ. ನಿಮ್ಮನ್ನು ಯಾರೂ ಏನನ್ನೂ ಪ್ರಶ್ನಿಸಲಾರರು ಎಂಬ ಮನೋಭಾವವು ನಿಮ್ಮಲ್ಲಿ ಇರುವುದು. ಇಂದು ಆದ ಖರ್ಚನ್ನು ಗೌಪ್ಯವಾಗಿ ಇಡುವಿರಿ. ಯಾರನ್ನೂ ನಕಾರಾತ್ಮಕವಾಗಿ ತಿಳಿಯುವುದು ಬೇಡ. ಸಮಯವು ನಿಮಗೆ ಎಲ್ಲವನ್ನೂ ತಿಳಿಸುವುದು. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ನಿಮ್ಮ ಉತ್ಸಾಹವನ್ನು ಯಾರಾದರೂ ಭಂಗಪಡಿಸಿಯಾರು. ಅದನ್ನು ಗಂಭೀರವಾಗಿ ಪರಿಗಣಿಸದೇ ದೂರೀಕರಿಸಿ.

ತುಲಾ ರಾಶಿ : ಇಂದು ನಿಮ್ಮ ಸೃಜನಶೀಲತೆಗೆ ಸರಿಯಾದ ಸ್ಥಾನವು ಸಿಗಲಿದೆ. ಯಾವುದನ್ನೂ ಪರೀಕ್ಷಿಸದೇ ನೀವು ಒಪ್ಪುವುದು ಕಷ್ಟವಾಗುವುದು. ಕೈ ಸುಟ್ಟುಕೊಂಡ ಕಾರ್ಯದಲ್ಲಿ ಮತ್ತೆ ಮನಸ್ಸು ಇರಲಾರದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳುವ ಹಂಬಲವಿರುವುದು. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಲಿದ್ದು ಹಿರಿಯರಿಂದ ಕೇಳಿಪಡೆಯುವಿರಿ.

ವೃಶ್ಚಿಕ ರಾಶಿ : ನಿಮ್ಮ ಪಾಲುದಾರಿಕೆಯ ವ್ಯವಹಾರದಲ್ಲಿ ಯಾರಾದರೂ ಅನಗತ್ಯ ಗೊಂದಲವನ್ನು ಸೃಷ್ಟಿಸಬಹುದು. ಪ್ರೋತ್ಸಾಹದಿಂದ ನೀವು ನಿಮ್ಮ ಕಾರ್ಯವನ್ನು ಯಶಸ್ವಿಯಾಗಿ ಪೂರೈಸುವಿರಿ. ಭೂಮಿಯ ವ್ಯವಹಾರವು ನಿಮಗೆ ಶಕ್ತಿಯನ್ನು ತಂದೀತು. ಆತುರದ ತೀರ್ಮಾನದಿಂದ ಹಣವನ್ನು ನಷ್ಟ ಮಾಡಿಕೊಳ್ಳುವಿರಿ. ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿದ್ದು ದೈವಜ್ಞರಿಂದ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕಾಗಬಹುದು. ಯಾರ ಬಗ್ಗೆಯಾದರೂ ನಿಮಗೆ ಅಸೂಯೆ ಬರಬಹುದು. ಯಾರ ಬಗ್ಗೆಯೂ ನಿಮಗೆ ಪೂರ್ಣ ನಂಬಿಕೆ‌ ಇರದು.

ಧನು ರಾಶಿ : ಇಂದು ನಿಮಗೆ ಅತಿಯಾದ ಕಾರ್ಯದ ಒತ್ತಡವು ದೇಹ ಮತ್ತು ಮನಸ್ಸುಗಳು ದುರ್ಬಲವಾದಂತೆ ಅನ್ನಿಸುವುದು. ಅಮೂಲ್ಯ ವಸ್ತುಗಳನ್ನು ಜೋಪಾನ ಮಾಡಿ. ಸಂಗಾತಿಯ ಜೊತೆ ಗುಟ್ಟನ್ನು ಮುಚ್ಚಿಡಲು ನಿಮಗೆ ಸಾಧ್ಯವಾಗದು. ವಾಹನ ಚಾಲನೆಯನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುವುದು. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ. ನೀವು ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು. ಆಗಿದ್ದನ್ನು ಧನಾತ್ಮಕವಾಗಿ ಚಿಂತಿಸುವಿರಿ.

ಮಕರ ರಾಶಿ : ಇಂದು ನಿಮ್ಮ ಹೂಡಿಕೆಯ ಬಗ್ಗೆ ಹೆಚ್ಚು ಆಲೋಚನೆಗಳು ಇರುವುದು. ಆರ್ಥಿಕ ಪ್ರಗತಿಯು ನಿಮ್ಮ ಮೂಲಮಂತ್ರವಾಗಿರಬಹುದು. ಬಹಳ ದಿನಗಳ ಅನಂತರ ಅತಿಥಿಗಳ ಆಗಮನವಾಗಲಿದ್ದು, ಖುಷಿಯಾಗಲಿದೆ. ವಿವಾಹಕ್ಕೆ ಪೂರಕವಾದ ವಾರ್ತೆಗಳು ಇರಲಿದೆ. ಉದ್ಯೋಗಿಗಳಿಗೆ ಶುಭವಾರ್ತಯಿಂದ‌ ಖುಷಿ ಇರಲಿದೆ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು. ವ್ಯಾವಹಾರಿಕ ವಿಭಾಗದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಯಾರಿಂದಲಾದರೂ ಉಡುಗೊರೆ ಸಿಕ್ಕೀತು.

ಕುಂಭ ರಾಶಿ : ನಿಮ್ಮ ಅನಾರೋಗ್ಯವು ಕಡಿಮೆ ಆಗುತ್ತ ಬರಲಿದ್ದು, ನಿಮ್ಮ ಮನಸ್ಸು ಹಗುರಾಗುವುದು. ಆರ್ಥಿಕವಾಗಿ ಸುಧಾರಣೆಯಿಂದ ಧೈರ್ಯವು ಬರಲಿದೆ. ವೃತ್ತಿಯ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ಪ್ರತಿಫಲವು ಪ್ರಾಪ್ತವಾಗುವುದು. ಬಂಧುಗಳ ಜೊತೆ ತಾಳ್ಮೆಯಿಂದ ಮಾತನಾಡಿ. ಅತಿಯಾದ ಬುದ್ಧಿವಂತಿಕೆಯನ್ನು ಪ್ರದರ್ಶಿಸುವುದು ಬೇಡ. ಅಪಾಯದ ಸೂಚನೆಯು ನಿಮಗಾಗಬಹುದು. ಪ್ರಯಾಣದಿಂದ ಆಯಾಸಗೊಂಡು ವಿಶ್ರಾಂತಿ ಪಡೆಯುವಿರಿ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು. ಇಂದು ಅನಿವಾರ್ಯದ ಕಾರಣದಿಂದ ಬಂಧುಗಳ ಮನೆಯಲ್ಲಿ ವಾಸಿಸಬೇಕಾಗಿ ಬರಬಹುದು.

ಮೀನ ರಾಶಿ : ಇಂದು ನಿಮ್ಮ ನಿರಂತರ ಪ್ರಯತ್ನದಿಂದ ಕುಟುಂಬದ ಸದಸ್ಯರ ಬೆಂಬಲವು ನಿಮಗೆ ದೊರೆಯುವುದು. ಇಷ್ಟಫಲವು ಇರಲಿದೆ. ಆರೋಗ್ಯವನ್ನು ಹಾಳು‌ಮಾಡಿಕೊಳ್ಳಲು ಹೋಗಬೇಡಿ. ಅನಿವಾರ್ಯ ಕಾರಣಗಳಿಂದ ನಿಮ್ಮ ಖರ್ಚು ಹೆಚ್ಚಾಗುವುದು. ಉದ್ಯೋಗದ ಸ್ಥಳದಲ್ಲಿ ಹೆಚ್ಚಿನ ಒತ್ತಡವಿದ್ದು ಅದನ್ನು ನಿಭಾಯಿಸುವಿರಿ. ನಿಮ್ಮ ಆತ್ಮವಿಶ್ವಾಸವು ಹೆಚ್ಚಾಗಿರುವುದು. ಸಾಹಿತಿಗಳಿಗೆ ಅವಕಾಶಗಳು ಸಿಕ್ಕಿದ್ದು ಅದನ್ನು ಉಪಯೋಗಿಸಿಕೊಳ್ಳುವಿರಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)