AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಬೇರೆಯವರ ಮಾತು ಅನುಸರಿಸಲು ಹೋಗಿ ಕೆಡುವಿರಿ ಎಚ್ಚರ!

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 08 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ಬೇರೆಯವರ ಮಾತು ಅನುಸರಿಸಲು ಹೋಗಿ ಕೆಡುವಿರಿ ಎಚ್ಚರ!
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Mar 08, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಪರಿಘ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:14 ರಿಂದ ಮಧ್ಯಾಹ್ನ 12:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ ಸಂಜೆ 05:11ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:15 ರಿಂದ 09:45ರ ವರೆಗೆ.

ಮೇಷ ರಾಶಿ: ನಿಮಗೆ ಸೇರಿದ್ದನ್ನು ಮಾತ್ರ ಬಳಸಿಕೊಳ್ಳಿ. ಯಾರದೋ ಮಾತು ನಿಮಗೆ ಅದ್ಭುತವೆನಿಸಬಹುದು.‌ ಅದನ್ನು ಅನುಸರಿಸಲು ಹೋಗಿ ಕೆಡುವಿರಿ. ಯಾರಿಂದಲಾದರೂ ಮನಸ್ತಾಪ‌ವು ಕಾಣಿಸಿಕೊಳ್ಳಬಹುದು. ದೇಹಾಯಾಸದ ಕಡೆಗೆ ಅಧಿಕ ಗಮನ ಅಗತ್ಯ.‌ ಹೋರಾಟದ ಮನೋಭಾವವು ಇಂದು ಎದ್ದು ತೋರುವುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವುದು ಅವಶ್ಯಕ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ಕೆಲವರ ಮೇಲಿನ ದೀರ್ಘದ್ವೇಷವನ್ನು ಕಡಿಮೆ‌ಮಾಡಿಕೊಳ್ಳುವಿರಿ.

ವೃಷಭ ರಾಶಿ: ಇಂದು ನೀವು ಪ್ರಯತ್ನಿಸುವ ಕಾರ್ಯಗಳಲ್ಲಿ ಅನಾನುಕೂಲತೆ ಕಾಣಿಸುವುದು. ದೀರ್ಘವಾದ ವಾಹನ ಚಾಲನೆ ಮಾಡುವುದು ಬೇಡ. ಅನಿರೀಕ್ಷಿತವಾಗಿ ಉದ್ಯೋಗಾವಕಾಶ ಸಿಕ್ಕರೂ ಅದನ್ನು ಬಳಸಿಕೊಳ್ಳುವಲ್ಲಿ ಸೋಲುವಿರಿ. ಇಂದು ಅನಿವಾರ್ಯತೆಯನ್ನು ಅವಶ್ಯಕತೆಯನ್ನಾಗಿ ಮಾಡಿಕೊಳ್ಳುವಿರಿ. ನಿಮ್ಮವರ ಮೇಲೆ ಕಾಳಜಿಯು ಅಧಿಕಾದೀತು. ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು. ಅನಪೇಕ್ಷಿತ ವಿಚಾರದಲ್ಲಿ ಮೂಗುತೂರಿಸುವುದು ಬೇಡ.‌ ಬಂಧುಗಳ‌ ಬಗ್ಗೆ ನಿಮಗೆ ಪ್ರೀತಿ ಇರದು.

ಮಿಥುನ ರಾಶಿ: ಇಂದು ನೀವು ಸರಳ ಸಂಗತಿಗಳನ್ನು ಸಂಕೀರ್ಣವಾಗಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಬಗ್ಗೆ ನಿಮಗೆ ಸಂಪೂರ್ಣ ಹಕ್ಕು ಸಿಗಬಹುದು. ಪ್ರೀತಿಯಿಂದ ಗೆಲ್ಲುವ ಬಗ್ಗೆ ಆಲೋಚಿಸಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಏಕಾಂಗಿಯಾಗಬಹುದು.‌ ಕ್ರೀಡೆಯ ವಿಚಾರದಲ್ಲಿ ಸಹೋದರರ ನಡುವೆ ಮನಸ್ತಾಪವು ಉಂಟಾಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ವೃತ್ತಿಯನ್ನು ಬಿಟ್ಟು ಹೆಚ್ಚಿನ ಆದಾಯದ ಕಡೆಗೆ ಗಮನಹರಿಸುವಿರಿ. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುತ್ತೇನೆಂದರೂ ಆಗದು. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನಿಮಗೆ ಯಾರಾದರೂ ಭಯವನ್ನು ಉಂಟುಮಾಡಬಹುದು. ನಿಮ್ಮ ನಿಷ್ಕಾಳಜಿಯು ಅನೇಕ ವೈಷಮ್ಯಕ್ಕೆ ಕಾರಣವಾಗುವುದು.

ಕಟಕ ರಾಶಿ: ನೀವು ಎಲ್ಲವನ್ನೂ ನಿಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುವಿರಿ. ಮಾತನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಬರಬಬಹುದು. ಸಂಗಾತಿಗೆ ನಿಮ್ಮ ಆರ್ಥಿಕತೆಯನ್ನು ವಿವರಿಸುವಿರಿ. ನಿಮ್ಮ ಮೇಲೆ ನಿಮಗೆ ನಂಬಿಕೆಯು ಕಡಿಮೆ ಆದಂತೆ ತೋರುವುದು. ನಿಮ್ಮ ತಾಯಿ ಆರೋಗ್ಯಕ್ಕಾಗಿ ನೀವು ಹಣವನ್ನು ಖರ್ಚು ಮಾಡಬೇಕಾಗಬಹುದು. ದುಂದುವೆಚ್ಚದ ಕಡೆ ಗಮನವಿರಲಿ. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭೌತಿಕ ವಸ್ತುಗಳು ನಿಮಗೆ ಅಲ್ಪಸಂತೋಷವನ್ನು ಕೊಟ್ಟೀತು. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಒತ್ತಾಯದಿಂದ‌ ಯಾವುದನ್ನೂ ಮಾಡಬೇಡಿ, ಮಾಡಿಸಿಕೊಳ್ಳುವುದೂ ಬೇಡ.