Horoscope Today June 18, 2024: ಮಂಗಳವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿಯಿರಿ

2024 ಜೂನ್ 18 ದಿನ ಭವಿಷ್ಯ: ಮಂಗಳವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 18, 2024: ಮಂಗಳವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿಯಿರಿ
ದಿನಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ರಮೇಶ್ ಬಿ. ಜವಳಗೇರಾ

Updated on: Jun 17, 2024 | 7:21 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ 15:48 ರಿಂದ 17:25ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:20 ರಿಂದ ಬೆಳಿಗ್ಗೆ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 14:11ರ ವರೆಗೆ.

ಮೇಷ ರಾಶಿ :ಇಂದು ಮನೆಯ ಹಲವು ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗುವುದು. ಆದರೆ ನಿಮ್ಮ ಆರೋಗ್ಯವನ್ನೂ ನೀವು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ತಿಳಿವಳಿಕೆ ಇಲ್ಲದ ಕೆಲಸದಲ್ಲಿ ಜಾಗರೂಕತೆಯಿಂದ ಹೆಜ್ಜೆ ಇಡಿ. ವಾಹನವನ್ನು ಖರೀದಿಸುವಾಗ ಅವಶ್ಯಕತೆಯ ಬಗ್ಗೆ ಅರಿವಿರಲಿ. ನಂಬಿದವರಿಗೆ ಭರವಸೆಯ ಮಾತನ್ನಾದರೂ ಕೊಡಿ. ಕೂಲಂಕಷ ಅಧ್ಯಯನ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ.

ವೃಷಭ ರಾಶಿ :ಇಂದು ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ಮನಸ್ಸು ಒಂದು ಕಡೆ ನಿಲ್ಲದೇ ಓಡಾಡುವುದು. ಕಳೆದುಕೊಂಡದ್ದನ್ನು ಪಡೆಯುವ ಹಠವಿರುವುದು. ಅದು ನಿಮ್ಮ ವ್ಯಕ್ತಿತ್ವವನ್ನೂ ತೋರಿಸುವುದು. ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಕೆಟ್ಟ ಕನಸು ನಿಮ್ಮ ಚಿಂತಿತರನ್ನಾಗಿ ಮಾಡುವುದು. ನೀವಿಂದು ಕಷ್ಟದ ಕೆಲಸವನ್ನು ಸುಲಭವಾಗಿ ಮಾಡುವ ವಿಧಾನವನ್ನು ಹುಡುಕುವಿರಿ.ಮನೆಯಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಹುಡುಗಾಟ ಬುದ್ಧಿಯನ್ನು ಕಡಿಮೆ ಮಾಡುವುದು ಒಳ್ಳೆಯದು. ಉದ್ಯೋಗದಲ್ಲಿ ನೀವು ಸಡಿಲಾಗುವುದು ಬೇಡ. ನಿಮ್ಮ ಸ್ಥಾನವನ್ನು ಬಿಡುವುದು ಬೇಡ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ.

ಮಿಥುನ ರಾಶಿ :ಇಂದು ನಿಮ್ಮ ಮನಸ್ಸಿಗೆ ಬೇಕಾದ ವಿಶ್ರಾಂತಿಗೆ ಸ್ಥಳದ ಅನ್ವೇಷಣೆ ಮಾಡುವಿರಿ. ನಿಮ್ಮ ಮಗುವಿನ ಬಗ್ಗೆ ನೀವು ಹೆಮ್ಮೆಪಡುತ್ತೀರಿ. ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಐತಿಹಾಸಿಕ ದೇವಾಲಯವನ್ನು ನೋಡುವ ಹಂಬಲವಿರುವುದು. ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಲಿಸೆ. ಅತಿಯಾದರೆ ಅಮೃತವೂ ವಿಷ. ಅಹಂಕಾರದಿಂದ ಮುಗ್ಗರಿಸಿ ಬೀಳುವಿರಿ. ನೀವು ನಿಮ್ಮ ಬಗ್ಗೆ ಮಾಡಿಕೊಳ್ಳುವ ಸಮರ್ಥನೆಯು ಅಹಂಕಾರವೆನಿಸುವುದು. ಮಂದಗತಿಯಲ್ಲಿ ಸಾಗುವ ಜೀವನ ಎಂದು ಮೂದಲಿಸದೇ ಖುಷಿಯಿಂದ ಮುನ್ನಡೆಯಿರಿ.‌ ಸಂತೋಷವು ಸಿಗಲಿದೆ. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು.‌ ಎಲ್ಲ ಕಾರ್ಯಗಳನ್ನು ಭಯದಿಂದ ಮಾಡುವಿರಿ.

ಕರ್ಕ ರಾಶಿ :ಇಂದು ನಿಮ್ಮ ಅಸತ್ಯದ ಮಾತು ಎಲ್ಲರಿಗೂ ತಿಳಿಯುವುದು. ಯಾರನ್ನೂ ಅವಲಂಬಿಸಬೇಕು ಅನ್ನಿಸದು. ನೀವು ಹಣಕಾಸಿನ ಲಾಭವನ್ನು ಆನಂದಿಸುವ ಸಾಧ್ಯತೆ ಇದೆದೆ. ಹುಟ್ಟಿನಿಂದ ಬಂದ ಸ್ವಭಾವವನ್ನು ತಿದ್ದಲಾಗದು. ಮನೆಯಲ್ಲಿ ನಿಮ್ಮ ಸ್ವಭಾವವನ್ನು ತಿದ್ದಲು ಪ್ರಯತ್ನಿಸುವರು. ಮಕ್ಕಳು ನಿಮ್ಮನ್ನು ಅತಿಯಾಗಿ ಹಚ್ಚಿಕೊಳ್ಳುವರು. ತುರ್ತು ನಿರ್ಧಾರವನ್ನು ತೆಗೆದುಕೊಳ್ಳುವುದು ಅಪಾಯಕಾರಿ. ಅತಿ ಪರಿಚಯವು ನಿಮಗೆ ಮುಳುವಾಗಬಹುದು. ಅನಾರೋಗ್ಯವು ನಿಮಗೆ ಅಭ್ಯಾಸವಾಗಿದ್ದರೂ ಗುಣಪಡಿಸಿಕೊಳ್ಳುವುದು ಉತ್ತಮ. ಓದುವ ಸಮಯವನ್ನು ಓದಲೆಂದೇ ಮೀಸಲಿಡಿ. ಅವಕಾಶಗಳಿಗೆ ಕಾಯಬೇಡಿ. ಮಾಡಬೇಕು ಎಂದು ಅನ್ನಿಸಿದ್ದನ್ನು ಮಾಡಿ‌ಮುಗಿಸಿ. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು. ಸಕಾರಾತ್ಮಕವಾಗಿ ಸ್ವೀಕರಿಸಿ ಮುಂದೆ ಸಾಗಿ.

ಸಿಂಹ ರಾಶಿ :ಇಂದು ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಭಯದಿಂದ ಹಿಂಜರಿಯುವಿರಿ. ಸಮಯ ಮುಂದುವರೆದಂತೆ ನಿಮ್ಮ ಆಲೋಚನೆಗಳನ್ನು ಅಳವಡಿಸಿಕೊಳ್ಳುವುದು ಯಶಸ್ಸಿಗೆ ಕಾರಣವಾಗುತ್ತದೆ. ಹೊಸವಾಹನ ಖರೀದಿಗೆ ಮನಸ್ಸು ಮಾಡಿದರೆ ಸ್ವಲ್ಪ ಮುಂದೂಡುವುದು ಉಚಿತ. ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಸಮಾರಂಭದಲ್ಲಿ ಮುಖ್ಯಸ್ಥಾನವನ್ನು ಪಡೆಯುವಿರಿ. ಅಪವಾದಗಳನ್ನು ಕೇಳುವ ಸ್ಥಿತಿಯೂ ಬರಬಹುದು. ಮನಸ್ಸಿನಲ್ಲಿ ದೃಢತೆ ಇರಲಿ. ಇಂದು ಅನಿವಾರ್ಯವೊಂದು ಒದಗಿ ಬಂದಾಗ ಇದನ್ನು ಮೊದಲೇ ಕಲಿಯಬೇಕಿತ್ತು ಎಂದನ್ನಿಸುವುದು. ನಿಮಗೆ ಕೊಟ್ಟ ಹುದ್ದೆಯನ್ನು ನಿರ್ವಹಿಸುವಾಗ ಅದರ ಭಾರವೆಷ್ಟು ಎಂದು ಅರಿಯಿರಿ. ನಿಮ್ಮನ್ನು ಅಳೆಯುತ್ತಿರುವರು ಎಂಬುದನ್ನು ಗಮನಿಸಿ. ಬಹಳ‌ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವಿರಿ. ಮನಸ್ಸು ಇಂದು ಒಂದೆಡೆ ಕುಳಿತುಕೊಳ್ಳಲು ಬಿಡದು.

ಕನ್ಯಾ ರಾಶಿ :ನೀವು ಹೂಡಿಕೆಯನ್ನು ಗೌಪ್ಯವಾಗಿ ಇಡಲಾಗದು. ಅನಂತರ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಬಿಡುವಿನ ವೇಳೆಯನ್ನು ಸ್ವಯಂ ಸೇವಕರಾಗಿ ಅಥವಾ ಇತರರಿಗೆ ಸಹಾಯ ಮಾಡಲು ಕಳೆಯಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದ್ದು ನಿಮಗೆ ಅಚ್ಚರಿಯಾಗಬಹುದು. ಸದ್ಯ ಗ್ರಹಗತಿಗಳ ಬದಲಾವಣೆಯಿಂದ ಇದು ಸಾಧ್ಯವಾಗಿದೆ. ಅದನ್ನು ದುರುಪಯೋಗಪಡಿಸಿಕೊಳ್ಳಬೇಡಿ. ಇನ್ನೊಬ್ಬರ ವಿಷಯಕ್ಕೆ ಮೂಗು ತೂರಿಸಲು ಹೋಗದೇ ನಿಮ್ಮ ಕಾರ್ಯದಲ್ಲಿ ಮಗ್ನರಾಗಿರಿ. ಆಘಾತದ ಸ್ಥಿತಿಯನ್ನೂ ಎದುರಿಸಬೇಕಾಗುವುದು. ಕಂಡಿದ್ದನ್ನು ಮಾತ್ರ ಸತ್ಯವೆಂದು ನಂಬಬೇಡಿ. ಸಮಯ ಸರಿದಾಗ ಎಲ್ಲವೂ ಅರಿವಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ಸ್ತ್ರೀಯರ ವಿಚಾರದಲ್ಲಿ ಅಧಿಕ ದುರ್ಬಲರಾಗುವಿರಿ.

ತುಲಾ ರಾಶಿ :ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಇಂದು ಕಸಿದುಕೊಳ್ಳಬಹುದು. ವಾಹನದ ಖರೀದಿಗೆ ಸಾಲ ಮಾಡಬೇಕಾಗುವುದು. ಮಕ್ಕಳಿಗೆ ಹೆಚ್ಚಿನ ಗಮನವನ್ನು ಕೊಡಬೇಕಾಗುವುದು. ಊರಿಂದ ಊರಿಗೆ ವರ್ಗಾವಣೆಯಾಗುತ್ತಿರುವುದಕ್ಕೆ ಬೇಸರ ಮಾಡಿಕೊಳ್ಳುವಿರಿ. ಅದಕ್ಕೆ ನಿಮ್ಮ ಸ್ನೇಹಿತರು ಸಮಾಧಾನವನ್ನು ಮಾಡುವುದು ಬಿಟ್ಟು ಸೊಪ್ಪು ಹಾಕುವರು. ಎಷ್ಟೋ ದಿನದ ಹಿಂದೆ ಹೊಸ ವಸ್ತುಗಳನ್ನು ಖರೀದಿಸಿದ್ದು ಇಂದು ನಿಮಗೆ ನೆನಪಾಗುವುದು. ಆರೋಗ್ಯದ ಕಡೆ ಹೆಚ್ಚು ಗಮನವಹಿಸುವ ಅಗತ್ಯವಿದೆ. ದಿನಚರಿಯನ್ನು ಸರಿಮಾಡಿಕೊಳ್ಳಿ. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಇಷ್ಟಪಟ್ಟ ವಸ್ತುವನ್ನು ಪಡೆಯಲು ಹಣದ ಅಭಾವವು ಕಾಣಿಸಬಹುದು.

ವೃಶ್ಚಿಕ ರಾಶಿ :ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ನಿಮಗೆ ಸಿಗಲಿದೆ. ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಹುಣ್ಣನ್ನು ಕೆದಕಿದಷ್ಟೂ ಅದು ದೊಡ್ಡ ಗಾಯವಾಗುವುದು. ಅದೇ ರೀತಿ ಸಮಸ್ಯೆಯನ್ನು ಕೆದಕಿದಷ್ಟೂ ದೊಡ್ಡದಾಗುವುದು. ಮಾತನಾಡದೇ ಸುಮ್ಮನಿರಿ. ತಾನಾಗಿಯೇ ತಣ್ಣಗಾಗುವುದು. ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದಿಕೆಯಾಗಲಿದೆ. ಖರ್ಚನ್ನು ತಡೆಗಟ್ಟುವ ಸೂತ್ರವನ್ನು ಕಂಡುಕೊಳ್ಳಿ. ಲ ಮನಸ್ಸು ಹೇಳಿದಂತೆ ಕೇಳದೇ ಸಮಾಧಾನದಿಂದ ಇರಿ. ನಿಮಗೆ ಅವಶ್ಯಕತೆ ಇರುವ ಮಾಹಿತಿಯನ್ನು ಸರಿಯಾದ ಕಡೆಯಿಂದ ಪಡೆದುಕೊಳ್ಳಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.‌ ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರುವಿರಿ.

ಧನು ರಾಶಿ :ಇಂದು ಸಹಾಯ ಮಾಡುವ ನಿಮ್ಮ ನಿರಂತರ ಅಭ್ಯಾಸಕ್ಕೆ ನಿಮಗೆ ದಣಿವಾಗಬಹುದು. ದುರಭ್ಯಾಸದ ಜನರ ಸಹವಾಸ ಇರುವುದು. ಒಳ್ಳೆಯ ಕಾಲ ಬರುವುದೆಂದು ಕಾದು ಕುಳಿತರೆ ಪ್ರಯೋಜನವಿಲ್ಲ. ನಿಮ್ಮ ಕೆಲಸವನ್ನು ನೀವು ಮಾಡಿ. ಕಾಲ ಬಂದಾಗ ಅದು ಮಾಡಬೇಕಾದುದನ್ನು ಮಾಡುತ್ತದೆ. ಮಕ್ಕಳ ಭವಿಷ್ಯವು ಚೆನ್ನಾಗಿರಲು ಅವರ ಹೆಸರಿನಲ್ಲಿ ಹೂಡಿಕೆ ಮಾಡುವಿರಿ. ಮಕ್ಕಳ ವಿಚಾರದಲ್ಲಿ ತಾರತಮ್ಯವನ್ನು ತೋರಿಸಿ ಅವರ ಬಾಯಿಗೆ ಸಿಗುವಿರಿ. ನಿಮ್ಮ ಯೋಜನೆಗೆ ಕುಟುಂಬ ಹಾಗೂ ಸ್ನೇಹಿತ ಬಳಗ ಸಹಾಯ ಮಾಡುವುದು. ಭೂಮಿಗೆ ಸಂಬಂಧಿಸಿದ ಉದ್ಯೋಗವನ್ನು ಆರಂಭ ಮಾಡಬೇಡಿ. ಇರುವ ಉದ್ಯೋಗವು ಯಥಾಸ್ಥಿತಿಯಲ್ಲಿ ಇರಲಿ. ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸೋಲುವಿರಿ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಇನ್ನೊಬ್ಬರ ವಾಹನ ಚಲಾಯಿಸಬೇಕಾದೀತು.

ಮಕರ ರಾಶಿ :ನೀವು ಇಂದು ಅನಗತ್ಯ ವಾದಗಳಿಗೆ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುವದರ ಜೊತೆ ಹೆಸರೂ ಹಾಳಾಗುವುದು. ಹೆಚ್ಚುವರಿ ಆದಾಯವನ್ನು ಗಳಿಸಲು ನಿಮ್ಮ ಕ್ರೀಯಾಶೀಲತೆ ಅಗತ್ಯವಾಗಿ ಬೇಕು. ಭೂಮಿಯ ವ್ಯವಹಾರವನ್ನು ಸದ್ಯ ಮುಂದುವರಿಸಬೇಡಿ. ಕೈ ತಪ್ಪಿ ಹೋದೀತು. ನ್ಯಾಯಾಲಯದ ಮೆಟ್ಟಿಲೇರಿದ ದೂರು ಇಂದು ಇತ್ಯರ್ಥವಾದೀತು. ಕಲೆಗಳಲ್ಲಿ ಆಸಕ್ತಿ ಇಲ್ಲದೇ ನೀರಸವಾಗಿ ಇರುವಿರಿ. ಉದ್ಯೋಗದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಬಹುದು. ದಾಂಪತ್ಯದ ಉತ್ತಮ ಹಾಗೂ ಖುಷಿಯ ದಿನವನ್ನು ಅನುಭವಿಸುವಿರಿ. ಅಪರಿತರು ನಿಮಗೆ ಸಹಾಯವನ್ನು ಮಾಡಲು ಬಂದರೆ ನೀವು ಅದನ್ನು ಸ್ವೀಕರಿಸುವುದಿಲ್ಲ. ಕೆಲಸಗಳು ಕೈಗೂಡುವುದು ಎಂಬ ಆಸೆ ಇರಲಿದೆ. ಕಛೇರಿಯಲ್ಲಿ ಗೌರವ ಸಿಗಲಿದೆ. ಎಂದೂ ನಂಬದವರ ಮಾತನ್ನು ನೀವು ಇಂದು ನಂಬಬೇಕಾಗುವುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಇಂದು ಪರಿಶ್ರಮವಿದ್ದರೂ ಫಲವು ಅಲ್ಪವಿರಲಿದೆ.

ಕುಂಭ ರಾಶಿ :ಇಂದು ನಿಮ್ಮ ಉದಾರತೆಯು ಖರ್ಚಿನಿಂದ ಆರಂಭವಾಗುವುದು. ಮನೆಗೆ ಅತಿಥಿಗಳ ಆಗಮನವು ಹೊಸ ಮೆರಗನ್ನು ಕೊಡುವುದು. ಮೇಲಧಿಕಾರಿಗಳ ವರ್ತನೆಯಿಂದ ಉದ್ಯೋಗವನ್ನು ಬಿಡುವ ಯೋಚನೆ ಮಾಡುವಿರಿ ಮತ್ತು ಮುಂದಿನ ವೃತ್ತಿಜೀವನದ ಬಗ್ಗೆ ಗೊಂದಲವೂ ಇರಬಹುದು. ಮಿತ್ರರ ಸಹಾಯದಿಂದ ಬಂದೊದಗಿದ ಅಪಾಯವನ್ನು ದೂರಮಾಡಿಕೊಳ್ಳುವಿರಿ. ಅವಿಶ್ರಾಂತ ಕೆಲಸವು ನಿಮಗೆ ಆಯಾಸವನ್ನು ನೀಡುವುದು. ಆರೋಗ್ಯದಲ್ಲಿ ವ್ಯತ್ಯವಾಗಬಹುದು. ಬಂಧುಗಳು ನಿಮ್ಮನ್ನು ಆಡಿಕೊಳ್ಳುವರು. ಆಲಸ್ಯದಿಂದ ಕೆಲಸವು ಹಿಂದೆ ಬೀಳುವುದು. ಇಂದು ನಡೆದ ಅಹಿತಕರ‌ ಘಟನೆಯನ್ನು ಕೆಟ್ಟ ಘಳಿಗೆ ಎಂದು ಮರೆತುಬಿಡಿ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಚುಚ್ಚಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಮೊದಲು ನಿಷ್ಠುರದ ಮಾತನಾಡಿ ಅನಂತರ ಪಶ್ಚಾತ್ತಾಪಗೊಳ್ಳುವಿರಿ.

ಮೀನ ರಾಶಿ :ಇಂದು ನಿಮ್ಮ ಸಂತೋಷದ ಕ್ಷಣಗಳನ್ನು ನೀವೇ ಸೃಷ್ಟಿಸಿಕೊಳ್ಳುವಿರಿ. ಮನೆಯಲ್ಲಿ, ನಿಮ್ಮ ಮಕ್ಕಳು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲಾರರು. ಕುಟುಂಬದ ಹಿರಿಯರಿಗೆ ನೀಡಬೇಕಾದ ಗೌರವವನ್ನು ನೀಡಿ. ನಿರಂತರವಾಗಿ ನಡೆಸಿಕೊಂಡುಬಂದ ಉದ್ಯಮದಿಂದ ಲಾಭವಾಗುವುದು. ಆರೋಗ್ಯವನ್ನು ನಿಮ್ಮ ಕೈಯ್ಯಾರೆ ಹಾಳು ಮಾಡಿಕೊಳ್ಳುವಿರಿ. ಯೋಗ್ಯವಾದ ಔಷಧೋಪಚಾರವು ಸಿಗುವುದು. ನಿದ್ರಾಹೀನತೆಯಿಂದ ಬಳಲುತ್ತಿದ್ದು ವಾತಾವರಣವು ನಿಮ್ಮ ನಿದ್ರೆಗೆ ಪೂರಕವಾಗಿರದೇ ಇರುವುದು ಕಾರಣವಾಗಿದೆ. ಕುಟುಂಬದಿಂದ ನಿರೀಕ್ಷಿಸುವ ವಸ್ತುವು ನಿಮಗೆ ಸಿಗಲಿದೆ. ನಿಮ್ಮ ಯಶಸ್ಸನ್ನು ಕಂಡು ಅಸೂಯೆ ಪಡುವರು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು. ಪರ ಊರಿನಲ್ಲಿ ಇಂದು ವಾಸವಾಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​