AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಈ ರಾಶಿಯವರಿಗೆ ಇಂದು ಅಶುಭವಾರ್ತೆಯು ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಈ ರಾಶಿಯವರಿಗೆ ಇಂದು ಅಶುಭವಾರ್ತೆಯು ಬರಲಿದೆ
ದಿನಭವಿಷ್ಯImage Credit source: freepik
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 27, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಪರಿಘ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:56 ರ ವರೆಗೆ, ಯಮಘಂಡ ಕಾಲ 14:05 ರಿಂದ 15:39 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:13 ರಿಂದ 07:47 ರ ವರೆಗೆ

ಧನು ರಾಶಿ :ಯಾವುದೇ ಒಪ್ಪಂದವನ್ನು ಮಾಡುವಾಗಲೂ ಅನುಭವಿಗಳ ಜೊತೆ ಚರ್ಚಿಸಿ. ಭೂಮಿಯ ವ್ಯವಹಾರವು ನಿಮಗೆ ಲಾಭವನ್ನು ತರುವುದು. ಮಕ್ಕಳಿಂದ ನಿಮಗೆ ಅಶುಭವಾರ್ತೆಯು ಬರಲಿದೆ. ತಂದೆ ಹಾಗು ತಾಯಿಯರ ಆಶೀರ್ವಾದವನ್ನು ಪಡೆದು ನಿಮ್ಮ ಕೆಲಸಕ್ಕೆ ತೆರಳಿ. ತಂತ್ರಜ್ಞರಿಗೆ ಉನ್ನತಸ್ಥಾನಕ್ಕೆ ಹೋಗುವ ಸಾಧ್ಯತೆ ಇರುತ್ತದೆ. ಇಂದಿನ ಹಗಲು ನಿಮಗೆ ನಿಧಾನವಾಗಿ ಇರುವಂತೆ ಅನ್ನಿಸಬಹುದು. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ಶುಭ ಸಮಾಚಾರದಿಂದ ಮನಸ್ಸು ಅರಳುವುದು. ಯಾರನ್ನೂ ತಾರತಮ್ಯ ಭಾವದಿಂದ ನೋಡುವುದು ಬೇಡ. ಕಛೇರಿಯ ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು. ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದೆ. ಪ್ರೇಮದ ವಿಚಾರಕ್ಕೆ ನಿಮ್ಮ ಮನಸ್ಸು ಕರಗುವುವುದು‌.

ಮಕರ ರಾಶಿ :ನಿಮ್ಮ ಹಠದ ಸ್ವಭಾವವು ಇತರರಿಗೆ ಕಷ್ಟವಾಗುವುದು. ನಿಮಗೆ ಬೇಕಾದುದನ್ನೇ ಮಾಡಿಕೊಳ್ಳುವ ಛಾತಿಯು ಇಂದು ಇರಲಿದೆ. ಹಣಕಾಸಿನ ಕುರಿತು ಅತಿಯಾದ ಆಲೋಚನೆಯು ನಿಮ್ಮನ್ನು ಅತಿಯಾಗಿ ಕಾಡಬಹುದು. ಸಮಯವನ್ನು ನಿರೀಕ್ಷಿಸುವುದು ಒಳ್ಳೆಯದು. ಕಾಲವು ಎಲ್ಲವನ್ನೂ ಒದಗಿಸಿಕೊಡುತ್ತದೆ. ಹೂಡಿಕೆಯಲ್ಲಿ ಸರಿಯಾದ ಸಮಯವನ್ನು ನೋಡಿಕೊಳ್ಳಿ. ಸಮಯೋಚಿತವಾಗಿ ಕಾರ್ಯವನ್ನು ಮಾಡಿ. ದೂರಪ್ರಯಾಣವನ್ನು ಮೊಟಕುಗೊಳಿಸಿ. ವ್ಯಾಪರದಲ್ಲಿ ಲಾಭವಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ. ಒಂಟಿತನವನ್ನು ಹೋಗಲಾಡಿಸಲು ಏನಾದರೂ ಮಾಡುವಿರಿ.

ಕುಂಭ ರಾಶಿ :ನೀವು ಕಂಡಿದ್ದು ಮಾತ್ರ ಸತ್ಯವಲ್ಲವೆಂಬುದನ್ನು ಅರಿತುಕೊಳ್ಳಲಾಗದು. ಕುಟುಂಬದವರೇ ಆದ ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗುವಿರಿ. ಎಷ್ಟೋ ದಿನದ ಸಾಲಗಳು ಇಂದು ಮುಕ್ತಾಯಗೊಳ್ಳುವುದು. ಕಛೇರಿಯಲ್ಲಿ ಸಹೋದ್ಯೋಗಿಗಳ ಬಗ್ಗೆ ಎಚ್ಚರಿಕೆ ಇರಲಿ. ಸಮಾಧಾನದಿಂದ ಎಲ್ಲವನ್ನೂ ನಿಭಾಯಿಸಿ. ಕಾಲು ಕೆರೆದುಕೊಂಡು ಯಾರೊಂದಿಗೂ ಜಗಳವಾಡಬೇಡಿ. ರಾಜಕೀಯದ ಒತ್ತಡವು ಅಧಿಕಾರದಲ್ಲಿ ಇದ್ದವರಿಗೆ ಬರಲಿದೆ. ಆದಷ್ಟು ಸ್ವಂತಿಕೆಯನ್ನು ಇಟ್ಟುಕೊಂಡು ಕೆಲಸ ಮಾಡಿ. ಕಾರ್ಯದಲ್ಲಿ ಆಗುವ ತೊಂದರೆಗಳಿಗೆ ಹಿರಿಯರ ಮಾರ್ಗದರ್ಶನವನ್ನು ಪಡೆಯಿರಿ. ಹೂಡಿಕೆಯನ್ನು ಒತ್ತಾಯದ ಕಾರಣಕ್ಕೆ ಮಾಡುವಿರಿ. ಎಲ್ಲದರಲ್ಲಿಯೂ ತಪ್ಪನ್ನು ಹುಡುಕುತ್ತ ಕಾಲಹರಣ ಮಾಡುವುದು ಬೇಡ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಸದೀತು. ಬೇರೆಯವರು ನಿಮ್ಮನ್ನು ಹೀಗಳೆಯಬಹುದು.

ಮೀನ ರಾಶಿ :ಇಂದು ನಿಮ್ಮ ಮನಸ್ಸಿಗೆ ಶಾಂತಿಯೂ ನೆಮ್ಮದಿಯೂ ಇರುತ್ತದೆ. ನಿಮ್ಮ ತಮಾಷೆಯಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ಹಿರಿಯ ಹಾಗೂ ಪ್ರಮುಖವ್ಯಕ್ತಿಗಳನ್ನು ಇಂದು ಭೇಟಿಯಾಗುತ್ತೀರಿ. ನೀವು‌ ಮಾಡುವ ಕಾರ್ಯಕ್ಕೆ ಇತರರ ಸಹಾಯವೂ ಲಭ್ಯವಾಗಲಿದೆ. ನಿಮ್ಮ ಹತ್ತಿರದರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಜಾಣ್ಮೆಯಿಂದ ಅದನ್ನು ಬಗೆಹರಿಸಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಳವನ್ನು ಬದಲಿಸುವಿರಿ. ಭೂಮಿಯ ಮಾರಾಟದಿಂದ ಕಲಹವಾಗುವುದು. ಧಾರ್ಮಿಕ ವಿಚಾರದಲ್ಲಿ ಭಕ್ತಿ ಇರದು. ಸಂಸಾರದ ಕಲಹಕ್ಕೆ ಮನಸ್ಸು ಕೊಡದೇ ಪ್ರಸನ್ನ ಮನಸ್ಸಿನಿಂದ ಇರುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಆರೋಗ್ಯದ ರಹಸ್ಯವನ್ನು ಇತರರಿಗೂ ತಿಳಿಸುವಿರಿ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ