Horoscope: ದಿನಭವಿಷ್ಯ: ಇಂದು ಏನಾದರೂ ಅವಘಡಗಳು ಸಂಭವಿಸಬಹುದು-ಎಚ್ಚರ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಸಿದ್ಧ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:47 ರಿಂದ 09:21 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:56 ರಿಂದ ಮಧ್ಯಾಹ್ನ 12:30 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:39 ರ ವರೆಗೆ
ಧನು ರಾಶಿ: ಇಂದು ನೀವು ನೋಡಲು ಸಾಮಾನ್ಯರಂತೆ ಕಂಡರೂ ನಿಮ್ಮ ಪ್ರಭಾವವು ಅಧಿಕವಾಗಿರುತ್ತದೆ. ಸಾಮಾಜಿಕವಾಗಿ ನಿಮ್ಮನ್ನು ಗುರುತಿಸಿ ಸಮ್ಮಾನಿಸಬಹುದು. ಕಲಾವಿದರಾಗುವ ಆಸೆ ಪೂರ್ಣವಾಗುವುದು. ಆಕಸ್ಮಿಕ ಧನಲಾಭವು ನಿಮ್ಮ ಬದುಕನ್ನು ಖುಷಿಯಾಗಿ ಇಡಲಿದೆ. ಮತ್ತೊಬ್ಬರಿಗೆ ಸಹಾಯ ಮಾಡುವ ಅವಕಾಶ ಬಂದಾಗ ಅದನ್ನು ಅಲ್ಲಗಳೆಯಬೇಡಿ. ಉದ್ಯೋಗದ ಸ್ಥಳ ನಿಮಗೆ ಅನೇಕ ಅನುಕೂಲಗಳನ್ನು ಮಾಡಬಹುದು. ವಿದ್ಯಾಭ್ಯಾಸಕ್ಕೆ ಅತಿಯಾದ ಹಣಕಾಸಿನ ಖರ್ಚು ಬರಲಿದ್ದು, ನಿಮಗೆ ಕಷ್ಟವಾಗುವುದು. ಅಸೂಯೆಯಿಂದಾಗಿ ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ.
ಮಕರ ರಾಶಿ: ನಿಮ್ಮ ಕಾರ್ಯದ ದಕ್ಷತೆಯನ್ನು ಗಮನಿಸಿ, ಉನ್ನತ ಸ್ಥಾನವು ಸುಗುವುದು. ಕೆಲವರಿಗೆ ವೃತ್ತಿಯನ್ನು ಬದಲಿಸಬೇಕಾಗಿ ಬರಬಹುದು. ಮನೆಯಲ್ಲಿ ಸುಂದರ ವಾತಾವರಣವಿರುತ್ತದೆ. ಸಂಗಾತಿಯಿಂದ ದೂರ ಉಳಿಯಬೇಕಾದ ಸ್ಥಿತಿ ಬರಬಹುದು. ಮಾತಿನಿಂದ ಯಾರನ್ನೂ ಟೀಕಿಸಲು ಹೋಗಬೇಡಿ. ನಿಮ್ಮನ್ನು ಟೀಕಿಸಲು ಜನರು ಕಾದುಕುಳಿತಿರುತ್ತಾರೆ. ಎಷ್ಟೋ ವಿಷಯಗಳು ಅರ್ಥವಾಗದೇ ಮುಗಿದುಹೋಗಿದೆ ಎಂದು ಅನ್ನಿಸುತ್ತಿರುತ್ತದೆ. ಇಂದು ನಿಮಗೆ ರಾಜಕೀಯ ವ್ಯಕ್ತಿಗಳ ಭೇಟಿಯಾಗುವುದು. ಮಾರುಕಟ್ಟೆಗೆ ಸಂಬಂಧಿತ ಕಾರ್ಯಗಳನ್ನು ಮಾಡಲು ಸರಿಯಾದ ಸಮಯ. ಹೊಸಬರನ್ನು ಸಾಮಾಜಿಕ ತಾಣದಲ್ಲಿ ಪರಿಚಯ ಮಾಡಿಕೊಳ್ಳುವಿರಿ. ತಂದೆಯ ಮಾತನ್ನು ಉಳಿಸಿಕೊಳ್ಳಲು ನಿಮ್ಮ ಶ್ರಮವು ಬಳಕೆಯಾಗುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು.
ಕುಂಭ ರಾಶಿ: ಇಂದು ನಿಮ್ಮ ಸಂಬಂಧದ ಮೌಲ್ಯವು ತಿಳಿಯುವುದು. ಮನೆಯವರ ಚಿಂತೆಯು ನಿಮ್ಮನ್ನು ಬಹಳ ಕಾಡಬಹುದು. ಸಹೋದರರ ಜೊತೆ ಕಲಹವು ಏರ್ಪಟ್ಟು ಕೆಲವು ಕಾಲ ಮೌನವಹಿಸುವಿರಿ. ಕೃಷಿಯ ಜೀವನ ನಿಮಗೆ ಬಹಳ ಸುಖವನ್ನು ನೀಡುತ್ತದೆ ಎಂದನ್ನಿಸುತ್ತಿರುತ್ತದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗಲಿದೆ. ನೀವು ಇಂದು ಜನರೊಡನೆ ಬೆರೆಯಲು ಬಿಡುವಿನ ವೇಳೆಯನ್ನು ಹೊಂದಿದ್ದೀರಿ. ಏನಾದರೂ ಅವಘಡಗಳು ಸಂಭವಿಸಬಹುದು. ವೈವಾಹಿಕ ಸಂಬಂಧಗಳಲ್ಲಿ ಸಾಮರಸ್ಯ ಇರಲಿದೆ. ಮಕ್ಕಳ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ. ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ.
ಮೀನ ರಾಶಿ: ಇಂದು ನೀವು ಭೂಮಿಯ ವ್ಯವಹಾರವನ್ನು ಮಾಡಿದರೆ ಲಾಭವನ್ನು ಪಡೆಯುವಿರಿ. ನೀವು ಪ್ರಯತ್ನಿಸಿದ ಕಾರ್ಯಗಳು ಫಲವನ್ನು ಕೊಡಲಿವೆ. ವಾಹನವನ್ನು ಓಡಿಸುವ ಎಚ್ಚರಿಕೆಯಿಂದ ಇರಿ. ದೂರದ ಊರಿಗೆ ಅನಿವಾರ್ಯವಾಗಿ ಹೋಗಿ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ಯಾರದೋ ಸಿಟ್ಟನ್ನು ಯಾರ ಮೇಲೋ ತೀರಿಸಿಕೊಳ್ಳುವ ನಿಮ್ಮ ಸ್ವಭಾವವು ಒಳ್ಳೆಯದಲ್ಲ. ತಿದ್ದಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಕರ್ತವ್ಯಗಳನ್ನು ಮಾಡಲು ಹಿಂದೇಟು ಹಾಕದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ. ನಿಮ್ಮ ಮದುವೆ ಈ ದಿನ ಒಂದು ತಿರುವನ್ನು ತೆಗೆದುಕೊಳ್ಳುತ್ತದೆ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವನ್ನು ನೀಡುತ್ತಾನೆ.
ಲೋಹಿತ ಹೆಬ್ಬಾರ್ – 8762924271 (what’s app only)




