Horoscope: ದಿನಭವಿಷ್ಯ: ಸಿಟ್ಟಿನ ಭರದಲ್ಲಿ ವಿವೇಚನೆಯನ್ನು ಕಳೆದುಕೊಳ್ಳುವಿರಿ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 16 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಸಿಟ್ಟಿನ ಭರದಲ್ಲಿ ವಿವೇಚನೆಯನ್ನು ಕಳೆದುಕೊಳ್ಳುವಿರಿ
ರಾಶಿ ಭವಿಷ್ಯ
Edited By:

Updated on: May 16, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ:
ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಮಘಾ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ 14:05ರಿಂದ 15:41ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:06 ರಿಂದ 07:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:18ರಿಂದ 10:53ರ ವರೆಗೆ.

ಧನು ರಾಶಿ :ಸಿಟ್ಟಿನ ಭರದಲ್ಲಿ ವಿವೇಚನೆಯನ್ನು ಕಳೆದುಕೊಳ್ಳುವಿರಿ. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ತೀರ್ಥ ಕ್ಷೇತ್ರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಪುಣ್ಯವೆಂದು ಭಾವಿಸಿ. ಅಧಿಕಾರ ಪ್ರಾಪ್ತಿಗಾಗಿ ನೀವು ತಂತ್ರ ಹೂಡುವಿರಿ. ಮಕ್ಕಳ ಮೇಲೆ ಪಕ್ಷಪಾತ ಮಾಡುವುದು ಬೇಡ. ಮಾತನಾಡುವಾಗ ಒಂದು ಮಿತಿಯಲ್ಲಿ ಇರಲಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಇಂದು ಸೇವಿಸುವ ಆಹಾರದ ಬಗ್ಗೆ ನಿಮಗೆ ಸರಿಯಾದ ನಿಗಾ ಇರಲಿ. ಕಳೆದುಕೊಂಡಿದ್ದನ್ನು ಹೇಗಾದರೂ ಮಾಡಿ ಪಡೆದುಕೊಳ್ಳುವಿರಿ.

ಮಕರ ರಾಶಿ :ಇಂದು ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳನ್ನು ಎದುರಿಸಬೇಕಾಗುವುದು. ಕುಟುಂಬದವರ ಅನಾರೋಗ್ಯದ ಕಾಳಜಿ‌ ಮಾಡಬೇಕಾಗುವುದು. ಮಿತ್ರರು ನಿಮ್ಮ ಮೇಲೆ‌ ಅಪವಾದ ಹಾಕಬಹುದು. ಮನೆಯಲ್ಲಿಯೇ ಕುಳಿತು ಉದ್ಯೋಗವನ್ನು ಮಾಡಿ ಆರ್ಥಿಕತೆಯನ್ನು ಸುಧಾರಿಸಿಕೊಳ್ಳುವಿರಿ. ಅಧಿಕ ಖರ್ಚನ್ನು ನಿಯಂತ್ರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಅಶಕ್ತರಿಗೆ ಸಹಾಯ ನಿಮ್ಮಿಂದ ಸಹಕಾರ ನೀಡಿ. ಯಾರಾದರೂ ನಿಮ್ಮನ್ನು ಯಾವುದಾದರೂ ಕಾರ್ಯಕ್ಕೆ ಪ್ರೋತ್ಸಾಹಿಸಬಹುದು. ನಿಮ್ಮ ಬಗ್ಗೆ ನಿಮಗೆ ಗೊತ್ತಿರಲಿ. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ಕಲಾವಿದರಿಗೆ ಅವಕಾಶಗಳು ಸಿಗುವುದು.

ಕುಂಭ ರಾಶಿ :ಹೂಡಿಕೆಯಿಂದ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು‌ ಮರುಕಳಿಸಬಹುದು. ಪರಸ್ಪರ ಪ್ರೀತಿಯು ದಾಂಪತ್ಯದಲ್ಲಿ ಹೊಂದಾಣಿಕೆ ಬೆಳೆಯುವುದು. ಅಧಿಕ ಕೋಪದಿಂದ ಆಗಬೇಕಾದ ಕಾರ್ಯವನ್ನು ಹಾಳುಮಾಡಿಕೊಳ್ಳುವಿರಿ. ವ್ಯಾವಹಾರಿಕ ದಾಖಲೆಗಳನ್ನು ನೀವು ಭದ್ರವಾಗಿ ಇರಿಸಿಕೊಳ್ಳಿ. ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮೈಯ್ಯಲ್ಲ ಕಣ್ಣಿದ್ದರೂ ನಿಮಗೆ ವಂಚಿಸುವವರು ಇರುವರು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.

ಮೀನ ರಾಶಿ :ಇಂದು ನಿಮಗೆ ವ್ಯಾಪಾರದಲ್ಲಿ ಅಂದುಕೊಂಡಷ್ಟು ಸಾಧಿಸಲಾಗದೇ ಬೇಸರವಾಗಬಹುದು. ಧನವು ವ್ಯಯವಾಗುವ ಬಗ್ಗೆ ನಿಮಗೆ ಅಸಮಾಧಾನವಿದ್ದು, ಅದನ್ನು ಸರಿಯಾದ ರೀತಿಯಲ್ಲಿ ವ್ಯಯವಾಗುವಂತೆ ನೋಡಿಕೊಳ್ಳಿ. ಶತ್ರುಬಾಧೆಯಿಂದ ನಿಮ್ಮ ಕಾರ್ಯಗಳು ಹಿಂದುಳಿಯುವುದು. ಆತ್ಮೀಯರ ಜೊತೆ ಮನಸ್ತಾಪವಿರುವುದು. ಕಲಿತ ವಿದ್ಯೆಯ ಪ್ರದರ್ಶನಕ್ಕೆ ಅವಕಾಶವು ಸಿಗಲಿದೆ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ವ್ಯಾಪಾರದ ಆದಾಯಕ್ಕೆ ನಿಮ್ಮದೇ ತಂತ್ರವನ್ನು ಬಳಸುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ಕಾರ್ಯದಲ್ಲಿ ಶ್ರದ್ಧೆಯು ಕಡಿಮೆಯಾಗುವುದು. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ನಿಮ್ಮನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವಿರಿ. ಕಾನೂನಾತ್ಮಕ ಹೋರಾಟಕ್ಕೆ ನಿಮಗೆ ಯಾರಿಂದಲಾದರೂ ಬೆಂಬಲವು ಇರುವುದು.

-ಲೋಹಿತ ಹೆಬ್ಬಾರ್ – 8762924271 (what’s app only)