Horoscope: ದಿನಭವಿಷ್ಯ: ಇಂದು ನಿಮಗೆ ಉತ್ತಮ ಅವಕಾಶಗಳು ಸಿಗಲಿವೆ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 18 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವ್ಯಾಘಾತ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ ಬೆಳಗ್ಗೆ10:53ರ ವರೆಗೆ, ಯಮಘಂಡ ಕಾಲ 14:05 ರಿಂದ 15:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05ರಿಂದ ಬೆಳಗ್ಗೆ 07:41ರ ವರೆಗೆ.
ಧನು ರಾಶಿ :ಇಂದು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ಆಸಕ್ತಿ ಇರುವುದು. ಸಾಲ ಕೊಡಲಿಕ್ಕಾಗಿ ಬರುವ ದೂರವಾಣಿ ಕರೆಗಳನ್ನು ನಿರ್ಲಕ್ಷಿಸಲಿದ್ದೀರಿ. ಇಂದು ನೀವು ಪ್ರಮುಖ ನಿರ್ಧಾರಗಳನ್ನು ಸ್ವೀಕರಿಸುವ ಸಾಧ್ಯತೆ ಇದೆ. ಭವಿಷ್ಯದ ನಿರ್ಧಾರಗಳನ್ನು ಬದಲಿಸಿಕೊಳ್ಳಲಿದ್ದೀರಿ. ಉದ್ಯೋಗದಲ್ಲಿ ಇರುವವರ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸುವಿರಿ. ಪೂರ್ವ ನಿಶ್ಚಿತ ಕಾರ್ಯವನ್ನು ನೀವು ಬದಲಿಸುವಿರಿ. ನಿಮ್ಮ ಸಂಗಾತಿಯು ನಿಮ್ಮ ಕೆಲಸಗಳಿಗೆ ಸಲಹೆಯನ್ನು ನೀಡಲಿದ್ದಾರೆ. ಇದರಿಂದ ನಿಮಗೆ ಪ್ರಯೋಜನವಾಗಲಿದೆ. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ ಮನಸ್ಸಿನಿಂದ ಮಾತನಾಡಿ.
ಮಕರ ರಾಶಿ :ನೀವು ಸಂಪತ್ತನ್ನು ದಾನ ಮಾಡಲಿದ್ದೀರಿ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮನಸ್ಸು ನಿಮ್ಮಲ್ಲಿರಲಿದೆ. ಅಪರಿಚಿತರು ಭೇಟಿಯಾಗಿ ನಿಮ್ಮ ಕಿವಿ ಚುಚ್ಚಲಿದ್ದಾರೆ. ನೀವು ಮಾಡಲಿರುವ ಕೆಲಸದ ಮೇಲೆ ನಿಮ್ಮ ಗಮನವಿರಲಿ. ಭೂಮಿಗೆ ಸಂಬಂಧಿಸಿದಂತೆ ಕೆಲವು ಯೋಜನೆ ಜಾರಿಗೊಳಿಸುವ ಅನಿವಾರ್ಯತೆ ಬರಲಿದೆ. ಅನಗತ್ಯ ಖರ್ಚುಗಳನ್ನು ಮಾಡಬೇಕಾಗಿಬರಬಹುದು. ವ್ಯಾಪಾರ ಇಂದು ನಿಧಾನಗತಿಯಲ್ಲಿ ಸಾಗಲಿದೆ. ಯಾರದೋ ಕಾರಣಕ್ಕೆ ಅಪರಿಚಿತರ ಸಂಪರ್ಕವನ್ನು ಮಾಡಬೇಕಾದೀತು. ಸ್ನೇಹಿತರಿಂದ ಆರ್ಥಿಕತೆಗೆ ಸಹಾಯವು ಸಿಗುವುದು. ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಇರಲಿದೆ. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ.
ಕುಂಭ ರಾಶಿ :ಇಂದು ಕಾರ್ಯವನ್ನು ಆರಂಭಿಸುವ ಮೊದಲು ಸಂಪೂರ್ಣ ಯೋಜನೆ ಸಿದ್ಧವಿರಲಿ. ಮನೆಗೆ ಸಂಬಂಧಿಸಿದಂತೆ ಸರಿಯಾದ ಖರ್ಚುಗಳ ಮಾಹಿತಿ ಇಲ್ಲದೇ ಅಧಿಕ ಖರ್ಚನ್ನು ಮಾಡಬೇಕಾಗಿಬರಬಹುದು. ಇಂದು ಹೊರಾಂಗಣ ಚಟುವಟಿಕೆಗಳಲ್ಲಿ ಸಮಯ ವ್ಯರ್ಥವಾಗಲಿದೆ. ಓಡಾಟದಿಂದ ಸರಿಯಾದ ಫಲಿತಾಂಶವು ಸಿಗದು. ಮನಸ್ಸು ಉದ್ವೇಗಕ್ಕೆ ಒಳಗಾದೀತು. ಅಹಂಕಾರವು ನಿಮಗೆ ಶೋಭೆ ತರದು. ಇಂದು ವೈವಾಹಿಕ ಸಂಬಂಧದಲ್ಲಿ ಸಮಸ್ಯೆಗಳನ್ನು ಉಂಟು ಮಾಡಬಹುದು. ಉದ್ಯಮದಲ್ಲಿ ಅಧಿಕ ಚಿಂತೆಯು ಇರಲಿದ್ದು ಪ್ರಯತ್ನವು ಅಧಿಕವಾಗಿ ಇರುವುದು. ಸಂಗಾತಿಯ ಮಾತನ್ನು ಇಂದು ಅನುಸರಿಸುವಿರಿ. ತಂತ್ರಜ್ಞರು ವಹಿಸಿಕೊಂಡ ಕಾರ್ಯದ ಗಡುವುದು ಸಮೀಪಿಸಿದ್ದು, ತುರ್ತು ಕಾರ್ಯವನ್ನು ಮಾಡಬೇಕಿದೆ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು.
ಮೀನ ರಾಶಿ :ಇಂದು ನಿಮ್ಮ ಕನಸುಗಳು ನನಸಾಗಿಸುವ ಸಮಯವನ್ನು ಎದುರು ನೋಡುತ್ತಿರುವಿರಿ. ಇತರರ ಸಲಹೆಗಳನ್ನು ಕೇಳಿ, ನಿಮಗೆ ಸರಿ ಅನಿಸಿದಂತೆ ಮಾಡುವಿರಿ. ನಿಮಗೆ ಉತ್ತಮ ಅವಕಾಶಗಳು ಸಿಗಲಿವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ವ್ಯವಹಾರದಲ್ಲಿ ಹೊರಗಿನವರು ಬಾರದಂತೆ ನೋಡಿಕೊಳ್ಳಿ. ಉದ್ಯೋಗಿಗಳ ಜೊತೆ ಸಂಬಂಧವನ್ನು ಹಾಳು ಮಾಡಿಕೊಳ್ಳಬೇಡಿ. ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶ ಸಿಗದ ಕಾರಣ ಬೇಸರವುಂಟಾಗಬಹುದು. ಪ್ರೇಮ ವ್ಯವಹಾರದಿಂದ ದೂರವಿರುವುದು ಉತ್ತಮ. ದೂರದಲ್ಲಿ ಇದ್ದ ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರುವುದು. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಯಾವದೇ ಸಂದರ್ಭದಲ್ಲಿಯೂ ಗಾಬರಿಯಾಗದೇ ಸಮಯಪ್ರಜ್ಞೆಯಿಂದ ಮುನ್ನಡೆಯಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ.
-ಲೋಹಿತ ಹೆಬ್ಬಾರ್-8762924271 (what’s app only)