AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 18, 2021

ಜನವರಿ 18, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ

ದಿನಭವಿಷ್ಯ | ಜನವರಿ 18, 2021
ದಿನ ಭವಿಷ್ಯ
TV9 Web
| Updated By: ganapathi bhat|

Updated on:Apr 06, 2022 | 8:50 PM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಚಳಿಗಾಲ, ಸೋಮವಾರ, ಶುಕ್ಲಪಕ್ಷ, ಪಂಚಮಿ ತಿಥಿ, ಪೂರ್ವಾಭಾದ್ರೆ ನಕ್ಷತ್ರ. ರಾಹುಕಾಲ: ಬೆಳಿಗ್ಗೆ 8.13ರಿಂದ 9.37. ಸೂರ್ಯೋದಯ: ಬೆಳಿಗ್ಗೆ 6.49, ಸೂರ್ಯಾಸ್ತ: ಸಂಜೆ 6.03

ತಾ.18-01-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ 3.

ವೃಷಭ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವದು. ಶುಭ ಸಂಖ್ಯೆ 9.

ಮಿಥುನ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ 7.

ಕರ್ಕ: ವ್ಯವಹಾರಿಕ ಅಭಿವೃದ್ಧಿ ಇರುವದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವದು. ಹಾನಿಯ ಪ್ರಮಾಣ ಕಡಿಮೆಯಾಗುವದು. ಶುಭ ಸಂಖ್ಯೆ 4.

ಸಿಂಹ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ 6.

ಕನ್ಯಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ 8.

ತುಲಾ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ 1.

ವೃಶ್ಚಿಕ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ 2.

ಧನು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ 7.

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ 9.

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ 4.

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ 6.

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ್ ಗುರೂಜಿ ಸಂಪರ್ಕ ಸಂಖ್ಯೆ: 99728 48937)

Published On - 7:03 am, Mon, 18 January 21

ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!