Nitya Bhavishya: ಈ ರಾಶಿಯವರಿಗೆ ಆಕಸ್ಮಿಕವಾಗಿ ಅನಾರೋಗ್ಯವು ಕಾಣಿಸಿಕೊಳ್ಳಬಹುದು

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 01ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರಿಗೆ ಆಕಸ್ಮಿಕವಾಗಿ ಅನಾರೋಗ್ಯವು ಕಾಣಿಸಿಕೊಳ್ಳಬಹುದು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 01, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:12 ರಿಂದ 03:38ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:02 ರಿಂದ 08:ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ.

ಧನು ರಾಶಿ : ನೀವು ಯಾರಿಗಾದರೂ ಕೊಟ್ಟ ಭರವಸೆಯನ್ನು ಪೂರೈಸುವಿರಿ. ಎಲ್ಲರ ಸಹಕಾರವನ್ನು ನಿರೀಕ್ಷಿಸುತ್ತ ಇರಬೇಡಿ. ನಿಮ್ಮ ಸಂಗಾತಿಯ ವೃತ್ತಿಜೀವನದ ಬಗ್ಗೆ ನೀವು ದೊಡ್ಡ ಮುಖ್ಯ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನೀವು ಸಣ್ಣ ಪ್ರವಾಸಕ್ಕೆ ಹೋಗಬಹುದು. ವೃತ್ತಿಯನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದು ಬೇಡ. ನೀವು ಬಹಳ ಸಮಯದ ಅನಂತರ ಹಳೆಯ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಭಿನ್ನಾಭಿಪ್ರಾಯವನ್ನು ಮಾತನಾಡಿ ಪರಿಹರಿಸಬಹುದು. ನಿಮ್ಮ ಹಳೆಯ ತಪ್ಪುಗಳಿಂದ ನೀವು ಕಲಿಯಬೇಕು. ನಿಮ್ಮ ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ. ಆಹಾರ ವ್ಯತ್ಯಾಸದಿಂದ ಹೊಟ್ಟೆಯಲ್ಲಿ ಶೂಲೆ ಕಾಣಿಸಿಕೊಳ್ಳಬಹುದು. ದೇಹದಂಡನೆಯು ಹೊಸ ಖಾಯಿಲೆಯನ್ನು ತರಿಸಬಹುದು. ಮನೆಯ ಔಷಧಿಯಿಂದ ಅದನ್ನು ಸರಿ ಮಾಡಿಕೊಳ್ಳಿ. ನಿಮಗೆ ಸಂಸ್ಥೆಯಲ್ಲಿ ಕಾರ್ಯವನ್ನು ನಿರ್ವಹಿಸಲು ಕರೆ ಬರಬಹುದು. ನಿಮ್ಮ ಕಳೆದ ಜೀವನವನ್ನು ಮೆಲುಕುಹಾಕುವಿರಿ.

ಮಕರ ರಾಶಿ : ಇಂದು ಕೆಲವು ಸಂದರ್ಭದಲ್ಲಿ ಸುಳ್ಳು ಹೇಳಬೇಕಾಗಬಹುದು. ಯಾವುದೇ ಕೆಲಸದಲ್ಲಿ ನೈತಿಕತೆಯನ್ನು ಬಿಟ್ಟು ಮುನ್ನಡೆಯುವುದು ಬೇಡ. ಸಣ್ಣ ವಿಚಾರಗಳಿಗೆ ಕೊಡಬೇಕಾದುದಷ್ಟೇ ಮಹತ್ತ್ವವನ್ನು ಕೊಡಿ. ವೃತ್ತಿ ಕ್ಷೇತ್ರದಲ್ಲಿ ನೀವು ಉತ್ತಮ ಸ್ಥಾನವನ್ನು ಪಡೆಯಬಹುದು. ನಿಮ್ಮ ಸಂಪೂರ್ಣ ಗಮನವು ವೈಯಕ್ತಿಕ ವಿಷಯಗಳ ಮೇಲೆ ಇರುತ್ತದೆ. ನಿಮ್ಮ ಸಂತೋಷಕ್ಕಾಗಿ ನಿಮ್ಮ ಸ್ಥಾನ ಇರುವುದಿಲ್ಲ. ಮಕ್ಕಳ ಪಕ್ಷದಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ನಿಮ್ಮ ಜೀವನ ಸಂಗಾತಿಯಿಂದ ನೀವು ಸಾಕಷ್ಟು ಬೆಂಬಲ ಪಡೆಯುವಿರಿ. ಆಪ್ತರಿಂದ ನಿಮಗೆ ಇಷ್ಟವಾದ ವಸ್ತುವು ಪ್ರಾಪ್ತವಾಗುವುದು. ಆಕಸ್ಮಿಕವಾಗಿ ಅನಾರೋಗ್ಯವು ಕಾಣಿಸಿಕೊಳ್ಳಬಹುದು. ಸಾಲ‌ಪಡೆದವರು ನಿಮ್ಮನ್ನು ಪೀಡಿಸಬಹುದು. ಪಾಲುದಾರಿಕೆಯಲ್ಲಿ ಇಂದು ಸಣ್ಣ ವಿಚಾರಕಗಕೇ ಕಲಹವಾಗುವುದು. ಇಂದು ಅಗತ್ಯವಿರುವಷ್ಟು ಮಾತ್ರವೇ ಮಾತನಾಡಿ.

ಕುಂಭ ರಾಶಿ : ನಿಮ್ಮ ತಪ್ಪು ಮಾತುಗಳಿಗೆ ಇತರರಿಂದ ಅನುಮೋದನೆ ಸಿಗಬಹುದು. ಸರ್ಕಾರದಿಂದ ಸಿಗುವ ಯೋಜನೆಯ ಫಲವನ್ನು ಪಡೆಯುವಿರಿ. ಎದುರಾಳಿಯು ನಿಮ್ಮ‌ ವಿರುದ್ಧ ಸಂಚು ಮಾಡಬಹುದು. ಮನೆಯನ್ನು ನವೀಕರಿಸಲು ಸಹ ನೀವು ಹೆಚ್ಚು ಗಮನಹರಿಸುತ್ತೀರಿ. ನಿಮ್ಮ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಕುಟುಂಬದ ಯಾವುದೇ ಸದಸ್ಯರಿಗೆ ನೀಡಿದ ಭರವಸೆಯನ್ನು ನೀವು ಪೂರೈಸಬೇಕಾಗುತ್ತದೆ. ಇಲ್ಲದಿದ್ದರೆ ಅವರು ನಿಮ್ಮ ಜೊತೆ ಅಸಮಾಧಾನಗೊಳ್ಳಬಹುದು. ಆಕಸ್ಮಿಕ ಧನಲಾಭದಿಂದ ಸಂತಸವು ಇರಲಿದೆ. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡುವಿರಿ. ನಿಮ್ಮ ಪ್ರೀತಿಗೆ ಬೆಲೆ ಸಿಗದೇಹೋದೀತು. ಸಂಗಾತಿಯು ನಿಮಗೆ ಒಂದೇ ವಿಚಾರಗಳನ್ನು ಮತ್ತೆ ಮತ್ತೆ ಹೇಳಿ ಬೇಸರ ತರಿಸುವರು. ಮೈ ಚಳಿಯನ್ನು ಬಿಟ್ಟು ಧೈರ್ಯದಿಂದ ಮುನ್ನಡೆಯಿರಿ. ನಿಮಗಾದ ಸಹಾಯವನ್ನು ನೀವು ಸ್ಮರಿಸಿಕೊಳ್ಳುವಿರಿ.

ಮೀನ ರಾಶಿ : ಇಂದು ಆರ್ಥಿಕ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ. ಯಾವುದೇ ಕೆಲಸದಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ನಿಮ್ಮ ಕಠಿಣ ಪರಿಶ್ರಮವು ಫಲ ನೀಡುತ್ತದೆ. ನೀವು ಇಂದಿನ ಗುರಿಯನ್ನು ಸುಲಭವಾಗಿ ಸಾಧಿಸುವಿರಿ. ನಿಮ್ಮ ವ್ಯಾಪಾರ ಚಟುವಟಿಕೆಯು ಎಂದಿಗಿಂತ ಚುರುಕಾಗಿರುತ್ತದೆ. ವ್ಯವಹಾರದಲ್ಲಿ ನಿಮ್ಮ ಪ್ರಯತ್ನಗಳನ್ನು ಅಲ್ಪವಿದ್ದರೂ ಸಾಕು. ವಹಿವಾಟಿನ ವಿಷಯಗಳಲ್ಲಿ ನೀವು ಅನಾದರ ತೋರಿಸುವುದು ಬೇಡ. ಸಂತಾನ ಸುದ್ದಿಯು ನಿಮಗೆ ಖುಷಿ ಕೊಟ್ಟೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಸಹೋದರನಿಂದ ಆರ್ಥಿಕ ಸಹಕಾರವನ್ನು ನಿರೀಕ್ಷಿಸುವಿರಿ. ಆರೋಗ್ಯವು ಉತ್ತಮವಾಗಲಿದ್ದು, ಮೊದಲಿನ‌ ಸ್ಥಿತಿಗೆ ಮರಳುವಿರಿ. ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟ‌ಮಾಡುವ ಆಲೋಚನೆ ಇರಲಿದೆ. ನಿಮ್ಮ ಸ್ನೇಹಿತರಲ್ಲಿ ಇಂದು ದೊಡ್ಡ ಸಾಲವನ್ನು ಕೇಳುವಿರಿ. ಸ್ವೋದ್ಯೋಗವನ್ನು ಮಾಡುತ್ತಿದ್ದರೆ ಸ್ವಲ್ಪ ನಷ್ಟವಾಗಬಹುದು.

-ಲೋಹಿತ ಹೆಬ್ಬಾರ್-8762924271 (what’s app only)

ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ