Horoscope: ದಿನಭವಿಷ್ಯ, ಈ ರಾಶಿಯವರು ದೈವಕೃಪೆಯನ್ನು ಪ್ರಾರ್ಥಿಸಿ ಇಂದಿನ ಕಾರ್ಯ ಆರಂಭಿಸಿ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 17 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ದಿನಭವಿಷ್ಯ, ಈ ರಾಶಿಯವರು ದೈವಕೃಪೆಯನ್ನು ಪ್ರಾರ್ಥಿಸಿ ಇಂದಿನ ಕಾರ್ಯ ಆರಂಭಿಸಿ
ನಿತ್ಯಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Jan 17, 2024 | 12:45 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 17) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಶಿವ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:43 ರಿಂದ 02:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:28 ರಿಂದ 09:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:18 ರಿಂದ ಮಧ್ಯಾಹ್ನ 12:43ರ ವರೆಗೆ.

ಧನು ರಾಶಿ: ಇಂದು ಉತ್ತಮವಾದ ಆದಾಯ ಮೂಲವನ್ನು ಪಡೆಯಲು ನೀವು ಯಶಸ್ವಿಯಾಗುವಿರಿ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಕಷ್ಟಗಳು ನಿಮ್ಮ ಧೈರ್ಯಕ್ಕೆ ಶರಣಾಗಬಹುದು. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು.‌ ಆಕಸ್ಮಿಕವಾಗಿ ಉದ್ಯೋಗವು ನಿಮ್ಮ‌ ಪಾಲಿಗೆ ಬರುವುದು.‌ ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ವಿನ್ಯಾಸಕಾರರಿಗೆ ಅವಕಾಶಗಳು ಸಿಗಬಹುದು.

ಮಕರ ರಾಶಿ: ಇಂದು ತಂತ್ರಜ್ಞರು ಹೆಚ್ಚು ಕಾರ್ಯವನ್ನು ಮಾಡುವರು. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ‌ ಕೊರತೆ ಆಗುವ ಸಾಧ್ಯತೆ ಇದೆ. ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಬೇಡಿ. ಅವಕಾಶವು ಮತ್ತೆ ಮತ್ತೆ ನಿಮ್ಮ ಬಳಿ ಬರದು.‌ ಬಂದದ್ದನ್ನು ಬರಮಾಡಿಕೊಳ್ಳಿ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ಕೆಲವು ಸನ್ನಿವೇಶಗಳಿಗೆ ಪ್ರತಿಸ್ಪಂದಿಸುವ ಬಗೆ ಗೊತ್ತಾಗದೇ ಹೋಗಬಹುದು.

ಕುಂಭ ರಾಶಿ: ಪ್ರಯಾಣವನ್ನು ಜಾಗರೂಕತೆಯಿಂದ ಮಾಡಿ. ವಸ್ತುಗಳು ಕಣ್ಮರೆಯಾಗಬಹುದು. ಅಗತ್ಯದ ಕಾರ್ಯವನ್ನು ಇತರರ ಸಹಾಯವನ್ನು ಪಡೆದು ಮುಗಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಸಂಗಾತಿಯ ಜೊತೆ ಕುಳಿತು ದುಃಖದಿಂದ ಸಮಾಧಾನ ಮಾಡುವಿರಿ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ತಂದೆಯ ಮಾತು ನಿಮಗೆ ಹಿತವೆನಿಸೀತು. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ.

ಮೀನ ರಾಶಿ: ದೈವಕೃಪೆಯನ್ನು ಪ್ರಾರ್ಥಿಸಿ ಇಂದಿನ ನಿಮ್ಮ ಕಾರ್ಯವನ್ನು ಆರಂಭಿಸಿ. ವಿದ್ಯಾಭ್ಯಾಸದಲ್ಲಿ ಶಿಸ್ತನ್ನು ರೂಢಿಸಿಕೊಳ್ಳುವುದು ಉತ್ತಮ. ಉದ್ಯಮದಲ್ಲಿ ಬರುವ ಸಮಸ್ಯೆಯನ್ನೂ ನಿವಾರಿಸಿಕೊಳ್ಳುವಿರಿ. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯದ ದೃಷ್ಟಿಯಿಂದ ಇಂದು ಅನುಕೂಲವೇ. ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ.‌ ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದ ಮಾಡಿಕೊಂಡು ಬೇಸರಿಸುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ