Nitya Bhavishya: ರಾಶಿಭವಿಷ್ಯ; ಈ ರಾಶಿಯವರ ಪ್ರತಿಭೆಯ ಅನಾವರಣಕ್ಕೆ ಇಂದು ಅವಕಾಶವು ಸಿಗಬಹುದು
ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 23 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.
ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 23) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಐಂದ್ರ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:35 ರಿಂದ 05:01ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:54 ರಿಂದ 11:19ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:44 ರಿಂದ 02:10ರ ವರೆಗೆ.
ಧನು ರಾಶಿ: ನಿಮ್ಮ ಪ್ರತಿಭೆಯ ಅನಾವರಣಕ್ಕೆ ಇಂದು ಅವಕಾಶವು ಸಿಗಬಹುದು. ಚಿಕ್ಕ ಚಿಕ್ಕ ಸಮಸ್ಯೆಗಳನ್ನು ಲೆಕ್ಕಿಸಲಾರಿರಿ. ದಾಂಪತ್ಯದಲ್ಲಿ ತಾಳ್ಮೆಯ ಅವಶ್ಯಕೆ ಎದ್ದು ತೋರಬಹುದು. ನಿಮ್ಮಿಂದಾಗಿ ಕುಟುಂಬದ ಕಲಹವು ನಿಲ್ಲುವುದು. ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ಒಂದ ಕಡೆ ನಿಂತಲ್ಲಿ ನಿಲ್ಲಲಾಗದು. ನಿಮ್ಮನ್ನು ದೂರುವ ಆಪ್ತರು ಒಳ್ಳೆಯದಕ್ಕೆ ಹೇಳುವರು ಎಂಬ ಭಾವವಿರಲಿ. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ತಂದೆಯ ಆರೋಗ್ಯವು ವ್ಯತ್ಯಾಸವಾಗಲಿದ್ದು ಸೂಕ್ತ ಚಿಕಿತ್ಸೆಯನ್ನು ಕೊಡಿಸುವಿರಿ. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಹಣಕಾಸಿಗೆ ಸಂಬಂಧಿಸಿದ ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ. ನಿಮ್ಮ ಜೊತೆಗಿರುವವರನ್ನು ಚೆನ್ನಾಗಿ ನೋಡಿಕೊಳ್ಳುವಿರಿ. ಬಂಧುಗಳ ಪ್ರೀತಿಯು ನಿಮಗೆ ಸಿಗುವುದು.
ಮಕರ ರಾಶಿ: ನಿಮ್ಮ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ದೊಡ್ಡ ವ್ಯಕ್ತಿಗಳೆಂದು ಯಾರಾದರೂ ಹೇಳಿ ನಿಮಗೆ ವಂಚಿಸಬಹುದು. ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯುವಿರಿ. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬಾರದೇ ಬೆರಸರವಾದೀತು. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಉತ್ತಮ ಉದ್ಯೋಗವನ್ನು ಕಳೆದುಕೊಳ್ಳಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು. ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಕುರುಡಾಗಿ ಯಾವುದನ್ನೂ ನಂಬುವುದು ಬೇಡ.
ಕುಂಭ ರಾಶಿ: ಇಂದು ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಏನೂ ಬೇಡವೆಂಬ ಭಾವವು ಬರಬಹುದು. ಇಂದು ಆಲಂಕಾರಿಕ ವಸ್ತುಗಳ ವ್ಯಾಪಾರದಲ್ಲಿ ಲಾಭವನ್ನು ನಿರೀಕ್ಷಿಸುವಿರಿ. ವ್ಯವಹಾರದಲ್ಲಿ ಆತ್ಮವಿಶ್ವಾಸದಿಂದ ಇರಿ. ಭಯಪಡುವ ಅವಶ್ಯಕತೆ ಇರುವುದಿಲ್ಲ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಚಿರಪರಿಚಯವು ನಿಮಗೆ ಹೊಸತಾಗಿ ಕಾಣಿಸಬಹುದು. ಸಲಹೆಯನ್ನು ಪಡೆದು ನಿಮ್ಮ ನಿರ್ಧಾರವನ್ನು ಮಾಡಿ. ಅನ್ಯ ಆಲೋಚನೆಯಲ್ಲಿ ದಿನವನ್ನು ಕಳೆಯುವಿರಿ. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು.
ಮೀನ ರಾಶಿ: ವಿದ್ಯಾರ್ಥಿಗಳಿಗೆ ಸಿಹಿ ವಾರ್ತೆಯು ಸಿಗಬಹುದು. ಮನೆಯ ಹಿರಿಯರು ನಿಮಗೆ ಉಪದೇಶ ಕೊಡಬಹುದು. ನಿಮಗೆ ಗೌರವವು ಪ್ರಾಪ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆಯಾದೀತು. ಶತ್ರು ನಿಗ್ರಹ. ಬಿಡುವಿಲ್ಲದ ದುಡಿಮೆಯು ನಿಮಗೆ ಕಷ್ಟವಾಗಬಹುದು. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವಿರಿ. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ