Nitya Bhavishya: ಈ ರಾಶಿಯವರಿಗೆ ಇಂದು ಪ್ರೇಮದಿಂದ ವಂಚನೆಯಾಗಬಹುದು-ಎಚ್ಚರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 10, 2024 | 12:45 AM

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 10ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರಿಗೆ ಇಂದು ಪ್ರೇಮದಿಂದ ವಂಚನೆಯಾಗಬಹುದು-ಎಚ್ಚರ
ರಾಶಿ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಶತಭಿಷಾ, ಯೋಗ: ವರೀಯಾ‌ನ್, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:53 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:41 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:59 ರಿಂದ 08:27ರ ವರೆಗೆ.

ಧನು ರಾಶಿ : ಇಂದು ನಿಮಗೆ ಏನಾದರೂ ವಿಶೇಷವಾದ ವಸ್ತುವು ಸಿಗಬಹುದು. ಪ್ರೇಮದಿಂದ ವಂಚನೆಯಾಗಬಹುದು. ಹಣವನ್ನು ಸಾಲವಾಗಿ ಯಾರಿಂದಲೂ ಪಡೆಯಲು ಹೋಗುವುದು ಬೇಡ. ನಿಮ್ಮ ಮನೆಯನ್ನು ನವೀಕರಿಸಲು ಬೇಕಾದ ತಯಾರಿಯಲ್ಲಿ ಇರುವಿರಿ. ಚಂಚಲವಾದ ಮನಸ್ಸನ್ನು ನೀವು ಒಂದೇ ಕಡೆ ನಿಲ್ಲಿಸುವುದು ಕಷ್ಡವಾದೀತು. ಹೊಸ ವಸ್ತುಗಳ ಖರೀದಿಗೆ ಹಿಂಜರಿಕೆ ಇರುವುದು. ನಿಮ್ಮ ಕುಟುಂಬದ ದೀರ್ಘಕಾಲದ ವಿವಾದವು ಅನ್ಯರ ಮೂಲಕ ಮುಕ್ತಾಯವಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಪೂರ್ವ ತಯಾರಿ ಇಲ್ಲದೇ ಯಾವ ಕಾರ್ಯವನ್ನೂ ಮಾಡುವುದು ಸರಿಯಾಗದು. ಉದ್ಯಮವನ್ನು ಬೆಳೆಸುವ ಚಿಂತನೆ ಮಾಡುವಿರಿ. ಪ್ರಭಾವೀ ವ್ಯಕ್ತಿಗಳ ನಡೆಯನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಸಮಸ್ಯೆಗಳನ್ನು ಹಂಚಿಕೊಳ್ಳಲು ನಿಮಗೆ ಇಷ್ಟವಾಗದು.

ಮಕರ ರಾಶಿ : ಸಾಮಾಜಿಕ ಕಾರ್ಯವು ನಿಮಗೆ ಖುಷಿ ಕೊಡಬಹುದು. ಬಡ್ತಿ ಸಿಗದೇ ಬೇಸರವಾಗುವ ಸಾಧ್ಯತೆ ಇದೆ. ನೀವು ನಿಮ್ಮದೇ ಕಲ್ಪನಾ ಲೋಕದಲ್ಲಿ ಹೆಚ್ಚು ಇರುವಿರಿ. ವ್ಯಾಪಾರದಲ್ಲಿ ಹೊಸ ಹೂಡಿಕೆ ಮಾಡಲು ಮನಸ್ಸಿರುವುದು. ಸ್ಥಿರಾಸ್ತಿಯನ್ನು ಹೆಚ್ಚು ಮಾಡಿಕೊಳ್ಳುವ ಬಯಕೆ ಅತಿಯಾದೀತು. ಹಿರಿಯರ ಮಾತನ್ನು ಧಿಕ್ಕರಿಸಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು. ಅನಾರೋಗ್ಯದಿಂದ ಇಂದಿನ ಕಾರ್ಯಕ್ಕೆ ತಡೆಯುಂಟಾದೀತು. ಅತಿಯಾದ ಮಾತೂ ನಿಮ್ಮನ್ನು ಮಾಪನ ಮಾಡಬಹುದು. ಮಕ್ಕಳ ದೃಷ್ಟಿಯಿಂದ ನೀವು ಕೆಟ್ಟವರಾಗಬಹುದು. ನಾಯಕತ್ವವನ್ನು ನೀವು ಗೊತ್ತಿಲ್ಲದಂತೆ ಬೆಳೆಸಿಕೊಳ್ಳುವಿರಿ.

ಕುಂಭ ರಾಶಿ : ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ನೀವು ಭಾವೋದ್ವೇಗದಲ್ಲಿ ನಿರ್ಧಾರ ತೆಗೆದುಕೊಂಡು ಅನಂತರ ಪಶ್ಚಾತ್ತಾಪಪಡುವಿರಿ. ನಿಮ್ಮ ಸಂಗಾತಿಯಿಂದ ಇಂದು ಹಲವು ವಿಚಾರಕ್ಕೆ ಬೆಂಬಲವನ್ನು ಪಡೆಯುವಿರಿ. ಕಲಾವಿದರಿಗೆ ನಿಮಗೆ ವಿಶೇಷಸ್ಥಾನವು ಲಭಿಸುವುದು. ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಂಚನೆಯಾಗಬಹುದು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಪ್ರಗತಿಯು ಆಗಬೇಕಾಗಿದೆ. ಸಹೋದ್ಯೋಗಿಗಳ ಜೊತೆ ನಿಮ್ಮ ಅಸಹಜ ಪ್ರವೃತ್ತಿಯನ್ನು ತೋರಿಸುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ತಂದೆಯ ಜೊತೆ ವಾಗ್ವಾದವು ನಡೆಯುವ ಸನ್ನಿವೇಶವು ಬಂದು ತಟಸ್ಥವಾಗುವುದು. ಆರ್ಥಿಕತೆಯ ಕಾರಣದಿಂದ ಕುಟುಂಬದಲ್ಲಿ ಕೆಲವು ಮಾತುಗಳು ಬರಬಹುದು. ಮಾತಿನ ಮೇಲೆ ನಿಯಂತ್ರಣವಿಟ್ಟುಕೊಂಡು ಮಾತನಾಡಿ.

ಮೀನ ರಾಶಿ : ಇಂದು ನೀವು ನಿಮ್ಮವರಿಗೆ ಹೆಚ್ಚು ಖರ್ಚನ್ನು ಮಾಡಬೇಕಾದೀತು. ನಿಮ್ಮ ಅನಗತ್ಯ ಖರ್ಚುಗಳನ್ನು ನೀವು ನಿಗ್ರಹಿಸಬೇಕು. ವ್ಯಾಪಾರ ಮಾಡುವವರು ಬಯಸಿದ ಅನುಕೂಲಗಳು ಸಿಗದಿದ್ದರೆ ಸ್ವಲ್ಪ ಕಸಿವಿಸಿಗೊಳ್ಳಬಹುದು. ಕುಟುಂಬದ ಯಾವುದಾದರೂ ಸದಸ್ಯರಿಂದ ನೀವು ಮನ ನೋಯುವ ಸಾಧ್ಯತೆ ಇದೆ. ಆದರೆ ನೀವು ಮೌನದಿಂದ ಇರುವಿರಿ. ಉದ್ಯೋಗದಲ್ಲಿ ಅಪೂರ್ಣ ಕಾರ್ಯಗಳನ್ನು ಪೂರ್ಣ ಮಾಡುವಿರಿ. ಅಧಿಕಾರಿಗಳು ನಿಮ್ಮ ಮೇಲೆ ಇಲ್ಲದ ಆರೋಪ‌ಮಾಡಬಹುದು. ಯಾರದೋ ಕಾರ್ಯಕ್ಕೆ ನೀವು ಶ್ರಮಿಸಬೇಕಾದೀತು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ಮಂಗಲ ಕಾರ್ಯವನ್ನು ಮಾಡಲು ನಿಮಗೆ ಮನಸ್ಸು ಇರುವುದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ಬಂಧುಗಳ ಒಡನಾಟದಿಂದ ನೋವನ್ನು ಕಳೆಯುವಿರಿ. ದೇಹದಂಡನೆಯಲ್ಲಿ ಜಾಗರೂಕತೆ ಇರಲಿ. ವಿವಾಹಕ್ಕೆ ಸಂಬಂಧವನ್ನು ನೀವು ಎದುರುನೋಡುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)