AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಗೌರಿ ಗಣೇಶ ಹಬ್ಬದ ದಿನ ಯಾರಿಗೆ ಅದೃಷ್ಟ, ಇಲ್ಲಿದೆ ದ್ವಾದಶ ರಾಶಿಗಳ ಫಲ

ಶಾಲಿವಾಹನ ಶಕೆ ವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಸೋಮವಾರದಂದು ಮೂಲ ಧನವೃದ್ಧಿ, ಸಮಾಜದಿಂದ ಮೆಚ್ಚುಗೆ, ಹಳೆಯ ವಾಹನ ಖರೀದಿ, ಅಸ್ಥಾನದಲ್ಲಿ ಮೋಹ, ಸಂಗಾತಿಯ ಮೇಲೆ ಸಂಶಯ, ಇವೆಲ್ಲ ಈ ದಿನದ ಭವಿಷ್ಯ.

ದಿನ ಭವಿಷ್ಯ: ಗೌರಿ ಗಣೇಶ ಹಬ್ಬದ ದಿನ ಯಾರಿಗೆ ಅದೃಷ್ಟ, ಇಲ್ಲಿದೆ ದ್ವಾದಶ ರಾಶಿಗಳ ಫಲ
Horoscope (11)
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Sep 14, 2026 | 1:02 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಭಾದ್ರಪದ, ಸೌರ ಮಾಸ : ಸಿಂಹ, ಮಹಾನಕ್ಷತ್ರ : ಪೂರ್ವಾಫಲ್ಗುಣೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಚಿತ್ರಾ, ಯೋಗ : ಬ್ರಹ್ಮ, ಕರಣ : ಗರಜ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 20 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:41 – 09:12, ಯಮಗಂಡ ಕಾಲ 10:44 – 12:15, ಗುಳಿಕ ಕಾಲ 13:46 – 15:18

ಎಲ್ಲರಿಗೂ ಗೌರೀ ಗಣೇಶ ಹಬ್ಬಕ್ಕೆ ಶುಭಾಶಯ

ಮೇಷ ರಾಶಿ: ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ಆದರೆ ಕೆಲಸದ ಸ್ಥಳದಲ್ಲಿ ಬದಲಾವಣೆಯಾಗಬಹುದು. ಮತ್ತೆ ಮತ್ತೆ ವಿಚಾರಣೆಗೆ ಅಲೆದಾಟ ಮಾಡಬೇಕಾಗುವುದು. ನಿಮ್ಮ ಆದಾಯವು ಅಧಿಕವಾಗಿದ್ದು ನಿಮಗೆ ಸಂತೋಷವನ್ನು ಕೊಡುವ ವಿಚಾರವು ಇದಾಗಿದೆ. ನಿರಂತರ ಪ್ರಯತ್ನದ ಫಲವು ಇಂದು ಸಿಗಬಹುದು.

ವೃಷಭ ರಾಶಿ: ಬಂಧುಗಳ ನಕಾರಾತ್ಮಕ ಹೇಳಿಕೆಗಳು ನಿಮಗೆ ಉದ್ವೇಗವನ್ನು ಉಂಟಾಗಲಿದೆ. ಕೆಲಸ ಕಾರ್ಯಗಳಲ್ಲಿ ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸಬಹುದು. ಆದರೆ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ದೂರವಿಡಬೇಕು. ಅನಿರೀಕ್ಷಿತವಾಗಿ ಧಾರ್ಮಿಕ ಕಾರ್ಯಕ್ಕೆ ಅನುಕೂಲ ಲಭ್ಯ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮಗೆ ಅನ್ಯರಿಂದ ಉದ್ವಿಗ್ನತೆ ಬರಬಹುದು. ನಿಮ್ಮಲ್ಲಿ ಭೀತಿಯ ಮನೋಭಾವವು ಇರಲಿದೆ.

ಮಿಥುನ ರಾಶಿ: ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ಮಕ್ಕಳ ಯಶಸ್ಸನ್ನು ಕಂಡು ಪೋಷಕರಿಗೆ ಸಂತಸವಾಗಲಿದೆ. ಮನಸ್ಸಿನಲ್ಲಿ ಬೇಸರ ಇರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಪೂಜಾಯೋಗ್ಯರಿಗೆ ಆತಿಥ್ಯವನ್ನು ನೀಡುವಿರಿ.

ಕರ್ಕಾಟಕ ರಾಶಿ: ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಸಂಗೀತದ ಕಡೆಗೆ ಒಲವು ಹೆಚ್ಚಾಗಬಹುದು. ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಜಂಜಾಟವಿರುತ್ತದೆ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ನಿಮ್ಮ ಜೀವನದ ಕುರಿತು ತಂದೆ, ತಾಯಿಯರು ಚಿಂತಿಸುವರು. ನೀವು ಮಾತಿಗೆ ತಪ್ಪಿದವರು ಎಂಬ ಪಟ್ಟಕ್ಕೆ ಸಿಗುವುದು.

ಸಿಂಹ ರಾಶಿ: ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ತಾಯಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಸಾಮಾಜಿಕ ತಾಣದಿಂದ ಪ್ರೇಮವು ಉಂಟಾಗಬಹುದು. ಸಹೋದರಿಯು ಹಣಕ್ಕಾಗಿ ನಿಮ್ಮನ್ನು ಕಾಡಬಹುದು. ನಡಿಗೆಯಲ್ಲಿ ವೇಗವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ.

ಕನ್ಯಾ ರಾಶಿ: ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮತ್ತೊಬ್ಬರೊಂದಿಗೆ ಮಾತನಾಡುವಾಗ ಮಾತುಗಳ ಮೇಲೆ ಎಚ್ಚರ ಇರಲಿ. ನೀವು ಮಾಡಲಿರುವ ಕೆಲಸವು ಮುಂದೆಹಾಕುವಿರಿ. ವೆಚ್ಚಗಳು ಹೆಚ್ಚಾಗಬಹುದು, ಆದ್ದರಿಂದ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನ ಕಾಪಾಡಿಕೊಳ್ಳಿ. ಗೃಹನಿರ್ಮಾಣವು ಕಾರಣಾಂತರಗಳಿಂದ ಮುಂದೆ ಹೋಗುವುದು. ನಿಮಗೆ ಬೇಕಾದ ಅವಕಾಶವು ಸಿಗದೇ ಒದ್ದಾಡುವಿರಿ.

ತುಲಾ ರಾಶಿ: ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ಕಲಾವಿದರು ಕಲಾ‌ಪ್ರದರ್ಶನಕ್ಕೆ ದೂರಪ್ರಯಾಣವನ್ನು ಮಾಡುವಿರಿ. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಸ್ತ್ರೀಸಂಬಂಧದ ವಿಷಯದಲ್ಲಿ ಆರೋಪವು ಕೇಳಿಬರಬಹುದು. ನೇರವಾಗಿ ಹೇಳುವ ಸ್ವಭಾವವು ಎಲ್ಲ ಸನ್ನಿವೇಶದಲ್ಲಿಯೂ ಸಾಧುವಾಗದು.

ವೃಶ್ಚಿಕ ರಾಶಿ: ಭವಿಷ್ಯದ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ವ್ಯಾಪಾರಕ್ಕಾಗಿ ನೀವು ನಿಮ್ಮ ತಂದೆಯಿಂದ ಹಣವನ್ನು ಪಡೆಯಬಹುದು. ಆದಾಯದ ಮೂಲ ಹೆಚ್ಚಾಗಲಿದೆ. ತಂದೆ ಮತ್ತು ಮಕ್ಕಳ ನಡುವೆ ಪ್ರೀತಿ ಇರುತ್ತದೆ. ಅನ್ಯರಿಂದ ಬರುವ ತೊಂದರೆಗೆ ನೀವೇ ಅನುಭವಿಸುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳುವ ಸಾಧ್ಯತೆ ಇದೆ. ಉದ್ಯಮಿಗಳಿಗೆ ಉದ್ಯಮವನ್ನು ವಿಸ್ತರಿಸುವ ಚಿಂತನೆಯಲ್ಲಿ ಇರುವಿರಿ.

ಧನು ರಾಶಿ: ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ವೃತ್ತಿಪರವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಆದಾಯ ಸಾಲವೆಂದು ನಿಮ್ಮ ಮನಸ್ಸಿಗೇ ಬರಲಿದೆ.ಸಂಸಾರದಲ್ಲಿ ನಿರಾಸಕ್ತಿಯು ಹೆಚ್ಚಾಗುವುದು. ಸಂಗಾತಿಯ ಜೊತೆ ನಿಮಗೆ ಸಮಯ ಕಳೆಯಲೂ ಕಷ್ಟವಾದೀತು. ಇಷ್ಟದವರನ್ನು ನೀವು ಭೇಟಿಯಾಗುವಿರಿ.

ಮಕರ ರಾಶಿ: ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ನಿಮ್ಮ ಹಾಗೂ ಪ್ರೇಮಿಯ ಮನಃಸ್ಥಿತಿಯಲ್ಲಿ ಏರಿಳಿತಗಳು ಇರಬಹುದು. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸುವುದು. ಮಾತನಾಡುವ ವೇಗದಲ್ಲಿ ಏನನ್ನಾದರೂ ಹೇಳಿಬಿಡುವಿರಿ. ನಿಮಗೆ ಇಂದು ಜಯದ ಸಂಭ್ರಮವು ಸಿಹಲಿದೆ.

ಕುಂಭ ರಾಶಿ: ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಇದು ಉತ್ಸಾಹವನ್ನೂ ಕೊಡುವುದು. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಅಧಿಕಾರಿಗಳ ಬೆಂಬಲದಿಂದ ನೀವು ಖುಷಿಯಾಗಿರಲಿದ್ದೀರಿ. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಿರುತ್ತದೆ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ನಿಮ್ಮ ದುರಭ್ಯಾಸವನ್ನು ಇನ್ನೊಬ್ಬರಿಗೂ ಹಿಡಿಸುವ ಸಾಧ್ಯತೆ ಇದೆ. ಭವಿಷ್ಯದ ಆಗುಹೋಗುಗಳ ಬಗ್ಗೆ ಅತಿಯಾದ ಚಿಂತೆ ಇರಲಿದೆ.

ಮೀನ ರಾಶಿ: ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ, ನೀವು ಕೆಲಸದಲ್ಲಿ ನಿರತರಾಗಿರಬಹುದು. ಅದು ನಿಮ್ಮ ಜೀವನಶೈಲಿ ಮೇಲೆ ಪರಿಣಾಮ ಬೀರಬಹುದು. ಹೊಸ ಕಾರ್ಯಕ್ಕೆ ಅಲ್ಪ ಜಯದಿಂದ ಉತ್ಸಾಹ ಬರುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳ್ಳುವಿರಿ. ಕೆಲಸವನ್ನು ಬಿಡಬೇಕಾದ ಸಂದರ್ಭ ಬಂದರೂ ಹೇಗೋ ಉಳಿಸಿಕೊಳ್ಳುವಿರಿ.

ಲೋಹಿತ್ ಹೆಬ್ಬಾರ್ – 8762924271 (what’s app only)

Follow Us