Horoscope Today 20 January : ಇಂದು ಈ ರಾಶಿಯವರು ತಮ್ಮನ್ನು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳುವರು
ಶಾಲಿವಾಹನ ಶಕ 1948ರ ಮಾಘ ಮಾಸ, ಮಂಗಳವಾರದ ದ್ವಿತೀಯಾ ತಿಥಿಯ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರವಾಗಿ ನೀಡಲಾಗಿದೆ. ಮೇಷದಿಂದ ಕನ್ಯಾ ರಾಶಿಯವರೆಗಿನ ಪ್ರತಿಯೊಂದು ರಾಶಿಚಕ್ರದ ಚಿಹ್ನೆಗಳಿಗೆ ಸಂಬಂಧಿಸಿದಂತೆ ಆರೋಗ್ಯ, ಸಂಪತ್ತು, ಸಂಬಂಧಗಳು, ವೃತ್ತಿ ಮತ್ತು ವೈಯಕ್ತಿಕ ಜೀವನದ ಕುರಿತಾದ ನಿಖರ ಮುನ್ನೋಟಗಳು ಮತ್ತು ಸಲಹೆಗಳನ್ನು ಕಂಡುಕೊಳ್ಳಿ. ಇಂದಿನ ಗ್ರಹಗಳ ಸ್ಥಾನಗಳು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಗೌರವದ ಚಿಂತೆ, ಆರೋಗ್ಯ ಸುಧಾರಣೆ, ದುರಸ್ತಿ, ಅಧಿಕ ಶ್ರಮ, ಹೂಡಿಕೆ, ಅನಿರೀಕ್ಷಿತ ವಾರ್ತೆ ಇವೆಲ್ಲ ಇಂದಿನ ವಿಶೇಷ.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಸಿದ್ಧಿ, ಕರಣ : ಕೌಲವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 16 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15-26 – 16:51, ಯಮಗಂಡ ಕಾಲ 09:45 – 11:10, ಗುಳಿಕ ಕಾಲ 12:35 – 14:01
ಮೇಷ ರಾಶಿ :
ಗಂಭೀರ ವ್ಯಕ್ತಿತ್ವದಿಂದ ತಮಾಷೆಯನ್ನು ನಿರೀಕ್ಷಿಸಲಾಗದು. ಉತ್ತಮ ವ್ಯಕ್ತಿಗಳನ್ನು ಸಂಪಾದಿಸಲು ನೀವು ಸೋಲುವಿರಿ. ಆದಾಯದ ಕಡೆಗೆ ವಿಶೇಷಗಮನವು ಇರಲಿದೆ. ಇತರರ ಧಾರ್ಮಿಕ ನಂಬಿಕೆಯನ್ನು ನೀವು ಘಾಸಿಮಾಡುವಿರಿ. ಅನಂತರದ ಹತಾಶೆಯಿಂದ ಕಷ್ಟವಾದೀತು. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ನೀವು ಸ್ವತಂತ್ರವಾಗಿದ್ದರೂ ಬೆರೆಯಲು ಮನಸ್ಸಾಗದು. ಭೂಮಿಯ ವ್ಯವಹಾರದಿಂದ ಲಾಭವು ಕಡಿಮೆ ಇರಲಿದೆ.
ವೃಷಭ ರಾಶಿ :
ಸಮರ್ಪಕ ಉತ್ತರದಿಂದ ಸಂತೋಷವಾಗಬಹುದು. ಖಾಲಿಯಾಗಿ ಇರುವ ಬದಲು ಏನನ್ನಾದರೂ ಮಾಡಿ. ಭವಿಷ್ಯಕ್ಕೆ ಉಪಯೋಗವಾಗಬಹುದು. ಉತ್ಕಟವೂ ಯೋಗ್ಯವೂ ಆದ ಇಚ್ಛೆಯು ಪೂರ್ಣವಾಗುವುದು. ಸಂಬಂಧಗಳಲ್ಲಿ ಒಡಕು ಬರಬಹುದು. ಮನಸ್ಸಿಗೆ ಭಾರವಾದ ವಿಚಾರವನ್ನು ನೀವು ಹೇಗಾದರೂ ಮಾಡಿ ತಲೆಯಿಂದ ತೆಗೆಯಿರಿ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ.
ಮಿಥುನ ರಾಶಿ :
ಇಂದು ಸಂಗಾತಿಯ ಜೊತೆ ಕಾಲ ಕಳೆಯಲು ಯೋಜನೆ ಬೇಕು. ತಾಳ್ಮೆಯಿಂದ ಬರುವ ಆಪತ್ತಿಗೆ ಮಾರ್ಗವೂ ಇದೆ. ಚಿತ್ತಚಾಂಚಲ್ಯವು ಕಾರ್ಯದ ಗತಿಯನ್ನು ತಗ್ಗಿಸೀತು. ಕಾರ್ಯದ ನಿರುತ್ಸಾಹವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಅಧ್ಯಯನದ ವಿಚಾರದಲ್ಲಿ ಏಕಾಗ್ರತೆಯ ಕೊರತೆ ಇರಲಿದ್ದು ಧ್ಯಾನ, ಯೋಗಾಭ್ಯಾಸವನ್ನು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು.
ಕರ್ಕಾಟಕ ರಾಶಿ :
ಮೃದು ಮಾತಿನಿಂದ ಕಾರ್ಯವಾಗದು. ಮೇಲಧಿಕಾರಿಗಳಿಗೆ ನೀವು ವರದಿಯನ್ನು ನೀಡಬೇಕಾಗುವುದು. ಹಳೆಯದನ್ನು ನೀವು ನೆನೆದು ಸಂಕಟಪಡುವಿರಿ. ವಿನಾಕಾರಣ ಮಿತ್ರರನ್ನು ದೂರ ಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನೀವೇ ಪ್ರಶಂಸೆ ಮಾಡಿಕೊಳ್ಳುವಿರಿ. ನಿಮ್ಮ ನೋವನ್ನು ಕೇಳಲು ಯಾರೂ ಇಲ್ಲವೆಂದು ಬೇಸರವಾಗಬಹುದು. ಕೋಪದ ವಿಚಾರದಲ್ಲಿ ನೀವು ಬದಲಾಗಬೇಕಾದ ಅವಶ್ಯಕತೆ ಇರಲಿದೆ. ಕಳೆದುಕೊಂಡ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲು ಪ್ರಯತ್ನಶೀಲರಾಗುವಿರಿ. ಹೂಡಿಕೆಯನ್ನು ಮಾಡಲು ಎಲ್ಲರಿಂದ ಮಾಹಿತಿಯನ್ನು ಸಂಗ್ರಹಿಸುವಿರಿ.
ಸಿಂಹ ರಾಶಿ :
ಸೇವೆಯಿಂದ ನಿವೃತ್ತಿಯು ಬೇಸರ ತರಿಸುವುದು. ಪರರ ಗುಣದಲ್ಲಿ ಅಸೂಯೆ ಇಟ್ಟುಕೊಳ್ಳುವಿರಿ. ಸಂಗಾತಿಯ ಪ್ರೀತಿಗೆ ನೀವು ಸೋಲಬಹುದು. ಎಷ್ಟೋದಿನಗಳಿಂದ ಬಯಸಿದ್ದ ವಸ್ತುವನ್ನು ನೀವು ಅನಾಯಾಸವಾಗಿ ಯಾರಿಂದಲೋ ಪಡೆಯುವುರಿ. ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಓಡುತ್ತಿದ್ದು ಅದನ್ನು ಕಾರ್ಯರೂಪಕ್ಕೆ ತರಲು ನೋಡುವಿರಿ. ನಿಮ್ಮ ವೈಯಕ್ತಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಹಣವು ಬಾರದೇ ಹೋಗಬಹುದು.
ಕನ್ಯಾ ರಾಶಿ :
ವ್ಯಾಪಾರದ ವಿಚಾರದಲ್ಲಿ ಮನೆಯವರ ಜೊತೆ ಜಗಳ ಮಾಡಿಕೊಳ್ಳುವಿರಿ. ನಿಮಗೆ ದ್ವಂದ್ವಗಳು ಒಂದು ಸರಿಯಾದ ನಿರ್ಧಾರಕ್ಕೆ ಬರಲು ಅನುಕೂಲ ಮಾಡಿಕೊಡುವುದಿಲ್ಲ. ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು. ಕತ್ತಲೆಯಲ್ಲಿ ಗುದ್ದಾಟ ಮಾಡಿ ಆಯಾಸ ಮಾಡಿಕೊಳ್ಳುವಿರಿ. ಕಳೆದುಕೊಂಡ ವಿಶ್ವಾಸವನ್ನು ಮತ್ತೆ ಕೂಡಿಸಲು ಪ್ರಯತ್ನಿಸುವಿರಿ. ಅದು ಕನ್ನಡಿಯ ಗಾಜಿನಂತೆ. ಎಷ್ಟೇ ಕೂಡಿಸಿದರೂ ಬಿರುಕು ಎದ್ದು ತೋರುವುದು.
ತುಲಾ ರಾಶಿ :
ನಿಮ್ಮ ಹೊಂದಿಕೊಳ್ಳುವ ಗುಣವನ್ನು ಎಲ್ಲರೂ ಶ್ಲಾಘಿಸುವರು. ಕೃತಘ್ನರಾಗಿ ಮೆರೆಯುವುದು ಬೇಡ. ಜಾರಿ ಬೀಳಲು ಹೆಚ್ಚು ಸಮಯ ಬೇಡ. ಕೊಟ್ಟ ಹಣವು ಮರಳಿ ನಿಮ್ಮ ಸಂಪತ್ತು ಹೆಚ್ಚಾಗಬಹುದು. ವೃತ್ತಿಯಲ್ಲಿ ಅನಿರೀಕ್ಷಿತ ಒತ್ತಡಗಳು ಬರಲಿದ್ದು ಇಂದಿನ ಕಾರ್ಯವನ್ನು ಹಾಳುಮಡುವುದು. ಸ್ತ್ರೀಯರು ಕೆಲವರ ಬಗ್ಗೆ ಇರುವ ಪೂರ್ವಾಗ್ರಹವನ್ನು ಕಳೆದುಕೊಳ್ಳುವರು. ಪ್ರೀತಿಯು ನಿಮಗಾಗದವರ ಮೂಲಕ ಎಲ್ಲರಿಗೂ ತಿಳಿಯುವುದು. ಇದರಿಂದ ನಿಮಗೆ ಬಹಳ ಮುಜುಗರವಾಗಬಹುದು.
ವೃಶ್ಚಿಕ ರಾಶಿ :
ಕಾರ್ಯಕ್ಕೆ ಹೊರಡುವ ಮೊದಲೇ ತನ್ನ್ನಿಂದ ಏನೂ ಆಗದು ಎಂಬ ಭಾವವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ನೀವು ಶಿಸ್ತಿಗೆ ಒಳಪಟ್ಟಷ್ಟು ನಿಮ್ಮ ಕೆಲಸಗಳು ಸುಲಲಿತವಾಗುವುದು. ಮನೆಯಲ್ಲಿ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನ ಕೊಡುವುದು. ಹಳೆಯ ವಸ್ತುಗಳು ನಿಮಗೆ ಭಾರವಾದೀತು. ತಾಳ್ಮೆಯನ್ನು ಕಳೆದುಕೊಂಡು ಎಲ್ಲರೆದುರು ಸಣ್ಣವರಾಗಬೇಕಾದೀತು. ಕಠೋರ ಮಾತುಗಳು ನಿಮ್ಮರಿಗೆ ಇಷ್ಟವಾಗದು. ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು.
ಧನು ರಾಶಿ :
ಈ ದಿನವನ್ನು ಬಹಳ ಆನಂದದಿಂದ ಕಳೆಯುವಿರಿ. ಏಕೆಂದರೆ ನೀವು ಇಂದು ಸಕಾರಾತ್ಮಕ ಚಿಂತನೆಯಲ್ಲಿ ಇರುವಿರಿ. ವಿದ್ಯಾಭ್ಯಾಸದ ಕಾರಣಕ್ಕೆ ಅಪಮಾನವಾಗಬಹುದು. ಮನೆಯಲ್ಲಿರುವ ಮಕ್ಕಳ ಜೊತೆ ಸ್ವಲ್ಪ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ತಂದೆಯ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ಎಲ್ಲದಕ್ಕೂ ಮುನ್ನುಗಬೇಕೆನ್ನುವ ನಿಮ್ಮ ಯೋಚನೆ ಬದಲಾಗುವುದು. ಭೂಮಿಯ ಬಗ್ಗೆ ಆಸಕ್ತಿಯು ಕಡಿಮೆಯಾಗಲಿದೆ.
ಮಕರ ರಾಶಿ :
ಕಿಟಕಿ ಮುಚ್ಚಿದೆ ಎಂದ ಮಾತ್ರಕ್ಕೆ ದ್ವಾರವೂ ಮುಚ್ಚಿರುತ್ತದೆ ಎಂದು ತಿಳಿದುಕೊಳ್ಳುವುದು ಮೂರ್ಖತನ. ಹಣಕಾಸು ಲಾಭಗಳು ನಿಮ್ಮ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಇಂದು ಕುಟುಂಬದಲ್ಲಿ ಸಂತೋಷವನ್ನು ತುಂಬುವಿರಿ. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ನಿಮ್ಮ ಕನಸನ್ನು ಪೂರ್ಣ ಮಾಡಿಕೊಳ್ಳುತ್ತಿರುವುದು ನಿಮಗೆ ಖುಷಿಯಾಗಲಿದೆ. ಭೋಜನವನ್ನು ಸಮಯ ಮೀರಿ ಮಾಡುವುದು ಬೇಡ. ನಿಮ್ಮ ಬದಲಾವಣೆಯು ಪೂರ್ಣ ಸತ್ಯವಾಗಿರದು. ಬಂಧುವರ್ಗದಿಂದ ಸೇವೆಯಾಗಬಹುದು.
ಇದನ್ನೂ ಓದಿ: ಜನವರಿ ತಿಂಗಳ ಮೂರನೇ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ
ಕುಂಭ ರಾಶಿ :
ನೀವು ಯಾರನ್ನಾದರೂ ಅಳೆಯುವ ಮೊದಲು ಅವರೇ ನಿಮ್ಮ ಬಗ್ಗೆ ಎಲ್ಲವನ್ನೂ ಹೇಳಬಹುದು. ಇನ್ನೊಬ್ಬರ ನಿರ್ಧಾರಗಳನ್ನು ನಿಯಂತ್ರಿಸುವ ಮೂಲಕ ನೀವು ಎಂದಿಗೂ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುವುದಿಲ್ಲ. ವೃತ್ತಿ ಜೀವನದಲ್ಲಿ ಗೌರವವನ್ನು ಪಡೆಯಬೇಕು ಎನಿಸುವುದು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎತ್ತು ಏರಿಗೆ ಕೋಣ ನೀರಿಗೆ ಎನ್ನುವ ಸ್ಥಿತಿಯು ಬರಬಹುದು. ಒಂದು ಕಡೆ ಬಾಗಲು ಮುಚ್ಚಿದರೆ ಇನ್ಮೊಂದು ಕಡೆ ಕಿಟಕಿ ತೆರುವುದು.
ಮೀನ ರಾಶಿ :
ವ್ಯವಹಾರದ ಹಿನ್ನಡೆಯಿಂದ ಹತಾಶೆಯಾಗುವ ಸಾಧ್ಯತೆ ಇದೆ. ನಿಜವಾದ ಸ್ನೇಹಿತ ನಿಮ್ಮ ಅಗತ್ಯದ ಸಮಯದಲ್ಲಿ ಜೊತೆಯಾಗುವರು. ಅಂತಹವರನ್ನು ಕಳೆದುಕೊಂಡು ಅನಂತರ ಸಂಕಟಪಡುವಿರಿ. ವ್ಯವಹಾರದಲ್ಲಿ ಹಣಕಾಸಿನ ಸ್ಥಿರತೆಗಾಗಿ ಇಂದು ಹೆಚ್ಚು ಪ್ರಯತ್ನ ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಸಾಮರಸ್ಯ ಹೆಚ್ಚಾಗಿ ಸಂತಸದ ವಾತಾವರಣ ನೀರ್ಮಾನವಾಗಲಿದೆ. ಚರಾಸ್ತಿಗೆ ಸಂಬಂಧಿಸಿದ ಶುಭ ಸುದ್ದಿ ಕೇಳುವಿರಿ.
– ಲೋಹಿತ ಹೆಬ್ಬಾರ್ – 8762924271 (what’s app only)
ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
