Daily Horoscope: ಈ ರಾಶಿಯವರ ದುರಭ್ಯಾಸವು ನಿಮ್ಮ ಗೌರವವನ್ನೂ ಹಾಳುಮಾಡಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 4: ನಿಮಗೆ ಒಳ್ಳೆಯ ಭೂಮಿಯ ಲಾಭವಾಗುವುದು. ಆದರೆ ಅದನ್ನು ಖರೀದಿಸುವ ಶಕ್ತಿ ನಿಮಗೆ ಸಿಗದೇ ಕೈಬಿಡಬೇಕಾದೀತು. ಇಂದು ನಿಮ್ಮ ಹಣವು ಬಲವಂತದಿಂದ ಬರಲಿದೆ. ವೈದ್ಯಕೀಯ ವೃತ್ತಿಯಲ್ಲಿ ಚುರುಕುತನ ಬೇಕಾಗಬಹುದು. ಹಾಗಾದರೆ ಸೆಪ್ಟೆಂಬರ್​ 4ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರ ದುರಭ್ಯಾಸವು ನಿಮ್ಮ ಗೌರವವನ್ನೂ ಹಾಳುಮಾಡಲಿದೆ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 04, 2024 | 12:20 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 4) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಸಾಧ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:41 ಗಂಟೆ, ರಾಹು ಕಾಲ ಮಧ್ಯಾಹ್ನ 12:31 ರಿಂದ ಸಂಜೆ 02:04, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:59 ರಿಂದ 12:31ರ ವರೆಗೆ.

ಸಿಂಹ ರಾಶಿ : ಮನೆಯಲ್ಲಿ ನಿಮ್ಮ ಆರ್ಥಿಕ ವ್ಯವಹಾರದ ಬಗ್ಗೆ ವಿಚಾರಿಸಬಹುದು. ಇಂದು ನೀವು ವಾಹನವನ್ನು ಚಲಾಯಿಸುವುದು ಬೇಡ. ಹೊಸ ಆದಾಯದ ಮೂಲವನ್ನು ಹುಡುಕುವುದು ಉತ್ತಮ. ನಿಮ್ಮ ಸಾಲವನ್ನು ಮನೆಯವರು ತೀರಿಸಬೇಕಾದೀತು. ಅಧಿಕ ಆದಾಯಕ್ಕೆ ನಿಮ್ಮ ಉದ್ಯಮವನ್ನು ವಿಸ್ತರಿಸುವಿರಿ. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ಆಗಬೇಕಾದುದನ್ನು ಮಾಡಿ. ಅನಗತ್ಯ ಓಡಾಟದಿಂದ ಶರೀರವು ದಣಿಯಬಹುದು. ದುರಭ್ಯಾಸವು ಆರೋಗ್ಯವನ್ನೂ ಗೌರವವನ್ನೂ ಹಾಳುಮಾಡಲಿದೆ. ಮನಸ್ಸಿಗೆ ಶಾಂತಿಯು ಇರಲಿದ್ದು ಉದ್ವೇಗದ ಸಂದರ್ಭವನ್ನು ಆರಾಮಾಗಿ ದಾಟುವಿರಿ. ಇಂದು ಕೆಲವರ ವರ್ತನೆಯು ಬೇಸರ ತರಿಸಬಹುದು. ಇಂದು ನಿಮ್ಮ‌ಪೂರ್ವಜರ ಜ್ಞಾನವು ಸಿಗಲಿದೆ. ಸತ್ಸಂಗ ಮೂಲಕ ಸಮಯವನ್ನು ಕಳೆಯುವಿರಿ. ರಾಜಕೀಯ ನೇತಾರರ ಸಹವಾಸವನ್ನು ಹೇಗೋ ಸಂಪಾದಿಸುವಿರಿ. ನಿಮ್ಮ ರಕ್ಷಣೆಯಲ್ಲಿ ನೀವಿರಿ. ಯಾರ ಮೇಲೋ ಅವಲಂಬಿತರಾಗಿರುವುದು ನಿಮಗೆ ಇಷ್ಟವಾಗದು.

ಕನ್ಯಾ ರಾಶಿ : ಬಿಡುವಿನ ವೇಳೆಯನ್ನು ಮಕ್ಕಳು ದುರುಪಯೋಗ ಮಾಡಿಕೊಳ್ಳುವರು. ಏನಾದರೂ ಕೆಲಸವನ್ನು ಕೊಡುತ್ತಲೇ ಅವರನ್ನು ಸರಿಯಾದ ದಾರಿಗೆ ತರಬೇಕಾದೀತು. ಇಂದು ನಿಮ್ಮ ದುರಭ್ಯಾಸಗಳು ಇತರರಿಗೆ ಗೊತ್ತಾಗುವುದು. ತಂದೆ ತಾಯಿಗಳನ್ನು ಬಹಳ ಸಂತೋಷದಿಂದ‌ ನೋಡಿಕೊಳ್ಳುವಿರಿ. ಅವರು ಅಪೇಕ್ಷಿಸಿದ ಸ್ಥಳಕ್ಕೆ ಅವರನ್ನು ಕರೆದೊಯ್ಯುವಿರಿ. ನಿಮ್ಮ ಕೈಲಾದವರಿಗೆ ಸಹಾಯವನ್ನು ಮಾಡುವುದು ಒಳ್ಳೆಯದು. ವಿರೋಧಿಗಳಿಗೆ ನಿಮ್ಮ ಬಲ ಪ್ರದರ್ಶನವಾಗಲಿದೆ. ಕೃಷಿಕರಿಗೆ ತೊಂದರೆ, ಒತ್ತಡಗಳು ಕಾಣಿಸಿಕೊಳ್ಳುವುದು. ಹೊಸ ಜನರ ಭೇಟಿಯು ನಿಮಗೆ ಹೊಸ ದಾರಿಯನ್ನು ಮಾಡಿಕೊಟ್ಟೀತು. ನಿಮ್ಮದಲ್ಲದ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟವಾದೀತು. ಸ್ನೇಹಿತರಿಂದ‌ ಉದ್ಯೋಗದ ಪ್ರಾಪ್ತಿಯನ್ನು ನೀವು ನಿರೀಕ್ಷಿಸುವಿರಿ. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ. ಯಾರ ಪ್ರೀತಿಯನ್ನೂ ಕಡೆಗಾಣಿಸುವುದು ಬೇಡ. ಶತ್ರುಗಳು ನಿಮಗೆ ನೇರವಾಗಿ ತೊಂದರೆ ಕೊಡದಿದ್ದರೂ, ಪರೋಕ್ಷವಾಗಿ ತೊಂದರೆ ಕೊಡುವರು.

ತುಲಾ ರಾಶಿ : ನಿಮಗೆ ಒಳ್ಳೆಯ ಭೂಮಿಯ ಲಾಭವಾಗುವುದು. ಆದರೆ ಅದನ್ನು ಖರೀದಿಸುವ ಶಕ್ತಿ ನಿಮಗೆ ಸಿಗದೇ ಕೈಬಿಡಬೇಕಾದೀತು. ಇಂದು ನಿಮ್ಮ ಹಣವು ಬಲವಂತದಿಂದ ಬರಲಿದೆ. ವೈದ್ಯಕೀಯ ವೃತ್ತಿಯಲ್ಲಿ ಚುರುಕುತನ ಬೇಕಾಗಬಹುದು. ನಿಮ್ಮ ಬಗ್ಗೆ ಸದ್ಭಾವನೆ ಇರುವವರು ನಿಮಗೆ ಶ್ರೇಯಸ್ಸನ್ನು ಹರಸುವರು. ಹಣಕಾಸಿನ ವಿಚಾರಕ್ಕೆ ಸಲ್ಲದ ಅಪವಾದ ಬಂದೀತು. ಇಂದು ಕುಟುಂಬದ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ಇಷ್ಟವಿಲ್ಲದಿದ್ದರೂ ಸಂಗಾತಿಯ ಮಾತನ್ನು ಅನುಸರಿಸಿ. ಮಕ್ಕಳನ್ನು ವಿದ್ಯಾಭಾಸಕ್ಕೆ ನೀವು ಪ್ರೇರೇಪಿಸುವಿರಿ. ನಿಮ್ಮ ಲಾಭಾಂಶವನ್ನು ದಾನ ಮಾಡುವಿರಿ. ನಿಮ್ಮ ಒಳಗುಟ್ಟನ್ನು ಬಿಟ್ಟುಕೊಡಬೇಡಿ. ನಿಮ್ಮನ್ನು ಹಗುರಾಗಿ ಕಾಣಬಹುದು. ಯಾವ ಪ್ರಯೋಜನವೂ ಇರದೇ ನೀವು ಏನನ್ನೂ ಮಾಡಲಾರಿರಿ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಸಣ್ಣ ಲೆಕ್ಕಾಚಾರವೇ ನಿಮ್ಮ ಉಳಿತಾಯದ ಮೂಲವಾಗಿದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ : ಬಹಳ ಒತ್ತಡವಿರುವ ಕಾರಣ ಬರುವ ಕಾರ್ಯವನ್ನು ಬಹಳ ಚಾಚಕ್ಯತೆಯಿಂದ ಮಾಡಬೇಕಾಗುವುದು. ಇಂದು ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ವಿದ್ಯುತ್ ಉಪಕರಣಗಳ ಮಾರಾಟವನ್ನು ನೀವು ಮಾಡುತ್ತಿದ್ದರೆ ಲಾಭವನ್ನು ಪಡೆಯಬಹುದಾಗಿದೆ. ನಿಮ್ಮ ಬಳಿ ಬಂದ ಕಾರ್ಯವನ್ನು ನೀವು ಬಿಟ್ಟುಕೊಡಲಾರಿರಿ. ಸಾರ್ವಜನಿಕವಾಗಿ ನೀವು ಹೆಚ್ಚು ಪ್ರಭಾವ ಉಳ್ಳವರಾಗಿದ್ದು ನಿಮಗೆ ಗೌರವವೂ ಸಿಗಲಿದೆ. ಸಹೋದ್ಯೋಗಿಗಳು ನಿಮ್ಮ ಮೇಲೆ ಒತ್ತಡ ಕೊಡುವ ಪ್ರಯತ್ನ ಮಾಡಬಹುದು. ಲೆಕ್ಕಪತ್ರಗಳ ದಾಖಲೆಗಳು ಕಾಣೆಯಾಗಿದ್ದು ನಿಮಗೆ ಆತಂಕ ಉಂಟಾಗಬಹುದು. ಹೊಸ ಕೆಲಸಕ್ಕೆ ಹೋಗುವ ಸಾಧ್ಯತೆ ಇದೆ. ನಿಮ್ಮಿಂದ ಆಗುವ ಕೆಲಸಕ್ಕೆ ಹೆಚ್ಚು ಒತ್ತು ಕೊಡಿ. ಮಕ್ಕಳಿಗೆ ಸಮಯವನ್ನು ಕೊಡುವಿರಿ. ಸಣ್ಣ ವಿವಾದಗಳು ಆಗಬಹುದು.‌ ಅಲ್ಲಿಯೇ ಬಗೆಹರಿಸಿಕೊಳ್ಳಿ. ದೊಡ್ಡ ಮಾಡಿಕೊಳ್ಳುವುದು ಬೇಡ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕಾಗಬಹುದು. ವಾಹನ ದುರಸ್ತಿ ಮಾಡಿಸಬೇಕಾಗುವುದು.

ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ