Daily Horoscope: ಈ ರಾಶಿಯವರು ಅಲ್ಪದರಲ್ಲಿ ತೃಪ್ತಿಪಡಬೇಕಾದೀತು, ಯಾರ ಮಾತನ್ನೂ ನೀವು ಕೇಳಲಾರಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 8: ನಿಮ್ಮ ಮನಸ್ಸಿನಲ್ಲಿ ಅವ್ಯಕ್ತವಾಗಿ ಆತಂಕವು ಮನೆ ಮಾಡಬಹುದು. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ಅಸಮಾಧನ ಇರಲಿದೆ. ಮನೆಯಲ್ಲಿ ನಡೆಯುವ ಶುಭಕಾರ್ಯಗಳು ಮುಂದಕ್ಕೆ ಹೋಗಬಹುದು. ಸಹನೆಯಿಂದ ಆಗುವ ಲಾಭವು ಅನುಭವವೇದ್ಯವಾಗಿರಲಿದೆ. ಹಾಗಾದರೆ ಸೆಪ್ಟೆಂಬರ್​ 8ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರು ಅಲ್ಪದರಲ್ಲಿ ತೃಪ್ತಿಪಡಬೇಕಾದೀತು, ಯಾರ ಮಾತನ್ನೂ ನೀವು ಕೇಳಲಾರಿರಿ
ಈ ರಾಶಿಯವರು ಅಲ್ಪದರಲ್ಲಿ ತೃಪ್ತಿಪಡಬೇಕಾದೀತು, ಯಾರ ಮಾತನ್ನೂ ನೀವು ಕೇಳಲಾರಿರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 08, 2024 | 12:10 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 8) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಐಂದ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:38 ಗಂಟೆ, ರಾಹು ಕಾಲ ಮಧ್ಯಾಹ್ನ 05:06 ರಿಂದ ಸಂಜೆ 06:38, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:34 ರಿಂದ 05:06ರ ವರೆಗೆ.

ಸಿಂಹ ರಾಶಿ: ನಂಬಲರ್ಹರಾದವರಿಂದ ಮಾತ್ರ ಸತ್ಯಾಸತ್ಯತೆಯನ್ನು ತಿಳಿಯಿರಿ. ನೀವು ಇಂದು ಆಪ್ತರಿಂದ ಅಲ್ಪ ಹಣವನ್ನು ಸಾಲವಾಗಿ ಪಡೆಯುವಿರಿ. ಇಂದಿನ‌ ಕೆಲಸದಲ್ಲಿ ಹೆಚ್ಚಿನ ಮುನ್ನಡೆಯಾಗಲಿದ್ದು ನಿಮ್ಮ ಪ್ರಯತ್ನದ ಬಗ್ಗೆ ವಿಶ್ವಾಸವು ಮೂಡುವುದು. ಯಾರಾದರೂ ಸುಳ್ಳು ಹೇಳಿ ಸರಳವಾಗಿ ನಿಮ್ಮನ್ನು ನಂಬಿಸುವರು. ಆಕಸ್ಮಿಕವಾದ ವಿಷಯಗಳು ನಿಮಗೆ ಕ್ಲೇಶವನ್ನು ಕೊಡಬಹುದು. ಅಶಿಸ್ತಿನ ಜೀವನವು ನಿಮಗೆ ಅಸಮಾಧನಾವನ್ನು ಕೊಡಬಹುದು. ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ನೀವು ಇರುವುದಿಲ್ಲ. ಆತ್ಮೀಯರ ಭೇಟಿಯು ಆಕಸ್ಮಿಕವಾಗುವುದು. ಅಲ್ಪದರಲ್ಲಿ ತೃಪ್ತಿಪಡಬೇಕಾದೀತು. ನೀವು ಸಂತೋಷವಾಗಿರಲು ನಾನಾ ಕಾರಣಗಳನ್ನು ಹುಡುಕಬಹುದು. ಅನ್ಯರಿಂದ ಸಂತೋಷವನ್ನು ಪಡೆಯುವಿರಿ. ಉದ್ಯೋಗಕ್ಕೆ ವಿದೇಶದತ್ತ ಗಮನವಿರುವುದು. ಇನ್ನೊಬ್ಬರ ಮೇಲಿನ ದ್ವೇಷವನ್ನು ನಿಲ್ಲಿಸಲಾಗದು. ಒಳ್ಳೆಯ ಗುರಿಯ ಕಡೆಗೆ ಇರುವ ನಿಮ್ಮ ಪ್ರಾಮಾಣಿಕ ಪ್ರಯತ್ನವನ್ನು ಬಿಡದೇ ಮುಂದುವರಿಯಲಿ.

ಕನ್ಯಾ ರಾಶಿ: ಆತ್ಮಬಲವಿದ್ದರೆ ಯಾವುದಕ್ಕೂ ಪಲಾಯನ ಮಾಡಬೇಕಿಲ್ಲ. ಆರೋಪವನ್ನೂ ಅಪವಾದವನ್ನೂ ಧೈರ್ಯದಿಂದ ಎದುರಿಸುವಿರಿ. ನಿಮ್ಮ ಉದ್ಯಮಕ್ಕೆ ಸಲಹೆಗಾರರನ್ನು ನಿಯಮಿಸಿಕೊಳ್ಳುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ಲಾಭವನ್ನು ನೀವು ನಿರೀಕ್ಷಿಸುವಿರಿ. ಯಾರಾದರೂ ನಿಮ್ಮ ಮೇಲೆ ಅಧಿಕಾರವನ್ನು ಚಲಾಯಿಸಬಹುದು. ನೂತನ ವಸ್ತ್ರಗಳನ್ನು ಖರೀದಿ ಮಾಡುವಿರಿ. ನಿಮ್ಮ ಆದಾಯದ ಮೂಲವು ಅಧಿಕವಾಗಬಹುದು. ಕೆಲಸದಲ್ಲಿ ಎಂದಿನ ಪ್ರಾಮಾಣಿಕತೆ ಇರಲಿ. ಪಾಲುದಾರಿಕೆಯಿಂದ ಹೊರಬರಲು ಬಯಸುವಿರಿ. ಅನ್ಯಮನಃಸ್ಥಿತಿಯಿಂದ ಏಕಾಗ್ರತೆಗೆ ಭಂಗಬರುವುದು. ಸ್ನೇಹಿತರ ವಿಚಾರದಲ್ಲಿ ನೀವು ಮೃದು‌ಮನಸ್ಸನ್ನು ಹೊಂದಿರುವಿರಿ. ವಿವಾಹವು ನಿಶ್ಚಯವಾಗುವ ಸಾಧ್ಯತೆ ಇದೆ. ಆಹಾರವನ್ನು ಸಮಯಕ್ಕೆ ಸರಿಯಾಗಿ ಸೇವಿಸಿ. ಎಲ್ಲವನ್ನೂ ಬಲ್ಲವರಂತೆ ತೋರಿಸಿಕೊಳ್ಳುವಿರಿ. ನಿಮ್ಮ ಉತ್ಸಾಹಕ್ಕೆ ಯಾರಾದರೂ ಭಂಗ ಮಾಡಬಹುದು. ನಿಮ್ಮ ಸುತ್ತಾಟವು ಆಯಾಸದಲ್ಲಿ ಕೊನೆಯಾಗುವುದು.

ತುಲಾ ರಾಶಿ: ನಿಮಗೆ ಬರಲಿರುವ ಕಾರ್ಯದಿಂದ ನೀವು ದೂರಸರಿಯುವಿರಿ. ಇಂದು ವ್ಯಾಪಾರದ ಪೈಪೋಟಿಯು ನಿಮ್ಮ ನೆಮ್ಮದಿಯನ್ನು ಕೆಣಕಬಹುದು. ನಿಮ್ಮ ಮನಸ್ಸಿನಲ್ಲಿ ಅವ್ಯಕ್ತವಾಗಿ ಆತಂಕವು ಮನೆ ಮಾಡಬಹುದು. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ಅಸಮಾಧನ ಇರಲಿದೆ. ಮನೆಯಲ್ಲಿ ನಡೆಯುವ ಶುಭಕಾರ್ಯಗಳು ಮುಂದಕ್ಕೆ ಹೋಗಬಹುದು. ಸಹನೆಯಿಂದ ಆಗುವ ಲಾಭವು ಅನುಭವವೇದ್ಯವಾಗಿರಲಿದೆ. ಮಕ್ಕಳು ನಿಮ್ಮ ಮಾತನ್ನು ಕೇಳದೇ ಸ್ವೇಚ್ಛೆಯಿಂದ ನಡೆದುಕೊಳ್ಳುವರು.‌ ಪದೋನ್ನತಿಯನ್ನು ನೀವು ಬಯಸಲಿದ್ದೀರಿ. ಕೆಲವರಿಂದ ಅನಿರೀಕ್ಷಿತವಾದುದು ಜರುಗಬಹುದು. ಭೂಮಿಯ ವ್ಯವಹಾರವು ಲಾಭದಾಯಕವಾಗಿಲ್ಲ. ಅಲ್ಪ ಸುಖಕ್ಕಾಗಿ ನೀವು ಹೆಚ್ಚು ಶ್ರಮಿಸುವಿರಿ. ನಿಮ್ಮ ಆಡಿದ ಮಾತಿಗೆ ಅರ್ಥವಿರಲಿ. ಕಲಾವಿದರು ವಿದೇಶಗಳಿಗೆ ಹೋಗುವ ಅವಕಾಶ ಇರುವುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳಬೇಕಾಗುವುದು. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಯಾರದೋ ಕಾರ್ಯಕ್ಕೆ ನೀವು ಸಮಯಕೊಡಬೇಕಾದೀತು.

ವೃಶ್ಚಿಕ ರಾಶಿ: ವೃತ್ತಿಯ ಬಗ್ಗೆ ನಿಮಗೆ ಕಲ್ಪನೆ ಸರಿಯಾಗಿ ಇರದು. ನೀವು ಎಲ್ಲವೂ ದೈವಾನುಗ್ರದಂತೆ ಆಗುತ್ತದೆ ಎಂದು ಸುಮ್ಮನಿರದೇ ಪ್ರಯತ್ನವನ್ನೂ ಮಾಡಿ. ಪ್ರಯೋಜನಕ್ಕೆ ಬಾರದ ಸಂಗತಿಗಳನ್ನು ಮಾತನಾಡಿ ಸಮಯ ಹಾಳು ಮಾಡುವಿರಿ. ಸಂಗಾತಿಯ ಮೌನವು ನಿಮ್ಮಲ್ಲಿ ಆತಂಕವನ್ನು ಹುಟ್ಟಿಸಬಹುದು. ನಿಯಮ ಉಲ್ಲಂಘನೆಯನ್ನು ಮಾಡಿ ದಂಡ ಕಟ್ಟಬಹುದು. ಇಷ್ಟವಾದ ವಸ್ತುವು ನಷ್ಟವಾಗಿ ಸಂಕಟ ಪಡುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ಧಾರ್ಮಿಕ ಕಾರ್ಯದಲ್ಲಿ ತೊಡಗಿದವರಲ್ಲಿ ಶ್ರದ್ಧೆ ಕಾಣಿಸುವುದು. ಸುತ್ತಾಟದಲ್ಲಿ ಸುಖವನ್ನು ಕಾಣುವಿರಿ. ಮನಸ್ಸಿನಲ್ಲಿ ಅಧಿಕ ಚಿಂತೆಗಳು ಸುಳಿದಾಡುವುದು. ನಿಮ್ಮನ್ನು ಅಪರಿಚಿತರು ಭೇಟಿ ಮಾಡಬಹುದು. ಅವಶ್ಯಕತೆಗೆ ಇದ್ದಷ್ಟನ್ನು ಮಾತ್ರ ಹೇಳಿ. ಉದ್ಯೋಗದಲ್ಲಿ ಸರಿಯಾದ ಮಿತ್ರರು ಸಿಗಬಹುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ನಿಮ್ಮ ನಿರ್ಧಾರಕ್ಕೆ ಸಂಗಾತಿಯ ಬೆಂಬಲವು ಸಿಗದು. ನಿಮ್ಮವರ ಜೊತೆಗಿನ ಒಡನಾಟವು ಮಿತಿಯಲ್ಲಿ ಇರಲಿ.

ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ