Daily Horoscope: ಈ ರಾಶಿಯವರು ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸುವುದು ಅವಶ್ಯಕ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಅಕ್ಟೋಬರ್​ 16: ಯಾವುದಾದರೂ ಕಾರ್ಯಕ್ಕೆ ನಿಮ್ಮವರ ವಿರೋಧ ಬರಬಹುದು. ಇನ್ನೊಬ್ಬರಿಂದ ಪ್ರೇರಿತರಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗುವಿರಿ. ಆರ್ಥಿಕತೆಯ ಮೇಲೆ ನಿಮಗೆ ಮೋಹವು ಕಡಿಮೆ ಆಗಬಹುದು. ಹಾಗಾದರೆ ಅಕ್ಟೋಬರ್​ 16ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರು ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸುವುದು ಅವಶ್ಯಕ
ರಾಶಿಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 16, 2024 | 12:20 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಧ್ರುವ​, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:18 ರಿಂದ 01:46, ಯಮಘಂಡ ಕಾಲ ಬೆಳಿಗ್ಗೆ 07:53ರಿಂದ 09:22ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:50 ರಿಂದ 12:18 ರವರೆಗೆ.

ಸಿಂಹ ರಾಶಿ : ನೀವು ಕೈಗೊಂಡ ಪ್ರಯಾಣವು ಸುಖಕರವಾಗದೇ ಇರಬಹುದು. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ಆಡಳಿತಕ್ಕೆ ಸಂಬಂಧಿಸಿದಂತೆ ಲೋಪ ದೋಷಗಳು ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭವನ್ನು ಎದುರಿಸುವಾಗ ಗೊತ್ತಿದ್ದೂ ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ಗೊಂದಲವು ಬರಬಹುದು. ಆಪ್ತರ ಜೊತೆಗಿನ ಒಡನಾಟವು ನಿಮ್ಮ ಭಾರವಾದ ಮನಸ್ಸನ್ನು ಹಗುರಗೊಳಿಸುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಕಡಿಮೆ ಇರಬಹುದು. ಸ್ನೇಹಿತರ ನಡುವಿನ ಬಾಂಧವ್ಯವು ವೃದ್ಧಿಯಾಗಲಿದೆ. ಸ್ತ್ರೀಸುಖವನ್ನು ನೀವು ಅನುಭವಿಸುವಿರಿ. ಯಾರಿಗೂ ಹೇಳದೇ ಎಲ್ಲಿಗಾದರೂ ಹೋಗಿ ಆತಂಕವನ್ನು ಸೃಷ್ಟಿ ಮಾಡುವಿರಿ. ನಿಮ್ಮ ತಂದೆಯ ಮಾರ್ಗದರ್ಶನದಲ್ಲಿ ಕುಟುಂಬ ವ್ಯವಹಾರವು ಮತ್ತೆ ಬೆಳೆಯುತ್ತದೆ. ವೃತ್ತಿಯಲ್ಲಿ ಜವಾಬ್ದಾರಿಯನ್ನು ಬೇರೆಯವರಿಗೆ ಹಾಕಿ, ಸುಮ್ಮನಾಗುವಿರಿ.

ಕನ್ಯಾ ರಾಶಿ : ಆರ್ಥಿಕ ತೊಂದರೆಯನ್ನು ನೀವು ಸಲೀಸಾಗಿ ಸರಿಮಾಡಿಕೊಳ್ಳುವಿರಿ. ಸಮಯ ಹಾಗೂ ಸಂದರ್ಭಗಳನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳ ಜೊತೆ ಹಂಚಿಕೊಳ್ಳಿ. ವ್ಯಾಪರದ ವಹಿವಾಟನ್ನು ಮಾಡುತ್ತಿದ್ದರೆ ನಿಮಗೆ ಹೆಚ್ಚು ಕೆಲಸವೂ ಪ್ರಶಂಸೆಯೂ ಆರ್ಥಿಕಬಲವೂ ಬರಲಿದೆ. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಿ. ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡುವುದು. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಅತಿಯಾದ ಶ್ರದ್ಧೆಯು ಬರುವುದು. ನಿಮ್ಮದಲ್ಲದ ವಸ್ತುಗಳನ್ನು ನೀವು ಇಟ್ಟುಕೊಳ್ಳದೇ ಹಿಂದಿರುಗಿಸಿ. ಆಲಸ್ಯವನ್ನು ಬಿಟ್ಟು ಇಂದು ಕಾರ್ಯದಲ್ಲಿ ಹೆಚ್ಚು ತೊಡಗುವಿರಿ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ವೃತ್ತಿಯಲ್ಲಿ ಭಡ್ತಿ ಕಷ್ಟವಾಗಬಹುದು. ಸಂಗಾತಿಯು ನಿಮಗೆ ಬೇಸರವಾಗಬೇಕೆಂದೇ ಮಾತನಾಡಬಹುದು.

ತುಲಾ ರಾಶಿ : ಅಪರಿಚಿತ ಕರೆಗಳಿಂದ ನಿಮಗೆ ಭಯವಾಗಬಹುದು. ನಿಮಗೆ ನಿರೀಕ್ಷಿತ ಉದ್ಯೋಗವು ಸಿಗದೇ ಇರುವುದು ನಿಮ್ಮನ್ನು ಖಿನ್ನಗೊಳಿಸೀತು. ಋಣ ಬಾಧೆಯು ಮುಕ್ತಾಯವಾಯಿತು ಎನ್ನುತ್ತಿದ್ದಂತೆ ಇನ್ನೊಂದು ಆರಂಭವಾಗುವುದು. ಬಂಧುಗಳಿಂದ, ಮನೆಯ ಹಿರಿಯರಿಂದ ನೀವು ಅಲಕ್ಷ್ಯಕ್ಕೆ ಒಳಗಾಗುವಿರಿ. ಇದು ನಿಮಗೆ ಬಹಳ ಬೇಸರವನ್ನು ತರಿಸುವುದು. ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ನಿರ್ವಹಿಸಲಾಗಾದೇ ಕಷ್ಟಪಡುವಿರಿ. ಬಂಧುಗಳ ಕಡೆಯಿಂದ ನಿಮಗೆ ಶುಭವಲ್ಲದ ವಾರ್ತೆಯೊಂದು ಬರಬಹುದು. ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮ ಮನಃಸ್ಥಿತಿಯನ್ನು ಯಾರಾದರೂ ದುರುಪಯೋಗ ಮಾಡಿಕೊಳ್ಳಬಹುದು. ಕಾರ್ಯದಲ್ಲಿ ಎಲ್ಲಿಯೂ ತಪ್ಪಾಗದಂತೆ ನೋಡಿಕೊಳ್ಳಿ.

ವೃಶ್ಚಿಕ ರಾಶಿ : ಯಾವುದಾದರೂ ಕಾರ್ಯಕ್ಕೆ ನಿಮ್ಮವರ ವಿರೋಧ ಬರಬಹುದು. ಇನ್ನೊಬ್ಬರಿಂದ ಪ್ರೇರಿತರಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗುವಿರಿ. ಆರ್ಥಿಕತೆಯ ಮೇಲೆ ನಿಮಗೆ ಮೋಹವು ಕಡಿಮೆ ಆಗಬಹುದು. ವಂಚನೆಗೆ ಪ್ರತಿವಂಚನೆಯನ್ನು ಮಾಡುವ ಬುದ್ಧಿಯು ಬರಬಹುದು. ಆಶಿಸ್ತಿನ ಕೆಲಸಕ್ಕೆ ಹಿರಿಯರಿಂದ ಬೈಸಿಕೊಳ್ಳುವಿರಿ. ಅಪರಿಚಿತ ವ್ಯಕ್ತಿಯಿಂದ ತೊಂದರೆಗಳು ಎದುರಾಗಬಹುದು. ಭವಿಷ್ಯದ ಬಗ್ಗೆ ಅಸ್ಪಷ್ಟ ಆಲೋಚನೆಗಳು ನಿಮಗೆ ಸಮಾಧಾನವನ್ನು ತರದು. ಆಪ್ತರ ಜೊತೆ ನಿಮ್ಮ ಸಮಸ್ಯೆಯನ್ನು ಹಂಚಿಕೊಂಡು ನಿಶ್ಚಿಂತರಾಗಿ. ಆರೋಗ್ಯದ ಬಗ್ಗೆ ಗಮನವು ಅವಶ್ಯಕ. ತಂದೆಯ ಕಡೆಯಿಂದ ನಿಮಗೆ ಉದ್ಯೋಗಕ್ಕೆ ಸಹಕಾರವನ್ನು ಕೊಡಬಹುದು. ನಿಮ್ಮ ವಿಷಯಕ್ಕೆ ಸ್ನೇಹಿತರು ನಗುವರು‌. ನೀವು ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನಗಳು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ಇಂದು ನಿದ್ರೆಗೆ ತೊಂದರೆಯಾಗಬಹುದು.