Daily Horoscope: ಪ್ರತಿಫಲದ ನಿರೀಕ್ಷೆ ಇಲ್ಲದೇ ಈ ರಾಶಿಯವರು ಸ್ನೇಹಿತರಿಗೆ ಸಹಾಯ ಮಾಡುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 13: ಯಾರನ್ನೋ ಸೋಲಿಸುವ ಸವಾಲನ್ನು ತೆಗೆದುಕೊಳ್ಳುವಿರಿ. ಇದರಿಂದ ಪ್ರೇಮಿಯು ದೂರಾಗಬಹುದು. ದುಃಖವೂ ಅಧಿಕವಾಗಲಿದೆ. ಸ್ನೇಹಿತರಿಂದ ಸಾಂತ್ವನ ಸಿಗಬಹುದು. ಇನ್ನೊಬ್ಬರನ್ನು ನೋಡಿ ಕಲಿಯುವ ವಿಚಾರವು ಸಾಕಷ್ಟಿರಬಹುದು. ಹಾಗಾದರೆ ಸೆಪ್ಟೆಂಬರ್​ 13ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಪ್ರತಿಫಲದ ನಿರೀಕ್ಷೆ ಇಲ್ಲದೇ ಈ ರಾಶಿಯವರು ಸ್ನೇಹಿತರಿಗೆ ಸಹಾಯ ಮಾಡುವಿರಿ
ಪ್ರತಿಫಲದ ನಿರೀಕ್ಷೆ ಇಲ್ಲದೇ ಈ ರಾಶಿಯವರು ಸ್ನೇಹಿತರಿಗೆ ಸಹಾಯ ಮಾಡುವಿರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 13, 2024 | 12:10 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಸೌಭಾಗ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಬೆಳಿಗ್ಗೆ 10:50 ರಿಂದ 12:23, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:59ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:46 ರಿಂದ 09:18ರ ವರೆಗೆ.

ಸಿಂಹ ರಾಶಿ: ಇಂದು ಕೆಲವು ಸಮಯದಿಂದ ನಿಮ್ಮ ಸ್ವಂತ ಪ್ರಗತಿಗಾಗಿ ಮಾಡುತ್ತಿರುವ ಪ್ರಯತ್ನಗಳು ಸಫಲ ಆಗಲಿವೆ. ವೈಯಕ್ತಿಕವಾಗಿ ನೀವು ಗಳಿಸುವ ಸ್ಥಾನಮಾನಗಳು ಇತರರಿಗೆ ಕಷ್ಟವಾಗುವುದು. ನೂತನ ಗೃಹ ನಿರ್ಮಾಣಕ್ಕೆ ಹಣದ ಹೊಂದಿಸುವಿಕೆಯಲ್ಲಿ ಮಗ್ನರಾಗುವಿರಿ. ವಿರಾಮ ರಹಿತವಾದ ಮಾತುಗಳಿಂದ ಇನ್ನೊಬ್ಬರಿಗೆ ತೊಂದರೆಯಾಗಲಿದೆ. ಅವಿವಾಹಿತರಿಗೆ ದೂರದ ಸಂಬಂಧದಿಂದ ವಿವಾಹವು ಕೂಡಿಬರಬಹುದು. ಪ್ರತಿಫಲದ ನಿರೀಕ್ಷೆ ಇಲ್ಲದೇ ನೀವು ಸ್ನೇಹಿತನಿಗೆ ಸಹಾಯವನ್ನು ಮಾಡುವಿರಿ. ಇನ್ನೊಬ್ಬರಿಂದ ಸಿಗುವ ನಿಷ್ಕಾರಣ ಪ್ರೀತಿಯನ್ನು ಅನುಭವಿಸುವಿರಿ. ನಿರಾಧಾರದ ಮಾತನಾಡಿ ಅವಮಾನಿತರಾಗಬಹುದು. ಉದ್ಯಮಕ್ಕೆ ಸಂಬಂಧಿಸಿದಂತೆ ಹಣದ ಖರ್ಚು ಇರುವುದು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ.

ಕನ್ಯಾ ರಾಶಿ: ಇಂದು ಬಂಧುಗಳ ಸಮಯಕ್ಕಾಗಿ ಕಾಯಬೇಕಾಗಬಹುದು. ಇಂದು ನೀವು ಹಣಕಾಸಿನ ವಿಚಾರದಲ್ಲಿ ನಿಷ್ಠುರದಿಂದ ವರ್ತಿಸಿದರೆ ಮಾತ್ರ ಲಾಭಗಳಿಸುವ ಸಾಧ್ಯತೆ ಇದೆ. ಯಾರನ್ನೋ ಸೋಲಿಸುವ ಸವಾಲನ್ನು ತೆಗೆದುಕೊಳ್ಳುವಿರಿ. ಇದರಿಂದ ಪ್ರೇಮಿಯು ದೂರಾಗಬಹುದು. ದುಃಖವೂ ಅಧಿಕವಾಗಲಿದೆ. ಸ್ನೇಹಿತರಿಂದ ಸಾಂತ್ವನ ಸಿಗಬಹುದು. ಇನ್ನೊಬ್ಬರನ್ನು ನೋಡಿ ಕಲಿಯುವ ವಿಚಾರವು ಸಾಕಷ್ಟಿರಬಹುದು. ರಾಜಕೀಯದಲ್ಲಿ ಆದ ಹಿನ್ನಡೆಯಿಂದ ಅಪಮಾನವಾಗಲಿದೆ. ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಇಂದು ಸವಾಲಿನ ದಿನ. ಹಣಕಾಸಿನ ಕ್ಲಿಷ್ಟತೆ ಉದ್ಭವಿಸುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ನಿಗಾವಹಿಸಿ. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿಮ್ಮ ಪ್ರಮುಖ ಸಮಸ್ಯೆಗೆ ಯಾವುದಾದರೂ ಒಂದು ಪರಿಹಾರ ಕಾಣಬಹುದು. ಆದಾಯದ ಜೊತೆಗೆ ಖರ್ಚಿನ ಸ್ಥಿತಿಯೂ ಉಳಿಯಬಹುದು. ಮಕ್ಕಳನ್ನು ಬಹಳ ಜೋಪಾನವಾಗಿ ನಿರ್ವಹಿಸಬೇಕಾಗಬಹುದು. ಆರೋಗ್ಯ ಉತ್ತಮ ಇರುತ್ತದೆ.

ತುಲಾ ರಾಶಿ: ಇಂದು ನೀವು ಉದ್ಯೋಗ ಕ್ಷೇತ್ರದಲ್ಲಿ ಆಗುವ ವಾದಗಳನ್ನು ತಪ್ಪಿಸಿ. ಅನ್ಯರು ನಿಮ್ಮ ಖಾಸಗಿ ವಿಚಾರಗಳಿಗೆ ಮನೆಯವರು ಮೂಗು ತೂರಿಸಿದರೆ ಸಿಟ್ಟುಗೊಳ್ಳುವಿರಿ. ಕೌಟುಂಬಿಕ ಅಗತ್ಯಗಳಿಗೆ ತಕ್ಷಣ ಗಮನ ನೀಡಬೇಕಾದೀತು. ಇಂದು ನೀವು ಯಾರ ಮಾತನ್ನೂ ಒಪ್ಪಿಕೊಳ್ಳಲಾರಿರಿ. ಇಲ್ಲವೇ, ನೀವೇ ಸಮಸ್ಯೆಯನ್ನು ಉಲ್ಬಣಗೊಳಿಸುವಿರಿ. ಸಂಭಾವ್ಯ ಮಾನನಷ್ಟವನ್ನು ತಪ್ಪಿಸಲು ಖಾಸಗಿ ವಿಷಯಗಳನ್ನು ಸಾರ್ವಜನಿಕರ ಕಣ್ಣಿನಿಂದ ದೂರವಿಡಿ. ಯಾವುದೇ ಸಾಮಾಜಿಕ ಅಥವಾ ಧಾರ್ಮಿಕ ಸಂಸ್ಥೆಗೆ ನಿಮ್ಮ ಕೊಡುಗೆ ನಿಮಗೆ ಹೊಸ ಗುರುತನ್ನು ನೀಡುತ್ತದೆ. ಕೆಲವು ನಕಾರಾತ್ಮಕ ಆಲೋಚನೆಗಳು ಮನಸ್ಸಿಗೆ ಬರುತ್ತದೆ. ಮನೆಯ ಹಿರಿಯರ ಆರೋಗ್ಯಕ್ಕೆ ವಿಶೇಷ ಗಮನ ಅಗತ್ಯ ಕೊಡಿ.

ವೃಶ್ಚಿಕ ರಾಶಿ: ಇಂದು ಕೆಲಸ ಹೆಚ್ಚು ಆದರೂ ಎಲ್ಲವನ್ನೂ ಮಾಡಿಮುಗಿಸಿದ ಸಮಾಧಾನ ಇರುವುದು. ಉದ್ಯೋಗಸ್ಥರು ಉನ್ನತ ಅವಕಾಶವನ್ನು ಪ್ರತೀಕ್ಷೆ ಮಾಡಬಹುದು. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಬೇಕಾದ ಉತ್ತಮ ಅವಕಾಶಗಳು ಸಿಗಲಿದೆ. ಹಣದ ಹರಿವಿನಿಂದ ತೃಪ್ತಿ ಉಂಟಾಗಬಹುದು. ಉದ್ಯೋಗದ ವಿಚಾರದಲ್ಲಿ ಸಂತಸವಿರುವುದು. ಸೂಕ್ಷ್ಮ ಸನ್ನಿವೇಶಗಳನ್ನು ನಿರ್ವಹಿಸುವ ಕಲೆಯು ಗೊತ್ತಾಗದು. ಗೆಲುವನ್ನು ಇವರು ನಿರೀಕ್ಷಿಸಬಹುದು. ಸಂತಾನದ ವಿಚಾರದಲ್ಲಿ ಶುಭ ಸೂಚನೆ ಇಂದು ನಿಮಗೆ ಸಿಗಲಿದೆ. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ದೃಢವಾಗಿರುತ್ತದೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿಯೂ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಅಲ್ಲಿ ಹಣದ ವಹಿವಾಟಿಗೆ ಸಂಬಂಧಿಸಿದ ನಷ್ಟವಾಗುತ್ತದೆ.

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ