Daily Horoscope: ಈ ರಾಶಿಯವರು ಗುರಿಯತ್ತ ಗಮನ ಹರಿಸುವುದು ಒಳಿತು
15 ಏಪ್ರಿಲ್ 2025: ಮಂಗಳವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಅನಗತ್ಯ ಮೋಜಿನಲ್ಲಿ ಸಮಯ ವ್ಯರ್ಥ ಮಾಡಬಾರದು. ನಿಮ್ಮ ಉದ್ಯೋಗದ ಸ್ಥಳಾಂತರವಾಗುವ ಸಾಧ್ಯತೆ ಇವೆ. ವ್ಯಾಪಾರ ಮಾಡುವಾಗ ಹಣದ ಕುರಿತು ಬಹಳ ಎಚ್ಚರಿಕೆ ಅಗತ್ಯವಾಗಿ ಮಾಡಿ.

ಬೆಂಗಳೂರು, ಏಪ್ರಿಲ್ 15, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಸಿದ್ಧಿ, ಕರಣ : ಗರಜ, ಸೂರ್ಯೋದಯ – 06 – 20 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:39 – 17:12, ಯಮಘಂಡ ಕಾಲ 09:26 – 10:59, ಗುಳಿಕ ಕಾಲ 12:33 – 14:06.
ಮೇಷ ರಾಶಿ: ನೀವು ಆಸಕ್ತಿಯನ್ನು ತೋರಿಸುವುದರಲ್ಲಿ ಎಂದಿಗಿಂತ ಕಡಿಮೆ ಸ್ಪಂದನವಿರಲಿದೆ. ಇಂದು ಸ್ಪರ್ಧಿಸುವ ಮೊದಲು ನಿರ್ಲಕ್ಷ್ಯದಿಂದ ಸೋಲಾಗಬಹುದು. ಜನರ ಮಾತಿಗೆ ನಿಮ್ಮ ಪ್ರತಿಕ್ರಿಯೆ ಬೇಡ. ಗುರಿಯೇ ನಿಮಗೆ ಮುಖ್ಯವಾಗಿರಲಿ. ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು. ಕಾರ್ಯದ ಶಿಸ್ತಿಗೆ ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆನಿಸುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಹಣಕಾಸಿನ ವಿಚಾರದಲ್ಲಿ ನೀವು ನಾಜೂಕುತನವನ್ನು ಇಟ್ಟುಕೊಳ್ಳುವಿರಿ. ಮನೆಯ ಕಾರ್ಯದಲ್ಲಿ ಇಂದು ಮಗ್ನರಾಗುವಿರಿ. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಲ್ಲ, ಅದರೂ ಅನಿವಾರ್ಯ. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಅದನ್ನು ಕ್ಷಮಾಪಣೆಯಿಂದ ಸರಿಮಾಡಿಕೊಳ್ಳಿ.
ವೃಷಭ ರಾಶಿ: ಪರಾಕ್ರಮದಿಂದ ಸಾಧಿಸುವುದು ಸಹಜವಾಗದು. ಇಂದು ನೀವಂದುಕೊಂಡಂತೆ ವೇಗವಾಗಿ ಸಮಯಕ್ಕೆ ಸರಿಯಾಗಿ ಕೆಲಸ ಆಗಲಿದ್ದು, ಅನಂತರ ಸ್ವಲ್ಪ ವಿಶ್ರಾಂತಿಯನ್ನೂ ಪಡೆಯುವಿರಿ. ಸಾಲಕ್ಕೆ ಸಂಬಂಧಿಸಿದ ವಿಷಯಗಳು ಇತ್ಯರ್ಥವಾಗಲಿವೆ. ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ಇತರರ ತಪ್ಪು ಕೆಲಸದಿಂದ ನಿಮಗೆ ತೊಂದರೆ. ನೀವು ಅದನ್ನು ತಿದ್ಸಬೇಕಸದೀತು. ಕಡಿಮೆ ಪ್ರಯತ್ನದಲ್ಲಿ ಹೆಚ್ಚಿನ ಯಶಸ್ಸು ಪಡೆಯುವ ಸಾಧ್ಯತೆಗಳಿವೆ. ಮಕ್ಕಳು ಮತ್ತು ಕುಟುಂಬದವರ ಜೊತೆಗೆ ಉತ್ತಮ ಸಮಯವನ್ನು ಕಳೆಯುವಿರಿ. ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಯಾರ ಮೇಲೂ ಹಗುರಾದ ಮನೋಭಾವ ಬೇಡ. ದುಃಸ್ವಪ್ನವು ನಿಮ್ಮ ನಿದ್ರೆಯನ್ನು ಕೆಡಿಸೀತು. ದೀರ್ಘಕಾಲದ ಗೆಳೆತನವು ಮಾತಿನಿಂದ ಒಡೆದುಹೋಗಬಹುದು. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು.
ಮಿಥುನ ರಾಶಿ: ಆಲಸ್ಯದ ಕಾರಣ ಆಹ್ಲಾಕರ ವಾತಾವರಣದಿಂದ ದೂರಿರುವಿರಿ. ಹೊಸದಾಗಿ ವೃತ್ತಿಯನ್ನು ಆರಂಭಿಸಿದವರಿಗೆ ತಮ್ಮ ವೃತ್ತಿಜೀವನದ ಬಗ್ಗೆ ಗೊಂದಲ ಉಂಟಾಗುವುದು. ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. ನಿಮ್ಮ ಕೆಲಸದ ಗುಣಮಟ್ಟವನ್ನು ಸುಧಾರಿಸಲು ಪ್ರಯತ್ನಿಸಿ. ಪರಿಣಾಮಗಳನ್ನು ಪರಿಗಣಿಸಿ ಮುನ್ನಡೆಯಬೇಕು. ಅಸಂಬದ್ಧ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಿ ಇರುವುದು. ಸಂಗಾತಿಯನ್ನು ಎಲ್ಲಿಗಾದರೂ ದೂರ ಕರೆದುಕೊಂಡು ಹೋಗಲು ಆಸೆಯಾಗುವುದು. ಹಣಕಾಸಿನ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಿಕೊಳ್ಳಿ. ಸಾಲವನ್ನು ಹಿಂದಿರುಗಿಸಲು ನಿಮ್ಮ ಹೂಡಿಕೆಯನ್ನು ತೆಗೆಯಬೇಕಾಗುವುದು. ಕೆಲವು ವ್ಯವಹಾರದಲ್ಲಿ ನೀವು ಹಿಂದುಳಿದಂತೆ ನಿಮಗೆ ಅರಿವಾಗುವುದು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ಸಮಾರಂಭಗಳಿಗೆ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯು ಹಿಡಿಸದೇ ಇದ್ದೀತು. ವಿದೇಶದಲ್ಲಿ ಇರವವರಿಗೆ ಅಸಮಾಧಾನ ಹೆಚ್ಚಿರುವುದು.
ಕರ್ಕಾಟಕ ರಾಶಿ: ನಿಮ್ಮ ಸಹಕಾರವು ಪಡೆದವರಿಗೆ ಅತಿಯಾದ ಪ್ರಯೋಜನ ನೀಡುವುದು. ಇಂದು ಯಾವುದೇ ವಿಘ್ನಗಳು ಬಾರದೇ ನಿಮ್ಮ ಕಾರ್ಯಗಳು ಸುಲಭದಲ್ಲಿ ಪೂರ್ಣಗೊಳ್ಳುವುದು. ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯವಿರುತ್ತದೆ. ನಿಮ್ಮ ಇಷ್ಟದ ಜನರಿಂದ ನೀವು ಬೆಂಬಲವನ್ನು ಪಡೆಯುತ್ತಿರುವಿರಿ. ಶೀಘ್ರದಲ್ಲೇ ಸಂಬಂಧಗಳನ್ನು ಸುಧಾರಿಸುವ ಅವಕಾಶವನ್ನು ನೀವು ಪಡೆಯಬಹುದು. ಪೂರಕ ವಾತಾವಾರಣದಿಂದ ಆತ್ಮವಿಶ್ವಾಸ ಬಲಗೊಳ್ಳಲಿದೆ. ಇಂದು ನೀವು ಕಾನೂನಾತ್ಮಕ ವಿಚಾರಗಳಿಗೆ ಹೆಚ್ಚು ಸಮಯವನ್ನು ಕೊಡುವಿರಿ. ಮಕ್ಕಳ ವಿಚಾರದಲ್ಲಿ ನಿಮಗೆ ಸರಿಯಾದ ಮಾಹಿತಿ ದೊರಕದೇ ಬೇಸರಿಸುವಿರಿ. ಮನಸ್ಸಿಗೆ ನೆಮ್ಮದಿಯು ಬೇಕೆಂದು ಅನ್ನಿಸುವುದು. ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಯಾರಾದರೂ ಪ್ರಾಬಲ್ಯವನ್ನು ಸಾಧಿಸಬಹುದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ.
ಸಿಂಹ ರಾಶಿ: ಇಂದು ನೀವು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲು ಹಿಂಜರಿಯುವಿರಿ. ನೀವು ಆತ್ಮವಿಶ್ವಾಸವು ಶಕ್ತಿಯಿಂದ ತುಂಬಿರುವಿರಿ. ಬಹಳ ದಿನಗಳ ಅನಂತರ ಹೊರಗಿನ ಸುತ್ತಾಟವು ಹಿತವೆನಿಸುವುದು. ಗುರು ಹಿರಿಯರಿಂದ ಒಳ್ಳೆಯ ಕಾರ್ಯಕ್ಕೆ ಪ್ರೋತ್ಸಾಹ. ಉನ್ನತ ಅಧಿಕಾರಿಯ ಜೊತೆ ಆಗಬೇಕಾದ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿ ವರ್ಗ ಸ್ವೀಕರಿಸುವುದು. ನಿಮ್ಮ ಗುಣಮಟ್ಟವು ನಿಮ್ಮದೇ ಕಾರಣದಿಂದ ತಗ್ಗಬಹುದು. ಆಡಳಿತದಲ್ಲಿ ಆಗಬೇಕಾದ ಬದಲಾವಣೆಯನ್ನು ನೀವು ತರುವಿರಿ. ಒಮ್ಮೆಲೇ ಎಲ್ಲವನ್ನೂ ಮಾಡಿ ಮುಗಿಸಬೇಕು ಎನ್ನುವ ಆತುರವು ಬೇಡ. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಎಲ್ಲರ ಜೊತೆ ವಾದಕ್ಕಿಳಿಯುವ ಮನಸ್ಸಿನಲ್ಲಿ ಇರುವಿರಿ. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಲ್ಲಿ ಇರುವಂತೆ ತೋರಸಲಾರಿರಿ.
ಕನ್ಯಾ ರಾಶಿ: ನಿಮ್ಮ ಯೋಚನೆ ಕಾರ್ಯರೂಪಕ್ಕೆ ತಂದು ಸಂತೋಷಿಸುವಿರಿ. ಇಂದು ಬೆಲೆಯುಳ್ಳ ವಸ್ತುವನ್ನು ಖರೀದಿಸುವ ಸಂದರ್ಭ ಇದೆ. ಅನಗತ್ಯ ಮೋಜಿನಲ್ಲಿ ಸಮಯ ವ್ಯರ್ಥ ಮಾಡಬಾರದು. ನಿಮ್ಮ ಉದ್ಯೋಗದ ಸ್ಥಳಾಂತರವಾಗುವ ಸಾಧ್ಯತೆ ಇವೆ. ವ್ಯಾಪಾರ ಮಾಡುವಾಗ ಹಣದ ಕುರಿತು ಬಹಳ ಎಚ್ಚರಿಕೆ ಅಗತ್ಯವಾಗಿ ಮಾಡಿ. ಇಂದು ಅನಿವಾರ್ಯ ಓಡಾಟವು ಬರಲಿದ್ದು ವಾಹನ ಚಲಾಯಿಸುವಾಗ ನಿಮಗೆ ಜಾಗರೂಕತೆ ಬೇಕಾಗುವುದು. ಕೊಡಬೇಕಾದವರಿಗೆ ಸರಿಯಾದ ಗೌರವವನ್ನು ಕೊಡಿ. ವೈದ್ಯ ವೃತ್ತಿಯಲ್ಲಿ ಇರುವವರಿಗೆ ಒತ್ತಡ ಹೆಚ್ಚು. ಕೆಲಸಕ್ಕೆ ಅನುಗುಣವಾಗಿ ಸಮಯವನ್ನು ಹೊಂದಿಸಿಕೊಳ್ಳಿ. ಯಾರನ್ನೋ ಮೆಚ್ಚಿಸಲು ಕೆಲಸಮಾಡಬೇಕಾಗುವುದು. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಹಣಕಾಸಿನಲ್ಲಿ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.