Horoscope: ಈ ರಾಶಿಯವರಿಗೆ ಪ್ರೀತಿಯ ವಿಷಯದಲ್ಲಿ ದುಃಖವಾಗುವ ಸಂದರ್ಭವಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 2 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಪ್ರೀತಿಯ ವಿಷಯದಲ್ಲಿ ದುಃಖವಾಗುವ ಸಂದರ್ಭವಿದೆ
ದಿನ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 02, 2024 | 12:33 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಏಪ್ರಿಲ್ 2) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಪರಿಘ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:32 ರಿಂದ 11:04ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:36 ರಿಂದ 02:08ರ ವರೆಗೆ.

ಸಿಂಹ ರಾಶಿ : ಇಂದು ಸಮಾಜದಲ್ಲಿ ನಿಮ್ಮ ಗೌರವ ಮತ್ತು ಪ್ರಾಬಲ್ಯವನ್ನು ಉಳಿಸಿಕೊಂಡಿದ್ದು ತೋರುವುದು. ನಿಮ್ಮ ಗುರಿಯನ್ನು ಬದಲಿಸಲು ಪ್ರಯತ್ನಿಸಬಹುದು. ಇಂದು ವ್ಯಾಪಾರ ಚಟುವಟಿಕೆಗಳಲ್ಲಿ ಕಠಿಣ ಪರಿಶ್ರಮದ ಅವಶ್ಯಕತೆ ಇರುತ್ತದೆ. ಅನೇಕ ಸಮಸ್ಯೆಗಳು ಏಕಕಾಲದಲ್ಲಿ ಉದ್ಭವಿಸಿ, ದಿಗ್ಭ್ರಾಂತರಾಗಬಹುದು. ಇಂದು ಆರೋಗ್ಯ ವಿಷಯಗಳಲ್ಲಿ ಅಪಾಯಗಳು ಮತ್ತು ಅಜಾಗರೂಕತೆಯಿಂದ ದೂರವಿರಬೇಕು. ವ್ಯವಹಾರದಲ್ಲಿ ನೀವು ಸ್ಪರ್ಧಿಗಳ ಬಗ್ಗೆ ತಿಳಿಯಿರಿ. ಹಣಕಾಸಿನ ವಿಷಯಗಳಲ್ಲಿ, ನೀವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಸಹೋದರರ ನಡುವೆ ಪ್ರೀತಿ ಇರುತ್ತದೆ. ಉದ್ಯೋಗದಲ್ಲಿ ನಿಮ್ಮ ಬದಲಾವಣೆ ಆಗಲಿದ್ದು ಆಶ್ಚರ್ಯದ ಸಂಗತಿಯಾದೀತು. ಆದಾಯಕ್ಕಾಗಿ ಅನ್ಯ ಮಾರ್ಗವನ್ನೂ ನೀವು ಅವಲಂಬಿಸಬಹುದು. ಬಹಳ ದಿನಗಳಿಂದ ಇದ್ದ ಅನಾಥ ಭಯವನ್ನು ನೀವು ದೂರಮಾಡಿಕೊಳ್ಳುವಿರಿ.

ಕನ್ಯಾ ರಾಶಿ : ನಿಮ್ಮ ಆತ್ಮಸಾಕ್ಷಿಯನ್ನು ಮೀರಿ ಯಾವ ಕಾರ್ಯವನ್ನು ಮಾಡಲು ಹೆದರುವಿರಿ. ನಿಮ್ಮ ಅಜಾಗರೂಕತೆಯಿಂದ ನಿಕಟ ಸಂಬಂಧಿಯ ಜೊತೆ ಬಂಧವು ಕೆಡುವುದು. ಹಾಗಾಗಿ ಹೆಚ್ಚಿನ ಎಚ್ಚರಿಕೆ ವಹಿಸುವ ವರ್ತಿಸುವುದು ಅಗತ್ಯ. ಹಿರಿಯರ ಬಗ್ಗೆ ಗೌರವ ಕಡಿಮೆಯಾಗುವುದು. ಇಂದು ನಿಮ್ಮ ಪ್ರಭಾವವು ಹೆಚ್ಚಾಗಿರುವುದು ಎಂದುಕೊಂಡಿದ್ದರೆ ಅದು ಸುಳ್ಳಾಗಬಹುದು. ನಿಮಗೆ ಬಂಧುಗಳ ಬೆಂಬಲವು ಯೋಜಿತ ಕಾರ್ಯಕ್ಕೆ ಸಿಗಲಿದೆ. ನಿಮ್ಮ ಇಂದಿನ ಗಳಿಕೆಯಿಂದ ಸಂತೋಷವಾಗುತ್ತದೆ. ನೀವು ತಾಳ್ಮೆಯಿಂದಿರಿ ಮತ್ತು ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಿ. ನೌಕರರ ವಿಚಾರಕ್ಕೆ ಬೇಸರವಾಗಬಹುದು. ಕಲಿಕೆಯ ವಿಚಾರದಲ್ಲಿ ನೀವು ಹಿಂದುಳಿಯುವಿರಿ. ಪ್ರೀತಿಯ ಕಾರಣದಿಂದ ನಿಮಗೆ ದುಃಖವಾಗುವ ಸಂದರ್ಭವಿದೆ.‌ ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪ ಮಾಡಿಕೊಳ್ಳುವಿರಿ.

ತುಲಾ ರಾಶಿ : ನಿಮ್ಮ ಸ್ಥಿರಾಸ್ತಿಯ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಬಹುದು. ಇರುವುದನ್ನು ಬಿಟ್ಟು ಇರುವೆ ಬಿಟ್ಟಕೊಂಡಂತೆ ಎನಿಸಬಹುದು. ಯಾವುದರ ಬಗ್ಗೆ ಟೀಕೆ ಮಾಡುವಾಗ ಎಚ್ಚರಿಕೆ ಇರಲಿ. ಆತುರದಲ್ಲಿ ಏನನ್ನಾದರೂ ಮಾಡಿಕೊಂಡೀರ. ನಿಮ್ಮ ಯೋಜನೆಗಳನ್ನು ಬಹಿರಂಗಪಡಿಸಿ ಹಾಳುಮಾಡಿಕೊಳ್ಳುವುದು ಬೇಡ. ವ್ಯಾಪಾರ ಕ್ಷೇತ್ರದಲ್ಲಿ ತ್ವರಿತ ಚಟುವಟಿಕೆಗಳು ಇರುವುದು. ನಿಮ್ಮ ಕ್ರಿಯಾಶೀಲತೆಯಿಂದ ಪ್ರಶಂಸೆಯು ಸಿಗಲಿದೆ. ವಿದ್ಯಾರ್ಥಿಗಳು ವೃತ್ತಿಯ ಬಗ್ಗೆ ಹೆಚ್ಚು ಚಿಂತೆ ಮಾಡಬಹುದು. ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಕೆಲವು ಯೋಜನೆಗಳನ್ನು ಸಹ ಮಾಡಬಹುದು. ಉದ್ಯೋಗದಿಂದ ತೆಗೆದುಹಾಕುವ ಭೀತಿಯು ನಿಮ್ಮನ್ನು ಕಾಡಬಹುದು. ವಿನಾಕಾರಣ ಸಾಲದ ಸುಳಿಯಲ್ಲಿ ಸಿಕ್ಕಿಕೊಳ್ಳುವುದು ಬೇಡ. ಅಪರಿಚಿತರ ಜೊತೆ ಸ್ವಲ್ಪ ಹದವಾಗಿ ವರ್ತಿಸಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ನಿಮಗೆ ಕಷ್ಟವಾದೀತು. ತಾಯಿಯ ಪ್ರೀತಿಯು ಇಂದು ನಿಮಗೆ ಹೆಚ್ಚು ಸಿಗಲಿದೆ.

ವೃಶ್ಚಿಕ ರಾಶಿ : ನಿಮಗೆ ಇಷ್ಟವಾಗದ ಸಂಗತಿಗಳಿದ್ದರೆ ಅದರ ಬಗ್ಗೆ ಯೋಚನೆ ಬೇಡ. ಮನೆಯ ಬದಲಾವಣೆಯು ನಿಮಗೆ ಬೇಸರ ತಂದೀತು. ದೈವಾನುಕೂಲಕ್ಕೆ ಕಾಯುವುದು ಬೇಡ. ನಿಮ್ಮ ಕಾರ್ಯವನ್ನು ಆರಂಭಿಸಿ. ನಿಕಟ ಸಂಬಂಧಿಗಳ ಜೊತೆ ಆಸ್ತಿಯ ಕಲಹವಾಗಬಹುದು. ಇಂದು ನೀವು ವ್ಯವಹಾರದಲ್ಲಿ ನಿರತರಾಗಿ, ಬೇಕಾದ ಸಂಪತ್ತನ್ನು ಪಡೆಯಿರಿ. ದೇಹಪ್ರಕೃತಿಯನ್ನು ಗಮನದಲ್ಲಿಟ್ಟುಕೊಂಡು ಆಹಾರಕ್ರಮವನ್ನು ಅಳವಡಿಸಿಕೊಳ್ಳುವುದು ನಿಮಗೆ ಸರಿಹೊಂದುವುದು. ಇಂದು ನೀವು ದಿನದ ಕೊನೆಯಲ್ಲಿ ಸುವಾರ್ತೆಯನ್ನು ನಿರೀಕ್ಷಿಸಬಹುದು. ಹಳೆಯ ಸ್ನೇಹಿತ ನಿಮ್ಮನ್ನು ಭೇಟಿಯಾಗಬಹುದು. ಮನೆಯಲ್ಲಿ ಇಂದು ಸಂಭ್ರಮದ ವಾತಾವರಣ ಇರುವುದು. ಸಹೋದರಿಯರ ಭೇಟಿಯು ನಿಮಗೆ ಸಂತೋಷ ಕೊಡುವುದು. ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆ ಆಗುವ ಸಾಧ್ಯತೆ ಇದೆ.‌ ಸಂಗಾತಿಯ ಒತ್ತಡವನ್ನು ನೀವು ಕಡಿಮೆ ಮಾಡುವಿರಿ. ವ್ಯಾಪಾರದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ.

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ