Horoscope: ದಿನಭವಿಷ್ಯ: ಈ ರಾಶಿಯವರಿಗೆ ವೈವಾಹಿಕ ಸಂಬಂಧ ಸರಿಯಾಗಿ ಇಟ್ಟುಕೊಳ್ಳುವುದು ಕಷ್ಟವಾಗಬಹುದು

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 12ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಈ ರಾಶಿಯವರಿಗೆ ವೈವಾಹಿಕ ಸಂಬಂಧ ಸರಿಯಾಗಿ ಇಟ್ಟುಕೊಳ್ಳುವುದು ಕಷ್ಟವಾಗಬಹುದು
ರಾಶಿಭವಿಷ್ಯImage Credit source: freepik
Follow us
TV9 Web
| Updated By: Rakesh Nayak Manchi

Updated on: Mar 12, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 12) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ರೇವತಿ, ಯೋಗ : ಶುಕ್ಲ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:42 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:43 ರಿಂದ 11:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:42 ರಿಂದ 02:12ರ ವರೆಗೆ.

ಸಿಂಹ ರಾಶಿ: ಸನ್ನಿವೇಶಕ್ಕೆ ಸರಿಯಾದ ಮಾತುಗಳನ್ನಾಡಿ‌. ಉದ್ವೇಗದಿಂದ ಮಾತನಾಡಿ ಎಲ್ಲರ ಹಾಸ್ಯಕ್ಕೆ ಒಳಗಾಗುವಿರಿ. ಆರೋಗ್ಯವು ಹದಗೆಟ್ಟಿದ್ದು ಆತಂಕ ಪಡದೇ ಔಷಧೋಪಚಾರವನ್ನು ಮಾಡಿ. ದಾಂಪತ್ಯದ ಪ್ರೀತಿಯು ನಿಮಗೆ ಹಿತವೆನಿಸುವುದು. ಯಾರನ್ನಾದರೂ ಪ್ರಶಂಸಿಸುವ ಮನಸ್ಸಾಗುವುದು. ನಿಯಮಿತ ಆಹಾರದಿಂದ ನಿಮಗೆ ಸೌಖ್ಯವು ಸಿಗಬಹುದು. ನೂತನ ವಾಹನದಿಂದ ಅಹ್ಲಾದಕರವಾಗಿ ಇರುವಿರಿ. ಸಂಗಾತಿಯ ಸಣ್ಣ ಮಾತೂ ನಿಮಗೆ ದೋಷವಾಗಿ ಕಾಣಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ಕೃತಜ್ಞತೆಯನ್ನು ಇಟ್ಟುಕೊಳ್ಳುವುದು ಕಷ್ಟವಾದೀತು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ.

ಕನ್ಯಾ ರಾಶಿ: ನಿಮ್ಮ ಮಾತಿನ ದಾಟಿಯು ಕೆಲವರಿಗೆ ಸಿಟ್ಟನ್ನು ತರಿಸಬಹುದು. ನಿಮಗೆ ಇಷ್ಟವಾಗುವಂತಹ ಕೆಲಸವನ್ನು ಮಾತ್ರ ಮಾಡಿ. ಚಾಂಚಲ್ಯವನ್ನು ಬಿಡಲಾಗದು. ಕೋಪದಿಂದ ನೀವು ಯಾವುದನ್ನೂ ಕಳೆದುಕೊಳ್ಳಲು ಸಿದ್ಧರಿರುವಿರಿ. ಹಳೆಯ ವಸ್ತುಗಳನ್ನು ಮಾರಾಟ ಮಾಡಿ ಬೇಕಾದುದನ್ನು ಖರೀದಿಸುವ ಅನಿವಾರ್ಯತೆ ಬರಬಹುದು. ನಿಮ್ಮ ಅಹಂಕಾರವು ಹತಾಶೆಯನ್ನು ತರಿಸೀತು. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ನಿಮ್ಮ ಮಾತುಗಳು ಪಾಲನೆಯಗದೇ ಇರಬಹುದು. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳುವುದು ಕಷ್ಟವಾಗಬಹುದು.

ತುಲಾ ರಾಶಿ: ಇಂದು ಕೆಲವು ಭೋಗವಸ್ತುಗಳನ್ನು ನಿಮ್ಮ ಸ್ವಂತಕ್ಕೆ ಪಡೆದುಕೊಳ್ಳುವಿರಿ. ಮಿತ್ರರ ಸಹಾಯವನ್ನು ಅಪೇಕ್ಷಿಸದೇ ಸ್ವಪ್ರಯತ್ನದಿಂದ ಮಾಡುವಿರಿ. ಸಂತಾನದ ಬಗ್ಗೆ ಚಿಂತೆಯಲ್ಲಿ ಇರುವಿರಿ. ನಿಮ್ಮ ಉದ್ಯಮವನ್ನು ವಿಸ್ತರಿಸಲು ಯಾರಾದರೂ ಸೂಚನೆ ನೀಡಬಹುದು. ಸಾಹಸದಿಂದ ಇಂದಿನ‌ ಕೆಲಸವನ್ನು ಪೂರ್ಣಮಾಡುವಿರಿ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವ್ಯಾಪಾರದಲ್ಲಿ ನಿಮ್ಮ ಮಾರ್ಗವು ಭಿನ್ನವಾಗಿರುವುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ಆತಂಕದಿಂದ ನೀವು ಮುಕ್ತರಾಗಲು ಬಯಸುವಿರಿ.

ವೃಶ್ಚಿಕ ರಾಶಿ: ಇಂದು ನೀವು ಬಹಳ ನಾಜೂಕಾಗಿ ಕೆಲವು ಸಂಗತಿಗಳನ್ನು ನಿರ್ವಹಿಸಬೇಕಾಗುವುದು. ತಪ್ಪುಗಳನ್ನು ನಿಮ್ಮ ಮೇಲೆ‌ ಹೇರಿದರೂ ಅದನ್ನು ಸಮಾಧಾನಚಿತ್ತದಿಂದ ತಳ್ಳಿಹಾಕುವಿರಿ. ನಿಮ್ಮ ಯೋಜನೆಯನ್ನು ಯಾವ ಕಾರಣಕ್ಕೂ ಪೂರ್ಣ ಮಾಡಲಾಗದು. ಕಛೇರಿಯ ಕಲಹದಲ್ಲಿ ಭಾಗಿಯಾಗದೇ ನಿಮ್ಮಷ್ಟಕ್ಕೇ ಇದ್ದು ಬಿಡಿ. ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಯಾರನ್ನೋ ಮೆಚ್ಚಿಸಲು ನೀವು ಸೋಲಬೇಕಾಗುವುದು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಅಸ್ವಾಭಾವಿಕ ಬೆಳವಣಿಗೆಯು ನಿಮಗೆ ಬೇಸರವನ್ನು ತರಿಸೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ