AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಈ ರಾಶಿಯವರು ಆಡಿದ ಮಾತಿಗೆ ಬೆಲೆಯನ್ನು ತೆರಬೇಕಾಗುವುದು-ಎಚ್ಚರ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 20ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ಈ ರಾಶಿಯವರು ಆಡಿದ ಮಾತಿಗೆ ಬೆಲೆಯನ್ನು ತೆರಬೇಕಾಗುವುದು-ಎಚ್ಚರ
ರಾಶಿ ಭವಿಷ್ಯ
TV9 Web
| Edited By: |

Updated on: Mar 20, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 20) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಬುಧ, ತಿಥಿ :ಏಕಾದಶೀ, ನಿತ್ಯನಕ್ಷತ್ರ : ಪುಷ್ಯಾ, ಯೋಗ : ಶೋಭನ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:40 ರಿಂದ ಸಂಜೆ 02:11ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:08 ರಿಂದ 09:39ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:10 ರಿಂದ 12:40 ರ ವರೆಗೆ.

ಸಿಂಹ ರಾಶಿ : ನಿಮ್ಮ ದೃಢವಾದ ಸಂಕಲ್ಪವೇ ಸ್ಪರ್ಧಾತ್ಮಕ ವಿಚಾರಕ್ಕೆ ಬೇಕಾದ ಬಲವನ್ನು ತಂದುಕೊಡುವುದು. ಇಟ್ಟ ಹೆಜ್ಜೆಯನ್ನು ತೆಗೆದಿಡುವ ಅವಶ್ಯಕತೆ ಇಲ್ಲ. ಅಧೀರರಾಗದೇ ಮುನ್ನಗ್ಗಿ. ಪ್ರಭಾವೀ ವ್ಯಕ್ತಿಗಳ ಸಂಪರ್ಕದಿಂದ ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳುವಿರಿ. ಆರ್ಥಿಕ ಪ್ರಗತಿಯು ಮಧ್ಯಮವಾಗಲಿದೆ.‌ ನ್ಯಾಯಾಲಯದಲ್ಲಿ ನಿರೀಕ್ಷಿತ ಗೆಲವು ಕಷ್ಟವಾದೀತು. ಇಂದು ನೀವು ಕೆಲಸವನ್ನು ಹೆಚ್ಚು ಪ್ರಯತ್ನದಿಂದ ಪೂರ್ಣ ಮಾಡುವಿರಿ. ಇಂದು ನಿಮಗೆ ಅತ್ಯಂತ ಪ್ರಿಯವಾದ ಕೆಲಸವನ್ನು ಮಾಡುವುದು ಬೇಡ. ಭೂ ವ್ಯವಹಾರದಲ್ಲಿ ಮನಸ್ತಾಪ ಬರಬಹುದು. ಯಾವುದೇ ನಿಬಂಧನೆಗಳನ್ನು ಇಟ್ಟುಕೊಳ್ಳದೇ ಒಪ್ಪಿಕೊಳ್ಳಿ. ನಿಮ್ಮ ಸಮಯ ಬಂದಾಗ ಅದನ್ನು ಚರ್ಚಿಸಲು ಅವಕಾಶ ಬರುವುದು. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು.

ಕನ್ಯಾ ರಾಶಿ : ನಿಮ್ಮ ದೌರ್ಭಾಗ್ಯಕ್ಕೆ ಯಾರನ್ನೋ ಹಳಿಯುವುದರಲ್ಲಿ ಅರ್ಥವಿಲ್ಲ. ಕಾಲಕ್ಕಾಗಿ ಕಾಯಬೇಕು. ವೃತ್ತಿಯ ಸ್ಥಳದಲ್ಲಿ ಕಲಹವಾಗಬಹುದು. ಅವಶ್ಯಕ ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಿ. ಆರ್ಥಿಕತೆಯಲ್ಲಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿ ಮಾಡೀತು. ಎಲ್ಲವೂ ಇಂದ್ರಜಾಲದಂತೆ ಆಗದು ಎಂಬ ಸತ್ಯವನ್ನು ಮನದಟ್ಟು ಮಾಡಿಕೊಳ್ಳುವ ಅವಶ್ಯಕತೆ ಇರುವುದು. ರಕ್ಷಣೆಯ ವಿಚಾರದಲ್ಲಿ ನೀವು ಸೋಲಬಹುದು. ಶತ್ರುಗಳು ನಿಮ್ಮ ಮಿತ್ರರಾಗಲು ಬಯಸಿ ಸಂಧಾನಕ್ಕೆ ಬರಬಹುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಇಷ್ಟಪಡಲಾರಿರಿ. ರಕ್ಷಣೆಯ ಜವಾಬ್ದಾರಿಯವರಿಗೆ ಆರೋಗ್ಯದ ಕೆಡಬಹುದು. ಕುಚೋದ್ಯ ಮಾಡಲು ಹೋಗಿ ಕೆಂಗಣ್ಣಿಗೆ ಗುರಿಯಾಗುವಿರಿ. ಯಾವುದನ್ನೂ ಸುಲಭಕ್ಕೆ ಇಂದು ನೀವು ಒಪ್ಪಲಾರಿರಿ.

ತುಲಾ ರಾಶಿ : ದೂರ ಪ್ರಯಾಣ ಹೊರಟಿರುವ ನೀವು ಅದಕ್ಕೆ ಬೇಕಾದ ಪೂರ್ವಸಿದ್ಧತೆಯನ್ನೂ ಮಾಡಿಕೊಳ್ಳಿ. ಯಾವುದಾದರೂ ಹೊಸ ಖರೀದಿಯ ಕಡೆ ಗಮನ ಅಧಿಕವಾಗಬಹುದು. ಇಂದು ನೀವು ಮಾಡಿದ ಉದ್ಯಮದ ತಂತ್ರಗಳು ಫಲಿಸಬಹುದು. ವಿದ್ಯಾರ್ಥಿಗಳು ಪ್ರಗತಿಯಿಂದ‌ ಖುಷಿಪಡುವರು. ಪ್ರೀತಿಯನ್ನು ಅವಶ್ಯಕತೆಯ ಪೂರೈಕೆಗಷ್ಟೇ ಬಳಸಿಕೊಳ್ಳುವಿರಿ. ಹಣದ ವ್ಯವಹಾರದಲ್ಲಿ ಮುಜುಗರ ಬೇಡ. ಅನ್ಯರ ಕಾರಣದಿಂದ ವಿದೇಶದ ವ್ಯಾಮೋಹವು ಹೆಚ್ಚಾದೀತು. ಒಮ್ಮೆ ನಂಬಿಕೆಯನ್ನು ಇಟ್ಟುಕೊಂಡ ಅನಂತರ ಅನುಮಾನ ಬೇಡ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಸ್ವಪ್ನದ ಚಿಂತೆಯಲ್ಲಿಯೇ ಇರಬಹುದು. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ. ಅಂತಃಕರಣವು ಶುದ್ಧವಿದ್ದರೆ ನಿಮಗೆ ಸಿಗದು ಸಿಕ್ಕಿಯೇ ಸಿಗುವುದು.

ವೃಶ್ಚಿಕ ರಾಶಿ : ಇಂದು ನಿಮಗೆ ಕೆಲವು ವಿಚಾರಕ್ಕೆ ಪಶ್ಚಾತ್ತಾಪ ಪಡುವಿರಿ.‌ ಆದರೆ ಆಡಿದ ಮಾತಿಗೆ ಬೆಲೆಯನ್ನು ತೆರಲೇಬೇಕಾಗುವುದು. ಬಂಧುಗಳ ಜೊತೆ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಇಂದು ನಿಮ್ಮ ಮುಂದಾಳುತ್ವದಲ್ಲಿ ಹೊಸ ಕೆಲಸಗಳು ನಡೆಯಬಹುದು. ಪೂರ್ಣ ಅದೃಷ್ಟವನ್ನೇ ನಂಬಿ ಕಾರ್ಯದಲ್ಲಿ ತೊಡಗುವುದು ಬೇಡ. ಪೂರ್ಣ‌ ಮನಸ್ಸಿನಿಂದ ನಿಮ್ಮ‌ ಎಲ್ಲ ಶಕ್ತಿಯನ್ನು ಹಾಕಿ ಕೆಲಸ ಮಾಡಿದರೂ ಅಂದುಕೊಂಡಷ್ಟು ಜಯವು ಸಿಗದು. ನಿಮಗೆ ಇಷ್ಟವಾದವರ ಬಗ್ಗೆ ನಿಮಗೆ ಅನುಕಂಪ ಬರಬಹುದು. ಆರ್ಥಿಕ ವಿಚಾರವನ್ನು ಬಹಿರಂಗಪಡಿಸುವುದು ಬೇಡ. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು. ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸವನ್ನು ಮಾಡುವಿರಿ. ಹಠದ ಸ್ವಭಾವವನ್ನು ನಿಮ್ಮ ಕಾರ್ಯದಲ್ಲಿ ತೋರಿಸಿ.