AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಈ ರಾಶಿಯವರ ಉದ್ಯಮ, ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 25 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಈ ರಾಶಿಯವರ ಉದ್ಯಮ, ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ
ದಿನಭವಿಷ್ಯImage Credit source: freepik
Rakesh Nayak Manchi
|

Updated on: Mar 25, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 25) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ :ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ವೃದ್ಧಿ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:05 ರಿಂದ 09:36ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:07 ರಿಂದ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ02:10 ರಿಂದ 03:41 ರ ವರೆಗೆ.

ಸಿಂಹ ರಾಶಿ : ನಿಮ್ಮ ಇಂದಿನ ಸಮಯವನ್ನು ಯಾರಾದರೂ ವ್ಯರ್ಥ ಮಾಡಿಯಾರು. ಇದರಿಂದ ಸಿಟ್ಟಾಗಿ ನಿಮ್ಮ ಮನಸ್ಸನ್ನು ಹಾಳುಮಾಡಿಕೊಳ್ಳುವುದು ಬೇಡ. ಸಂಗಾತಿಯ ಬೆಂಬಲವನ್ನು ದುರುಪಯೋಗ ಮಾಡಿಕೊಳ್ಳುವುದು ಬೇಡ. ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಲಾಭ ಪಡೆಯುತ್ತೀರಿ. ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಪ್ರೀತಿಯ ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ನಿರಾಸೆಗೆ ಕಾರಣವಾಗಬಹುದು. ಅಜಾಗರೂಕರಾಗಿ ಯಾರ ಜೊತೆಯೂ ವರ್ತಿಸುವುದು ಬೇಡ. ಸಮಸ್ಯೆಗಳೆಲ್ಲವೂ ಪರಿಹಾರವಾಗಲಿದೆ. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ. ಆರೋಗ್ಯದ ವಿಷಯದಲ್ಲಿ ಇಂದು ಸ್ವಲ್ಪ ತೊಂದರೆಯಾಗಬಹುದು. ಉದ್ಯಮಕ್ಕೆ ಹೊಸ ದಿಕ್ಕನ್ನು ಕೊಡುವ ಸಾಧ್ಯತೆ ಇದೆ. ಅನಿರೀಕ್ಷಿತ ವಾರ್ತೆಗಳು ನಿಮ್ಮನ್ನು ಸ್ತಬ್ಧಗೊಳಿಸಬಹುದು.

​ಕನ್ಯಾ ರಾಶಿ : ನಿಮಗೆ ಸಿಗಬೇಕಾದ ಉತ್ತರವು ಯಾರಿಂದಲಾದರೂ ಸಿಕ್ಕಿ, ಸಂತೋಷಿಸುವಿರಿ. ಬಂಧುಗಳಿಂದ ಮಾನಸಿಕವಾಗಿ ಪೀಡೆ ಉಂಟಾಗಬಹುದು. ಮಂಗಳ ಕಾರ್ಯದಿಂದಾಗಿ, ಕುಟುಂಬ ಸದಸ್ಯರ ಸಂತೋಷ ಹೆಚ್ಚಾಗುತ್ತದೆ. ಹಲವು ದಿನಗಳಿಂದ ನಡೆಯುತ್ತಿರುವ ವಹಿವಾಟು ಪ್ರಮುಖ ಸಮಸ್ಯೆಯನ್ನು ಪರಿಹರಿಸಬಹುದು. ಜೀವನ ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ. ಶುಭ ಕಾರ್ಯದ ಚಿಂತನೆ ಅನಿರೀಕ್ಷಿತವಾಗಿ ನಡೆಯಲಿದೆ. ಉದ್ಯಮ, ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ. ನಿಮ್ಮ ಧಾರ್ಮಿಕ ಚಟುವಟಿಕೆಗಳನ್ನು ನೀವು ಗಮನದಲ್ಲಿರಿಸಿಕೊಳ್ಳುತ್ತೀರಿ. ನಿಮ್ಮ ವಿರೋಧಿಗಳಿಗೆ ನೀವು ತಲೆನೋವಾಗಿ ಉಳಿಯುತ್ತೀರಿ. ನಿಮ್ಮ ನೇರ ಮಾತುಗಳು ಇಷ್ಟವಾಗದ ಕಾರಣ ನಿಮ್ಮಿಂದ ಯಾರಾದರೂ ದೂರವಿರಬಹುದು. ಸಜ್ಜನರ ಭೇಟಿಯಾಗುವ ಸಂದರ್ಭ ಬರುವುದು.

​ತುಲಾ ರಾಶಿ : ಇಂದು ಆಕಸ್ಮಿಕವಾಗಿ ಪ್ರಯಾಣ ಮಾಡಬೇಕಾಗಿ ಬರಬಹುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳುವುದು ನಿಮಗೆ ಅನಿವಾರ್ಯವಾದೀತು. ಸಣ್ಣ ಕಾರಣಕ್ಕೆ ಜೀವನ ಸಂಗಾತಿಯಿಂದ ದೂರಾಗುವ ಸಾಧ್ಯತೆಯಿದೆ. ಸ್ನೇಹಿತರಿಗೆ ಸಹಾಯ ಮಾಡಲು ಅವಕಾಶವಿರುತ್ತದೆ. ಉದ್ಯೋಗ ಮತ್ತು ವ್ಯವಹಾರ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳಿಂದ ಊಹಿಸಲಾಗದ ಯಶಸ್ಸನ್ನು ಸಾಧಿಸುವಿರಿ. ನೀವು ಮಕ್ಕಳ ಕಡೆಯಿಂದ ತೃಪ್ತಿದಾಯಕ ಒಳ್ಳೆಯ ಸುದ್ದಿ ಪಡೆಯುತ್ತೀರಿ. ಮಕ್ಕಳಿಂದ ಬೇಸರವಾಗುವ ಸಾಧ್ಯತೆ ಇದೆ. ವ್ಯಾಪಾರ, ವ್ಯವಹಾರಗಳ ಮುನ್ನಡೆಗಾಗಿ ಪ್ರಯಾಣದ ಮಾತುಕತೆಯ ಸಾಧ್ಯತೆ ಇರುತ್ತದೆ. ದಾಯಾದಿಗಳ ಆಗಮನ ಕಿರಿಕಿರಿ ತರಲಿದೆ. ಕೆಲವು ಕೆಲಸದ ಭರಾಟೆಯಲ್ಲಿ ಇಂದು ಸಮಯವು ನಿಮ್ಮದಾಗಿರದು. ಪೂರ್ಣವಾಗಿ ಗೊತ್ತಾಗದೇ ಜವಾಬ್ದಾರಿಯನ್ನು ಸ್ವೀಕರಿಸುವಿರಿ.

​ವೃಶ್ಚಿಕ ರಾಶಿ : ಅತಿಯಾದ ವಿನಯವು ಇಂದು ನಿಮ್ಮ ಶತ್ರುವಾಗಬಹುದು. ಎಲ್ಲವನ್ನೂ ಅಧಿಕಾರದಿಂದ ಮಾಡಲಾಗದು ಎಂಬ ಸತ್ಯವನ್ನು ನೀವು ತಿಳಿಯುವಿರಿ. ನಿಮ್ಮ ಶತ್ರುಗಳು ತಮ್ಮ ನಡುವೆ ಹೋರಾಡುವ ಮೂಲಕ ನಾಶವಾಗುತ್ತಾರೆ. ವಿದೇಶದಿಂದ ವ್ಯಾಪಾರವು ಸಕಾರಾತ್ಮಕ ಫಲಿತಾಂಶಗಳನ್ನು ತರುತ್ತದೆ. ಆತ್ಮೀಯ ವ್ಯಕ್ತಿ ಸುವಾರ್ತೆಯನ್ನು ಸ್ವೀಕರಿಸುತ್ತಾನೆ. ಚಿಂತಿತ ವ್ಯವಹಾರಗಳು ಹಂತ ಹಂತವಾಗಿ ಬಲಗೊಳ್ಳಲಿವೆ. ಅದೃಷ್ಟ ಬಲದಿಂದ ಹೂಡಿಕೆಗಳು ಲಾಭದಾಯಕವಾಗಲಿವೆ. ನಿಮ್ಮ ಸ್ಥಾನವು ಆರ್ಥಿಕವಾಗಿ ಸದೃಢವಾಗಿರುತ್ತದೆ. ಮನೆಯಲ್ಲಿ ಸಹಕಾರ ಮತ್ತು ಸಂತೋಷದ ವಾತಾವರಣವೂ ಇರುತ್ತದೆ. ಯಾವುದೇ ವೆಚ್ಚದಲ್ಲಿ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ. ಇಲ್ಲದಿದ್ದರೆ ನಷ್ಟವು ನಿಮ್ಮದಾಗುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಪೂರೈಸಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ